Breaking News

ರಾಷ್ಟ್ರೀಯ

ಕರ್ನಾಟಕದ ಕೆಲವೆಡೆ ಗರಿಷ್ಠ ತಾಪಮಾನ ಹೆಚ್ಚಳ, ಉತ್ತರ ಒಳನಾಡಿನಲ್ಲಿ ಅಧಿಕ ಚಳಿ

ಕರ್ನಾಟಕದಾದ್ಯಂತ ಚಳಿ ಕಡಿಮೆಯಾಗಿದ್ದು, ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದೆ.ಕರ್ನಾಟಕದಾದ್ಯಂತ ಚಳಿ ಕಡಿಮೆಯಾಗಿದ್ದು, ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದೆ. ಬಳ್ಳಾರಿ ಬೆಂಗಳೂರು ಗ್ರಾಮಾಂತರ, …

Read More »

ಗದಗ: ಅಯೋಧ್ಯೆ ರಾಮ ಮಂದಿರದ ಫೋಟೋ ತಿರುಚಿ ಪೋಸ್ಟ್ ಮಾಡಿದ ಯುವಕ ಅರೆಸ್ಟ್

ಗದಗ, ಜ.22: ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಇಡೀ ಭಾರತ ಕಾತುರದಿಂದ ಕಾಯುತ್ತಿದೆ. ಪ್ರತಿ ಜಿಲ್ಲೆ, ರಾಜ್ಯಗಳಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಆದರೆ ಇಲ್ಲೊಬ್ಬ ಕಿಡಿಗೇಡಿ ರಾಮ ಮಂದಿರದ ಚಿತ್ರವನ್ನು ತಿರುಚಿ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿ ಜೈಲು ಸೇರಿದ್ದಾನೆ. ​ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ತಾಜುದ್ದೀನ್‌ ದಫೇದಾ‌ರ್ ಎಂಬ ಯುವಕನೊಬ್ಬ ಅಯೋಧ್ಯೆ ರಾಮ ಮಂದಿರದ ಮೇಲೆ ಹಸಿರು ಬಾವುಟ ಹಾರಿಸಿರುವಂತೆ ಫೋಟೋ ಎಡಿಟ್ …

Read More »

ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ: ಕರ್ನಾಟಕದಾದ್ಯಂತ ಸಂಭ್ರಮ, ಎಲ್ಲೆಲ್ಲಿ ಹೇಗಿದೆ ಆಚರಣೆ? ಇಲ್ಲಿದೆ ವಿವರ

ಬೆಂಗಳೂರು, ಜ.22: ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರೋ ಭವ್ಯ ರಾಮಮಂದಿರದಲ್ಲಿ ಶ್ರೀರಾಮಲಲ್ಲನ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆಗೆ ಶುರುವಾಗಿದೆ (Ayodhya Ram Mandir). ಈ ಅದ್ಧೂರಿ ಕಾರ್ಯಕ್ರಮಕ್ಕಾಗಿ ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಇತ್ತ ಕರ್ನಾಟಕ ರಾಜ್ಯದಲ್ಲೂ ಹಬ್ಬದ ಸಂಭ್ರಮ ಮನೆ ಮಾಡಿದೆ. ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜೆ ನಡೆಯಲಿದೆ. ರಾಜ್ಯಾದ್ಯಂತ ಭಕ್ತರು ನಾನಾ ರೀತಿಯಲ್ಲಿ ತಮ್ಮ ಭಕ್ತಿಯನ್ನು ತೋರ್ಪಡಿಸುತ್ತಿದ್ದಾರೆ. ಬನ್ನಿ ಕರ್ನಾಟಕದಾದ್ಯಂತ ಸಂಭ್ರಮ ಹೇಗಿದೆ? ಎಂಬ ವಿವರ ಇಲ್ಲಿದೆ. ಮಲ್ಲೇಶ್ವರಂನ …

Read More »

ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ

ಜನವರಿ 22: ಅಯೋಧ್ಯೆಯ ರಾಮ ಮಂದಿರದಲ್ಲಿ (Ayodhya Ram Mandir) ರಾಮ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಹರ್ಷ ವ್ಯಕ್ತಪಡಿಸಿದ್ದು, ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ ಎಂದು ಹೇಳಿದ್ದಾರೆ. ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ (HD Deve gowda) ಜತೆ ಮುಂಜಾನೆಯೇ ಅವರು ಅಯೋಧ್ಯೆಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿದ್ದು, ಅಸಂಖ್ಯಾತ …

Read More »

ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತೆ. ಆದ್ರೆ, ಸರ್ಕಾರಿ ರಜೆ ಇಲ್ಲ

ತಮಕೂರು, : ಅಯೊಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ (ಸೋಮವಾರ) ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸಬೇಕೆಂದಯ ಬಿಜೆಪಿ ಆಗ್ರಹಿಸಿದೆ. ಆದ್ರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಜೆ ಘೋಷಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಸರ್ಕಾರಿ ರಜೆ ಬಗ್ಗೆ ಸಿಎಂ ಸಿದ್ದರಾಮಯ್ಯನವರು ತಮ್ಮ ನಿಲುವು ಪ್ರಕಟಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ,  ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತೆ. ಆದ್ರೆ, ಸರ್ಕಾರಿ ರಜೆ ಇಲ್ಲ.  ಮುಜರಾಯಿ ದೇಗುಲಗಳಲ್ಲಿ ದಾಸೋಹ, …

Read More »

ಕರ್ನಾಟಕದಲ್ಲಿ ಇಂದು 89 ಮಂದಿಗೆ ಕೊರೊನಾ ಸೋಂಕು ದೃಢ; ಎಷ್ಟು ಸಾವು, ಗುಣಮುಖ ಕೇಸ್​ಎಷ್ಟು?

ಬೆಂಗಳೂರು, : ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 3336 ಜನರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದೆ. ಈ ಪೈಕಿ 89 ಮಂದಿಗೆ ಕೊರೊನಾ ಸೋಂಕು (Karnataka Covid Case) ತಗುಲಿರುವುದು ದೃಢಪಟ್ಟಿದೆ. ಒಬ್ಬ ಸೋಂಕಿತ ಮೃತಪಟ್ಟಿದ್ದು, 74 ಸೋಂಕಿತರು ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಬೆಂಗಳೂರಿನಲ್ಲಿ(Bengaluru) 16 ಮಂದಿಗೆ ಕೋವಿಡ್ ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಬ್ಬ ಸೋಂಕಿತ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 2.66 ರಷ್ಟಿದೆ. ಒಟ್ಟು 497 ಸಕ್ರಿಯ …

Read More »

ಚಿತ್ರದುರ್ಗ: ಎಲ್​​ಪಿಜಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತ

ಚಿತ್ರದುರ್ಗ, ಜನವರಿ 21: ಎಲ್​​ಪಿಜಿ ಸಿಲಿಂಡರ್ (Cylinder) ಸ್ಫೋಟಗೊಂಡು ಓರ್ವ ಮಹಿಳೆ ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಹೊಳಲ್ಕೆರೆ ತಾಲೂಕಿನ ಹೊಸಹಳ್ಳಿಯಲ್ಲಿ ನಡೆದಿದೆ. ಲಕ್ಷ್ಮಮ್ಮ (38) ಮೃತ ದುರ್ದೈವಿ. ರೇಣುಕಮ್ಮ ಮತ್ತು ರಚನಾ ಎಂಬುವರಿಗೆ ಗಾಯಗಳಾಗಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಮೇಶ್ ಎಂಬುವರ ಬೀದಿ ಬದಿ ಹೋಟೆಲ್​​ಗೆ ಬೆಂಕಿ ಬಿದ್ದಿತ್ತು. ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆ, ಸುತ್ತಮುತ್ತಲಿದ್ದ ಮಹಿಳಾ ಕಾರ್ಮಿಕರು ಬೀದಿ ಬದಿ ಹೋಟೆಲ್​​ನತ್ತ ಧಾವಿಸಿದ್ದಾರೆ. ಈ ವೇಳೆ ಹೋಟೆಲ್​​ನಲ್ಲಿದ್ದ ಸಿಲಿಂಡರ್​ …

Read More »

ಹಳ್ಳಿ ಹುಡಗನ ಕೈಚಳಕ: ಜೋಳ, ಅಕ್ಕಿಯಿಂದ ಭವ್ಯ ಶ್ರೀರಾಮಮಂದಿರ ನಿರ್ಮಾಣ

ಗದಗ, ಜನವರಿ 21: ಅಯೋಧ್ಯೆಯಲ್ಲಿ (Ayodhya) ನಾಳೆ (ಜ.22) ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯಾಗಲಿದೆ. ಪ್ರಾಣ ಪ್ರತಿಷ್ಠೆಯನ್ನು ಕಣ್ತುಂಬಿಕೊಳ್ಳಲು ಅಸಂಖ್ಯ ಜನರು ಕಾಯುತ್ತಿದ್ದಾರೆ. ಭಕ್ತರು ವಿವಿಧ ರೂಪದಲ್ಲಿ ಪ್ರಭು ಶ್ರೀರಾಮಚಂದ್ರನಿಗೆ (Sri Ram) ತಮ್ಮ ಭಕ್ತಿಯನ್ನು ಸಮರ್ಪಿಸುತ್ತಿದ್ದಾರೆ. ಇದೀಗ ಗದಗ ಜಿಲ್ಲೆಯ ಚಿಕ್ಕಹಂದಿಗೋಳ ಗ್ರಾಮದ ಯುವ ಕಲಾವಿದ ನಾಗರಾಜ ಕಮ್ಮಾರ ಅವರು 15 ಕೆಜಿ ಜೋಳ, 2 ಕೆಜಿ ಅಕ್ಕಿಯಲ್ಲಿ 12 ಅಡಿ ಎತ್ತರ, 10 ಅಡಿ ಅಗಲ ವಿಸ್ತೀರ್ಣದಲ್ಲಿ ಶ್ರೀರಾಮಮಂದಿರ …

Read More »

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೆ ಮುಹೂರ್ತ ನಿಗದಿಪಡಿಸಿದ್ದು ಬೆಳಗಾವಿಯ ವಿದ್ಯಾವಿಹಾರ ವಿದ್ಯಾಲಯ ಕುಲಪತಿ

ಬೆಳಗಾವಿ, :ಅಯೋಧ್ಯೆಯಲ್ಲಿ (Ayodhya) ಭವ್ಯ ರಾಮಮಂದಿರ (Ram Mandir) ನಿರ್ಮಾಣವಾಗಿದೆ. ಜನವರಿ 22 ರಂದು ರಾಮಲಲ್ಲಾ (ಬಾಲ ರಾಮ)ನ ಮೂರ್ತಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ನಂತರ ಪ್ರಾಣ ಪ್ರತಿಷ್ಠೆ ನೆರವೇರಲಿದೆ. ಜ.22ರಂದು ಪಂಚಾಂಗದ ಪ್ರಕಾರ ಮೃಗಶಿರಾ ನಕ್ಷತ್ರವಿದೆ. ಆ ದಿನ ಮಧ್ಯಾಹ್ನ 12.15ರಿಂದ 12.45ರ ನಡುವೆ ವಿಗ್ರಹವನ್ನು ಗರ್ಭಗುಡಿ ಯಲ್ಲಿ ಪ್ರತಿಷ್ಠಾಪನೆ ಮಾಡಿ, ಪ್ರಾಣ ತುಂಬಲಾಗುತ್ತದೆ. ಈ ಸಮಯದಲ್ಲಿ ಅಭಿಜಿನ್ ಮುಹೂರ್ತವಿರುತ್ತದೆ. ಇದೇ ಸಮಯದಲ್ಲಿ ರಾಮನ ಜನನವಾಯಿತು ಎಂಬ ಕಾರಣದ ಜತೆಗೆ, …

Read More »

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ: ಬೆಳಗಾವಿಯಲ್ಲಿ ಶೋಭಾಯಾತ್ರೆಗೆ ಅನುಮತಿ ಕೊರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಳಗಾವಿ, : ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾನೆಹಿನ್ನೆಲೆ ಜಿಲ್ಲೆಯಲ್ಲಿ ಶೋಭಾಯಾತ್ರೆಗೆ ಅನುಮತಿ ಕೊರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ನ ಧಾರವಾಡ ವಿಭಾಗೀಯ ಪೀಠ​ ವಜಾಗೊಳಿಸಿ ಆದೇಶ ಹೊರಡಿಸಿದೆ. ಶ್ರೀರಾಮ ಸೇನೆ ಹಿಂದೂಸ್ತಾನ್ ವತಿಯಿಂದ ನಾಳೆ ಮಧ್ಯಾಹ್ನ ಗಂಟೆಯಿಂದ ರಾತ್ರಿ 9 ಗಂಟೆ ವರೆಗೂ ಬೃಹತ್ ಶೋಭಾಯಾತ್ರೆ ಆಯೋಜಿಸಲಾಗಿತ್ತು. ಶ್ರೀರಾಮ ಸೇನೆ ಹಿಂದೂಸ್ತಾನ್ ಸಂಘಟ‌ನೆ ಸಂಸ್ಥಾಪಕ ರಮಾಕಾಂತ ಕೊಂಡುಸ್ಕರ ನೇತೃತ್ವದಲ್ಲಿ ನಗರದ ಸಂಭಾಜಿ ವೃತ್ತದಿಂದ ಶಹಾಪೂರ ವರೆಗೂ ಶೋಭಾಯಾತ್ರೆ ನಡೆಸಲು ಮುಂದಾಗಿದ್ದರು. ಆದರೆ ಕಾನೂನು …

Read More »