Breaking News

ರಾಷ್ಟ್ರೀಯ

“ಒಂದು ಊರು ಒಂದೇ ಗಣಪ” ಗಣೇಶ ಚತುರ್ಥಿಯ ಇತಿಹಾಸವೇ ವಿಭಿನ್ನ

ಬೆಳಗಾವಿ: ಮಹಾರಾಷ್ಟ್ರ ಬಿಟ್ಟರೆ ಗಣೇಶ ಚತುರ್ಥಿ ಅದ್ಧೂರಿ ಆಚರಣೆಗೆ ಬೆಳಗಾವಿ ಪ್ರಸಿದ್ಧಿ. ಹಾಗಾಗಿ, ನಗರ ಸೇರಿದಂತೆ ಪ್ರತಿಯೊಂದು ಹಳ್ಳಿಗಳ ಓಣಿ ಓಣಿಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಭರದ ಸಿದ್ಧತೆ ನಡೆದಿದೆ. ಆದರೆ, ಜಿಲ್ಲೆಯ ಈ ಗ್ರಾಮದಲ್ಲಿ ಕಳೆದ 80 ವರ್ಷಗಳಿಂದ ಊರಿಗೆ ಒಂದೇ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಶ್ರದ್ಧಾ, ಭಕ್ತಿಯಿಂದ ಪೂಜಿಸಿಕೊಂಡು ಬರುತ್ತಿರುವುದು ಗಮನಾರ್ಹ. ಗಣೇಶ ಹಬ್ಬ ಬಂತು ಎಂದರೆ ಸಾಕು ಸಾರ್ವಜನಿಕ ಗಣೇಶ ಮಂಡಳಿಗಳು ಫುಲ್ ಆಕ್ಟಿವ್ ಆಗುತ್ತವೆ. ಗಲ್ಲಿ …

Read More »

ಧರ್ಮಸ್ಥಳ ಕೇಸ್​: ಬಂಧಿತ ಮಾಸ್ಕ್​​ಮ್ಯಾನ್ ಸಿಎನ್​ ಚಿನ್ನಯ್ಯ​ ಯಾರು?

ಮಂಗಳೂರು, ಆಗಸ್ಟ್​ 23: ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಆರೋಪ ರಾಜಕೀಯ ತಿರುವು ಪಡೆದುಕೊಂಡಿದೆ. ಇತ್ತ ಬಿಜೆಪಿ ಧರ್ಮದ ಉಳಿವಿಗಾಗಿ ಧರ್ಮಯುದ್ಧ ಎಂಬ ಚಳವಳಿ ಶುರುಮಾಡಿದೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವ ಬೆಳವಣಿಗೆಯೊಂದು ನಡೆದಿದೆ. ಸಾಕ್ಷಿದಾರನಾಗಿ ಬಂದಿದ್ದ ಅನಾಮಿಕ ಮಾಸ್ಕ್​ಮ್ಯಾನ್ (Masked man) ​​ನನ್ನು ಇದೀಗ ಎಸ್​​ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಸಿಎನ್​ ಚಿನ್ನಯ್ಯ ಅಲಿಯಾಸ್ ಚೆನ್ನ ಬಂಧಿತ ಆರೋಪಿ. ಈ ಮಾಸ್ಕ್​ಮ್ಯಾನ್​ ಯಾರು, ಎಲ್ಲಿಯವನು ಎಂದು ಸಾಕಷ್ಟು ಚರ್ಚೆಗಳು ನಡೆದಿದ್ದವು. ಸ್ವತಃ ಎಸ್ಐಟಿ ಅಧಿಕಾರಿಗಳು …

Read More »

ಜಾತಿ ನಿಂದನೆ ಆರೋಪದಡಿ ವಕೀಲ ಕೆ.ಎನ್​​​. ಜಗದೀಶ್​​​​ ಬಂಧನ

ಬೆಂಗಳೂರು: ಜಾತಿ ನಿಂದನೆ ಆರೋಪದಡಿ ಬಿಗ್​ಬಾಸ್​​​ ಮಾಜಿ ಸ್ಪರ್ಧಿ, ವಕೀಲ ಕೆ.ಎನ್​. ಜಗದೀಶ್​​ ಅವರನ್ನು ಕೊಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್​​ ಎಂಬುವವರು ನೀಡಿದ ದೂರಿನನ್ವಯ ಎಫ್​ಐಆರ್​​ ದಾಖಲಿಸಿಕೊಳ್ಳಲಾಗಿದ್ದು, ಜಗದೀಶ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಮಾಜಿಕ‌ ಜಾಲತಾಣದ ಮೂಲಕ ಜಾತಿ ನಿಂದನೆ ಮಾಡಿರುವ ಆರೋಪ ಜಗದೀಶ್ ಅವರ ವಿರುದ್ಧ ಕೇಳಿ ಬಂದಿತ್ತು. ಅದರನ್ವಯ ಜಗದೀಶ್ ಅವರಿಗೆ ಗುರುವಾರ ನೋಟಿಸ್ ನೀಡಲು ಪೊಲೀಸರು ತೆರಳಿದ್ದಾಗ ಮನೆಯ ಬಾಗಿಲು ತೆರೆಯದೇ ಹೈಡ್ರಾಮಾ …

Read More »

ನಾನು ಹುಟ್ಟು ಕಾಂಗ್ರೆಸಿಗ, ಬಿಜೆಪಿ – ಆರ್​​ಎಸ್​​ಎಸ್ ಜೊತೆ ಕೈ ಜೋಡಿಸುವ ಪ್ರಮೇಯವೇ ಇಲ್ಲ: ಡಿಸಿಎಂ

ಬೆಂಗಳೂರು : ನಾನು ಅಪ್ಪಟ ಕಾಂಗ್ರೆಸಿಗ. ಹುಟ್ಟಿನಿಂದ ಕಾಂಗ್ರೆಸ್​ ಪಕ್ಷದಲ್ಲಿದ್ದೇನೆ. ಜೀವ ಇರುವ ತನಕವೂ ಕಾಂಗ್ರೆಸಿಗನಾಗಿಯೇ ಇರುತ್ತೇನೆ. ನನ್ನ ಜೀವ, ನನ್ನ ರಕ್ತ ಎಲ್ಲವೂ ಕಾಂಗ್ರೆಸ್. ನಾನೀಗ ಪಕ್ಷವನ್ನು ಮುನ್ನಡೆಸುತ್ತಿದ್ದೇನೆ. ಅದಕ್ಕೆ ಆಧಾರಸ್ತಂಭವಾಗಿ ನಿಲ್ಲುತ್ತೇನೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ವಿಧಾ‌ನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯಲ್ಲಿ ಆರ್​​ಎಸ್​​ಎಸ್ ಗೀತೆ ಹಾಡಿದ್ದರ ಪರಿಣಾಮ ನೀವು ಬಿಜೆಪಿ ಹಾಗೂ ಆರ್​​ಎಸ್​​ಎಸ್ ಜೊತೆ ಕೈ ಜೋಡಿಸುವ ಬಗ್ಗೆ ಚರ್ಚೆಯಾಗುತ್ತಿದೆ …

Read More »

ಮಹೇಶ್ ಶೆಟ್ಟಿ ತಿಮರೋಡಿ ಕರೆತರುವಾಗ ಪೊಲೀಸ್​ ಕರ್ತವ್ಯಕ್ಕೆ ಅಡ್ಡಿ; ಮೂವರು ಬೆಂಗಲಿಗರ ಬಂಧನ

ಉಡುಪಿ: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಬ್ರಹ್ಮಾವರ ಠಾಣೆಗೆ ಕರೆತರುತ್ತಿರುವಾಗ ವಾಹನಗಳನ್ನು ಹಿಂಬಾಲಿಸಿಕೊಂಡು ಬಂದು, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಅವರ ಮೂವರು ಬೆಂಬಲಿಗರನ್ನು ಪೊಲೀಸರು ಬಂಧಿಸಿದ್ದಾರೆ. ಉಜಿರೆ ನಿವಾಸಿಗಳಾದ ಸೃಜನ್ ಎಲ್., ಹಿತೇಶ್ ಶೆಟ್ಟಿ ಹಾಗೂ ಸಹನ್ ಎಂಬವರನ್ನು ಬಂಧಿಸಲಾಗಿದೆ. ಆರೋಪಿಗಳು ತಿಮರೋಡಿಯನ್ನು ಹಿಂಬಾಲಿಸಿ, ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬಂದಿದ್ದು, ಕರ್ತವ್ಯಕ್ಕೆ ಅಡ್ಡಿಪಡಿಸಬೇಡಿ ಎಂದು ಪೊಲೀಸರು ಸೂಚನೆ ನೀಡಿದರೂ ಕೇಳಿರಲಿಲ್ಲ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ …

Read More »

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

ದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ ಕಸರತ್ತು ನಡೆಯುತ್ತಿದೆ. ಐಟಿ ಹಬ್ ಆಗಿ ಹೊರಹೊಮ್ಮವ ಎಲ್ಲ ರೀತಿಯ ಸಾಮರ್ಥ್ಯ ದಾವಣಗೆರೆಗಿದೆ.‌ ಈಗಾಗಲೇ ಎಸ್​ಟಿಪಿಐ ಉಪ ಕೇಂದ್ರ ಈ ಜಿಲ್ಲೆಯಲ್ಲಿದೆ. ಇಲ್ಲಿ ಐಟಿ ಪಾರ್ಕ್ ಆರಂಭಕ್ಕೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು, ನಾಲ್ಕೈದು ಕಡೆ ಸ್ಥಳವನ್ನು ಗುರುತಿಸಿದ್ದಾರೆ. ಎರಡು ಎಕರೆ ಜಮೀನು, ವಿಶಾಲವಾದ ಕಟ್ಟಡದ ಬೇಡಿಕೆ: ದಾವಣಗೆರೆಯಲ್ಲಿ ಐಟಿ ಪಾರ್ಕ್​ ಆರಂಭಿಸಲು …

Read More »

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

ಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ ಮಾಸ್ಕ್​ ಮ್ಯಾನ್ (Mask Man) (ಭೀಮ) ಯಾರು ಏನು ಎನ್ನುವುದೇ ಗೊತ್ತಿಲ್ಲ. ಫುಲ್ ದೇಹ ಕವರ್ ಮಾಡಿಕೊಂಡು ಮುಖಕ್ಕೆ ಮಾಸ್ಕ್​ ಹಾಕಿಕೊಂಡು ಕಾಣಿಸಿಕೊಂಡಿದ್ದಾನೆ. ಹೀಗಾಗಿ ಮಾಸ್ಕ್​ ಮ್ಯಾನ್ ಯಾರು ಎನ್ನುವುದೇ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಆದ್ರೆ, ಇದೀಗ ಆ ಮಾಸ್ಕ್​ ಮ್ಯಾನ್ ಯಾರು ಏನು? ಎಲ್ಲಿಯವನು ಎನ್ನುವ ಒಂದೊಂದೇ ಅಂಶಗಳು ಆಚೆ ಬರುತ್ತಿವೆ. ನಿನ್ನೆ …

Read More »

ಪಾಂಗುಳ ಗಲ್ಲಿಯ ರಸ್ತೆಯಲ್ಲಿ ಸ್ಟಾಲ್ ವಾಹನಗಳ ದ್ವಿಮುಖ ಪಾರ್ಕಿಂಗ್‌ನಿಂದಾಗಿ ಸಂಚಾರ ಸಮಸ್ಯೆ!!

ಪಾಂಗುಳ ಗಲ್ಲಿಯ ರಸ್ತೆಯಲ್ಲಿ ಸ್ಟಾಲ್ ವಾಹನಗಳ ದ್ವಿಮುಖ ಪಾರ್ಕಿಂಗ್‌ನಿಂದಾಗಿ ಸಂಚಾರ ಸಮಸ್ಯೆ!! ಗಣೇಶೋತ್ಸವ ಕೇವಲ ಎಂಟು ದಿನಗಳಲ್ಲಿ ಬರಲಿದ್ದು, ಬೆಳಗಾವಿ ನಗರದ ಪಂಗುಲ್ ಗಲ್ಲಿ ಪ್ರದೇಶದಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ವ್ಯಾಪಾರಿಗಳು ಇಲ್ಲಿ ರಸ್ತೆಯಲ್ಲಿ ಅಂಗಡಿಗಳನ್ನು ಇಟ್ಟಿದರಿಂದ್ದ, ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸಲು ಹರ ಸಾಹಸ ಪಡುತ್ತಿದ್ದಾರೆ. ನಾಲ್ಕು ದಿನಗಳ ಮಳೆಯ ನಂತರ ಇಂದು, ಸಾರ್ವಜನಿಕರು ಖರೀದಿ ಮಾಡಲು ಮಾರುಕಟ್ಟೆಗಳತ್ತ ಮುಖ ಮಾಡಿದ್ದಾರೆ. ಬೆಳಗಾವಿ ಮಹಾನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಒಂದಾದ …

Read More »

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

ಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯ ಪ್ರವಾಸಿ ಮಂದಿರದ ವೃತ್ತದ ಬಳಿ ಬುಧವಾರ (ಇಂದು) ಬೆಳಗಿನ ಜಾವ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್) ವಿದ್ಯಾರ್ಥಿಗಳಾದ ಆದಿತ್ಯ (21) ಮತ್ತು ಸಂದೀಪ್‌ (21) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತರು ದಾವಣಗೆರೆ ಜಿಲ್ಲೆ ಸುರಹೊನ್ನೆ ಹಾಗೂ ಉಡುಪಿ ಜಿಲ್ಲೆಯ ಮೂಲದವರಾಗಿದ್ದರು. ಸಿಮ್ಸ್ ಮೆಡಿಕಲ್ …

Read More »

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ ಪಟ್ಟಣದಲ್ಲಿ ಪ್ರವಾಹ ಪರಿಸ್ಥಿತಿ ಉದ್ಭವಿಸಿದ್ದು, 200 ಕುಟುಂಬಗಳು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿವೆ. ಈ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕಾಲಿಗೆ ಬಿದ್ದು ಓರ್ವ ಮಹಿಳೆ ಅಳಲು ತೋಡಿಕೊಂಡರು. ಉಕ್ಕಿ ಹರಿಯುತ್ತಿರುವ ನದಿಗಳು: ಸತತ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಸಪ್ತನದಿಗಳು ತುಂಬಿ ಹರಿಯುತ್ತಿವೆ. ಆ ಕಡೆ ಕೃಷ್ಣೆ ಆರ್ಭಟಿಸುತ್ತಿದ್ದರೆ, ಇತ್ತ ಘಟಪ್ರಭೆ …

Read More »