Breaking News

ರಾಷ್ಟ್ರೀಯ

ಹಿಂದೂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲು ಟಾಸ್ಕ್ ಫೋರ್ಸ್ ರಚನೆ: ಆರ್‌.ಅಶೋಕ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟಾಸ್ಕ್‌ ಫೋರ್ಸ್‌ ಮಾಡಿ, ಹಿಂದೂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಇದು ಕೋಮುವಾದದ ವಿರುದ್ಧ ಅಲ್ಲ, ಹಿಂದೂಗಳ ವಿರುದ್ಧ ಇರುವ ಫೋರ್ಸ್‌ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಇದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಅವರಿಗೆ ಬೇಕಾದ ಅಧಿಕಾರಿಗಳನ್ನು ನೇಮಿಸಿಕೊಂಡಿದ್ದಾರೆ. ಘಟನೆ ನಡೆದು ಎಷ್ಟೋ ದಿನಗಳಾದ ನಂತರ ಪ್ರಕರಣ ದಾಖಲಿಸಲಾಗುತ್ತಿದೆ. ಸುಳ್ಳು ಆಪಾದನೆ ಮಾಡಿ ಹಿಂದೂ ಕಾರ್ಯಕರ್ತರ …

Read More »

ಪುನೀತ್ ರಾಜ್​ಕುಮಾರ್ ಮೂರ್ತಿಗೆ ಪೂಜೆ ಸಲ್ಲಿಸಿ, ಆರ್‌ಸಿಬಿ ಗೆಲುವಿಗೆ ಪ್ರಾರ್ಥನೆ

ಹಾವೇರಿ: ದಿವಂಗತ ಪುನೀತ್ ರಾಜ್​ಕುಮಾರ್ ಅವರು ಐಪಿಎಲ್‌ನಲ್ಲಿ ಆರ್‌ಸಿಬಿ ಕಪ್ ಗೆಲ್ಲುವ ಕನಸು ಕಂಡಿದ್ದರು. ನಮ್ಮ ತಂಡ ಫೈನಲ್ ಪ್ರವೇಶಿಸಬೇಕು, ಮೈದಾನದಲ್ಲಿ ಫೈನಲ್ ಪಂದ್ಯವನ್ನು ಕುಳಿತು ನೋಡಬೇಕು ಎಂದು ಅವರು ಹೇಳುತ್ತಿದ್ದರು. ಆದರೆ, ಆ ಆಸೆ ಈಡೇರಲಿಲ್ಲ. ಇದೀಗ ಆರ್‌ಸಿಬಿ ಫೈನಲ್ ತಲುಪಿದೆ. ನಾಳೆ ಸಂಜೆ ನಡೆಯುವ ಪಂದ್ಯದಲ್ಲಿ ಎದುರಾಳಿ ಪಂಜಾಬ್ ಕಿಂಗ್ಸ್ ಜೊತೆ ಸೆಣಸಲಿದೆ. ಈ ಮಧ್ಯೆ ಹಾವೇರಿ ತಾಲೂಕು ಯಲಗಚ್ಚ ಗ್ರಾಮದಲ್ಲಿ ಪುನೀತ್​ ರಾಜ್​ಕುಮಾರ್ ದೇವಾಲಯ ಕಟ್ಟಿಸಿರುವ ಪ್ರಕಾಶ್ …

Read More »

ಅಧಿಕಾರಿಯ ಪ್ರತಿಕೃತಿಗೆ ಹಾಲು ತುಪ್ಪದ ಅಭಿಷೇಕ

ದೊಡ್ಡಬಳ್ಳಾಪುರ: ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ದೊಡ್ಡಬಳ್ಳಾಪುರಕ್ಕೆ ಸ್ಥಳಾಂತರಿಸುವಂತೆ ಆಗ್ರಹಿಸಿ ಅರ್ಕಾವತಿ ನದಿ ಹೋರಾಟ ಸಮಿತಿ ವಿನೂತನ ಪ್ರತಿಭಟನೆ ಮೂಲಕ ಗಮನ ಸೆಳೆದಿದೆ. ಕೆರೆಯ ದಂಡೆಯ ಮೇಲೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಯ ಪ್ರತಿಕೃತಿಗೆ ಹಾಲು, ತುಪ್ಪ ಮತ್ತು ಗಂಧದ ಅಭಿಷೇಕ ಮಾಡುವ ಮೂಲಕ ಗ್ರಾಮಸ್ಥರಿಗೆ ಶುದ್ಧ ನೀರು ಪೂರೈಸುವಂತೆ ಪ್ರತಿಭಟನೆ ಮಾಡಿದರು ದೊಡ್ಡಬಳ್ಳಾಪುರ ತಾಲೂಕು ಚಿಕ್ಕತುಮಕೂರು ಕೆರೆಯ ದಂಡೆಯ ಮೇಲೆ ಅಭಿಷೇಕ ಮತ್ತು ಪೂಜಾ ಕಾರ್ಯಕ್ರಮವನ್ನು ಅರ್ಕಾವತಿ ನದಿ ಹೋರಾಟ ಸಮಿತಿ …

Read More »

ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಥೈಲ್ಯಾಂಡ್ ಮೂಲದ ಸುಂದರಿ ಈ ಬಾರಿಯ ಮಿಸ್ ವರ್ಲ್ಡ್-2025

ಹೈದರಾಬಾದ್‌ನಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಥೈಲ್ಯಾಂಡ್ ಮೂಲದ ಸುಂದರಿ ಈ ಬಾರಿಯ ಮಿಸ್ ವರ್ಲ್ಡ್-2025 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ಗೆದ್ದ ವಿಶ್ವ ಸುಂದರಿಗೆ ಚಿನ್ನದಿಂದ ಮಾಡಿದ ವಜ್ರ ಖಚಿತ ಕೀರಿತವನ್ನು ತೊಡಿಸಲಾಗುತ್ತದೆ.ಈ ಪ್ರತಿಷ್ಠಿತ ಮಿಸ್ ವರ್ಲ್ಡ್ ಕಿರೀಟ ಹಿಂದಿನ ಯಾವುದೇ ಕಿರೀಟಕ್ಕಿಂತ ಭಿನ್ನವಾಗಿದೆ.175.49 ಕ್ಯಾರೆಟ್‌ಗಳ 1,770 ವಜ್ರಗಳಿಂದ ಮಾಡಿದ, 18 ಕ್ಯಾರೆಟ್ ಬಿಳಿ ಚಿನ್ನದಲ್ಲಿ ಹೊಂದಿಸಲಾಗಿದೆ. ಈ ಕಿರೀಟದ ಮೌಲ್ಯ ಸುಮಾರು ಮೂರು ಕೋಟಿ …

Read More »

ಕಾಲಿನ ಗಾಯಕ್ಕೆ ಚಿಕಿತ್ಸೆ ಪಡೆದ 7 ವರ್ಷದ ಬಾಲಕಿ ಸಾವು

ಮಂಡ್ಯ: ಮಂಡ್ಯದಲ್ಲಿ ಇತ್ತೀಚೆಗೆ ಟ್ರಾಫಿಕ್ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ಬೈಕ್‌ನಿಂದ ಬಿದ್ದ ಕೂಡಲೇ ಕ್ಯಾಂಟರ್​ ಹರಿದು ಮಗು ಸಾವನ್ನಪ್ಪಿತ್ತು. ಈ ಘಟನೆ ಮಾಸುವ ಮುನ್ನವೇ ಮಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ಕಾಲಿನ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ 7 ವರ್ಷದ ಬಾಲಕಿ ಮೃತಪಟ್ಟಿದ್ದು, ಪೋಷಕರು ಆಕ್ರೋಶ ವ್ಯಕ್ತಪಡಿಸಿದರು. ಬಾಲಕಿ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಆರೋಪಿಸಿ, ಪೋಷಕರು ಸೇರಿದಂತೆ ವಿವಿಧ ಸಂಘಟನೆಗಳು ಆಸ್ಪತ್ರೆ ಎದುರು ಸೇರಿ ಪ್ರತಿಭಟನೆ ನಡೆಸಿದರು. ಮಳವಳ್ಳಿ …

Read More »

ರಾಜ್ಯದಲ್ಲಿ ನಿಯಂತ್ರಣಕ್ಕೆ ಬಾರದ ಬಾಲ್ಯ ವಿವಾಹ ಸಿಎಂ ತವರು ಜಿಲ್ಲೆ ಮೈಸೂರಲ್ಲಿ ಅತೀ ಹೆಚ್ಚು ದೂರು:

ಬೆಂಗಳೂರು: ಪ್ರಗತಿಶೀಲ ರಾಜ್ಯವಾದ ಕರ್ನಾಟಕದಲ್ಲಿ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿ ಪ್ರಕರಣಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಅದೆಷ್ಟೇ ಜಾಗೃತಿ ಮೂಡಿಸಿ, ಕಠಿಣ ಕ್ರಮಗಳನ್ನು ಕೈಗೊಂಡರೂ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿಯರ ಸಂಖ್ಯೆ ಮಾತ್ರ ಹೆಚ್ಚುತ್ತಲೇ ಇದೆ. ಕರ್ನಾಟಕ ಶೈಕ್ಷಣಿಕ, ಸಾಮಾಜಿಕ, ತಂತ್ರಜ್ಞಾನಗಳಲ್ಲಿ ಆಧುನಿಕತೆಯನ್ನು ಮೈಗೂಡಿಸಿಕೊಂಡು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯ. ಆದರೂ ಕೂಡ ಬಾಲ್ಯ ವಿವಾಹದ ಪಿಡುಗು ಇನ್ನೂ ಮುಂದುವರೆದಿದೆ. ಅದರ ಜೊತೆಗೆ ಬಾಲ ಗರ್ಭಿಣಿಯರ ಸಂಖ್ಯೆಯೂ ಹೆಚ್ಚುತ್ತಿದೆ. ರಾಜ್ಯದ …

Read More »

ಬಾಗಲಕೋಟೆಯಲ್ಲಿ ಆಫ್ರಿಕನ್​ ಹಂದಿ ಜ್ವರ ಪತ್ತೆ

ಬಾಗಲಕೋಟೆ: ಕೊರೊನಾ ಆತಂಕದ ಮಧ್ಯೆ ಬಾಗಲಕೋಟೆ ಜಿಲ್ಲೆಯಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿದೆ. ಇದರಿಂದ ಜಿಲ್ಲೆಯ ಜನ ಆತಂಕಗೊಂಡಿದ್ದು, ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಇಳಕಲ್​ ತಾಲೂಕಿನ ಗೊರಬಾಳ ಗ್ರಾಮದಲ್ಲಿರುವ ಸಾಕಾಣಿಕೆ ಕೇಂದ್ರದಲ್ಲಿ ಇಂತಹ ರೋಗ ಪತ್ತೆಯಾಗಿದೆ. ಅನ್ಯರಾಜ್ಯದಿಂದ ಹಂದಿಗಳನ್ನು ಆಮದು ಮಾಡಿಕೊಂಡಿರುವ ವೇಳೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಮೇ 22ಕ್ಕೆ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಹಂದಿಗಳ ರಕ್ತದ ಮಾದರಿಯನ್ನು …

Read More »

SSLCಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಜಿಲ್ಲೆಗಳ DDPIಗಳಿಗೆ ಸಿಎಂ ಶಾಕ್

ಬೆಂಗಳೂರು, ಮೇ 31: ಈ ವರ್ಷದ ಎಸ್​ಎಸ್​ಎಲ್​​ಸಿ (SSLC) ಪರೀಕ್ಷೆಯಲ್ಲಿ 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಸಾಗುವ ಮೂಲಕ ಶೇ.62.34ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಫಲಿತಾಂಶ ಕಡಿಮೆ ಬಂದಿದೆ. ಈ ನಿಟ್ಟಿನಲ್ಲಿ ಇಂದು ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಮಾಡಿದ ಸಿಎಂ ಸಿದ್ದರಾಮಯ್ಯ (Siddaramaiah), ಎಸ್​ಎಸ್​ಎಲ್​​ಸಿ ಫಲಿತಾಂಶ ವಿಚಾರವಾಗಿ ಮಹತ್ವದ ಚರ್ಚೆ ಮಾಡಿದ್ದಾರೆ. ಈ ವೇಳೆ ಫಲಿತಾಂಶ ಕಡಿಮೆ ಬರುವುದಕ್ಕೆ ಶಿಕ್ಷಕರ, ಸಿಬ್ಬಂದಿ ಕೊರತೆ ಎಂದು ಇಲ್ಲ ಸಲ್ಲಸ ನೆಪ …

Read More »

ಡಿಡಿಪಿಐ ಗಳು ಜಿಲ್ಲೆಗಳಲ್ಲಿ ಕುಳಿತು ಕೆಲಸ ಮಾಡುವುದಲ್ಲ. ಇಡೀ ಜಿಲ್ಲೆ ಪ್ರಯಾಣ ಮಾಡಬೇಕು.:C.M

ಡಿಸಿಗಳು, ಸಿಇಒಗಳ ಸಭೆ ಮುಂದುವರೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಭೆಯ ಆರಂಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ಫಲಿತಾಂಶ ಕಡಿಮೆ ಇರುವ ಜಿಲ್ಲೆಗಳಲ್ಲಿ ಡಿಡಿಪಿಐ ಗಳನ್ನೇ ನೇರ ಹೊಣೆ ಮಾಡುವಂತೆ ಸೂಚಿಸಿದರು. SSLC ಯಲ್ಲಿ‌ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಬೇಕು, ನೋಟಿಸ್ ಗೆ ಕೊಟ್ಟ ಉತ್ತರ ಸಮರ್ಪಕ‌ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು …

Read More »

ಕಾರುಗಳ ನಡುವೆ ಭೀಕರ ಅಪಘಾತ – ಇಬ್ಬರು ಸಾವು

ಕಾರುಗಳ ನಡುವೆ ಭೀಕರ ಅಪಘಾತ – ಇಬ್ಬರು ಸಾವು ದಾವಣಗೆರೆ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಅಸುನೀಗಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಶಿಕಾರಿಪುರ ರಸ್ತೆಯಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ. ಶಿಕಾರಿಪುರ ನಗರದ ರುದ್ರಮ್ಮ(79) ಹಾಗೂ ಶಿವಮೊಗ್ಗದ ಅನ್ಸರ್ ಅಹ್ಮದ್ ಎಂಬ ಇಬ್ಬರು ಸಾವನ್ನಪ್ಪಿದ್ದಾರೆ.‌‌ ರುದ್ರಮ್ಮ ಅವರು ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಶಿಕಾರಿಪುರಕ್ಕೆ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಅವರಿದ್ದ ಕಾರಿಗೆ ಎದುರಿನಿಂದ ಬಂದ ಕಾರು …

Read More »