ಶಿಮ್ಲಾ: ರಾಜ್ಯಸಭಾ ಚುನಾವಣೆ ನಡೆದ ಬಳಿಕ ಹಿಮಾಚಲ ಪ್ರದೇಶದಲ್ಲಿ ಆಡಳಿತದಲ್ಲಿರುವ (Himachal Pradesh Congress Crisis) ಕಾಂಗ್ರೆಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಹಿಮಾಚಲ ಪ್ರದೇಶದಲ್ಲಿ ಸಂಪೂರ್ಣ ಬಹುಮತವಿದ್ದರೂ ಸಹ ಕಾಂಗ್ರೆಸ್ ತನ್ನ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಅವರನ್ನು ರಾಜ್ಯಸಭೆಯಲ್ಲಿ ಗೆಲ್ಲಿಸಲು ಅಸಾಧ್ಯವಾದ ಬೆನ್ನಲ್ಲೇ ಪರಿಸ್ಥಿತಿಯ ಲಾಭ ಪಡೆದುಕೊಂಡ ಬಿಜೆಪಿ ಆಡಳಿತಾರೂಢ ಕಾಂಗ್ರೆಸ್‌ಗೆ ಇಕ್ಕಟ್ಟಿನ ಪರಿಸ್ಥಿತಿ ತಂದೊಡ್ಡಿದೆ. ಕಾಂಗ್ರೆಸ್ ಶಾಸಕರು ಅಡ್ಡಮತ ಹಾಕಿದ ಪರಿಣಾಮ ಬಿಜೆಪಿಗೆ ಪ್ಲಸ್ ಆಗುತ್ತಿದ್ದಂತೆ ಹಿಮಾಚಲ ಪ್ರದೇಶದ …
Read More »ರಾಷ್ಟ್ರಧ್ವಜಕ್ಕೆ ಅವಮಾನ ಮಾಡಬೇಡಿ : ಸಭಾಧ್ಯಕ್ಷ ಯು.ಟಿ.ಖಾದರ್
ಬೆಂಗಳೂರು,ಫೆ.28- ರಾಷ್ಟ್ರಧ್ವಜಕ್ಕೆ ಅವಮಾನ ಮಾಡಬೇಡಿ ಒಂದು ವೇಳೆ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ವಿಧಾನಸಭೆಯಲ್ಲಿ ತಿಳಿಸಿದರು. ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡಾಗ ಸೋಮವಾರ ಸಕಾಲಕ್ಕೆ ಆಗಮಿಸಿದ್ದ ಶಾಸಕರ ಹೆಸರುಗಳನ್ನು ಪ್ರಕಟಿಸಿದ ನಂತರ ಸಭಾಧ್ಯಕ್ಷರು ಅಧಿಕಾರಿಗಳಿಂದ ನನಗೆ ಮಾಹಿತಿ ಬಂದಿದೆ. ರಾಷ್ಟ್ರಧ್ವಜವನ್ನು ಸದನದೊಳಗೆ ತಂದಿದ್ದಾರೆ ಎಂಬ ಮಾಹಿತಿ ಇದೆ. ನನ್ನ ಜವಾಬ್ದಾರಿ, ಕರ್ತವ್ಯವನ್ನು ನಿಭಾಯಿಸಬೇಕು. ಯಾರೂ ಕೂಡ ಅವಮಾನ ಮಾಡಬಾರದು. ಸದನದ ಹೊರಗೆ ನಡೆದಿರುವ ಘಟನೆ ಬಗ್ಗೆ …
Read More »ಪಾಕಿಸ್ತಾನ ಪರ ಘೋಷಣೆ : ವಿಧಾನಪರಿಷತ್‍ನಲ್ಲೂ ಕೋಲಾಹಲ
ಬೆಂಗಳೂರು,ಫೆ.28- ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಬೇಕೆಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ವಿಧಾನಪರಿಷತ್‍ನಲ್ಲಿ ಗದ್ದಲ ಕೋಲಾಹಲ ಸೃಷ್ಟಿಸಿತು. ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ದಿನದ ಕಲಾಪವನ್ನು ಕೈಗೆತ್ತಿಕೊಳ್ಳಲು ಮುಂದಾದರು. ಈ ವೇಳೆ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ವಿಷಯ ಪ್ರಸ್ತಾಪಿಸಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಗದ್ದಲ ಏರ್ಪಟ್ಟು ಸದನವನ್ನು ಕೆಲ ಮುಂದೂಡಲಾಯಿತು. ವಿಷಯ ಪ್ರಸ್ತಾಪಿಸಿದ ಕೋಟಾ ಶ್ರೀನಿವಾಸ್ …
Read More »ಲೋಕಸಭಾ ಚುನಾವಣೆ: ಚಿಕ್ಕೋಡಿಯಿಂದ ಸ್ಪರ್ಧಿಸಲು ಅಮಿತ್ ಕೋರೆ ಆಸಕ್ತಿ
ಬೆಳಗಾವಿ: ‘ಲೋಕಸಭಾ ಚುನಾವಣೆಗೆ ಚಿಕ್ಕೋಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹಲವರು ಪ್ರಯತ್ನ ನಡೆಸಿದ್ದಾರೆ. ಟಿಕೆಟ್ ಸಿಕ್ಕರೆ ನನ್ನ ಪುತ್ರ ಅಮಿತ್ ಸ್ಪರ್ಧಿಸಬಹುದು’ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು. ‘ಈ ಹಿಂದೆಯೇ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬೆಳಗಾವಿ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ಅಮಿತ್‌ಗೆ ಅವಕಾಶ ಬಂದಿತ್ತು. ಆಗ ಅಸಕ್ತಿ ಇರಲಿಲ್ಲ. ಆದರೆ, ಈಗ ಗೆಳೆಯರು ಸ್ಪರ್ಧಿಸಲು ಒತ್ತಡ ಹೇರಿದ್ದಾರೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು. ‘ಚಿಕ್ಕೋಡಿ …
Read More »ಶೈಕ್ಷಣಿಕ ಸುಧಾರಣೆಗೆ ಆದ್ಯತೆ: ಸಚಿವೆ
ಬೆಳಗಾವಿ: ‘2024-2028ರ ಅವಧಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡುವುದು ನನ್ನ ಉದ್ದೇಶ. ಅದಕ್ಕೆ ನಾನು ಬದ್ಧಳಾಗಿದ್ದೇನೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ತುಮ್ಮರಗುದ್ದಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸೋಮನಟ್ಟಿ ಗ್ರಾಮದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿದ ಹೆಚ್ಚುವರಿ ಕೊಠಡಿಗಳನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ‘ಕಳೆದ ಅವಧಿಯಲ್ಲಿ ಸಾಕಷ್ಟು …
Read More »ಹಳ್ಳಿಗಳ ಅಭಿವೃದ್ಧಿಗೆ ಕಾಂಗ್ರೆಸ್ ಆದ್ಯತೆ: ಸತೀಶ ಜಾರಕಿಹೊಳಿ
ಹುದಲಿ: ‘ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲ ಹಳ್ಳಿಗಳ ಅಭಿವೃದ್ಧಿಗೆ ಆದ್ಯತೆ ನೀಡಿದೆ. ನನ್ನ ಕ್ಷೇತ್ರದ ಹಳ್ಳಿಗಳಿಗೆ ನಾನು ಕಳೆದ 15 ವರ್ಷಗಳಲ್ಲಿ ಸಾಕಷ್ಟು ಅನುದಾನ ನೀಡಿದ್ದೇನೆ. ಕುಡಿಯುವ ನೀರು, ರಸ್ತೆ, ಶಾಲೆಗಳಿಗೆ ಪ್ರಾಧಾನ್ಯತೆ ಕೊಟ್ಟಿದ್ದೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ, ಬೆಳಗಾವಿ ತಾಲ್ಲೂಕಿನ ಹುದಲಿ ಗ್ರಾಮದಲ್ಲಿ ಗ್ರಾಮದೇವಿ ಜಾತ್ರೆ ಅಂಗವಾಗಿ ಚರಂಡಿ, ಸಿಸಿ ರಸ್ತೆ ಹಾಗೂ ರಸ್ತೆ …
Read More »ಲೋಕಸಭಾ ಚುನಾವಣೆ: ಗೆಲ್ಲುವ ಕುದುರೆಗೆ ನಿಲ್ಲದ ಹುಡುಕಾಟ
ಬೆಳಗಾವಿ: ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳನ್ನು ಈ ಬಾರಿ ಹೇಗಾದರೂ ಮಾಡಿ ಗೆಲ್ಲಲೇಬೇಕು ಎಂದು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಆದರೆ, ಬಿಜೆಪಿಯಲ್ಲಿ ಮಾತ್ರ ಇನ್ನೂ ‘ಗುಮ್ಮನ ಗುಸುಕ’ ಎಂಬ ಸ್ಥಿತಿ ಇದೆ. ಯಾರನ್ನು ಕೇಳಿದರೂ ‘ಗೆಲ್ಲುವ ಕುದುರೆ ಹುಡುಕಾಟ’ ಎಂಬ ಉತ್ತರ ಸಿಗುತ್ತದೆ. ‘ನಾವು ಆಕಾಂಕ್ಷಿಗಳು’ ಎಂದು ಇಬ್ಬರು ಮಾತ್ರ ಮಾಧ್ಯಮದ ಮುಂದೆ ಹೇಳಿಕೆ ಕೊಟ್ಟಿದ್ದಾರೆ. ಕಾರ್ಯಕರ್ತರು, ಸಮುದಾಯದವರು ಸೇರಿ ಯಾರೂ ಸಹ ಇಂಥವರಿಗೇ ಟಿಕೆಟ್ ಕೊಡಬೇಕು ಎಂಬ …
Read More »ಕಾಣೆಯಾಗಿದ್ದ ಖಾಸಗಿ ಶಾಲೆಯ ನಾಲ್ವರು ವಿದ್ಯಾರ್ಥಿಗಳ ಶವ ಪತ್ತೆ
ಸುರತ್ಕಲ್: ಕಾಣೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳ ಶವ ಮುಲ್ಕಿ ಸಮೀಪ ಹಳೆಯಂಗಡಿ ಡ್ಯಾಂ ಬಳಿ ಫೆ. 27ರ ಮಂಗಳವಾರ ತಡರಾತ್ರಿ ಪತ್ತೆಯಾಗಿದೆ. ಈಜಲು ಹೋಗಿದ್ದ ವೇಳೆ ವಿದ್ಯಾರ್ಥಿಗಳು ಮುಳುಗಿರುವ ಶಂಕೆ ವ್ಯಕ್ತವಾಗಿದೆ. ಮೃತ ದೇಹಗಳನ್ನು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯ ವಿವರ: ಖಾಸಗಿ ಶಾಲೆಯೊಂದರ ನಾಲ್ವರು ವಿದ್ಯಾರ್ಥಿಗಳು ಮಂಗಳವಾರ ಮಧ್ಯಾಹ್ನ 1.30ಕ್ಕೆ ಶಾಲೆಯಿಂದ ಹೊರಗೆ ತೆರಳಿದ್ದು, ಹಿಂದಿರುಗಿ ಬಾರದೆ ನಾಪತ್ತೆಯಾಗಿದ್ದರು. ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಯಶ್ವಿತ್ ಚಂದ್ರಕಾಂತ್, ನಿರುಪ್,ಅನ್ವಿತ್ ಹಾಗೂ ರಾಘವೇಂದ್ರ …
Read More »ವಸತಿ ಶಾಲೆಯಲ್ಲಿ ಬೆಂಕಿ ಅವಘಡ:
ಮುದ್ದೇಬಿಹಾಳ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೊಠಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ, ಓರ್ವ ವಿದ್ಯಾರ್ಥಿಯ ಸ್ಥಿತಿ ಗಂಭೀರಗೊಂಡು ಹಲವರಿಗೆ ಗಾಯಗಳಾದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕೃಷ್ಣಾ ನದಿ ತೀರದ ಘಾಳಪೂಜಿ ಗ್ರಾಮವೊಂದರಲ್ಲಿ ನಡೆದಿದೆ. ಪರಿಶಿಷ್ಟ ಜಾತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೊಠಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 6ನೇ ತರಗತಿಯ ಓರ್ವ ವಿದ್ಯಾರ್ಥಿಗೆ ಕೈಕಾಲು ಸುಟ್ಟು ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ವಿಜಯಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ …
Read More »ನಾಲ್ವರು ಮೊಬೈಲ್ ಸುಲಿಗೆಕೋರರ ಬಂಧನ: 70 ಮೊಬೈಲ್ ವಶ
ಬೆಂಗಳೂರು, ಫೆ.27- ಒಂಟಿಯಾಗಿ ಹೋಗುವ ಸಾರ್ವಜನಿಕರನ್ನು ಗುರಿಯಾಗಿಟ್ಟುಕೊಂಡು ಮೊಬೈಲ್ ಸುಲಿಗೆ ಮಾಡಿ ಪರಾರಿಯಾಗುತ್ತಿದ್ದ ನಾಲ್ವರು ದರೋಡೆಕೋರರನ್ನು ನಗರ ಪೊಲೀಸರು ಬಂಧಿಸಿ 70 ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಕೆಆರ್ ಪುರ: ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿರುವಾಗ ಹಿಂದಿನಿಂದ ಬೈಕ್‍ನಲ್ಲಿ ಬಂದ ದರೋಡೆಕೋರರು ಅವರ ಕೈಯಲಿದ್ದ ಮೊಬೈಲ್ ಪೋನ್ ಕಿತ್ತುಕೊಂಡು ಪರಾರಿಯಾಗಿದ್ದ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 20 ಲಕ್ಷ ಬೆಲೆ ಬಾಳುವ ಒಟ್ಟು …
Read More »
Laxmi News 24×7