ಜನವರಿ 22: ಅಯೋಧ್ಯೆಯ ರಾಮ ಮಂದಿರದಲ್ಲಿ (Ayodhya Ram Mandir) ರಾಮ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಹರ್ಷ ವ್ಯಕ್ತಪಡಿಸಿದ್ದು, ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ ಎಂದು ಹೇಳಿದ್ದಾರೆ. ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ (HD Deve gowda) ಜತೆ ಮುಂಜಾನೆಯೇ ಅವರು ಅಯೋಧ್ಯೆಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿದ್ದು, ಅಸಂಖ್ಯಾತ …
Read More »ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತೆ. ಆದ್ರೆ, ಸರ್ಕಾರಿ ರಜೆ ಇಲ್ಲ
ತಮಕೂರು, : ಅಯೊಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ (ಸೋಮವಾರ) ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸಬೇಕೆಂದಯ ಬಿಜೆಪಿ ಆಗ್ರಹಿಸಿದೆ. ಆದ್ರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಜೆ ಘೋಷಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಸರ್ಕಾರಿ ರಜೆ ಬಗ್ಗೆ ಸಿಎಂ ಸಿದ್ದರಾಮಯ್ಯನವರು ತಮ್ಮ ನಿಲುವು ಪ್ರಕಟಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತೆ. ಆದ್ರೆ, ಸರ್ಕಾರಿ ರಜೆ ಇಲ್ಲ. ಮುಜರಾಯಿ ದೇಗುಲಗಳಲ್ಲಿ ದಾಸೋಹ, …
Read More »ಕರ್ನಾಟಕದಲ್ಲಿ ಇಂದು 89 ಮಂದಿಗೆ ಕೊರೊನಾ ಸೋಂಕು ದೃಢ; ಎಷ್ಟು ಸಾವು, ಗುಣಮುಖ ಕೇಸ್ಎಷ್ಟು?
ಬೆಂಗಳೂರು, : ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 3336 ಜನರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದೆ. ಈ ಪೈಕಿ 89 ಮಂದಿಗೆ ಕೊರೊನಾ ಸೋಂಕು (Karnataka Covid Case) ತಗುಲಿರುವುದು ದೃಢಪಟ್ಟಿದೆ. ಒಬ್ಬ ಸೋಂಕಿತ ಮೃತಪಟ್ಟಿದ್ದು, 74 ಸೋಂಕಿತರು ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಬೆಂಗಳೂರಿನಲ್ಲಿ(Bengaluru) 16 ಮಂದಿಗೆ ಕೋವಿಡ್ ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಬ್ಬ ಸೋಂಕಿತ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 2.66 ರಷ್ಟಿದೆ. ಒಟ್ಟು 497 ಸಕ್ರಿಯ …
Read More »ಚಿತ್ರದುರ್ಗ: ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಮೃತ
ಚಿತ್ರದುರ್ಗ, ಜನವರಿ 21: ಎಲ್ಪಿಜಿ ಸಿಲಿಂಡರ್ (Cylinder) ಸ್ಫೋಟಗೊಂಡು ಓರ್ವ ಮಹಿಳೆ ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಹೊಳಲ್ಕೆರೆ ತಾಲೂಕಿನ ಹೊಸಹಳ್ಳಿಯಲ್ಲಿ ನಡೆದಿದೆ. ಲಕ್ಷ್ಮಮ್ಮ (38) ಮೃತ ದುರ್ದೈವಿ. ರೇಣುಕಮ್ಮ ಮತ್ತು ರಚನಾ ಎಂಬುವರಿಗೆ ಗಾಯಗಳಾಗಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಮೇಶ್ ಎಂಬುವರ ಬೀದಿ ಬದಿ ಹೋಟೆಲ್ಗೆ ಬೆಂಕಿ ಬಿದ್ದಿತ್ತು. ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆ, ಸುತ್ತಮುತ್ತಲಿದ್ದ ಮಹಿಳಾ ಕಾರ್ಮಿಕರು ಬೀದಿ ಬದಿ ಹೋಟೆಲ್ನತ್ತ ಧಾವಿಸಿದ್ದಾರೆ. ಈ ವೇಳೆ ಹೋಟೆಲ್ನಲ್ಲಿದ್ದ ಸಿಲಿಂಡರ್ …
Read More »ಹಳ್ಳಿ ಹುಡಗನ ಕೈಚಳಕ: ಜೋಳ, ಅಕ್ಕಿಯಿಂದ ಭವ್ಯ ಶ್ರೀರಾಮಮಂದಿರ ನಿರ್ಮಾಣ
ಗದಗ, ಜನವರಿ 21: ಅಯೋಧ್ಯೆಯಲ್ಲಿ (Ayodhya) ನಾಳೆ (ಜ.22) ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯಾಗಲಿದೆ. ಪ್ರಾಣ ಪ್ರತಿಷ್ಠೆಯನ್ನು ಕಣ್ತುಂಬಿಕೊಳ್ಳಲು ಅಸಂಖ್ಯ ಜನರು ಕಾಯುತ್ತಿದ್ದಾರೆ. ಭಕ್ತರು ವಿವಿಧ ರೂಪದಲ್ಲಿ ಪ್ರಭು ಶ್ರೀರಾಮಚಂದ್ರನಿಗೆ (Sri Ram) ತಮ್ಮ ಭಕ್ತಿಯನ್ನು ಸಮರ್ಪಿಸುತ್ತಿದ್ದಾರೆ. ಇದೀಗ ಗದಗ ಜಿಲ್ಲೆಯ ಚಿಕ್ಕಹಂದಿಗೋಳ ಗ್ರಾಮದ ಯುವ ಕಲಾವಿದ ನಾಗರಾಜ ಕಮ್ಮಾರ ಅವರು 15 ಕೆಜಿ ಜೋಳ, 2 ಕೆಜಿ ಅಕ್ಕಿಯಲ್ಲಿ 12 ಅಡಿ ಎತ್ತರ, 10 ಅಡಿ ಅಗಲ ವಿಸ್ತೀರ್ಣದಲ್ಲಿ ಶ್ರೀರಾಮಮಂದಿರ …
Read More »ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೆ ಮುಹೂರ್ತ ನಿಗದಿಪಡಿಸಿದ್ದು ಬೆಳಗಾವಿಯ ವಿದ್ಯಾವಿಹಾರ ವಿದ್ಯಾಲಯ ಕುಲಪತಿ
ಬೆಳಗಾವಿ, :ಅಯೋಧ್ಯೆಯಲ್ಲಿ (Ayodhya) ಭವ್ಯ ರಾಮಮಂದಿರ (Ram Mandir) ನಿರ್ಮಾಣವಾಗಿದೆ. ಜನವರಿ 22 ರಂದು ರಾಮಲಲ್ಲಾ (ಬಾಲ ರಾಮ)ನ ಮೂರ್ತಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ನಂತರ ಪ್ರಾಣ ಪ್ರತಿಷ್ಠೆ ನೆರವೇರಲಿದೆ. ಜ.22ರಂದು ಪಂಚಾಂಗದ ಪ್ರಕಾರ ಮೃಗಶಿರಾ ನಕ್ಷತ್ರವಿದೆ. ಆ ದಿನ ಮಧ್ಯಾಹ್ನ 12.15ರಿಂದ 12.45ರ ನಡುವೆ ವಿಗ್ರಹವನ್ನು ಗರ್ಭಗುಡಿ ಯಲ್ಲಿ ಪ್ರತಿಷ್ಠಾಪನೆ ಮಾಡಿ, ಪ್ರಾಣ ತುಂಬಲಾಗುತ್ತದೆ. ಈ ಸಮಯದಲ್ಲಿ ಅಭಿಜಿನ್ ಮುಹೂರ್ತವಿರುತ್ತದೆ. ಇದೇ ಸಮಯದಲ್ಲಿ ರಾಮನ ಜನನವಾಯಿತು ಎಂಬ ಕಾರಣದ ಜತೆಗೆ, …
Read More »ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ: ಬೆಳಗಾವಿಯಲ್ಲಿ ಶೋಭಾಯಾತ್ರೆಗೆ ಅನುಮತಿ ಕೊರಿ ಸಲ್ಲಿಸಿದ್ದ ಅರ್ಜಿ ವಜಾ
ಬೆಳಗಾವಿ, : ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾನೆಹಿನ್ನೆಲೆ ಜಿಲ್ಲೆಯಲ್ಲಿ ಶೋಭಾಯಾತ್ರೆಗೆ ಅನುಮತಿ ಕೊರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ನ ಧಾರವಾಡ ವಿಭಾಗೀಯ ಪೀಠ ವಜಾಗೊಳಿಸಿ ಆದೇಶ ಹೊರಡಿಸಿದೆ. ಶ್ರೀರಾಮ ಸೇನೆ ಹಿಂದೂಸ್ತಾನ್ ವತಿಯಿಂದ ನಾಳೆ ಮಧ್ಯಾಹ್ನ ಗಂಟೆಯಿಂದ ರಾತ್ರಿ 9 ಗಂಟೆ ವರೆಗೂ ಬೃಹತ್ ಶೋಭಾಯಾತ್ರೆ ಆಯೋಜಿಸಲಾಗಿತ್ತು. ಶ್ರೀರಾಮ ಸೇನೆ ಹಿಂದೂಸ್ತಾನ್ ಸಂಘಟನೆ ಸಂಸ್ಥಾಪಕ ರಮಾಕಾಂತ ಕೊಂಡುಸ್ಕರ ನೇತೃತ್ವದಲ್ಲಿ ನಗರದ ಸಂಭಾಜಿ ವೃತ್ತದಿಂದ ಶಹಾಪೂರ ವರೆಗೂ ಶೋಭಾಯಾತ್ರೆ ನಡೆಸಲು ಮುಂದಾಗಿದ್ದರು. ಆದರೆ ಕಾನೂನು …
Read More »ಹುಬ್ಬಳ್ಳಿ | ಎಲ್ಲೆಡೆ ರಾಮಮಯ; ಗುಡಿ-ಮಂದಿರ ಕೇಸರಿಮಯ
ಹುಬ್ಬಳ್ಳಿ: ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಮತ್ತು ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಅದಕ್ಕೆ ಪೂರಕವಾಗಿ ವಾಣಿಜ್ಯ ನಗರಿಯೂ ಸಂಭ್ರಮದಿಂದ ಸಿದ್ಧಗೊಂಡಿದೆ. ನಗರದ ಪ್ರಮುಖ ವೃತ್ತ ಸೇರಿದಂತೆ ಗಲ್ಲಿಗಲ್ಲಿಯೂ ಕೇಸರಿ ಬಾವುಟಗಳಿಂದ ಸಿಂಗಾರಗೊಂಡಿದೆ. ನಗರದ ದೇವಸ್ಥಾನಗಳು, ಮಠ-ಮಂದಿರಗಳು ರಾಮಧ್ವಜ, ಕೇಸರಿ ಬಾವುಟ ಹಾಗೂ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡಿವೆ. ಗ್ರಾಮೀಣ ಭಾಗದ ಗುಡಿ, ಮಂದಿರಗಳನ್ನು ಸಹ ತಳಿರು-ತೋರಣಗಳಿಂದ ಸಿಂಗರಿಸಲಾಗಿದೆ. ವಿವಿಧ ಸಂಘ- ಸಂಸ್ಥೆಗಳು ಬಡಾವಣೆಗಳಲ್ಲಿ ರಾಮೋತ್ಸವಕ್ಕೆ ಸಿದ್ಧತೆ ಮಾಡಿಕೊಂಡಿವೆ. ದುರ್ಗದಬೈಲ್, ಗಣೇಶಪೇಟೆ, …
Read More »ಜಾನುವಾರು ಜಾತ್ರೆ: ಭರ್ಜರಿ ವ್ಯಾಪಾರ
ಕಕ್ಕೇರಾ: ಪಟ್ಟಣದ ಸೋಮನಾಥ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಜಾನುವಾರು ಜಾತ್ರೆ ಭರ್ಜರಿಯಾಗಿ ನಡೆಯುತ್ತಿದೆ. ಭಾನುವಾರದವರೆಗೆ ಜಾನುವಾರು ಜಾತ್ರೆ ಇರಲಿದೆ. ರಾಯಚೂರು, ಕೊಪ್ಪಳ, ಬಾಲಗಕೋಟೆ, ವಿಜಯಪುರ, ಮಾನ್ವಿ, ಲಿಂಗಸುಗೂರು, ದೇವದುರ್ಗ, ತಾವರಗೇರಾ, ಕುಷ್ಟಗಿ, ತಾಳಿಕೋಟೆ, ಇಂಡಿ ಸೇರಿದಂತೆ ವಿವಿಧೆಡೆಯಿಂದ ರೈತಾಪಿ ವರ್ಗ ಹೆಚ್ಚಿನ ಸಂಖ್ಯೆಯಲ್ಲಿ ದನಗಳೊಂದಿಗೆ ಜಾತ್ರೆಗೆ ಆಗಮಿಸಿರುವುದು ಕಂಡುಬಂದಿತು. ಜವಾರಿ ದೊಡ್ಡ ಪಡಿ, ಮೈಸೂರು ಕಿಲಾರಿ, ಕಿಲಾರಿ ತಳಿ, ದೇವಣಿ ಹೀಗೆ ನಾನಾ ತಳಿಗಳ ಎತ್ತುಗಳು ಇಲ್ಲಿ …
Read More »ಕಲಬುರಗಿ | ಅಘೋಷಿತ ಸ್ಲಂ ನಿವಾಸಿಗಳಿಗೆ ತ್ರಿಶಂಕು ಸ್ಥಿತಿ
ಕಲಬುರಗಿ: ನಗರದಲ್ಲಿರುವ ಘೋಷಿತ ಕೊಳೆಗೇರಿಗಳಲ್ಲಿ ಕೆಲ ಪ್ರದೇಶಗಳ ಅರ್ಧದಷ್ಟು ಭಾಗ ಅಘೋಷಿತವಾಗಿ ಉಳಿದಿದ್ದು, ಜನರಿಗೆ ಹಲವು ಸಮಸ್ಯೆಗಳನ್ನು ತಂದೊಡ್ಡಿದೆ. ಸಂಜೀವನಗರ ಕೊಳೆಗೇರಿ ಪ್ರದೇಶ ಇದಕ್ಕೆ ಉತ್ತಮ ಉದಾಹರಣೆ. ಇದು ಖಾಸಗಿಯವರ ಜಾಗದಲ್ಲಿದೆ. ಕೆಲ ಭಾಗವನ್ನು ಕೊಳೆಗೇರಿ ಎಂದು ಘೋಷಿಸಲಾಗಿದೆ. 80 ಮನೆಗಳಿರುವ ಪ್ರದೇಶ ಅಘೋಷಿತವಾಗಿ ಉಳಿದಿದೆ. ಇಲ್ಲಿಯ ಜನರಿಗೆ ಹಕ್ಕುಪತ್ರಗಳಿಲ್ಲದ ಕಾರಣ ಸರ್ಕಾರದ ಸೌಲಭ್ಯಗಳೂ ದಕ್ಕುತ್ತಿಲ್ಲ. ಕೊಳೆಗೇರಿ ಅಭಿವೃದ್ಧಿ ಮಂಡಳಿಯೂ ಅಭಿವೃದ್ಧಿಗೆ ಮುಂದಾಗುತ್ತಿಲ್ಲ. ಇಲ್ಲಿನ ಜನಕ್ಕೆ ಸಮಸ್ಯೆಯ ಸರಪಳಿಯಿಂದ ಕಳಚಿಕೊಂಡು …
Read More »
Laxmi News 24×7