Breaking News

ರಾಷ್ಟ್ರೀಯ

ಲೋಕಸಮರಕ್ಕೆ ʻಕೈʼ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚುರುಕು

ಬೆಂಗಳೂರು: ಲೋಕಸಭಾ(Loka Saba) ಚುನಾವಣೆಗೆ ಕಾಂಗ್ರೆಸ್‌ನಲ್ಲಿ(INC Karnataka) ತಯಾರಿ ಆರಂಭಗೊಂಡಿದ್ದು, ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಕೆಪಿಸಿಸಿ(KPCC) ಚುನಾವಣಾ ಸಮಿತಿ ಸಭೆ ನಡೆಸಲು ಕೈ ನಾಯಕರು ತಯಾರಿ ಮಾಡಿಕೊಂಡಿದ್ದಾರೆ.   ಜ. 19ರಂದು ಸಂಜೆ 4 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಚುನಾವಣಾ ಸಮಿತಿ ಸಭೆ ಆಯೋಜನೆ ಮಾಡಲಾಗಿದ್ದು, ಸಭೆಯಲ್ಲಿ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಹರೀಶ್ ಚೌಧರಿ, ಸಿಎಂ ಸಿದ್ದರಾಮಯ್ಯ , ಡಿಸಿಎಂ …

Read More »

ಬೆಳಗಾವಿಯಲ್ಲಿ ಮಹಾರಾಷ್ಟ್ರ ಆರೋಗ್ಯ ವಿಮೆ‌ ಜಾರಿ: ಕೆಎಲ್‌ಇ, ಅರಿಹಂತ ಆಸ್ಪತ್ರೆಗೆ ನೋಟಿಸ್

ಬೆಳಗಾವಿ, ಜನವರಿ 12: ಮಹಾರಾಷ್ಟ್ರ ಸರ್ಕಾರದ ಆರೋಗ್ಯ ವಿಮೆ‌ ಜಾರಿ‌ (Health Insurance) ವಿಚಾರವಾಗಿ ಬೆಳಗಾವಿಯ ಕೆಎಲ್‌ಇ ಹಾಗೂ ಅರಿಹಂತ ಆಸ್ಪತ್ರೆಗೆ ನೋಟಿಸ್ ಜಾರಿ ಮಾಡಲಾಗಿದೆ. ಮಹಾರಾಷ್ಟ್ರ (Maharashtra) ಆರೋಗ್ಯ ‌ವಿಮೆಯನ್ನು ಆರೋಗ್ಯ ಇಲಾಖೆ ಗಮನಕ್ಕೆ ತರದೇ ಅನುಷ್ಠಾನಗೊಳಿಸಿದ್ದಕ್ಕಾಗಿ ಡಿಎಚ್‌ಓ‌ ಡಾ.‌ ಮಹೇಶ್ ಕೋಣಿ ನೋಟಿಸ್ ಜಾರಿ ಮಾಡಿದ್ದಾರೆ. ಯಾವ ಕಾನೂನಿಡಿ ಮಹಾರಾಷ್ಟ್ರ ಆರೋಗ್ಯ ವಿಮೆಗೆ ಸಂಬಂಧಿಸಿ ಒಡಂಬಡಿಕೆ ಮಾಡಿಕೊಂಡಿದ್ದೀರಿ? ಅದರಡಿ ಇಲ್ಲಿಯ ವರೆಗೆ ‌ಚಿಕಿತ್ಸೆ ಪಡೆದವರ ಸಂಖ್ಯೆ ಎಷ್ಟು ಎಂದು ಪ್ರಶ್ನಿಸಿ ರೋಗಿಗಳ ವಿವಿರ …

Read More »

ಮಗನನ್ನು ಹತ್ಯೆಗೈದ ತಾಯಿ ಸುಚನಾ ಸೇಠ್​ಳ ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಟ್ಯಾಕ್ಸಿ ಡ್ರೈವರ್

ಬೆಳಗಾವಿ, ಜನವರಿ 12: ಬೆಂಗಳೂರಿನಲ್ಲಿ ಖಾಸಗಿ ಕಂಪನಿಯ ಸಿಇಒ ಆಗಿದ್ದ ಸುಚನಾ(Suchana Seth)ತನ್ನ ನಾಲ್ಕು ವರ್ಷದ ಮಗನನ್ನೇ ಕೊಂದ ಆರೋಪದಲ್ಲಿ ಗೋವಾ ಪೊಲೀಸರ ವಶವಾಗಿದ್ದಾಳೆ. ಸದ್ಯ ಈ ಕೇಸ್​ಗೆ ಸಂಬಂಧಪಟ್ಟಂತೆ ಟ್ಯಾಕ್ಸಿ ಡ್ರೈವರ್ ರಾಯ್ ಜೋಹಾನ್ ಡಿಸೋಜ​ ಇಂಚಿಂಚೂ ಮಾಹಿತಿ ಬಿಚ್ಚಿಟ್ಟಾರೆ. ಮಗನ ಶವದ ಜತೆಗೆ ಟ್ಯಾಕ್ಸಿಯಲ್ಲಿ ಸುಚನಾ ಸೇಠ್ ಬೆಂಗಳೂರಿಗೆ ಹೊರಟ್ಟಿದ್ದಳು. ವಾಹನ ಚಾಲನೆ ವೇಳೆ ಪೊಲೀಸರು ನನಗೆ ಕರೆ ಮಾಡಿ ಮಾಹಿತಿ ಹೇಳಿದ್ದರು. ಪೊಲೀಸರ ಪೋನ್ ಬಂದ ಬಳಿಕ …

Read More »

ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭು ಹೆಸರು; ಸಿಎಂ ಸಿದ್ದರಾಮಯ್ಯ ಘೋಷಣೆ

ಶಿವಮೊಗ್ಗ: ಅಲ್ಲಮ ಪ್ರಭು ಒಬ್ಬ ಶ್ರೇಷ್ಠ ಕವಿಯಾಗಿದ್ದು, ಅವರು ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ. ನಮ್ಮ ನಾಡಿಗೆ ಅವರ ಕೊಡುಗೆ ಅಪಾರವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರ ಆಶಯದಂತೆ ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು (Allama Prabhu) ಅವರ ಹೆಸರನ್ನು ಇಡುವುದು ಸೂಕ್ತ ಎಂದು ನಾನೂ ಸಹ ಭಾವಿಸಿದ್ದೇನೆ. ಹೀಗಾಗಿ ಫ್ರೀಡಂ ಪಾರ್ಕ್‌ಗೆ (Freedom Park) ಅಲ್ಲಮ ಪ್ರಭು (Allama Prabhu) ಎಂದು ನಾಮಕರಣ ಮಾಡಲು ನಾನು ಸಿದ್ಧ …

Read More »

ಹಾವೇರಿ ನೈತಿಕ ಪೊಲೀಸ್ ಗಿರಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಪರಮೇಶ್ವರ್

ಬೆಂಗಳೂರು: ಹಾವೇರಿಯಲ್ಲಿ (haveri) ನಡೆದ ನೈತಿಕ ಪೊಲೀಸ್ ಗಿರಿ (Moral Policing) ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ (home minister) ಡಾ. ಜಿ. ಪರಮೇಶ್ವರ್ (dr. g. parameshwar) ಹೇಳಿದರು. ಬೆಂಗಳೂರಿನಲ್ಲಿ (bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತೆ ಮೇಲೆ ಗ್ಯಾಂಗ್ ರೇಪ್ ಆಗಿದೆ ಎನ್ನುವ ಕುರಿತು ಮೊದಲು ದೂರು ಕೊಟ್ಟಿರಲಿಲ್ಲ. ಬಳಿಕ ಆಕೆ ರೇಪ್ ಆಗಿದೆ ಎಂದು ದೂರು ನೀಡಿದ್ದಾರೆ. ಪ್ರಕರಣಕ್ಕೆ …

Read More »

ಯುವಕರ ಭವಿಷ್ಯಕ್ಕೆ ಶಕ್ತಿ ತುಂಬುವ ಯೋಜನೆ ಇದು: ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ: ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂತಹ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮ ದಿನದಂದೇ ನನ್ನ ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ ಜಾರಿ (Yuva Nidhi Scheme) ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನುಡಿದರು.   ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ ‘ಯುವನಿಧಿ’ ಯೋಜನೆಯನ್ನು ಉದ್ಘಾಟಿಸಿ …

Read More »

ಯುವ ಕಾಂಗ್ರೆಸ್ ರಾಷ್ಟ್ರೀಯ ಮಾಧ್ಯಮ ಸಂಯೋಜಕರಾಗಿ ವಿ.ಎಸ್‌. ಅಭಿಷೇಕ್‌ ಆಯ್ಕೆ

ಬೆಂಗಳೂರು: ಭಾರತೀಯ ಯುವ ಕಾಂಗ್ರೆಸ್ ನ (India Youth Congress) ರಾಷ್ಟ್ರೀಯ ಮಾಧ್ಯಮ ಸಂಯೋಜಕರಾಗಿ (national media coordinator) ವಿ.ಎಸ್‌. ಅಭಿಷೇಕ್‌ (v.s. abhishek) ಅವರನ್ನು ನೇಮಿಸಲಾಗಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಭಾರತೀಯ ಯುವ ಕಾಂಗ್ರೆಸ್‌ ರಾಷ್ಟ್ರೀಯ ಉಸ್ತುವಾರಿ ಮಾಧ್ಯಮ ವಿಭಾಗದ ವರುಣ್‌ ಪಾಂಡೆ (varun pande), ಭಾರತೀಯ ಯುವ ಕಾಂಗ್ರೆಸ್‌ ವಿ.ಎಸ್‌. ಅಭಿಷೇಕ್‌ ಅವರನ್ನು ರಾಷ್ಟ್ರೀಯ ಮಾಧ್ಯಮ ಸಂಯೋಜಕರಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.   …

Read More »

ಪತ್ರಿಕೆಗಳಲ್ಲಿ ಜಾಹೀರಾತು ಕೊಟ್ಟ ತಕ್ಷಣ ಗ್ಯಾರಂಟಿಗಳು ಜನರಿಗೆ ತಲುಪಿದೆ ಅಂತಲ್ಲ: ವಿಜಯೇಂದ್ರ

ರಾಯಚೂರು: ಪತ್ರಿಕೆಗಳಲ್ಲಿ ಜಾಹೀರಾತು ಕೊಟ್ಟ ತಕ್ಷಣ ಗ್ಯಾರಂಟಿಗಳು ಜನರಿಗೆ ತಲುಪಿದೆ ಅಂತಲ್ಲ. ಮುಂದೆ ಚುನಾವಣೆಯಲ್ಲಿ ತಕ್ಕ ಉತ್ತರವನ್ನು ನೀಡುತ್ತಾರೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಅನುಷ್ಠಾನಕ್ಕೆ ತಂದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಯ ಪರವಾಗಿ ಅಲೆಯಿದೆ. ಹೀಗಾಗಿ ಕಾಂಗ್ರೆಸ್ ನಾಯಕರು ಆತಂಕದಲ್ಲಿದ್ದಾರೆ. ರಾಮಮಂದಿರ ಹಾಗೂ ಅಲ್ಪಸಂಖ್ಯಾತರ ತುಷ್ಟೀಕರಣ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ನಡವಳಿಕೆಯನ್ನು ಮತದಾರರು ಗಮನಿಸುತ್ತಿದ್ದಾರೆ …

Read More »

ಸರ್ವೋತ್ತಮ ಜಾರಕಿಹೊಳಿ ಅವರು ಸಾರಿಗೆಯ ಬಸ್ಸಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಕರ್ನಾಟಕ ದರ್ಶನ ಪ್ರವಾಸಕ್ಕೆ ಚಾಲನೆ ನೀಡಿ ಮಕ್ಕಳಿಗೆ ಶುಭ‌ ಕೋರಿದರು.

ಗೋಕಾಕ್- ಮಕ್ಕಳಿಗೆ ರಾಜ್ಯದ ನೆಲ,ಜಲ, ಇತಿಹಾಸ, ಪರಂಪರೆ ಹಾಗೂ ಸಂಸ್ಕೃತಿಯನ್ನು ಪರಿಚಯಿಸಲು ಕರ್ನಾಟಕ ದರ್ಶನದಂತಹ ಶೈಕ್ಷಣಿಕ ಪ್ರವಾಸ ಮಹತ್ತರ ಪಾತ್ರ ವಹಿಸುತ್ತದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಶುಕ್ರವಾರ ಇಲ್ಲಿಯ ಎನ್ಎಸ್ಎಫ್ ಕಾರ್ಯಾಲಯದ ಆವರಣದಲ್ಲಿ ಮೂಡಲಗಿ ವಲಯದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಮ್ಮಿಕೊಂಡ ಶೈಕ್ಷಣಿಕ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳಲ್ಲಿ ಉತ್ತಮ ಪರಿಸರ, ವಾತಾವರಣವನ್ನು ನಿರ್ಮಿಸುವಲ್ಲಿ ಶೈಕ್ಷಣಿಕ ಪ್ರವಾಸ ಉತ್ತಮ ಅಡಿಪಾಯವಾಗಿದೆ ಎಂದು …

Read More »

ಯತ್ನಾಳ್ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ,ಪ್ರಕರಣ ರದ್ದು ಕೋರಿ ರಮೇಶ್ ಜಾರಕಿಹೊಳಿ ಅರ್ಜಿ

ಬೆಂಗಳೂರು/ವಿಜಯಪುರ, (ಜನವರಿ 12): ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ (Basangouda Patil Yatnal) ವಿರುದ್ಧದ ಕೇಸ್​ಗೆ ಕರ್ನಾಟಕ ಹೈಕೋರ್ಟ್ (Karnataka high Court) ತಡೆ ನೀಡಿದೆ. ವಿಧಾನಸಭಾ ಚುನಾವಣೆ (Karnataka Assembly Elections 2023) ವೇಳೆ‌ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಡಿಯಲ್ಲಿ ಕೇಸ್ ದಾಖಲಾಗಿತ್ತು. ಆದ್ರೆ, ಇದೀಗ ಈ ಪ್ರಕರಣಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ, ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಕೋರ್ಟ್​ ಮೆಟ್ಟಿಲೇರಿದ …

Read More »