Breaking News

ರಾಷ್ಟ್ರೀಯ

ಪ್ರತಿಷ್ಠಿತ ಆಸ್ಪತ್ರೆಯ ತಾಜ್ಯ ಕ್ಲೀನ್ ಮಾಡಿ ಮರು ಬಳಕೆ ಆರೋಪ; ಕನ್ನಡ ಪರ ಸಂಘಟನೆಗಳಿಂದ ದಾಳಿ

ಬೆಂಗಳೂರು, ಡಿ.25: ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಬಳಸಿದ ವಸ್ತು ಸ್ವಚ್ಛಗೊಳಿಸಿ ಮರುಬಳಕೆ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ಹಿನ್ನಲೆಕನ್ನಡ ಪರ ಸಂಘಟನೆಸದಸ್ಯರು ದಾಳಿ ಮಾಡಿ ಮೆಡಿಕಲ್ ತ್ಯಾಜ್ಯ(Medical waste)ತುಂಬಿದ ಲಾರಿಯನ್ನು ಬೆಂಗಳೂರಿನ ಪೀಣ್ಯ(Peenya) ಕೈಗಾರಿಕಾ ಪ್ರದೇಶದಲ್ಲಿ ತಡೆದಿದ್ದಾರೆ.   ರೋಗಿಗಳಿಗೆ ಬಳಕೆಯಾಗಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು ಲಿಂಗಪುರದಲ್ಲಿ ಡಂಪಿಂಗ್ ಮಾಡಿ, ಪುನಃ ಅದನ್ನೇ ಕ್ಲೀನ್ ಮಾಡಿ ಲಾರಿಗೆ ತುಂಬಿಸಿ ಆಸ್ಪತ್ರೆಗೆ ಕಳುಹಿಸುವ ಉತ್ತರ ಭಾರತದ ಯುವಕರ ಲಾರಿಯನ್ನು ತಡೆದು ಕೂಡಲೇ ಕ್ರಮ ಕೈಗೊಳ್ಳುವಂತೆ ತಾಕೀತು …

Read More »

ಮಹಿಳೆ ಜೊತೆ ಅಸಭ್ಯ ವರ್ತನೆ,ಪಿಎಸ್‌ಐ ಅಮಾನತು

ಬೆಳಗಾವಿ, ಡಿ.25: ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪದಡಿ ಜಿಲ್ಲೆಯ ಹುಕ್ಕೇರಿ(Hukkeri)ತಾಲೂಕಿನ ಸಂಕೇಶ್ವರ ಪಟ್ಟಣ ಠಾಣೆಯ ಪಿಎಸ್‌ಐ ಅಮಾನತು ಮಾಡಲಾಗಿತ್ತು. ಈ ಹಿನ್ನಲೆ ಸಿಡಿದೆದ್ದ ಸಸ್ಪೆಂಡೆಡ್ ಪಿಎಸ್‌ಐ(Suspended PSI)ನರಸಿಂಹರಾಜು ತಮ್ಮ ಠಾಣೆಯಸಿಪಿಐ ಹಾಗೂ ಸಿಬ್ಬಂದಿವಿರುದ್ಧ ಕಿಡಿಕಾರಿದ್ದಾರೆ. ಸಂಕೇಶ್ವರ ಠಾಣೆ ಸಿಪಿಐ ಮತ್ತು ಕೆಲ ಸಿಬ್ಬಂದಿ ವಿರುದ್ಧ ಪಿಎಸ್‌ಐ ಗಂಭೀರ ಆರೋಪ ಮಾಡಿದ್ದಾರೆ. ನನ್ನ ವಿರುದ್ದ ಮಹಿಳೆ, ಸಿಪಿಐ, ಕೆಲ ಪೊಲೀಸ್ ಸಿಬ್ಬಂದಿ ಸೇರಿ ಷಡ್ಯಂತ್ರ ಮಾಡಿದ್ದಾರೆ ಎಂದಿದ್ದಾರೆ. ತಂಗಿಯೆಂದು ಆ …

Read More »

ಶಿವಾನಂದ ಪಾಟೀಲ್ ಹೇಳಿಕೆಗೆ ರೈತ ಮುಖಂಡರ ಆಕ್ರೋಶ

ಬೆಳಗಾವಿ, ಡಿ.25: ಬರಗಾಲ ಬರಲಿ ಎಂದು ರೈತರಿಗೆ ಆಸೆ ಎಂಬ ಸಕ್ಕರೆ ಸಚಿವ ಶಿವಾನಂದ ಪಾಟೀಲ್( Shivanand Patil ) ಹೇಳಿಕೆಗೆ ‘ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ರೈತ ಮುಖಂಡ ಮಹಾದೇವ ಮಡಿವಾಳ ಹಾಗೂ ಮಂಜುನಾಥಪರಗೌಡ ಮಾತನಾಡಿ‘ನೀವು ರೈತನ ಮಕ್ಕಳು ಎಂದು ಚುನಾವಣೆ ಸಂದರ್ಭದಲ್ಲಿ ಹೇಳುತ್ತೀರಿ, ನೀವು ರೈತರ ಮಕ್ಕಳಲ್ಲ, ಬರಗಾಲ ಬರಲಿ ಎಂದು ನಿಮ್ಮ ತಂದೆ ಬಯಸಿದ್ರಾ ಎಂದು ಕೇಳಿಕೊಳ್ಳಿ ಎಂದು ಕಿಡಿಕಾರಿದ್ದಾರೆ. ಉಡಾಫೆ ಹೇಳಿಕೆ …

Read More »

ಸಿದ್ದರಾಮಯ್ಯನವರೇ ಏನ್ ಮಾಡೋಕೆ ಹೊರಟಿದ್ದೀರಿ.: ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ಸಿದ್ದರಾಮಯ್ಯ (Siddaramaiah) ಅವರೇ ನಿಮ್ಮ ವೈಫಲ್ಯ ಮುಚ್ಚಲು ಈ ರೀತಿ ವಿವಾದ ಹುಟ್ಟು ಹಾಕೋದು ನಿಮ್ಮ ಕೆಲಸವಾ? ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಏನ್ ಮಾಡೋಕೆ ಹೊರಟಿದ್ದೀರಿ. ನಿಮ್ದು ಮುಠ್ಠಾಳತನವೋ, ಸಮಾಜ ಒಡೆಯಲು ಅತ್ಯಂತ ತಲೆ ಕೆಟ್ಟವರ ಥರ ಹೇಳಿಕೆ ಕೊಡ್ತಿದ್ದೀರೋ. ಸಮಾಜ ಒಡೆದು ವೋಟ್ ತೆಗೆದುಕೊಳ್ಳಬೇಕು ಅನ್ನೋದಾ? ಒಂದು ಕರ್ನಾಟಕ, ಹಿಮಾಚಲ ಪ್ರದೇಶ, ತೆಲಂಗಾಣದಲ್ಲಿ …

Read More »

ಕನಕಪುರ ಬಂಡೆಗೆ ಲಗಾಮು?: ದೆಹಲಿಗೆ ಜಾರಕಿಹೊಳಿ ದೌಡು, ಮೂರು ಡಿಸಿಎಂ ನೇಮಕಕ್ಕೆ ಒತ್ತಡ

ಬೆಂಗಳೂರು: ಕಾಂಗ್ರೆಸ್ನಲ್ಲಿ ಮೂವರು ಉಪಮುಖ್ಯಮಂತ್ರಿಗಳನ್ನು ಮಾಡುವ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಲೋಕಸಭಾ ಚುನಾವಣೆಗೂ ಮುನ್ನ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಲು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ದಲಿತ ಮುಖಂಡರುಗಳು ದೆಹಲಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಲಿಂಗಾಯತ ಸಮುದಾಯದ ಮೂವರನ್ನು ಉಪಮುಖ್ಯಮಂತ್ರಿಗಳನ್ನಾಗಿ ಮಾಡಬೇಕು ಎಂದು ಕಾಂಗ್ರೆಸ್ನಲ್ಲಿ ಮೊದಲಿನಿಂದಲೂ ಚರ್ಚೆಗಳು …

Read More »

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವವರೆಗೂ ನಾವು ವಿಶ್ರಾಂತಿ ಪಡೆದುಕೊಳ್ಳುವುದಿಲ್ಲ :ಬಿ.ವೈ ವಿಜಯೇಂದ್ರ

ದಾವಣಗೆರೆ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವವರೆಗೂ ನಾವು ವಿಶ್ರಾಂತಿ ಪಡೆದುಕೊಳ್ಳುವುದಿಲ್ಲ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಭಾನುವಾರ ಶಪಥ ಮಾಡಿದರು. ದಾವಣಗೆರೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಅಧಿವೇಶನದಲ್ಲಿ ಭಾಗಿಯಾಗುವ ಮುನ್ನ ಬಿಜೆಪಿ ಪದಾಧಿಕಾರಿಗಳ ಆಯ್ಕೆ ವಿಚಾರವಾಗಿ ಮಾತನಾಡಿದ ಅವರು, ನಿನ್ನೆ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆಯಾಗಿದೆ. ಕರ್ನಾಟಕದ ಎಲ್ಲ ಭಾಗದ ಯುವಕರು ಹಾಗೂ ಹಿರಿಯರಿಗೆ ಪಕ್ಷ ಅವಕಾಶ ಮಾಡಿಕೊಟ್ಟಿದೆ. ಈಗ …

Read More »

ಬರ ಬರಲಿ ಎಂದು ರೈತರು ಕಾಯ್ದು ಕೂತಿರಲಿಲ್ಲ, ಕಾಂಗ್ರೆಸ್ ಕಾಲ್ಗುಣದಿಂದ ಬರಗಾಲ ಬಂದಿದೆ:B.J.P.

ಬೆಂಗಳೂರು: ಬರಗಾಲ ಬರಲಿ ಎಂದು ರೈತರಿಗೆ ಆಸೆ ಇರುತ್ತೆ ಎಂಬ ಸಚಿವ ಶಿವಾನಂದ ಪಾಟೀಲ್​​ ಹೇಳಿಕೆಗೆ ರಾಜ್ಯ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಅಜ್ಞಾನಿಗಳು ಅವಿವೇಕಿಗಳೇ ತುಂಬಿದ್ದಾರೆ. ರೈತರು ಪರಿಹಾರದ ಹಣಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆಂದು ನಾಲಿಗೆ ಹರಿಬಿಟ್ಟಿದ್ದ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಇದೀಗ ರೈತರು ಬರಗಾಲ ಬರಲಿ ಎಂದು ಕಾಯುತ್ತಿರುತ್ತಾರೆ ಎಂದಿದ್ದಾರೆ. …

Read More »

ಪುನೀತ್​​​ ಕೆರೆಹಳ್ಳಿ ಮತ್ತು ಅವರ ನಾಲ್ವರು ಬೆಂಬಲಿಗರ ವಿರುದ್ಧ ಎಫ್‌ಐಆರ್

ಬೆಂಗಳೂರು: ಕ್ರಿಸ್ ಮಸ್ ಹಿನ್ನಲೆಯಲ್ಲಿ ಮಾಲ್ ನಲ್ಲಿ ಕ್ರಿಸ್ ಮಸ್ ಟ್ರೀ ಹಾಕಿದ ಕಾರಣಕ್ಕೆ ಸಿಬ್ಬಂದಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕ್ರಿಸ್ಮಸ್​ ಟ್ರೀ ಪ್ರದರ್ಶನ ಹಾಗೂ ಟಿಕೆಟ್ ನಿಗದಿಪಡಿಸಿರುವುದನ್ನು ವಿರೋಧಿಸಿ ಮಾಲ್​​ ಸಿಬ್ಬಂದಿಗೆ ತೊಂದರೆ ಹಾಗೂ ಬೆದರಿಕೆ ಹಾಕಿರುವ ಆರೋಪದ ಮೇಲೆ ಹಿಂದೂ ಪರ ಕಾರ್ಯಕರ್ತ ಪುನೀತ್​​​ ಕೆರೆಹಳ್ಳಿ ಮತ್ತು ಅವರ ನಾಲ್ವರು ಬೆಂಬಲಿಗರ ವಿರುದ್ಧ ಎಫ್‌ಐಆರ್​​ …

Read More »

ರಾಮಲಿಂಗಾರೆಡ್ಡಿ (Ramalingareddy) ಮನೆಯ ಎದುರೇ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು, ಡಿಸೆಂಬರ್​ 24: ಸಚಿವ ರಾಮಲಿಂಗಾರೆಡ್ಡಿ(Ramalingareddy)ಮನೆಯ ಎದುರೇ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ನಗರದ ಲಕ್ಕಸಂದ್ರದಲ್ಲಿ ಸಂಜೆ ಏಳು ಗಂಟೆ ಸುಮಾರಿಗೆ ನಡೆದಿದೆ. ಜೈಪ್ರಕಾಶ್ ಅಲಿಯಾಸ್ ನಾಯಿ ಅಪ್ಪಿ ಮೃತ ವ್ಯಕ್ತಿ. 2006ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೈಪ್ರಕಾಶ್ ಆರೋಪಿಯಾಗಿದ್ದ. ಹಳೆ ದ್ವೇಷ ಹಿನ್ನೆಲೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಆಡುಗೋಡಿ ಠಾಣೆಯ ಪೊಲೀಸರು ದೌಡಾಯಿಸಿದ್ದಾರೆ. ಇಂದು ಹನುಮಜಯಂತಿ ಹಿನ್ನೆಲೆ ಲಕ್ಕಸಂದ್ರ ಬಸ್ ನಿಲ್ದಾಣ ಬಳಿಯ ಆಂಜಿನೇಯ …

Read More »

ಬೆಳಗಾವಿ ದಲ್ಲಿ 15.6 ಡಿಗ್ರಿ ಸೆಲ್ಸಿಯಸ್​,ಕರ್ನಾಟಕದಾದ್ಯಂತ ಚಳಿ ಹೆಚ್ಚಲಿದೆ

ಮುಂದಿನ 2 ದಿನಗಳಲ್ಲಿ ಕರ್ನಾಟಕದಾದ್ಯಂತ ಚಳಿ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯಪುರದಲ್ಲಿ 10.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಮುಂದಿನ 2 ದಿನಗಳಲ್ಲಿ ಕರ್ನಾಟಕದಾದ್ಯಂತ ಚಳಿ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯಪುರದಲ್ಲಿ 10.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. …

Read More »