Breaking News

ರಾಷ್ಟ್ರೀಯ

51 ಕೋಟಿ ರೂ. ತೆರಿಗೆ ಬಾಕಿ: ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್​ಗೆ ಮತ್ತೆ ಬೀಗ

ಬೆಂಗಳೂರು: ಬಾಕಿ ಉಳಿದಿರುವ ತೆರಿಗೆ ಬಾಕಿಯನ್ನು ಪಾವತಿಸದ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಂತ್ರಿ ಸ್ಕ್ವೇರ್ ಮಾಲ್ಗೆ ಮತ್ತೊಮ್ಮೆ ಬೀಗ ಜಡಿದಿದೆ. ಮಲ್ಲೇಶ್ವರಂನಲ್ಲಿರುವ ಮಾಲ್ನ ತೆರಿಗೆ ಬಾಕಿಯನ್ನು ಪಾವತಿಸುವಂತೆ ಬಿಬಿಎಂಪಿ ಆಡಳಿತ ಮಂಡಳಿಗೆ ಸೂಚಿಸಿತ್ತು. ಆಡಳಿತ ಮಂಡಳಿಯಿಂದ ಬಾಕಿ ಪಾವತಿಯಾಗದ ಕಾರಣ ಬಿಬಿಎಂಪಿ ಕಂದಾಯ ವಿಭಾಗದ ಸಿಬ್ಬಂದಿ ಬುಧವಾರ ಸ್ಥಳಕ್ಕೆ ಮಾಲ್ಗೆ ಬೀಗ ಜಡಿದಿದ್ದಾರೆ. ಒಟ್ಟಾರೆಯಾಗಿ, ಮಂತ್ರಿ ಸ್ಕ್ವೇರ್ ಬಿಬಿಎಂಪಿಗೆ 51 ಕೋಟಿ ತೆರಿಗೆ ಬಾಕಿ ಪಾವತಿಸಬೇಕಿದೆ. …

Read More »

4 ಸಾವಿರ ಕೋಟಿ ಹಗರಣ ಎಂದು ಕೊಂಡಿದ್ದೆವು: ಯತ್ನಾಳ್ ಮಾಹಿತಿಯಿಂದ ನೆರವಾಗಿದೆ; ಜಿ. ಪರಮೇಶ್ವರ

ಕಲಬುರಗಿ: ಕೋವಿಡ್ ಸಂದರ್ಭದಲ್ಲಿ 4 ಸಾವಿರ ಕೋಟಿ ರೂ.ಗಳ ಹಗರಣವಾಗಿರಬಹುದು ಎಂದು ನಾವು ಭಾವಿಸಿದ್ದೆವು. ಈಗ ನಮ್ಮ ಮಾಹಿತಿ ತಪ್ಪು ಎಂದು ಸ್ಪಷ್ಟವಾಗಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು 4 ಸಾವಿರ ಕೋಟಿ ಅಲ್ಲ, 40 ಸಾವಿರ ಕೋಟಿ ಎಂದು ಹೇಳುವ ಮೂಲಕ ತನಿಖೆಗೆ ನೆರವಾಗಿದ್ದಾರೆ ಎಂದು ಗೃಹ ಪರಮೇಶ್ವರ್ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್ ನಿವೃತ್ತ ನ್ಯಾಯಾಧೀಶರು ಹಗರಣದ ತನಿಖೆ ನಡೆಸಲಿದ್ದಾರೆ. ಇದು 4,000 …

Read More »

ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಂಚರಿಸುತ್ತಿದ್ದ ಕಾರು ಅಪಘಾತ

ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. (Education minister Madhu Bangarappa) ತುಮಕೂರಿನ ನಂದಿಹಳ್ಳಿಯ ಹೆದ್ದಾರಿಯಲ್ಲಿ ನಿನ್ನೆ ಬುಧವಾರ ಮಧ್ಯರಾತ್ರಿ ಸುಮಾರಿಗೆ ಅಪಘಾತವಾಗಿದೆ. ಚಲಿಸುತ್ತಿದ್ದ ಲಾರಿಗೆ ಕಾರು ಹಿಂಭಾಗದಿಂದ ಗುದ್ದಿದ್ದು, ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿ ಸಚಿವರು ಸೇರಿ ಮೂವರು ಪ್ರಯಾಣಿಸುತ್ತಿದ್ದು, ಎಲ್ಲರೂ ಬಚಾವ್ ಆಗಿದ್ದಾರೆ. ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ಮಾರ್ಗ ಮಧ್ಯೆ ಈ ದುರಂತ …

Read More »

ಯತ್ನಾಳ್ ಗೆ ಬಿಜೆಪಿ ಖಡಕ್ ವಾರ್ನಿಂಗ್

ಇತ್ತೀಚಿನ ಕೆಲವು ಬೆಳವಣಿಗೆಗಳನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ ಮತ್ತು ಪಕ್ಷದ ಘನತೆಗೆ ಧಕ್ಕೆ ತರುವ ಯಾವುದೇ ಚಟುವಟಿಕೆಗಳನ್ನು ಸಹಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್ ಬುಧವಾರ ಪರೋಕ್ಷವಾಗಿ… ಬೆಂಗಳೂರು: ಇತ್ತೀಚಿನ ಕೆಲವು ಬೆಳವಣಿಗೆಗಳನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ ಮತ್ತು ಪಕ್ಷದ ಘನತೆಗೆ ಧಕ್ಕೆ ತರುವ ಯಾವುದೇ ಚಟುವಟಿಕೆಗಳನ್ನು ಸಹಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್ ಬುಧವಾರ ಪರೋಕ್ಷವಾಗಿ ಶಾಸಕ ಬಸನಗೌಡ ಪಾಟೀಲ್ …

Read More »

ಪ್ರತಾಪ್ ಸಿಂಹಗೆ ಮತ್ತೆ ಸಂಕಷ್ಟ

ಬೆಂಗಳೂರು, ಡಿಸೆಂಬರ್ 28: ಲೋಕಸಭೆ ಭದ್ರತಾ ಲೋಪ ಪ್ರಕರಣದ ಬಳಿಕ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ (Pratap Simha) ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರವಾಗಿ ಎಫ್‌ಐಆರ್ ಸೇರಿದಂತೆ ಹಲವು ಸಮಸ್ಯೆಗಳನ್ನು ಅವರು ಎದುರಿಸುತ್ತಿದ್ದಾರೆ. ಈ ಮಧ್ಯೆ ಇದೀಗ ಅವರು ಪ್ರತಿನಿಧಿಸುವ ಮೈಸೂರು ಲೋಕಸಭಾ ಕ್ಷೇತ್ರವನ್ನು (Mysuru Lok Sabha Constituency) ಜೆಡಿಎಸ್ ಸೆಳೆಯುವ ಅಪಾಯ ಎದುರಾಗಿದೆ. ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಜೆಡಿಎಸ್ ಸೀಟು ಹಂಚಿಕೆ ಒಪ್ಪಂದದ ಮಾತುಕತೆ ಪ್ರಕ್ರಿಯೆ …

Read More »

PSI ನೇಮಕಾತಿಯಲ್ಲಿ ಅಕ್ರಮ: ಹೆಚ್​ಡಿಕೆ, ಯತ್ನಾಳ್ ಸೇರಿದಂತೆ ಹಲವರಿಗೆ ವೀರಪ್ಪ ಆಯೋಗದಿಂದ‌ ಸಮನ್ಸ್

ಬೆಂಗಳೂರು, (ಡಿಸೆಂಬರ್ 26): 545 ಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ(PSI Scam Case) ಸತ್ಯಾಂಶ ತಿಳಿಯಲು ರಾಜ್ಯ ಸರ್ಕಾರ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ವಿಚಾರಣಾ ಆಯೋಗ ರಚನೆ ಮಾಡಿದ್ದು, ಇದೀಗ ವೀರಪ್ಪ ನೇತೃತ್ವದ ಆಯೋಗ ಪ್ರಕರಣದ ತನಿಖೆ ಚುರುಕುಗೊಳಿಸಿದೆ. ಈ ಸಂಬಂಧ ಹೆಚ್‌.ಡಿ.ಕುಮಾರಸ್ವಾಮಿ, ಬಸನಗೌಡ ಪಾಟೀಲ‌್ ಯತ್ನಾಳ್, ಧಡೇಸಗೂರು ಬಸವರಾಜ್, ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣಗೆ ಸಮನ್ಸ್ ಜಾರಿ ಮಾಡಲಾಗಿದ್ದು, ಪ್ರಕರಣ ಸಂಬಂಧ ಸಾಕ್ಷ್ಯಗಳಿದ್ದರೆ ಹಾಜರುಪಡಿಸುವಂತೆ ತಿಳಿಸಲಾಗಿದೆ. ಹೆಚ್‌.ಡಿ.ಕುಮಾರಸ್ವಾಮಿ, ಬಸನಗೌಡ …

Read More »

ಜಾತಿಗಣತಿ ವರದಿ ಜಾರಿಗೆ ಒತ್ತಾಯಿಸಿ ಶೋಷಿತ ಸಮುದಾಯಗಳ ಸಮಾವೇಶಕ್ಕೆ ಮುಹೂರ್ತ ಫಿಕ್ಸ್, ಸಿಎಂಗೆ ಆಹ್ವಾನ

ಬೆಂಗಳೂರು, (ಡಿಸೆಂಬರ್ 27): ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಕಾಂತರಾಜು ಅವರು ಜಾತಿ ಗಣತಿ ವರದಿ (caste census report) ಜಾರಿಗೆ ಸಂಬಂಧ ಪರ-ವಿರೋಧ ಚರ್ಚೆಗಳು ನಡೆದಿವೆ. ಶೋಷಿತ ಸಮುದಾಯದ ನಾಯಕರುಗಳು ಜಾತಿ ಗಣತಿ ವರದಿ ಜಾರಿ ಮಾಡಲೇಬೇಕೆಂದು ಒತ್ತಾಯಿಸಿದರೆ, ಮತ್ತೊಂದೆಡೆ ಮೇಲ್ವರ್ಗ ಸಮುದಾಯಗಳು ಇದಕ್ಕೆ ವಿರೋಧ ವ್ಯಕ್ತಪಪಡಿಸುತ್ತಿವೆ. ಈ ಪರ-ವಿರೋಧದ ಆರ್ಭಟದ ಮಧ್ಯೆ ಕಾಂತರಾಜು ವರದಿ ಜಾರಿಗೆ ಒತ್ತಾಯಿಸಿ ಶೋಷಿತ ಸಮುದಾಯಗಳ ಒಕ್ಕೂಟ ಬೃಹತ್ ಸಮಾವೇಶ ಮಾಡಲು ತೀರ್ಮಾನಿಸಿದ್ದು, ಇದೀಗ …

Read More »

ಹಿರಿಯ ಪತ್ರಕರ್ತ ಅಶೋಕ ಜೋಶಿ ನಿಧನ

ಬೆಳಗಾವಿ ; ಬೆಳಗಾವಿ ಜಿಲ್ಲೆಯ ಹಿರಿಯ ಪತ್ರಕರ್ತರಾದ ಶ್ರೀ ಅಶೋಕ ಜೋಶಿ ( ವ.72) ಇವರು ಇಂದು ಬುಧವಾರ ಬೆಳಿಗ್ಗೆ ಅನಾರೋಗ್ಯ ಕಾರಣ ನಿಧನರಾದರು. ಶ್ರೀ ಅಶೋಕ ಜೋಶಿ ಅವರು ಸಂಯುಕ್ತ ಕರ್ನಾಟಕ, ಹಸಿರು ಕ್ರಾಂತಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿ ಇತ್ತೀಚಿಗೆ ನಿವೃತ್ತಿ ಹೊಂದಿದ್ದರು. ಕಳೆದ ಒಂದು ವಾರದಿಂದ ವಿವಿಧ ಅಂಗಾಂಗಗಳ ವೈಫಲ ಕಾರಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬುಧವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದ ಕಾರಣ ಅವರು …

Read More »

ಕರವೇ ರ‍್ಯಾಲಿ: ಏರ್​ಪೋರ್ಟ್​ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ?

ಬೆಂಗಳೂರು, (ಡಿಸೆಂಬರ್ 27): ಅಂಗಡಿ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ (Kannada) ಬಳಸುವಂತೆ ನಾರಾಯಣಗೌಡ ಬಣದ ಕರ್ನಾಟಕ ರಕ್ಷಣಾ ವೇದಿಕೆ( karnataka rakshana- Vedike) ಬೆಂಗಳೂರಿಲ್ಲಿಂದು ಬೃಹತ್ ರ‍್ಯಾಲಿ ಹಮ್ಮಿಕೊಂಡಿದೆ. ಬೆಂಗಳೂರು (Bengaluru) ವಿಮಾನ ನಿಲ್ದಾಣದ ಸಾದಹಳ್ಳಿ ಗೇಟ್​​ ಬಳಿಯ ಟೋಲ್​ ಪ್ಲಾಜಾದಿಂದ ಆರಂಭವಾಗುವ ರ‍್ಯಾಲಿ ಕಬ್ಬನ್ ಪಾರ್ಕ್ ವರೆಗೆ ಸಾಗಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್​ ಕೈಗೊಂಡಿದ್ದಾರೆ. ಅಲ್ಲದೇ ಟ್ರಾಫಿಕ್​ ಜಾಮ್ ಆಗದಂತೆ ಪೊಲೀಸರು ಏರ್​ಪೋರ್ಟ್​ ರಸ್ತೆಯ …

Read More »

ಗೃಹಲಕ್ಷ್ಮಿ ಯೋಜನೆ ಸಮಸ್ಯೆ ಪರಿಹಾರಕ್ಕೆ ಡಿ.27ರಿಂದ ಗ್ರಾಪಂಗಳಲ್ಲಿ ವಿಶೇಷ ಶಿಬಿರ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಸೌಲಭ್ಯ ಪಡೆಯಲು ಅರ್ಹತೆ ಹೊಂದಿದ್ದರೂ ಇನ್ನೂ ಲಕ್ಷಾಂತರ ಮಹಿಳೆಯರು ಯೋಜನೆಯ ಅನುಕೂಲ ಪಡೆಯಲು ಸಾಧ್ಯವಾಗಿಲ್ಲ. ಹಾಗೆಯೇ ಯೋಜನೆಗೆ ಅರ್ಜಿ ಸಲ್ಲಿಸಿದ್ದರೂ ಕೂಡ ಕೆಲ ತಾಂತ್ರಿಕ ಕಾರಣಗಳಿಂದ ಹಲವರ ಖಾತೆಗೆ ಮಾಸಿಕ 2000 ರೂ. ಸಹಾಯಧನ ತಲುಪಿಲ್ಲ. ಹೀಗಾಗಿ ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಲು ರಾಜ್ಯ ಸರ್ಕಾರದಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಡಿ.27 ರಿಂದ 29 ರವರೆಗೆ ಮೂರು ದಿನಗಳ …

Read More »