Breaking News

ರಾಷ್ಟ್ರೀಯ

ಸೋತರೆ ಸಚಿವರ ತಲೆ ದಂಡ ಎನ್ನುವುದು ಸುಳ್ಳು: ಸತೀಶ್ ಜಾರಕಿಹೊಳಿ

ಬೆಳಗಾವಿ: ”ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋತರೆ ಸಚಿವರ ತಲೆ ದಂಡವಾಗುತ್ತದೆ ಎನ್ನುವುದು ಸುಳ್ಳು” ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು.   ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿಗಳ ಅರ್ಜಿ ಹೈಕಮಾಂಡ್ ಗೆ ಸಲ್ಲಿಸಲಾಗಿದೆ.   ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 10 ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ 6 ಆಕಾಂಕ್ಷಿಗಳ ಅರ್ಜಿ ಸಲ್ಲಿಕೆಯಾಗಿವೆ ಎಂದರು.   ಲೋಕಸಭಾ ಚುನಾವಣೆಯಲ್ಲಿ ಸಚಿವರಿಗೆ …

Read More »

ಕಿಚ್ಚನ ಕೊನೆಯ ಪಂಚಾಯಿತಿಯಲ್ಲಿ ಯಾರಿಗೆ ಗೇಟ್ ಪಾಸ್?

ಬಿಗ್ ಬಾಸ್ ಸೀಸನ್ 10 ಹಲವು ವಿಷಯಗಳಿಂದ ನೋಡುಗರ ಮನ ಸೆಳೆದಿತ್ತು. ಹುಲಿ ಉಗುರು ಪ್ರಕರಣದಲ್ಲಿ ಮೊದಲಿಗೆ ವರ್ತೂರು ಸಂತೋಷ್ ಜೈಲಿಗೆ ಹೋಗಿ ಬಂದರು. ನಂತರ ಸ್ಪರ್ಧಿಗಳು ವರ್ತೂರು ವಿರುದ್ಧ ನಿಂತುಕೊಂಡು ಈ ವಾರ ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗಬೇಕು ಎಂದರು. ಆದರೆ ಅವರ ಅಭಿಮಾನಿಗಳು, ಅವರ ತಾಯಿ ಸೇರಿಕೊಂಡು ವರ್ತೂರು ಸಂತೋಷ್ ಅವರನ್ನು ಬಿಗ್ ಬಾಸ್ ಮನೆಯಲ್ಲಿ ಉಳಿಸಿಕೊಂಡಿದ್ದಾರೆ..   ಇನ್ನು ವಿನಯ್ ತಮ್ಮ ಅಗ್ರೆಸ್ಸಿವ್ ಆಟವಾಡಿಕೊಂಡು …

Read More »

ಅಂತೂ ಸರಕಾರದಿಂದ ಹೊರ ಬಿದ್ದ ಬಡ್ಡಿ ಮನ್ನಾ ಆದೇಶ

ಕಲಬುರಗಿ: ಸಹಕಾರಿ ಬ್ಯಾಂಕುಗಳಲ್ಲಿನ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲನ್ನು ಸಂಪೂರ್ಣವಾಗಿ 2024ರ ಫೆಬ್ರವರಿ 29 ರೊಳಗೆ ತುಂಬಿದರೆ ಬಡ್ಡಿ ಮನ್ನಾ ಕುರಿತಾಗಿ ಶನಿವಾರ (ಜ.20) ಸಹಕಾರಿ ಇಲಾಖೆ ಅಧಿಸೂಚನೆ. ಬೆಳಗಾವಿಯಲ್ಲಿ ನಡೆದ ಚಳಗಾಲ ಅಧಿವೇಶನದಲ್ಲಿ ಬರಗಾಲ ಹಾಗೂ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಾದ ವಿಷಯದ ಮೇಲೆ ಚರ್ಚೆ ನಡೆಯುತ್ತಿರುವಾಗ ಮುಂಗಾರು ಹಾಗೂ ಹಿಂಗಾರು ಎರಡೂ ಮಳೆಯನ್ನೇ ಕೈ ಕೊಟ್ಟ ಪರಿಣಾಮ ರೈತ ಸಂಕಷ್ಟದಲ್ಲಿದ್ದಾನೆ. ಹೀಗಾಗಿ ಸಹಕಾರಿ ಬ್ಯಾಂಕುಗಳಲ್ಲಿನ ಮಧ್ಯಮಾವಧಿ ಹಾಗೂ ದೀರ್ಘಾವಧಿ …

Read More »

ಗೋಕಾಕ: 3 ಸಾವಿರ ಮಹಿಳೆಯರಿಂದ ರಾಮನಾಮ ಜಪ

ಗೋಕಾಕ (ಬೆಳಗಾವಿ): ವಿಶ್ವ ಹಿಂದೂ ಪರಿಷತ್‌, ರಾಷ್ಟ್ರೀಯ ಸೇವಿಕಾ ಸಮಿತಿ ವತಿಯಿಂದ ನಗರದ ಲಕ್ಷ್ಮೀ ಸಭಾಭವನದಲ್ಲಿ ಶನಿವಾರ ಆಯೋಜಿಸಿದ್ದ ರಾಮನಾಮ ಜಪ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಮಹಿಳೆಯರಿಗಾಗಿ ಮಾತ್ರ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ 3,000 ಹೆಣ್ಣು ಮಕ್ಕಳು ಒಂದೇ ರೀತಿಯ ವೇಷಭೂಷಣದಲ್ಲಿ ಸೇರಿದರು. ‘ಶ್ರೀರಾಮ ಜಯರಾಮ ಜಯಜಯ ರಾಮ’ ಎಂಬ ನಾಮವನ್ನು 108 ಬಾರಿ ಜ‍ಪಿಸಿದರು. 108 ಸೆಟ್‌ಗಳನ್ನು ಒಟ್ಟು 11 ಬಾರಿ ಜಪ ಮಾಡಿದರು. ಏಕಕಾಲಕ್ಕೆ ಮಹಿಳೆಯರಿಂದ ಹೊರಬಂದ …

Read More »

ಬೆಂಗಳೂರು: ಜ.22ರಂದು ನಗರದ ಹಲವೆಡೆ ರಾಮಜಪ

ಬೆಂಗಳೂರು: ಅಯೋಧ್ಯೆಯ ರಾಮಮಂದಿರದಲ್ಲಿ ಇದೇ 22ರಂದು (ಸೋಮವಾರ) ಪ್ರಾಣ ಪ್ರತಿಷ್ಠಾಪನಾ ಮಹೋತ್ಸವ ನಡೆಯುವ ಅಂಗವಾಗಿ ನಗರದ ವಿವಿಧೆಡೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ‘ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯುವ ಪ್ರಾಣ ಪ್ರತಿಷ್ಠಾಪನಾ ಪ್ರಯುಕ್ತ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಲ್ಲಿ ಶ್ರೀರಾಮ ಉತ್ಸವ, ಲಕ್ಷ ದೀಪೋತ್ಸವ, ಭಜನೆ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.   ‘ಪದ್ಮನಾಭನಗರದ ಕಾರ್ಮೆಲ್‌ ಸ್ಕೂಲ್‌ ಮೈದಾನದಲ್ಲಿ …

Read More »

ರಾಮ ಮಂದಿರಕ್ಕೆ ನಟ ಪ್ರಭಾಸ್ ₹50 ಕೋಟಿ ದೇಣಿಗೆ ನೀಡಿದರೇ?

ಬೆಂಗಳೂರು: ನಟ ಪ್ರಭಾಸ್ ಅವರು ಅಯೋಧ್ಯೆಯಲ್ಲಿನ ರಾಮ ಮಂದಿರಕ್ಕೆ ₹50 ಕೋಟಿ ದೇಣಿಗೆ ನೀಡಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡಿತ್ತು. ಆದರೆ, ಇದು ಸುಳ್ಳು ಸುದ್ದಿ. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಆಂಧ್ರಪ್ರದೇಶ ಶಾಸಕ ಚಿರ್ಲಾ ಜಗ್ಗಿರೆಡ್ಡಿ ಅವರು ಪ್ರಭಾಸ್ ಅವರನ್ನು ಹೊಗಳುವ ಭರದಲ್ಲಿ, ‘ಪ್ರಭಾಸ್ ರಾಮ ಮಂದಿರಕ್ಕೆ ₹ 50 ಕೋಟಿ ಕೊಡುತ್ತಿದ್ದಾರೆ. ರಾಮ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮದಂದು ಭೋಜನ ಆಯೋಜನೆಯ ಹೊಣೆ ತೆಗೆದುಕೊಂಡಿದ್ದಾರೆ’ ಎಂದು ಹೇಳಿರುವ ವಿಡಿಯೊ …

Read More »

ರಜೆ: ವಿರೋಧ ಪಕ್ಷಗಳ ಟೀಕೆ

ನವದೆಹಲಿ: ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ದೇಶದಾದ್ಯಂತ ಎಲ್ಲ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ನೀಡಿರುವ ಕ್ರಮವನ್ನು ವಿರೋಧ ಪಕ್ಷಗಳು ಟೀಕಿಸಿವೆ. ‘ಸರ್ಕಾರವು ಇಂತಹ ಸುತ್ತೋಲೆ ಹೊರಡಿಸುವ ಮೂಲಕ ಅಧಿಕಾರದ ದುರುಪಯೋಗ ಮಾಡಿದೆ. ಧಾರ್ಮಿಕ ನಂಬಿಕೆಯ ವಿಚಾರದಲ್ಲಿ ವೈಯಕ್ತಿಕವಾಗಿ ತೀರ್ಮಾನ ತೆಗೆದುಕೊಳ್ಳುವ ಹಕ್ಕು ನೌಕಕರಿಗೆ ಇದೆ. ಸರ್ಕಾರದ ಇಂತಹ ಕ್ರಮವು ಸಂವಿಧಾನ ಮತ್ತು ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ’ ಎಂದು ಸಿಪಿಎಂ ಪಾಲಿಟ್‌ ಬ್ಯೂರೊ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ‘ಬಿಜೆಪಿ …

Read More »

ಅನಿಷ್ಟ ಪದ್ಧತಿ ನಿವಾರಣೆಗೆ ಶ್ರಮಿಸಿದ್ದ ಮಹಾಯೋಗಿ ವೇಮನ: ಪ್ರೊ.ಸಿದ್ದಣ್ಣ

ಬೆಳಗಾವಿ: ‘ಕವಿ ಮತ್ತು ದಾರ್ಶನಿಕರಾಗಿದ್ದ ಮಹಾಯೋಗಿ ವೇಮನ ಅವರು ಸಮಾಜದಲ್ಲಿನ ಮೌಢ್ಯ, ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸಲು ನಿರಂತರವಾಗಿ ಶ್ರಮಿಸಿದ್ದರು’ ಎಂದು ಪ್ರೊ.ಸಿದ್ದಣ್ಣ ಲಂಗೋಟಿ ಸ್ಮರಿಸಿದರು. ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ‘ಬಸವಣ್ಣನವರ ಕಾಯಕ ಮತ್ತು ದಾಸೋಹ ತತ್ವದಲ್ಲಿ ವೇಮನ ನಂಬಿಕೆ ಇಟ್ಟಿದ್ದರು. ಸಮಾಜದಲ್ಲಿ ತಾವು ಕಂಡ ಸತ್ಯವನ್ನು ಕಹಿಯಾದ ಭಾಷೆಯಲ್ಲಿ ಹಾಡಿ, ಜನರಲ್ಲಿ ಅರಿವಿನ ಬೀಜ ಬಿತ್ತಿದ್ದರು. …

Read More »

ಕೃಷಿಕನ ಕೈ ಹಿಡಿದ ‘ನಾರಿ ಸುವರ್ಣ’

ಬೆಳಗಾವಿ: ‘ಐದು ವರ್ಷಗಳ ಹಿಂದೆ ₹2 ಲಕ್ಷ ಬಂಡವಾಳ ಹೂಡಿಕೆ ಮಾಡಿ, ಕುರಿ ಸಾಕಾಣಿಕೆಯತ್ತ ಹೊರಳಿದೆ. ಆರಂಭದಲ್ಲಿ ಐದು ಕುರಿ ಮತ್ತು ಏಳು ಮರಿಗಳಷ್ಟೇ ಇದ್ದವು. ಈಗ 120 ಕುರಿಗಳಿದ್ದು, ನಿರೀಕ್ಷೆಗಿಂತ ಉತ್ತಮ ಆದಾಯ ಬರುತ್ತಿದೆ. ಕೃಷಿಯೊಂದಿಗೆ ಈ ಉಪಕಸುಬು ನನ್ನ ಕೈಹಿಡಿದು ಮುನ್ನಡೆಸುತ್ತಿದೆ’ ಇದು ತಾಲ್ಲೂಕಿನ ಕಮಕಾರಟ್ಟಿ ಬಳಿಯ ರೈತ ಮಹೇಶ ಅರ್ಜುನಶಾ ಮಿರಜಕರ ಮಾತು. 6 ಎಕರೆ ಕೃಷಿಭೂಮಿ ಹೊಂದಿರುವ ಅವರು, ಸೋಯಾಬೀನ್‌, ಜೋಳ ಬೆಳೆಯುತ್ತಿದ್ದಾರೆ. ಇದರೊಂದಿಗೆ ಕುರಿ …

Read More »

ಕಾಲೇಜಿನಲ್ಲಿ ಮೇಳೈಸಿದ ‘ಗ್ರಾಮ ಸಂಭ್ರಮ’ ಪಂಚೆ, ಕುರ್ತಾ ತೊಟ್ಟು ಹೆಗಲ ಮೇಲೊಂದು ಶಲ್ಯ ಹಾಕಿಕೊಂಡು ಯುವಕರು ಬಂದರೆ, ಸೀರೆ, ರವಿಕೆ, ಮೂಗನತ್ತು, ಜಡೆಗೆ ಮಲ್ಲಿಗೆ ಮುಡಿದು ಯುವತಿಯರು

ಚನ್ನಮ್ಮನ ಕಿತ್ತೂರು: ಪಂಚೆ, ಕುರ್ತಾ ತೊಟ್ಟು ಹೆಗಲ ಮೇಲೊಂದು ಶಲ್ಯ ಹಾಕಿಕೊಂಡು ಯುವಕರು ಬಂದರೆ, ಸೀರೆ, ರವಿಕೆ, ಮೂಗನತ್ತು, ಜಡೆಗೆ ಮಲ್ಲಿಗೆ ಮುಡಿದು ಯುವತಿಯರು ಆಗಮಿಸಿದ್ದರು. ‘ಶರಣ್ರೀ ಯಪ್ಪಾ.. ಬನ್ನಿ’ ಎಂದು ಆತ್ಮೀಯವಾಗಿ ಬರಮಾಡಿಕೊಂಡರು. ಇದು ಕಿತ್ತೂರು ನಾಡ ವಿದ್ಯಾವರ್ಧಕ ಸಂಘದ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ‘ಗ್ರಾಮ ಸಂಭ್ರಮ’ದಲ್ಲಿ ವಿದ್ಯಾರ್ಥಿಗಳು ಸಂಭ್ರಮಿಸಿದ ಪರಿ.   ಎತ್ತಿನ ಬಂಡಿ ಕಟ್ಟಿಕೊಂಡು ವಿದ್ಯಾರ್ಥಿಗಳು ಕಾಲೇಜಿನವರೆಗೆ ಬಂದು ನಲಿದರು. ಸಜ್ಜಿರೊಟ್ಟಿ, ಎಣ್ಣೆಗಾಯಿ …

Read More »