ಗದಗ: ಕಾಂಕ್ರಿಟ್ ಮಿಕ್ಸಿಂಗ್ ವಾಹನ ಹರಿದು ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ಗದಗ ನಗರದ ಭೂಮರೆಡ್ಡಿ ಸರ್ಕಲ್ ನಲ್ಲಿ ನಡೆದಿದೆ. ರಮೇಶ್ ಡಂಬಳ (42) ಮೃತ ಹೆಡ್ ಕಾನ್ಸ್ ಟೇಬಲ್. ಗಜೇಂದ್ರಗಢ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಮೇಶ್ ಅವರ ಮನೆಯಲ್ಲಿ ನಾಳೆ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಹೂವು-ಹಣ್ಣು, ಪೂಜೆ ಸಾಮಗ್ರಿಗಳೊಂದಿಗೆ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಕಾಂಕ್ರಿಟ್ …
Read More »ಯಾವುದೇ ಸಮಯದಲ್ಲೂ ಚುನಾವಣೆ ಬರಬಹುದು ಸಿದ್ಧರಾಗಿ : HD ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ!
ಶಿವಮೊಗ್ಗ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರಿಗೆ ತೀವ್ರ ಸಂಕಷ್ಟ ಎದುರಾಗಿದ್ದು, ಕಾನೂನು ಹೋರಾಟ ನಡೆಸುತ್ತಿದ್ದಾರೆ. ಇದೀಗ ಕೇಂದ್ರ ಸಚಿವ HD ಕುಮಾರಸ್ವಾಮಿ ಹೇಳಿಕೆಯು ತೀವ್ರ ಕುತೂಹಲ ಮೂಡಿಸಿದ್ದು, ಯಾವ ಸಮಯದಲ್ಲಾದರೂ ಚುನಾವಣೆ ಬರಬಹುದು. ಎಲ್ಲದಕ್ಕೂ ಸಿದ್ಧರಾಗಿರಿ ಎಂದು ಕರೆ ನೀಡಿದ್ದಾರೆ. ಇಂದು ಶಿವಮೊಗ್ಗದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ಒಂದು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆ 2028ರಲ್ಲೇ …
Read More »ಪ್ರಧಾನಿ ಮೋದಿಗೆ ಪತ್ರ ಬರೆದ ದಿನೇಶ್ ಗುಂಡೂರಾವ್
ಬೆಂಗಳೂರು, ಸೆಪ್ಟೆಂಬರ್ 06:ಆರೋಗ್ಯ ವಿಮೆಯ ಮೇಲಿನ ಶೇ 18 ರಷ್ಟು ಜಿ.ಎಸ್.ಟಿಯನ್ನ ಮರು ಪರಿಶೀಲಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ. ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ಆರೋಗ್ಯ ಸಚಿವರು, ಸೆಪ್ಟೆಂಬರ್ 9 ರಂದು ಸಭೆ ಸೇರಲಿರುವ GST ಕೌನ್ಸಿಲ್‌ಗೆ ಮಧ್ಯಮ ಮತ್ತು ಕಡಿಮೆ ಆದಾಯದ ಪಾಲಿಸಿದಾರರಿಗೆ ಆರೋಗ್ಯ ವಿಮೆಯ ಮೇಲಿನ 18% ತೆರಿಗೆಯನ್ನು ಮರು ಪರಿಶೀಲಿಸುವಂತೆ ಶಿಫಾರಸು ಮಾಡಲು ಮನವಿ ಮಾಡಿದ್ದಾರೆ. ಆರೋಗ್ಯ ವಿಮೆ ಮೇಲೂ ಶೇ …
Read More »ರೇಣುಕಸ್ವಾಮಿ ಹತ್ಯೆ ಬಳಿಕ ಪವಿತ್ರಾ ಗೌಡ ಕರೆ ಮಾಡಿದ್ದು ಯಾರಿಗೆ, ಹೋಗಿದ್ದು ಎಲ್ಲಿಗೆ? ಚಾರ್ಜ್ಶೀಟ್ನಲ್ಲಿ ಬಯಲಾಯ್ತು ‘ಡಿ ಗ್ಯಾಂಗ್’ನ ಮತ್ತೊಂದು ಕರಾಳ ಮುಖ
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸ್ಸೇಜ್ ಮಾಡಿದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಸ್ವಾಮಿಯನ್ನು ಭೀಕರವಾಗಿ ಕೊಲೆ ಮಾಡಿ ಜೈಲು ಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್ನ ಕರಾಳ ಕೃತ್ಯಗಳು ದಿನ ಕಳೆದಂತೆ ಒಂದೊಂದೇ ಬಯಲಾಗುತ್ತಿದೆ. ನಿಜಜೀವನದಲ್ಲಿ ಮಾದರಿಯಾಗಬೇಕಿದ್ದ ಸ್ಟಾರ್ ನಟನ ಈ ಕೃತ್ಯ ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದ್ದು, ಚಾರ್ಜ್ಶೀಟ್ನಲ್ಲಿ ಪೊಲೀಸರು ಉಲ್ಲೇಖಿಸಿರುವ ಆಘಾತಕಾರಿ ಅಂಶಗಳು ಡಿ ಗ್ಯಾಂಗ್ನ ಕರಾಳ ಮುಖವನ್ನು ಹೊರಜಗತ್ತಿಗೆ ಪರಿಚಯಿಸುತ್ತಿದೆ. ಪ್ರಕರಣದ …
Read More »ಇಬ್ಬರು `IAS’, ಮೂವರು `IFS’ ಅಧಿಕಾರಿಗಳನ್ನು ವರ್ಗಾವಣೆ
ಬೆಂಗಳೂರು : ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು, ರಾಜ್ಯ ಸರ್ಕಾರ ಇಬ್ಬರು ಐಎಎಸ್, ಮೂವರು ಐಎಫ್ ಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಟಿ.ಹೆಚ್.ಎಂ.ಕುಮಾರ್ ಅವರನ್ನು ಸಹಕಾರ ಸೊಸೈಟಿ ರಿಜಿಸ್ಟ್ರಾರ್ ಆಗಿ ಹಾಗೂ ಡಾ.ರಾಜೇಂದ್ರ ಅವರನ್ನು ಸಣ್ಣ ಕೈಗಾರಿಕಾ ನಿಗಮ ಎಂಡಿಯನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇನ್ನು ಐಎಫ್ ಎಸ್ ಅಧಿಕಾರಿ ಬಿ.ಪಿ. ರವಿ, ರುಥ್ರೆನ್ ಪಿ ಹಾಗೂ ಐಎಸ್ …
Read More »ಲಕ್ಷ್ಮೇಶ್ವರ: ರೈತನ ಕೈ ಹಿಡಿದ ತರಕಾರಿ ಕೃಷಿ
ಲಕ್ಷ್ಮೇಶ್ವರ: ಅಲ್ಪಸ್ವಲ್ಪ ಭೂಮಿಯಲ್ಲೇ ಕಷ್ಪಪಟ್ಟು, ವಿವಿಧ ತರಕಾರಿಗಳನ್ನು ಬೆಳೆದು ಸೈ ಎನಿಸಿಕೊಂಡವರು ತಾಲ್ಲೂಕಿನ ಗುಲಗಂಜಿಕೊಪ್ಪ ಗ್ರಾಮದ ರಾಮನಗೌಡ ಶಂಕರಗೌಡ ದುರುಗನಗೌಡ್ರ. ಮೂಲತಃ ಲಕ್ಷ್ಮೇಶ್ವರ ತಾಲ್ಲೂಕು ಗುಲಗಂಜಿಕೊಪ್ಪದ ನಿವಾಸಿಯಾದ ರಾಮನಗೌಡ್ರ ಈಗ ಲಕ್ಷ್ಮೇಶ್ವರದ ರಂಭಾಪುರಿ ನಗರದ ಆಶ್ರಯ ಕಾಲೊನಿಯಲ್ಲಿ ವಾಸವಾಗಿದ್ದಾರೆ. ಲಕ್ಷ್ಮೇಶ್ವರದ ಮಾನ್ವಿ ಎಂಬುವವರಿಗೆ ಸೇರಿದ ಆರು ಎಕರೆ ತೋಟವನ್ನು ವರ್ಷಕ್ಕೆ ₹50 ಸಾವಿರದಂತೆ ಇವರು ಲಾವಣಿ ಆಧಾರದ ಮೇಲೆ ಪಡೆದುಕೊಂಡು ವಿವಿಧ ತರಕಾರಿ, ಗಲಾಟೆ ಹೂವು ಬೆಳೆಯುತ್ತಿದ್ದಾರೆ. ಹದಿನೈದು ಗುಂಟೆಯಲ್ಲಿ …
Read More »ಶಿವಾಪುರ ಅಡವಿಸಿದ್ದೇಶ್ವರ ಜಾತ್ರೆ ಇಂದಿನಿಂದ
ಮೂಡಲಗಿ: ತಾಲ್ಲೂಕಿನ ಶಿವಾಪುರ (ಹ) ಗ್ರಾಮದ ಅಂಬಲಿ ಒಡೆಯ ಅಡವಿಸಿದ್ಧೇಶ್ವರ ಜಾತ್ರೆ ಸೆ. 6ರಿಂದ 9ರವರೆಗೆ ಪೀಠಾಧಿಪತಿ ಅಡವಿಸಿದ್ಧರಾಮ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿದೆ. ಸೆ.6ರಂದು ಬೆಳಿಗ್ಗೆ ಜಾತ್ರೆಯು ಷಟಸ್ಥಲ್ ಧ್ವಜಾರೋಹಣದೊಂದಿಗೆ ಆರಂಭವಾಗುವುದು. ನಿಡಗುಂದಿಕೊಪ್ಪದ ಅಭಿನವ ಚನ್ನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಗೋಕಾಕದ ಅಶೋಕ ಪೂಜೇರಿ, ಭೀಮಪ್ಪ ಗಡಾದ, ಸರ್ವೋತ್ತಮ ಜಾರಕಿಹೊಳಿ ಭಾಗವಹಿಸುವರು. ಬೆಳಿಗ್ಗೆ 10ಕ್ಕೆ ಆರೋಗ್ಯ ಉಚಿತ ತಪಾಸಣೆ ಇರುವುದು. ಸಂಜೆ 4ಕ್ಕೆ ತಾಯಂದಿರಿಂದ ಬಸವ …
Read More »ಜಿ.ಪಂ., ತಾ.ಪಂ. ಮೀಸಲು: ಸಮಯ ಕೇಳಿದ ರಾಜ್ಯ ಸರಕಾರ
ಬೆಂಗಳೂರು: ರಾಜ್ಯದ ತಾ.ಪಂ. ಹಾಗೂ ಜಿ.ಪಂ. ಕ್ಷೇತ್ರಗಳಿಗೆ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರ ಮತ್ತೆ 3 ವಾರ ಕಾಲಾವಕಾಶ ಕೇಳಿದೆ. ನ್ಯಾಯಾಲಯಕ್ಕೆ ನೀಡಿದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿ.ಪಂ., ತಾ.ಪಂ. ಕ್ಷೇತ್ರ ಪುನರ್‌ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಜತೆಗೆ, ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟಿಸಲು ಏಕಸದಸ್ಯ ನ್ಯಾಯಪೀಠ ಆದೇಶ ಪಾಲಿಸುವಲ್ಲಿ ಸರ್ಕಾರ …
Read More »ಜನನಿಬಿಡ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಪಟಾಕಿ ಜಪ್ತಿ
ಗದಗ: ಜನನಿಬಿಡ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿ ಜಪ್ತಿ ಮಾಡಲಾಗಿದೆ. ಗದಗ ನಗರದ ದಾಸರ ಓಣಿಯ ಜನನಿಬಿಡ ಪ್ರದೇಶದಲ್ಲಿ ಪಟಾಕಿ ಜಪ್ತಿ ಮಾಡಲಾಗಿದೆ. ರಾಮಚಂದ್ರ ಸಿದ್ದಲಿಂಗ ಎಂಬುವರ ಮನೆಯಲ್ಲಿ ಪಟಾಕಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗಿತ್ತು. ಗದಗ ಶಹರ ಠಾಣೆ ಸಿಪಿಐ ಡಿ.ಬಿ. ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿ ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ. ಗದಗ ಶಹರ ಪೊಲೀಸ್ …
Read More »ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ SDPI ಖ್ಯಾತೆ
ಹುಬ್ಬಳ್ಳಿ, ಸೆಪ್ಟಂಬರ್ 06: ಇಲ್ಲಿನ ಚೆನ್ನಮ್ಮ ವೃತ್ತದ ಬಳಿ ಇರುವ ವಿವಾದಿತ ಈದ್ಗಾ ಮೈದಾನದಲ್ಲಿ ನಿರಂತರ ಪ್ರಯತ್ನ, ಹೋರಾಟಗಳ ಫಲವಾಗಿ ಗಣೇಶ ಕೂರಿಸಲು, ಆಗಸ್ಟ್ 15ರಂದು ಧ್ವಜಾರೋಹಣ ಮಾಡಲು ಅವಕಾಶ ಸಿಕ್ಕಿದೆ. ಮೊನ್ನೆಯಷ್ಟೆ ಸರ್ಕಾರವೇ ಇಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡಿದರೂ ಸಹಿತ ಇಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್‌ಡಿಪಿಐ) ವಿರೋಧ ವ್ಯಕ್ತಪಡಿಸಿದೆ. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮೂರು ದಿನಗಳ ಅವಕಾಶ ಸಿಕ್ಕಿದೆ. ಪೊಲೀಸ್ ಬಿಗಿ …
Read More »