ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 8 ರಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಜನಸ್ಪಂದನ (Janaspandana) ಕಾರ್ಯಕ್ರಮವನ್ನು ನಡೆಸಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಅವರು ಬುಧವಾರ ಪೂರ್ವಸಿದ್ಧತಾ ಸಭೆ ನಡೆಸಿ, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜನಸ್ಪಂದನ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಬೇಕು. ಮುಖ್ಯಮಂತ್ರಿಯವರು …
Read More »ಬಗೆಹರಿಯುತ್ತಿಲ್ಲ ನಿಗಮ ಮಂಡಳಿ ಕಗ್ಗಂಟು
ಬೆಂಗಳೂರು, ಜನವರಿ 24: ನಿಗಮ ಮಂಡಳಿ ನೇಮಕ ವಿಚಾರ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಹುದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹಲವು ಸುತ್ತುಗಳ ಸಮಾಲೋಚನೆ, ಸಭೆಗಳ ಬಳಿಕವೂ ಪಟ್ಟಿ ಅಂತಿಮಗೊಳಿಸಲು ಸಾಧ್ಯವಾಗುತ್ತಿಲ್ಲ. ಇದೀಗ ನಿಗಮ ಮಂಡಳಿ ನೇಮಕ ವಿಚಾರ ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಹೈಕಮಾಂಡ್ (Congress High Command) ನಡುವಣ ಸಂಘರ್ಷವಾಗಿ ಮಾರ್ಪಟ್ಟಿದೆ. ಹೈಕಮಾಂಡ್ ಕಳುಹಿಸಿರುವ ಪಟ್ಟಿಯಲ್ಲಿ ಕೆಲವು ಅಚ್ಚರಿಯ ಹೆಸರುಗಳು ಕಾಣಿಸಿವೆ ಎನ್ನಲಾಗಿದ್ದು, ಇದನ್ನು ಅಂತಿಮಗೊಳಿಸಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಮ್ಮತಿಸುತ್ತಿಲ್ಲ. …
Read More »ಲೋಕಸಭಾ ಚುನಾವಣೆಗೆ ಸಿದ್ಧತೆ: ಜನವರಿ 27ಕ್ಕೆ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆ
ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ರಾಜ್ಯ ಬಿಜೆಪಿ ಜನವರಿ 27 ರಂದು ಕಾರ್ಯಕಾರಿಣಿ ಸಭೆ ನಡೆಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಬೆಂಗಳೂರು: ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ರಾಜ್ಯ ಬಿಜೆಪಿ ಜನವರಿ 27 ರಂದು ಕಾರ್ಯಕಾರಿಣಿ ಸಭೆ ನಡೆಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು, ಜನವರಿ …
Read More »ರಾಜ್ಯ ಬಿಜೆಪಿ ನಾಯಕರು ಅಯೋಗ್ಯರು ಎಂದ ಪ್ರಿಯಾಂಕ್ ಖರ್ಗೆ
ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಕರ್ನಾಟಕಕ್ಕೆ ಏಕೆ ಬರ್ತಾರೆ ಅನ್ನೋದೇ ಅವರ ಪಕ್ಷದ ಅಯೋಗ್ಯರಿಗೆ ಗೊತ್ತಿಲ್ಲ ಎಂದು ರಾಜ್ಯ ಬಿಜೆಪಿ (BJP Karnataka) ನಾಯಕರ ಮೇಲೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹರಿಹಾಯ್ದಿದ್ದಾರೆ. ಈ ಮೂಲಕ ಬಿಜೆಪಿ ನಾಯಕರನ್ನು ಅಯೋಗ್ಯರಿಗೆ ಹೋಲಿಕೆ ಮಾಡಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ರಾಜ್ಯ ಬಿಜೆಪಿಯವರು ಮೊದಲು ನರೇಂದ್ರ ಮೋದಿ ಅವರು ಯಾಕೆ ಬರ್ತಾರೆ ಎಂಬುದನ್ನು ತಿಳಿದುಕೊಳ್ಳಲಿ …
Read More »ಜೋಶಿ ನಮ್ಮ ಮೇಲೆ ಕೇಸ್ ಹಾಕಿದ್ರೆ ಅವರ ಚರಿತ್ರೆ ಬಿಚ್ಚಿಡಲು ಒಳ್ಳೆಯ ಅವಕಾಶ ಸಿಗತ್ತೆ : ವಿ.ಎಸ್ ಉಗ್ರಪ್ಪ
ಹುಬ್ಬಳ್ಳಿಯ (Hubli) ರೈಲ್ವೆ ಕಾಲೋನಿಯಲ್ಲಿರುವ 13 ಎಕರೆ ರೈಲ್ವೆ ಇಲಾಖೆಯ ಸ್ವತ್ತನ್ನು ಕೇವಲ 83 ಕೋಟಿ ರೂ.ಗೆ 99 ವರ್ಷ ಪರಭಾರೆ ಮಾಡಲು ಹುನ್ನಾರ ನಡೆಸಲಾಗಿತ್ತು. ಐದು ಬಾರಿ ಟೆಂಡರ್ ಕರೆದು ರಿಜೆಕ್ಟ್ ಮಾಡಿದ ಹಾಗೆ ಮಾಡಿ, ಯಾರೂ ಬಂದಿಲ್ಲ ಎಂದು ಪರಭಾರೆ ಕೊಡೋಣ ಎಂಬ ಹುನ್ನಾರ ನಡೆಸಲಾಗಿತ್ತು. ಕೇಂದ್ರ ಮಂತ್ರಿಯಾಗಿರುವ ಪ್ರಹ್ಲಾದ್ ಜೋಶಿಯವರು (Prahald joshi) ಮತ್ತು ಅವರ ಸಹಪಾಠಿಗಳು ಈ ಸ್ವತ್ತನ್ನು ಕಬಳಿಸಲು ಹುನ್ನಾರ ನಡೆಸಿದ್ದರು ಎಂದು …
Read More »ಫೆ.16ಕ್ಕೆ ರಾಜ್ಯ ಬಜೆಟ್ ಬೇಡ: ಮುಂದಕ್ಕೆ ಹಾಕುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ
ಬೆಂಗಳೂರು: ಫೆಬ್ರವರಿ 16ರಂದು ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ಇದೆ. ಈ ಚುನಾವಣೆ ದಿನದಂದು ಕಾಂಗ್ರೆಸ್ ಸರ್ಕಾರ ರಾಜ್ಯ ಬಜೆಟ್ (Karnataka Budget 2024) ಮಂಡಿಸುವುದು ಸರಿಯಲ್ಲ. ಇದು ಮಾದರಿ ನೀತಿಸಂಹಿತೆ ಮತ್ತು ಜನಪ್ರತಿನಿಧಿ ಕಾಯ್ದೆ (Model Code of Conduct and Representation of the People Act) ಪ್ರಕಾರ ಇದು ನ್ಯಾಯಬದ್ಧವಲ್ಲ. ಹೀಗಾಗಿ ಬಜೆಟ್ ಮಂಡನೆ ದಿನಾಂಕವನ್ನು ಮುಂದಕ್ಕೆ ಹಾಕಬೇಕು ಎಂದು ರಾಜ್ಯ ಬಿಜೆಪಿಯು (BJP Karnataka) …
Read More »ಶೆಟ್ಟರ್ ಘರ್ ವಾಪ್ಸಿಗೆ ಬಿಜೆಪಿ ಶತಪ್ರಯತ್ನ; ಬಿಟ್ಟು ಹೋಗಲ್ಲ ಎಂದ ಸಿದ್ದರಾಮಯ್ಯ
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Parliament Elections 2024) ರಾಜ್ಯದಲ್ಲಿ 28 ಸ್ಥಾನಗಳನ್ನು ಗೆಲ್ಲಲೇಬೇಕು ಎಂಬ ಶತ ಪ್ರಯತ್ನದಲ್ಲಿರುವ ಬಿಜೆಪಿ-ಜೆಡಿಎಸ್ ಮೈತ್ರಿ ಕೂಟ (BJP-JDS Alliance) ಈಗ ಕಾಂಗ್ರೆಸ್‌ನಲ್ಲಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Former CM Jagadish Shettar) ಅವರನ್ನು ಹೇಗಾದರೂ ಮಾಡಿ ಘರ್ ವಾಪ್ಸಿ (Shettar Ghar Wapsi) ಮಾಡಬೇಕು ಎಂದು ಪ್ರಯತ್ನಿಸುತ್ತಿದೆ. ಈಗಾಗಲೇ ಬಿಜೆಪಿ ಜಗದೀಶ್ ಶೆಟ್ಟರ್ ಅವರನ್ನು ಸಂಪರ್ಕಿಸಿದೆ ಎಂದು ಹೇಳಲಾಗಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು (CM …
Read More »ಇಂಡಿಯಾ ಒಕ್ಕೂಟ ಹೆಚ್ಚು ದಿನ ಉಳಿಯುವುದಿಲ್ಲ: ಬೊಮ್ಮಾಯಿ
ಬೆಂಗಳೂರು: ಕಾಂಗ್ರೆಸ್ (congress) ನೇತೃತ್ವದ ಇಂಡಿಯಾ (INDIA) ಒಕ್ಕೂಟ ಮುಂದಿನ ದಿನಗಳಲ್ಲಿ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ (bengaluru) ಬುಧವಾರ ಮಾತನಾಡಿದ ಅವರು, ಈಗಾಗಲೇ ಇಂಡಿಯಾ ಒಕ್ಕೂಟದಿಂದ ಪಶ್ಚಿಮ ಬಂಗಾಳ (west bengal) ಮುಖ್ಯಮಂತ್ರಿ (cm) ಮಮತಾ ಬ್ಯಾನರ್ಜಿ (Mamata Banerjee), ಎನ್‌ಸಿಪಿ (NCP) ಮುಖ್ಯಸ್ಥ ಶರದ್ ಪವಾರ್ (sharad Pawar), ಬಿಹಾರ (bihar) ಸಿಎಂ ನಿತೀಶ್ ಕುಮಾರ್ (nitish kumar) …
Read More »ಫೆ. 9ರಿಂದ ಬಿಜೆಪಿ ಬೃಹತ್ ಅಭಿಯಾನ ಆರಂಭ
ಬೆಂಗಳೂರು: ಅಯೋಧ್ಯೆ ರಾಮಮಂದಿರ ಉದ್ಘಾಟನೆಯ ಬೆನ್ನಲ್ಲೇ ಲೋಕಸಭಾ ಸಮರಕ್ಕಾಗಿ ಪುಟಿದೆದ್ದಿರುವ ಬಿಜೆಪಿಯು ರಾಷ್ಟ್ರದ ಪ್ರತೀ ಗ್ರಾಮವನ್ನೂ ತಲುಪುವುದಕ್ಕೆ “ಗಾಂವ್ ಚಲೋ’ ಅಭಿಯಾನ ರೂಪಿಸಿದೆ., ಕರ್ನಾಟಕದಲ್ಲಿ 28 ಸಾವಿರ ಕಂದಾಯ ಗ್ರಾಮಗಳನ್ನು ಸಂಪರ್ಕಿಸುವ ಬೃಹತ್ ಅಭಿಯಾನ ಫೆ. 9ರಂದು ಚಾಲನೆ ಪಡೆಯಲಿದೆ. ವಿಜಯೇಂದ್ರ ನೇತೃತ್ವದಲ್ಲಿ ಹೊಸ ತಂಡ ಅಧಿಕಾರಕ್ಕೆ ಬಂದ ಬಳಿಕದ ಮೊದಲ ಸಂಘಟನಾತ್ಮಕ ಪ್ರಕ್ರಿಯೆ ಇದು. ಕಾರ್ಯಕ್ರಮವನ್ನು ಯಶಸ್ವಿಗೊಳಿ ಸುವುದಕ್ಕೆ ರಾಷ್ಟ್ರೀಯ ನಾಯಕರ ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಸಂಘಟನಾತ್ಮಕವಾಗಿ ನುರಿತಿರುವ …
Read More »ಹಿಂಸಾಚಾರಕ್ಕೆ ಪ್ರಚೋದನೆ ಆರೋಪ: ರಾಹುಲ್ ಗಾಂಧಿ ವಿರುದ್ಧ ದೂರು ದಾಖಲ
ಗುವಾಹಟಿ: ಭಾರತ್ ಜೋಡೋ ನ್ಯಾಯ ಯಾತ್ರೆಯ ವೇಳೆ ಹಿಂಸಾಚಾರ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಸಂಸದ ರಾಹುಲ್ ಗಾಂಧಿ ಮತ್ತು ಇತರೆ ಕಾಂಗ್ರೆಸ್ ನಾಯಕರ ವಿರುದ್ಧ ಅಸ್ಸಾಂ ಪೊಲೀಸರು ದೂರು ದಾಖಲಿಸಿದ್ದಾರೆ. ಈ ವಿಚಾರವನ್ನು ಸ್ವತಃ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮ ತಮ್ಮ ಎಕ್ಸ್ ಖಾತೆಯ ಮೂಲಕ ತಿಳಿಸಿದ್ದಾರೆ. ಪೊಲೀಸ್ ಬಲವನ್ನು ಬಳಸಿಕೊಂಡು ಭಾರತ್ ಜೋಡೋ ಯಾತ್ರೆಯನ್ನು ಹತ್ತಿಕ್ಕುವ ಕೆಲಸವನ್ನು ಅಸ್ಸಾಂ ಸರ್ಕಾರ ಮಾಡುತ್ತಿದೆ ಎಂಬುದು ಕಾಂಗ್ರೆಸ್ ಆರೋಪ. ಆದರೆ, …
Read More »