ಕಾಗವಾಡ: ತಾಲ್ಲೂಕಿನ ಐನಾಪುರ ಪಟ್ಟಣದ ಶ್ರೀ ಸಿದ್ಧೇಶ್ವರ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಗುರುವಾರ ದೇಸಿ ಸಂಗ್ರಾಮ ಕಲ್ಲುಗಳು ಹಾಗೂ ಗುಂಡು ಎತ್ತುವ ಸ್ಪರ್ಧೆಗಳು ನೋಡುಗರ ಹುಬ್ಬೇರಿಸುವಂತೆ ಮಾಡಿದವು. ಜಮಖಂಡಿ, ಅಥಣಿ, ಗೋಕಾಕ ಹಾಗೂ ಮಹಾರಾಷ್ಟ್ರದ ವಿವಿಧ ಭಾಗಗಳಿಂದ ಬಂದ ಬಲಭೀಮರು ಶಕ್ತಿ ಪ್ರದರ್ಶನ ನೀಡಿ ಶಹಬ್ಬಾಸ್ ಎನಿಸಿಕೊಂಡರು. ಸಂಗ್ರಾಮ ಕಲ್ಲು ಎತ್ತುವ ಸ್ಪರ್ಧೆಯಲ್ಲಿ ಮಹಾರಾಷ್ಟ್ರದ ಆಸಂಗಿಯ 26ರ ವಯಸ್ಸಿನ ಅಬ್ಜಲಖಾನ ಮುಜಾವರ (97 ಕೆ.ಜಿ) …
Read More »ಫೆ.28ಕ್ಕೆ ಕನ್ನಡ ಬೋರ್ಡ್ ಅಳವಡಿಕೆಗೆ ಡೆಡ್ ಲೈನ್
ಬೆಂಗಳೂರೂ : ಫೆಬ್ರವರಿ 28ಕ್ಕೆ ಕನ್ನಡ ಬೋರ್ಡ್ ಅಳವಡಿಕೆಗೆ ಡೆಡ್ ಲೈನ್ ಹಿನ್ನಲೆ ಎಚ್ಚೆತ್ತುಕೊಂಡ BBMP ಪಾಲಿಕೆಯಿಂದ 28 ರೊಳಗಾಗಿ ಕನ್ನಡ ಬೋರ್ಡ್ ಅಳವಡಿಕೆಗೆ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲ ಅಂಗಡಿಗಳು, ವ್ಯಾಪಾರಸ್ಥರಿಗೆ ನೋಟಿಸ್ ನೀಡುತ್ತಿದೆ. ಈ ವರೆಗೆ ಒಟ್ಟು 34,262 ಸಾವಿರಕ್ಕೂ ಅಧಿಕ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕನ್ನಡ ಮಾಯವಾಗ್ತಿರೋ ಹೊತ್ತಲ್ಲೇ, ಫೆಬ್ರವರಿ 28ರ ಒಳಗೆ ಶೇಕಡಾ 60ರಷ್ಟು ಕನ್ನಡ ಬೋರ್ಡ್ …
Read More »ʻಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕʼ : ಸಚಿವ ಸಂಪುಟ ಒಪ್ಪಿಗೆ
ಬೆಂಗಳೂರು : ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಗೌರವಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಲಾಲ್ ಬಾಗ್ ನ ಗಾಜಿನ ಮನೆಯಲ್ಲಿ ವಿಶ್ವಗುರು ಬಸವಣ್ಣ ಮತ್ತು ವಚನ ಸಾಹಿತ್ಯಾಧಾರಿತ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ 2024 ಉದ್ಘಾಟಿಸಿದ ನಂತರ ಮಾತನಾಡಿದರು. ಬಸವಣ್ಣನವರ ಹೆಸರು ಚಿರಸ್ಥಾಯಿಯಾಗಿಸಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದರು. ಶಿವಮೊಗ್ಗದಲ್ಲಿರುವ ಜೈಲಿನ 46 ಎಕರೆ ಪ್ರದೇಶದಲ್ಲಿ ಉದ್ಯಾನವನಕ್ಕೆ ಅಲ್ಲಮಪ್ರಭು ಉದ್ಯಾನವನ ಎಂದು ನಾಮಕರಣ ಮಾಡಲು …
Read More »ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡಿರುವುದನ್ನು ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೊಮ್ಮಾಯಿ ಆಗ್ರಹ
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸ್ಟಿ ಸಮುದಾಯದ ಮೀಸಲಾತಿಯನ್ನು ಶೇ 3 ರಿಂದ 7 ಕ್ಕೆ ಹೆಚ್ಚಳ ಮಾಡಿರುವುದನ್ನು ಅನುಷ್ಠಾನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಬಡಿಗೆ ಹಿಡಿದು ಕೇಳುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಿಜೆಪಿ ಎಸ್ಟಿ ಮೋರ್ಚಾ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಾಷಣದಿಂದ ಯಾವುದೇ ಸಮಾಜ ಉದ್ದಾರ ಆಗಿಲ್ಲ. ಸಮಾಜಿಕ ನ್ಯಾಯ ಕೆಲವೇ ಕೆಲವು ಜನರಿಗೆ ಮೀಸಲಾಗಿದೆ. ಈ ಸಮಾಜದ ಕಡು ಬಡವರಿಗೆ, …
Read More »ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಏಕವಚನ ಬಳಕೆ: ಸೂಲಿಬೆಲೆ ಗಡಿಪಾರಿಗೆ ಕಾಂಗ್ರೆಸ್ ಆಗ್ರಹ!
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ನಮೋ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಖರ್ಗೆ ಬಗ್ಗೆ ಹಗುರವಾಗಿ ಮಾತನಾಡಿರುವ ಸೂಲಿಬೆಲೆಯನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದೆ. ‘ಚಕ್ರವರ್ತಿ ಸೂಲಿಬೆಲೆ ಎನ್ನುವ ಸಮಾಜದ ಕೊಳಕು ಕ್ರಿಮಿಯೊಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರ ಬಗ್ಗೆ ಹಗುರವಾಗಿ ಮಾತನಾಡಿರುವುದು ಖಂಡನೀಯ. ಬಾಡಿಗೆ ಭಾಷಣ …
Read More »“ಶಿಕ್ಷಣ ಕಲಿತು ನಾವು ಮೌಡ್ಯ ಆಚರಿಸಬಾರದು. ಶಿಕ್ಷಣದ ಬೆಳಕಿನಿಂದ ನಾವು ಮೌಡ್ಯದಿಂದ ಹೊರಗೆ ಬರಬೇಕು”
ಬೆಂಗಳೂರು: ಶಿಕ್ಷಣ ಕಲಿತು ನಾವು ಮೌಡ್ಯ ಆಚರಿಸಬಾರದು. ಶಿಕ್ಷಣದ ಬೆಳಕಿನಿಂದ ನಾವು ಮೌಡ್ಯದಿಂದ ಹೊರಗೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಶ್ರೀ ಮಹಾಯೋಗಿ ವೇಮನ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ಬಸವಣ್ಣ, ಕನಕದಾಸ, ಅಂಬೇಡ್ಕರ್, ವೇಮನ ಯಾರೂ ಒಂದು ಜಾತಿಗೆ ಸೀಮಿತರಾದವರಲ್ಲ. ಇವರೆಲ್ಲರೂ ವಿಶ್ವ ಮಾನವರು.ವೇಮನರಾದಿಯಾಗಿ ಬಸವಾದಿ ಶರಣರು ಮನುಕುಲದ ಆಸ್ತಿ. ಪ್ರತೀ ಮಗುವೂ ಹುಟ್ಟುತ್ತಾ ವಿಶ್ವ ಮಾನವ. ಬೆಳೆಯುತ್ತಾ ಅಲ್ಪಮಾನವರಾಗಿ ಬಿಡುತ್ತಾರೆ ಎಂದು ಕುವೆಂಪು …
Read More »ಶ್ರೀರಾಮ, ಮಂದಿರ ಫೋಟೋ ಇರೋ 500ರ ನೋಟು
ಶ್ರೀರಾಮನ ಪ್ರಾಣ ಪ್ರತಿಷ್ಠೆಗೆ ದಿನಗಣನೆ ಶುರುವಾಗಿದ್ದು, ಇಡೀ ದೇಶ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಆದರೆ ಈ ಬೆನ್ನಲ್ಲೇ ಮಂದಿರ ಉದ್ಘಾಟನೆ ಮೊದಲು 500ರ ನೋಟಿನಲ್ಲಿ ಶ್ರಿರಾಮ ಹಾಗೂ ಅಯೋಧ್ಯೆಯ ರಾಮ ಮಂದಿರ ಫೋಟೋ ಇರುವ 500 ರೂಪಾಯಿ ನೋಟ್ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಇದೀಗ ನೋಟು ಬಿಡುಗಡೆ ವಿಚಾರವಾಗಿ ಆರ್.ಬಿ.ಐ ಮಹತ್ವದ ಮಾಹಿತಿ ನೀಡಿದೆ. ಅಯೋಧ್ಯಾ ರಾಮ ಮಂದಿರ ಉದ್ಘಾಟನೆಗೆ ದಿನ ಸಮೀಪಿಸುತ್ತಿದ್ದಂತೆ ಗಾಂಧಿ ಬದಲು ಶ್ರೀರಾಮನ ಫೋಟೋ ಇರುವ …
Read More »ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅಫಜಲಪುರ : ಅಫಜಲಪುರ ತಾಲೂಕಿನ ಗ್ರಾಮವೊಂದರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಯ ಸಂಬಂಧಿಯೊಬ್ಬ ದೈಹಿಕ ಸಂಪರ್ಕ ಬೆಳೆಸಿದ್ದರಿಂದ ಗರ್ಭಿಣಿಯಾಗಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಪಾಲಕರಿಗೆ ಮಾಹಿತಿ ಮೂಲಗಳು ತಿಳಿಸಿವೆ. ನಿಂಬರಗಾ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಆಳಂದ ತಾಲೂಕಿನ ಗ್ರಾಮವೊಂದಕ್ಕೆ ಸೇರಿದ್ದ ಈ ಬಾಲಕಿ, ವಸತಿ ಶಾಲೆಯಲ್ಲಿ ಇದ್ದಾಗ ಹೊಟ್ಟೆ …
Read More »ರಾಮಮಂದಿರಕ್ಕೆ ಕರ್ನಾಟಕದಿಂದ 51 ಅಡಿ ಕೇಸರಿ ಧ್ವಜ ಅರ್ಪಣೆ
ಕರ್ನಾಟಕದ ಅನೇಕ ಕಲಾವಿದರು ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ಕನ್ನಡಿಗರು ರಾಮಮಂದಿರಕ್ಕೆ ಅತೀ ದೊಡ್ಡ ಕೇಸರಿ ಧ್ವಜವನ್ನು ಅರ್ಪಣೆ ಮಾಡಿದ್ದಾರೆ. ಕರ್ನಾಟಕದಿಂದ ಅಯೋಧ್ಯೆಗೆ ಜೀಪ್ನಲ್ಲಿ ತೆರಳಿ 51 ಅಡಿ ಭಗವಾ ಧ್ವಜವನ್ನು ಶ್ರೀರಾಮಜನ್ಮ ಭೂಮಿ ಟ್ರಸ್ಟ್ಗೆ ನೀಡಿದ್ದಾರೆ. ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರಕ್ಕೆ ಕರ್ನಾಟಕದ ಕೊಡುಗೆ ಅಧಿಕವಾಗಿದೆ. ಪ್ರಮುಖವಾಗಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿರುವ ರಾಮಲಲ್ಲಾ ವಿಗ್ರಹ ಮೈಸೂರಿನಲ್ಲಿ ತಯಾರಾಗಿದೆ. ಅಲ್ಲದೇ ಕರ್ನಾಟಕದ ಅನೇಕ ಕಲಾವಿದರು ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. …
Read More »ಪ್ರಭಾಕರ್ ಭಟ್ ಪರ ವಕಾಲತ್ತು ವಹಿಸಿದ್ದ ವಕೀಲರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಮಂಡ್ಯ, ಜ.19: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರ್ಎಸ್ಎಸ್ ಮುಖಂಡಕಲ್ಲಡ್ಕ ಪ್ರಭಾಕರ್ ಭಟ್(Kalladka Prabhakar Bhat) ಅವರಿಗೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತ ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಪ್ರಭಾಕರ್ ಭಟ್ ಪರ ನ್ಯಾಯಾಲಯದಲ್ಲಿ ವಲಾಕತ್ತು ವಹಿಸಿದ್ದ ಶ್ರೀರಂಗಪಟ್ಟಣ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರು ಎಂಬ ವಿಚಾರ ಬಹಿರಂಗವಾಗಿದೆ. ಇದೀಗ ಅವರನ್ನು ಘಟಕದ ಅಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಲಾಗಿದೆ. ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನ ಹೇಳಿಕೆ …
Read More »