Breaking News

ರಾಷ್ಟ್ರೀಯ

ಫಲಕ ವಿರುದ್ಧ ಮೋದಿ, ಅಮಿತ್‌ ಶಾಗೆ ದೂರು ನೀಡಲು ಮಹಾರಾಷ್ಟ್ರ ನಿರ್ಧಾರ

ಬೆಳಗಾವಿ: ಬೆಳಗಾವಿಯ ಗಡಿ ವಿವಾದ ಸಂಬಂಧ ಸುಪ್ರೀಂಕೋರ್ಟ್‌ನಲ್ಲಿ ಅಂತಿಮ ತೀರ್ಪು ಬರುವವರೆಗೂ ಯಾವುದೇ ಕಾರಣಕ್ಕೂ ಬೆಳಗಾವಿಯಲ್ಲಿ ಕನ್ನಡ ನಾಮಫಲಕಗಳನ್ನು ಕಡ್ಡಾಯಗೊಳಿಸಬಾರದು ಎಂದು ಆಗ್ರಹಿಸಲು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ಕರ್ನಾಟಕ ಸರಕಾರದ ವಿರುದ್ಧ ದೂರು ನೀಡಲು ಮಹಾರಾಷ್ಟ್ರ ಸರಕಾರ ನಿರ್ಧರಿಸಿದೆ.   ಮುಂಬಯಿಯ ಸಹ್ಯಾದ್ರಿ ಅತಿಥಿ ಗೃಹದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌) ಮುಖಂಡರ ಜತೆಗೆ ಮಹಾರಾಷ್ಟ್ರದ ಸಮನ್ವಯ ಸಚಿವ ಶಂಭುರಾಜೆ ದೇಸಾಯಿ ನೇತೃತ್ವದಲ್ಲಿ …

Read More »

ಅರ್ಧರಾತ್ರಿಯಲ್ಲಿ ಸಂಪೂರ್ಣ ಕಾಶಿ ಸುತ್ತಿದ ಪ್ರಧಾನಿ.

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ತಮ್ಮ ಸ್ವಂತ ಕ್ಷೇತ್ರವಾದ ವಾರಣಾಸಿಗೆ ಗುರುವಾರ ಅರ್ಧರಾತ್ರಿ ದಿಢೀರನೆ ಭೇಟಿ ನೀಡಿ ಸ್ಥಳೀಯವಾಗಿ ನಡೆದ ಇತ್ತೀಚಿನ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.   ಪ್ರಧಾನಿ ಮೋದಿ ಅವರು ನೂತನವಾಗಿ ನಿರ್ಮಿಸಿರುವ ಶಿವಪುರ-ಫುಲ್ವಾರಿಯಾ-ಲಾ-ತಾರಾ ಮಾರ್ಗವನ್ನು ಪರಿಶೀಲಿಸಲಾಯಿತು. ಅವರೊಂದಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಉಪಸ್ಥಿತರಿದ್ದರು. ಇದಕ್ಕೆ ಸಂಬಂಧಿಸಿದ ಫೋಟೋಗಳನ್ನು ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ   360 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ಈ …

Read More »

ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು: ‘ಕಾಂಗ್ರೆಸ್ ನಾಯಕ’ರಿಗೆ ಕೋರ್ಟ್ ಸಮನ್ಸ್

ಬೆಂಗಳೂರು: ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು ವಿಚಾರವಾಗಿ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಕಾಂಗ್ರೆಸ್ ಪಕ್ಷದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಹಾಗೂ ರಾಹುಲ್‌ಗಾಂಧಿಗೆ ಸಮನ್ಸ್ ಜಾರಿಗೊಳಿಸಿದೆ. ಬಿಜೆಪಿ ವಿರುದ್ಧವಾಗಿ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಡಬ್ಬಲ್ ಎಂಜಿನ್ ಸರ್ಕಾರ ಹಾಗೂ 40% ಸರ್ಕಾರ ಎಂದು ಜಾಹೀರಾತು ನೀಡಲಾಗಿತ್ತು. ಈ ಸಂಬಂಧ ಬಿಜೆಪಿ ಕಾನೂನು ಘಟಕದ ವಕೀಲ ವಿನೋದ್‌ ಕುಮಾರ್ ಸಲ್ಲಿಸಿದ್ದ ಖಾಸಗಿ ದೂರು ನೀಡಿದ್ದರು. ಇಂದು ಜನಪ್ರತಿನಿಧಿಗಳ …

Read More »

ಮದುವೆ ಮುರಿದ ಪ್ರಿಯಕರ; ಧರಣಿ ಕುಳಿತ ಯುವತಿ

(ಬೆಳಗಾವಿ ಜಿಲ್ಲೆ): ಪ್ರೀತಿಸುತ್ತಿದ್ದ ಯುವತಿಯನ್ನು ಪತಿ ಮನೆಯಿಂದ ಮರಳಿ ಕರೆದುಕೊಂಡು ಬಂದ ಯುವಕ; ತಾನೂ ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದಾನೆ. ಇದರಿಂದ ಬೇಸತ್ತ ಯುವತಿ ಪ್ರೀತಿಸಿದ ಯುವಕನ ಮನೆ ಮುಂದೆ ಏಕಾಂಗಿ ಆಗಿ ಧರಣಿ ನಡೆಸಿದ ಪ್ರಕರಣ ಪಟ್ಟಣದಲ್ಲಿ ಗುರುವಾರ ನಡೆದಿದೆ.   ಇದರಿಂದ ಎರಡೂ ಕುಟುಂಬದವರ ಮಧ್ಯೆ ಮಾತಿನ ಜಟಾಪಟಿ ನಡೆಯಿತು. ಯುವಕನ ಮನೆಯವರು ಬಾಗಿಲನ್ನು ಹಾಕಿಕೊಂಡರೆ, ಯುವಕ ಮಾತ್ರ ಎಲ್ಲೋ ಹೋಗಿದ್ದಾನೆ ಎಂದು ಕುಟುಂಬದವರು ತಿಳಿಸಿದರು. ಇಲ್ಲಿಯ ಸೋಮವಾರ ಪೇಟೆಯ …

Read More »

ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : 2023-24ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಫೆ. 29 ರೊಳಗಾಗಿ SSP ತಂತ್ರಾಂಶದಲ್ಲಿ ಲಾಗಿನ್ ಆಗಿ ಸಲ್ಲಿಸುವುದು ಎಂದು ಪ್ರಕಟಣೆ ತಿಳಿಸಿದೆ. 2023-24ನೇ ಸಾಲಿನಲ್ಲಿ ಇತರೆ ಇಲಾಖೆಗಳ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು ಈ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಪಡೆಯಲು ಅವಕಾಶವಿರುವುದಿಲ್ಲ. ಸಾಮಾನ್ಯ ವರ್ಗದ …

Read More »

‘ಅಯ್ಯೋ ತಗಡೇ’ ಎಂದ ‘ನಟ ದರ್ಶನ್’ ವಿರುದ್ಧ ‘ಮತ್ತೆರಡು ದೂರು’ ದಾಖಲು

ಬೆಂಗಳೂರು: ಅಯ್ಯೋ ತಗಡೇ ಎಂಬುದಾಗಿ ಹೇಳಿಕೆ ನೀಡಿ, ಗುಮ್ಮಿಸಿಕೊಳ್ಳೋದಕ್ಕೆ ಎಂಬುದಾಗಿ ಮಹಿಳೆಯರಿಗೆ ಅವಮಾನ ಮಾಡಿದಂತ ನಟ ದರ್ಶನ್ ವಿರುದ್ಧ ಈಗ ಮತ್ತೆರಡು ದೂರು ದಾಖಲಿಸಲಾಗಿದೆ. ಬೆಂಗಳೂರು ರಾಜರಾಜೇಶ್ವರಿ ಠಾಣೆಗೆ ತೆರಳಿದಂತ ಗಣೇಶ್ ಗೌಡ ಹಾಗೂ ಜಗದೀಶ್ ಎಂಬುವವರು ನಟ ದರ್ಶನ್ ಅವರು ನೀಡಿದಂತ ಅಯ್ಯೋ ತಗಡೇ ಗುಮ್ಮಿಸಿಕೊಳ್ಳೋದಕ್ಕೆ ಎಂಬ ಅವಹೇಳನಕಾರಿ ಹೇಳಿಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಈ ಮೂಲಕ ನಟ ದರ್ಶನ್ ವಿರುದ್ಧ ಮತ್ತೆರಡು ದೂರು …

Read More »

ಹೊತ್ತಿ ಉರಿದ ಪ್ಲಾಸ್ಟಿಕ್ ಗೋದಾಮು: ವಾಹನಗಳು ಬೆಂಕಿಗಾಹುತಿ

ಬೆಂಗಳೂರು, ಫೆ.23- ಪ್ಲಾಸ್ಟಿಕ್ ಗೋದಾಮಿನಲ್ಲಿ ಇಂದು ಮುಂಜಾನೆ ಹೊತ್ತಿಕೊಂಡ ಬೆಂಕಿ ಪಕ್ಕದಲ್ಲೇ ಇದ್ದ ಪಾರ್ಕಿಂಗ್ ಸ್ಥಳಕ್ಕೆ ವ್ಯಾಪಿಸಿದ್ದರಿಂದ ಅಲ್ಲಿ ನಿಲ್ಲಿಸಲಾಗಿದ್ದ ಸುಮಾರು 30ರಿಂದ 35 ವಾಹನಗಳು ಸುಟ್ಟು ಕರಕಲಾಗಿರುವ ಘಟನೆ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ಗಂಗೊಂಡನಹಳ್ಳಿಯ ಗೋದಾಮುವೊಂದರಲ್ಲಿ ಹಳೇ ಪ್ಲಾಸ್ಟಿಕ್ ಸಾಮಗ್ರಿಗಳನ್ನು ಸಂಗ್ರಹಿಸಿಡಲಾಗಿತ್ತು. ಗೋದಾಮಿಗೆ ಹೊಂದಿಕೊಂಡಂತೆ ಇದರ ಪಕ್ಕದಲ್ಲಿಯೇ ವಾಹನಗಳನ್ನು ರಾತ್ರಿ ವೇಳೆ ಪೇ- ಪಾರ್ಕಿಂಗ್ ಮಾಡಲಾಗುತ್ತಿತ್ತು. ಚಾಲಕರು ತಮ್ಮ ಮನೆಯ ಬಳಿ ವಾಹನಗಳನ್ನು ನಿಲ್ಲಿಸಲು …

Read More »

ರಾಜ್ಯದ 7 ಸ್ಮಾರ್ಟ್‌ಸಿಟಿಗಳಿಗೆ ಇದುವರೆಗೂ ₹4,557 ಕೋಟಿ ಖರ್ಚು: ಸರ್ಕಾರ

ಬೆಂಗಳೂರು: ರಾಜ್ಯದ 7 ಸ್ಮಾರ್ಟ್‌ಸಿಟಿಗಳಿಗೆ ಇದುವರೆಗೂ ₹4,557 ಕೋಟಿ ಖರ್ಚು ಮಾಡಲಾಗಿದೆ. ₹1,726 ಕೋಟಿ ಮೊತ್ತದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಹೇಳಿದರು. ಕಾಂಗ್ರೆಸ್‌ನ ಅಬ್ದುಲ್‌ ಜಬ್ಬಾರ್‌ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಶೇ 90ರಷ್ಟು ಕಾಮಗಾರಿ ಪೂರ್ಣಗೊಂಡಿವೆ. ಕೇಂದ್ರ ಸರ್ಕಾರ ಕಾಮಗಾರಿಗಳ ಅನುಷ್ಠಾನಕ್ಕೆ ಜೂನ್‌-2024ರವರೆಗೆ ಅವಕಾಶ ನೀಡಿದೆ. ಎಲ್ಲ ಕಾಮಗಾರಿಗಳನ್ನೂ ನಾಲ್ಕು ತಿಂಗಳ ಒಳಗೆ ಅನುಷ್ಠಾನಗೊಳಿಸಲಾಗುವುದು ಎಂದರು. ಬರಗಾಲದಿಂದ ರಾಜ್ಯದಲ್ಲಿ 5.11 ಲಕ್ಷ ಎಕರೆ …

Read More »

ಪರಿಶಿಷ್ಟರ ಅನುದಾನ ಅನ್ಯಕಾರ್ಯಕ್ಕೆ ಬಳಸಬೇಡಿ: ದಸಂಸ

ಚಿಕ್ಕೋಡಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪಟ್ಟಣದ ಬಸವ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು. ಪರಿಶಿಷ್ಟರಿಗೆ ಮೀಸಲಿಟ್ಟ ಅನುದಾನವನ್ನು ಬೇರೆ ಕೆಲಸಗಳಿಗೆ ಬಳಸಬಾರದು. ಪರಿಶಿಷ್ಟರಿಗೆ ನೀಡಿದ ಜಮೀನನ್ನು ಪರಭಾರೆ ಮಾಡಬಾರದು. ದೌರ್ಜನ್ಯ ತಡೆಗೆ ಪ್ರತಿಯಾಗಿ ಪ್ರಕರಣ ದಾಖಲಿಸಬಾರದು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಮನವಿಯನ್ನು ಉಪ ವಿಭಾಗಾಧಿಕಾರಿ ಮಹೆಬೂಬಿ ಅವರಿಗೆ ಸಲ್ಲಿಸಿದರು. ಬಸವ ವೃತ್ತದ ಬಳಿಯಲ್ಲಿ ಕೆಲ ಕಾಲ ನಿಪ್ಪಾಣಿ- ಮುಧೋಳ ಹಾಗೂ ಸಂಕೇಶ್ವರ- …

Read More »

ಚನ್ನಮ್ಮನ ಕಿತ್ತೂರು: ‘ನಾನೂ ರಾಣಿ ಚನ್ನಮ್ಮ’ ಸಮಾವೇಶ ಅಭಿಯಾನ

(ಬೆಳಗಾವಿ ಜಿಲ್ಲೆ): ಇಲ್ಲಿನ ಕೋಟೆ ಆವರಣದಲ್ಲಿ ದೇಶದ 75ಕ್ಕೂ ಹೆಚ್ಚು ಸಂಘಟನೆಗಳು ಬುಧವಾರ ಹಮ್ಮಿಕೊಂಡಿದ್ದ ‘ನಾನೂ ರಾಣಿ ಚನ್ನಮ್ಮ’ ರಾಷ್ಟ್ರೀಯ ಮಹಿಳಾ ಸಮಾವೇಶದಲ್ಲಿ 15 ರಾಜ್ಯಗಳ ಮಹಿಳಾ ಮುಖಂಡರು ಭಾಗವಹಿಸಿ ಸ್ತ್ರೀಶಕ್ತಿ ಪ್ರದರ್ಶಿಸಿದರು.   ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ರಾಣಿ ಚನ್ನಮ್ಮನ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಜ್ಯೋತಿ ಮೆರವಣಿಗೆಗೆ ಚಾಲನೆ ನೀಡಿದರು. ‘ನಮ್ಮ ಭೂಮಿ ನಮ್ಮ ಹಕ್ಕು. ಅದನ್ನು ಪಡೆದೇ ತೀರುತ್ತೇವೆ. ಸಂವಿಧಾನ ರಕ್ಷಿಸಲು ನಾವು ಬದ್ಧರಾಗಿದ್ದೇವೆ. …

Read More »