ಮಂಗಳೂರು, ಫೆ.17: ಅಭಿವೃದ್ಧಿ, ಶಾಂತಿ ನೆಮ್ಮದಿ ಬೇಕಾ ಅಥವಾ ಧರ್ಮ, ಜಾತಿ, ಸ್ವಾರ್ಥ ಪ್ರಚೋದನಾಕಾರಿ ಮಾತುಗಳು ಬೇಕಾ ಎಂದು ಮಂಗಳೂರಿಗರನ್ನು ಆರೋಗ್ಯ ಸಚಿವದಿನೇಶ್ ಗುಂಡೂರಾವ್(Dinesh Gundu Rao) ಕೇಳಿದರು. ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಉಳಿದಿರುವಂತೆ ಬಿಜೆಪಿ ಹಾಗೂ ಹಿಂದುತ್ವದ ಭದ್ರಕೋಟೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ (Mangaluru) ಆಯೋಜಿಸಿದ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಇಲ್ಲಿ ನಾವು ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಆಗಲಿಲ್ಲ. ಇದನ್ನ ಒಪ್ಪಿಕೊಳ್ಳುತ್ತೇವೆ. ಆದರೆ …
Read More »ಸಂಕಷ್ಟದಲ್ಲಿ ಬಸನಗೌಡ ಯತ್ನಾಳ್, ಸಕ್ಕರೆ ಕಾರ್ಖಾನೆಗೆ ನೀಡಿರುವ ನೋಟೀಸ್ಗೆ 24 ಗಂಟೆಗಳಲ್ಲಿ ಉತ್ತರಿಸಲು ಸೂಚನೆ
ಕಲಬುರಗಿ: ದೃಶ್ಯಗಳಲ್ಲಿ ಕಾಣುತ್ತಿರೋದು ಜಿಲ್ಲೆಯ ಚಿಂಚೋಳಿ ತಾಲ್ಲೂಕಿನಲ್ಲಿರುವ ಸಿದ್ಧಸಿರಿ ಸಕ್ಕರೆ ಕಾರ್ಖಾನೆ (Siddha Siri Ethanol and Power). ಬಿಜೆಪಿ ಫೈರ್ ಬ್ರ್ಯಾಂಡ್ ನಾಯಕನೆಂದು ಗುರುತಿಸಿಕೊಳ್ಳುವ ಮತ್ತುವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal) ಇದರ ಮಾಲೀಕ. ಬಿಜೆಪಿ ನಾಯಕರು (BJP leaders) ಇವರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಹಿಂಜರಿಯುವ ಸಂಗತಿ ನಮಗೆಲ್ಲ ಗೊತ್ತಿದೆ. ಆದರೆ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಇಲಾಖೆಯು ಪಾಟೀಲ್ ಮತ್ತು ಅವರ ಕಾರ್ಖಾನೆ …
Read More »ಸಚಿವ ಸತೀಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಬೆಳಗಾವಿಗೆ ವಿಶೇಷ ಕೊಡುಗೆ
ಸಚಿವ ಸತೀಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಬೆಳಗಾವಿಗೆ ವಿಶೇಷ ಕೊಡುಗೆ ಬೆಳಗಾವಿಯಲ್ಲಿ ವಾಹನ ಸಂಚಾರ ದಟ್ಟಣೆ ನಿವಾರಿಸಲು 4.50 ಕಿ.ಮೀ. ಉದ್ದದ ಮೇಲ್ಸೇತುವೆ ನಿರ್ಮಾಣಕ್ಕೆ ಗ್ರಿನ್ ಸಿಗ್ನಲ್ ಕೊಟ್ಟ ಸಿಎಂ ಬೆಳಗಾವಿ: ಈ ಭಾರಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ 2024-25ರ ಕರ್ನಾಟಕ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿ ನಗರ ಪರಿಮಿತಿಯಲ್ಲಿ ವಾಹನ ದಟ್ಟಣೆ ಹಾಗೂ ಸಂಚಾರ ದಟ್ಟಣೆ ನಿವಾರಿಸಲು 450 ಕೋಟಿ …
Read More »ಇಂದು ‘ದೆಹಲಿ ವಿಧಾನಸಭೆ’ಯಲ್ಲಿ ‘ಸಿಎಂ ಕೇಜ್ರಿವಾಲ್’ರಿಂದ ‘ವಿಶ್ವಾಸಮತ ಯಾಚನೆ’
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು (ಫೆಬ್ರವರಿ 16) ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸುವುದಾಗಿ ಹೇಳಿದ್ದಾರೆ. ಎಎಪಿ ಶಾಸಕರನ್ನ ಬೇಟೆಯಾಡಲು ಮತ್ತು ತಮ್ಮ ಸರ್ಕಾರವನ್ನ ಉರುಳಿಸಲು ಬಿಜೆಪಿ ಪ್ರಯತ್ನಿಸಿದೆ ಎಂದು ಅವರು ಆರೋಪಿಸಿದ ಕೆಲವು ದಿನಗಳ ನಂತರ ಈ ಪ್ರಕಟಣೆ ಹೊರಬಿದ್ದಿದೆ. “ನಾನು ಇಂದು ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸ ಮತವನ್ನು ತರುತ್ತೇನೆ” ಎಂದು ಕೇಜ್ರಿವಾಲ್ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ. ಆದಾಗ್ಯೂ, ಈ ಕ್ರಮದ ಹಿಂದಿನ ಕಾರಣವನ್ನು ಅವರು ನಿರ್ದಿಷ್ಟಪಡಿಸಲಿಲ್ಲ.
Read More »ಕಾಂಗ್ರೆಸ್ ನಾಯಕಿ ‘ಪ್ರಿಯಾಂಕಾ ಗಾಂಧಿ’ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು
ನವದೆಹಲಿ: ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕಾರಣದಿಂದಾಗಿ ಅವರು ಇಂದು (ಶುಕ್ರವಾರ) ಉತ್ತರ ಪ್ರದೇಶದ ಚಂದೌಲಿಯಲ್ಲಿ ನಡೆಯಲಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ. ಮೂಲಗಳಿಂದ ಪಡೆದ ಮಾಹಿತಿಯ ಪ್ರಕಾರ, ಪ್ರಿಯಾಂಕಾ ಗಾಂಧಿ ತಮ್ಮ ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಚಂದೌಲಿಯಲ್ಲಿ …
Read More »70 ಎಕರೆಯಲ್ಲಿ ಅತ್ಯಾಧುನಿಕ ಕ್ರೀಡಾ ನಗರ ಸ್ಥಾಪನೆ : ಬಜೆಟ್‌ನಲ್ಲಿ ಘೋಷಣೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಕ್ಷೇತ್ರಕ್ಕೆ ಒತ್ತು ನೀಡಿದ್ದು, ಬೆಂಗಳೂರಿನ ಉತ್ತರ ತಾಲೂಕಿನಲ್ಲಿ ಲಭ್ಯವಿರುವ ಅಂದಾಜು 70 ಎಕರೆ ನಿವೇಶನದಲ್ಲಿ ಅತ್ಯಾಧುನಿಕ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸಮುಚ್ಛಯಗಳನ್ನು ಒಳಗೊಂಡ ಕ್ರೀಡಾ ನಗರವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದಾಗಿ ಘೋಷಿಸಿದರು. ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ 4 ಸ್ಥಳಗಳಲ್ಲಿ ಬಹುಕ್ರೀಡಾ ಸೌಲಭ್ಯಗಳನ್ನೊಳಗೊಂಡ ಅತ್ಯಾಧುನಿಕ …
Read More »ಗ್ರಾಮೀಣ ಪತ್ರಕರ್ತರಿಗೆ ಗುಡ್ ನ್ಯೂಸ್ : ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಪತ್ರಕರ್ತರಿಗೂ ಆಗಾಗ ಹಲವು ಯೋಜನೆಗಳ ಘೋಷಣೆ ಮಾಡುತ್ತಿರುತ್ತಾರೆ. ಇದೀಗ ಈ ಬಾರಿಯ ಬಜೆಟ್ ನಲ್ಲೂ ಘೋಷಣೆ ಮಾಡಿದ್ದಾರೆ. ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆಬ್ರವರಿ 3 ಮತ್ತು 4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ …
Read More »ವಿವಾದದ ಬೆನ್ನಲ್ಲೇ ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧ ವಾಪಸ್
ಬೆಂಗಳೂರು: ರಾಜ್ಯದ ವಸತಿ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರೀಯ ಹಬ್ಬ, ನಾಡಹಬ್ಬ ಹಾಗೂ ಜಯಂತಿಗಳನ್ನು ಹೊರತುಪಡಿಸಿ, ಯುಗಾದಿ, ರಂಜಾನ್, ಕ್ರಿಸ್‌ಮಸ್‌ನಂತಹ ಯಾವುದೇ ಧಾರ್ಮಿಕ ಹಬ್ಬವನ್ನು ಆಚರಿಸುವಂತಿಲ್ಲ ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆಯನ್ನು ಹೊರಡಿಸಿತ್ತು. ಈ ಆದೇಶಕ್ಕೆ ಎಲ್ಲೆಡೆ ವಿರೋಧ ಶುರುವಾಗುತ್ತಿದ್ದಂತೆ, ಇದೀಗ ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧವನ್ನು ವಾಪಸ್ ಪಡೆಯಲಾಗಿದೆ. ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪ ಅವರ ಸೂಚನೆ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು …
Read More »ಇಸ್ಲಾಂ ಇರುವವರೆಗೂ ಜಗತ್ತಿಗೆ ನೆಮ್ಮದಿ ಇಲ್ಲ: ಅನಂತಕುಮಾರ್ ಹೆಗಡೆ
ಉತ್ತರ ಕನ್ನಡ : ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ (Anantkumar Hegde) ಸದಾ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುತ್ತಾರೆ. ಇದೀಗ ಎಲ್ಲಿಯವರೆಗೆ ಇಸ್ಲಾಂ (Islam) ಇರುತ್ತದೊ ಅಲ್ಲಿವರೆಗೆ ಜಗತ್ತಿಗೆ ನೆಮ್ಮದಿ ಇರುವುದಿಲ್ಲ ಎಂದಿದ್ದಾರೆ. ಅಲ್ಲದೆ, ಬಿಜೆಪಿ (BJP), ಸಂಘಪರಿವಾರ ಇದ್ದಲ್ಲಿ ಮಾತ್ರ ನೆಮ್ಮದಿ ಎಂದಿದ್ದಾರೆ. ಉತ್ತರ ಕನ್ನಡ (Uttara Kannada) ಜಿಲ್ಲೆಯ ಬನವಾಸಿಯಲ್ಲಿ (Banavasi) ಮಾತನಾಡಿದ ಅನಂತಕುಮಾರ್ ಹೆಗಡೆ, ಇಸ್ಲಾಂ ಇರುವವರೆಗೆ ಜಗತ್ತಿನಲ್ಲಿ ನೆಮ್ಮದಿ ಇರುವುದಿಲ್ಲ. ಇಂತಹ ಕಾಲಘಟ್ಟದಲ್ಲಿ ಹಿಂದೂ …
Read More »ಇಂದು ರಾಜ್ಯ ಬಜೆಟ್: ಯಾರಿಗೆಲ್ಲ ಬಂಪರ್ ಗಿಫ್ಟ್ ಕೊಡಲಿದ್ದಾರೆ ಸಿಎಂ ಸಿದ್ದರಾಮಯ್ಯ
ಸಿಎಂ(CM) ಸಿದ್ದರಾಮಯ್ಯ(Siddaramaiah) ಅವರು ಇಂದು 15ನೇ ಬಜೆಟ್(Budget) ಮಂಡಿಸಲಿದ್ದಾರೆ. ಲೋಕಸಭಾ(Loka Saba) ಚುನಾವಣೆ ಹಿನ್ನೆಲೆಯಲ್ಲಿ ಯಾವೆಲ್ಲ ಘೋಷಣೆಯನ್ನು ಮಾಡಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ. ಇಂದು ಬೆಳಗ್ಗೆ ನಡೆಯುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಗೆ ಅನುಮೋದನೆ ಪಡೆಯಲಿದ್ದಾರೆ. ಅಲ್ಲಿಂದ ನೇರವಾಗಿ ವಿಧಾನಸೌಧಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.15ಕ್ಕೆ ಬಜೆಟ್ ಮಂಡಿಸಲಿದ್ದಾರೆ. ರಾಜ್ಯ ಬಜೆಟ್ ಬಗ್ಗೆ ತೀವ್ರತರವಾದಂತಹ ನಿರೀಕ್ಷೆಗಳಿದ್ದು, ಯಾವ ಯಾವ ಕ್ಷೇತ್ರಗಳಿಗೆ ಅನುದಾನ, ಯಾರಿಗೆಲ್ಲ ಬಂಪರ್ ಗಿಫ್ಟ್ ನೀಡಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ. …
Read More »