Breaking News

ರಾಷ್ಟ್ರೀಯ

ಮಹಾನಗರ ಪಾಲಿಕೆ ಬಾಕಿ ತೆರಿಗೆ ಸಂಗ್ರಹಕ್ಕೆ ಒನ್ ಟೈಂ ಸೆಟಲ್‌ಮೆಂಟ್​ ಅವಧಿ ವಿಸ್ತರಣೆ

ಬೆಂಗಳೂರು, ಡಿಸೆಂಬರ್​ 21: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಾಕಿ ತೆರಿಗೆ ಸಂಗ್ರಹಕ್ಕೆ ಒನ್ ಟೈಂ ಸೆಟಲ್‌ಮೆಂಟ್​ ಅವಧಿ ವಿಸ್ತರಣೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್​ಕೆ ಪಾಟೀಲ್(HK Patil), 2024ರ ಜೂನ್ 30ರವರೆಗೆ ಒನ್ ಟೈಂ ಸೆಟಲ್‌ಮೆಂಟ್ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ನೀರಿನ ಕರ ದರ ಇನ್ನು ಮುಂದೆ ವಾರ್ಷಿಕ ಹಣದುಬ್ಬರ …

Read More »

ಕೇರಳದಲ್ಲಿ ಒಂದೇ ದಿನದಲ್ಲಿ ಪತ್ತೆಯಾದವು 300 ಸಕ್ರಿಯ ಕೋವಿಡ್​ ಪ್ರಕರಣ

ನವದೆಹಲಿ/ ಮಂಗಳೂರು: ದೇಶದಲ್ಲಿ ಚಳಿ ಹೆಚ್ಚಿದಂತೆ ಕೋವಿಡ್​​ ಪ್ರಕರಣಗಳ ಏರಿಕೆ ಕಂಡಿದೆ. ಕೇರಳದಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಕೋವಿಡ್​ ರೂಪಾಂತರ ತಳಿ ಜೆಎನ್​.1 ಪತ್ತೆಯಾದ ಕೇರಳದಲ್ಲಿ ಡಿಸೆಂಬರ್​ 20ರಂದು ಒಟ್ಟು 300 ಹೊಸ ಕೋವಿಡ್​​ ಪ್ರಕರಣಗಳು ದಾಖಲಾಗಿದ್ದು, 3 ಸಾವು ಸಂಭವಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ವರದಿ ಬಿಡುಗಡೆ ಮಾಡಿದೆ. ಇದೀಗ ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2669 ಆಗಿದೆ. ಕಳೆದ ಮೂರು ವರ್ಷಗಳ …

Read More »

ಜನವರಿ 26ರಂದು ಫ್ಯಾನ್ಸ್​ಗಾಗಿ ಏನೋ ಪ್ಲಾನ್​ ಮಾಡ್ತಾರಂತೆ ರಕ್ಷಿತ್​ ಶೆಟ್ಟಿ

ಜನವರಿ 26ರಂದು ‘ಬ್ಯಾಚುಲರ್ ಪಾರ್ಟಿ’ ಚಿತ್ರತಂಡದಿಂದ ಹೊಸ ಅಪ್​ಡೇಟ್​ ಹೊರಬೀಳಲಿದೆ. ಈ ಬಗ್ಗೆ ನಿರ್ಮಾಣ ಸಂಸ್ಥೆ ಪರಂವಃ ಸ್ಟುಡಿಯೋ ಮಾಹಿತಿ ನೀಡಿದೆ. 7 ವರ್ಷಗಳ ಹಿಂದೆ ಕನ್ನಡದಲ್ಲಿ ಬ್ಲಾಕ್​ಬಸ್ಟರ್​ ಹಿಟ್​ ಪಡೆದು, ಇತರೆ ಭಾಷೆಗಳಿಗೂ ಡಬ್​ ಆಗಿ ಮೆಚ್ಚುಗೆ ಪಡೆದ ಸಿನಿಮಾ ‘ಕಿರಿಕ್​ ಪಾರ್ಟಿ’. ಈ ಭರ್ಜರಿ ಯಶಸ್ಸಿನ ಬಳಿಕ ಇಡೀ ತಂಡ ಬೇರೆ ಬೇರೆ ಪ್ರಾಜೆಕ್ಟ್‌ಗಳಲ್ಲಿ ತೊಡಗಿಸಿಕೊಂಡಿದೆ. ರಿಷಬ್​ ಶೆಟ್ಟಿ ನಿರ್ದೇಶಿಸಿ, ರಕ್ಷಿತ್​ ಶೆಟ್ಟಿ ನಟಿಸಿ, ನಿರ್ಮಿಸಿರುವ ಆ …

Read More »

ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು/ನವದೆಹಲಿ: ಜೆಡಿಎಸ್‌ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ವಿಚಾರದಲ್ಲಿ ಯಾವುದೇ ಸಮಸ್ಯೆ, ಗೊಂದಲ ಇಲ್ಲ. ಯಾವ ಯಾವ ಕ್ಷೇತ್ರದಲ್ಲಿ ಯಾರು ಸ್ಪರ್ಧಿಸುತ್ತಾರೆ ಎನ್ನುವುದನ್ನು ನಾವೇ ಪರಸ್ಪರ ಕುಳಿತು ಅಂತಿಮಗೊಳಿಸುತ್ತೇವೆ. ಆ ಬಗ್ಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ಮಾಜಿ ಸಿಎಂ ಹಾಗು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸಂಸತ್‌ ಭವನದ ಪ್ರಧಾನಿ ಕಾರ್ಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜೊತೆಗೂಡಿ ಭೇಟಿ ಮಾಡಿ, ಮಾತುಕತೆ ನಡೆಸಿದ ಬಳಿಕ …

Read More »

ಕೋವಿಡ್​ ನಿರ್ವಹಣೆಗೆ ಸಂಪುಟ ಉಪ ಸಮಿತಿ ರಚಿಸಲಾಗಿದೆ ಎಂದ ಸಿಎಂ

ಬೆಂಗಳೂರು: ಕೋವಿಡ್ ನಿರ್ವಹಣೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಲು ಆರೋಗ್ಯ ಇಲಾಖೆಗೆ ಸೂಚಿಸಲಾಗಿದ್ದು, ನಿರ್ವಹಣೆಗೆ ಸಂಪುಟ ಉಪ ಸಮಿತಿ ರಚಿಸಲಾಗಿದೆ. ಔಷಧ ಖರೀದಿ, ಮಾಸ್ಕ್ ಕಡ್ಡಾಯ ಸೇರಿದಂತೆ ಎಲ್ಲ ವಿಷಯವನ್ನೂ ಸಮಿತಿ ನಿರ್ಧರಿಸಲಿದೆ. ಇಂದಿನ ಸಚಿವ ಸಂಪುಟ ಸಭೆಯಲ್ಲೇ ಉಪಸಮಿತಿ ರಚಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ ನಿಯಂತ್ರಣ ಕುರಿತು ಸಭೆ ನಡೆಸಿದ ನಂತರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಇಂದು ಆರೋಗ್ಯ, ವೈದ್ಯಕೀಯ, ಗೃಹ, …

Read More »

ಪ್ರಮುಖ3 ಆರೋಪಿಗಳನ್ನ ಕಸ್ಟಡಿಗೆ ತೆಗೆದುಕೊಂಡ ಸಿಐಡಿ ತಂಡ

ಬೆಳಗಾವಿ: ಇಲ್ಲಿನ ವಂಟಮೂರಿ ಎಂಬಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೂವರು ಪ್ರಮುಖ ಆರೋಪಿಗಳನ್ನು ಸಿಐಡಿ ತಂಡವು ಕಸ್ಟಡಿಗೆ ತೆಗೆದುಕೊಂಡು ತನಿಖೆ ಆರಂಭಿಸಿದೆ. ಬೆಳಗಾವಿಯ ನಾಲ್ಕನೇ ಜೆಎಂಎಫ್‌ಸಿ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ. ಮೊದಲನೇ ಆರೋಪಿ ಬಸಪ್ಪ ರುದ್ರಪ್ಪ ನಾಯಕ, ಎರಡು ಮತ್ತು ಮೂರನೇ ಆರೋಪಿಗಳಾದ ರಾಜು ರುದ್ರಪ್ಪ ನಾಯಕ, ಶಿವಪ್ಪ ರಾಯಪ್ಪ ವಣ್ಣೂರ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಅಜ್ಞಾತ ಸ್ಥಳದಲ್ಲಿ ಆರೋಪಿಗಳನ್ನು ಅಧಿಕಾರಿಗಳ ತಂಡ ವಿಚಾರಣೆ …

Read More »

ರಕ್ತದಾನದ ಮೂಲಕ ಅತಿಥಿ ಉಪನ್ಯಾಸಕರ ವಿನೂತನ ಪ್ರತಿಭಟನೆ

ಚಿಕ್ಕೋಡಿ(ಬೆಳಗಾವಿ): ಸೇವಾ ಖಾಯಮಾತಿಗಾಗಿ ಒತ್ತಾಯಿಸಿ ಕಳೆದ 28 ದಿನಗಳಿಂದ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಮುಂದುವರಿದಿದೆ. ಈ ನಿಟ್ಟಿನಲ್ಲಿ ಸರ್ಕಾರ ಗಮನ ಸೆಳೆಯಲು ರಕ್ತದಾನ ಮಾಡಿ ವಿನೂತನವಾಗಿ ಚಿಕ್ಕೋಡಿಯಲ್ಲಿ ಪ್ರತಿಭಟನೆ ನಡೆಸಿದರು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಾದ್ಯಂತ ಕಳೆದ ಒಂದು ತಿಂಗಳಿನಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ಆಯಾ ತಾಲೂಕು ತಹಶೀಲ್ದಾರ್ ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ರಾಜ್ಯಾದ್ಯಂತ 14 ಸಾವಿರ ಅತಿಥಿ …

Read More »

ಸೂರಜ್​ ರೇವಣ್ಣಗೆ ಬಿಗ್​ ರಿಲೀಫ್​: ಎಂಎಲ್​ಸಿ ಸ್ಥಾನ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಸೂರಜ್ ರೇವಣ್ಣ ಅವರ ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ಅನೂರ್ಜಿತಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿ ಆದೇಶಿಸಿದೆ. ಡಾ.ಸೂರಜ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೊಳೆನರಸೀಪುರದ ಕಾಮಸಮುದ್ರ ಗ್ರಾಮದ ಎಲ್.ಹನುಮೇಗೌಡ ಅವರು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ನ್ಯಾಯಪೀಠವು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಹಾಸನ ಕ್ಷೇತ್ರದ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ …

Read More »

ವ್ಯಕ್ತಿಯ ಹೊಟ್ಟೆಯಲ್ಲಿತ್ತು 99 ಕೊಕೇನ್ ಕ್ಯಾಪ್ಸುಲ್!

Cocaine smuggling: ಬೆಂಗಳೂರು ಡಿಆರ್‌ಐ ಅಧಿಕಾರಿಗಳು ಅತಿದೊಡ್ಡ ಕೊಕೇನ್ ಕಳ್ಳಸಾಗಣೆ ಭೇದಿಸಿದ್ದು, ಕಳ್ಳಸಾಗಾಣಿಕೆದಾರನ ಹೊಟ್ಟೆಯಲ್ಲಿದ್ದ 99 ಕೊಕೇನ್ ಕ್ಯಾಪ್ಸುಲ್ ವಶಕ್ಕೆ ಪಡೆದಿದ್ದಾರೆ. ದೇವನಹಳ್ಳಿ(ಬೆಂಗಳೂರು ಗ್ರಾಮಾಂತರ): ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ನಿಲ್ದಾಣ ಮೂಲಕ ಸುಮಾರು 20 ಕೋಟಿ ರೂಪಾಯಿ ಮೌಲ್ಯದ 2 ಕೆ.ಜಿ ಕೋಕೆನ್ ಕ್ಯಾಪ್ಸುಲ್ ಸಾಗಿಸುತ್ತಿದ್ದ ನೈಜಿರಿಯಾ ಮೂಲದ‌ ಪ್ರಯಾಣಿಕನನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ಬೆಂಗಳೂರು ಘಟಕದ (Directorate of Revenue Intelligence) ಅಧಿಕಾರಿಗಳು ಬಂಧಿಸಿದ್ದಾರೆ.   ಫ್ಲೈ ಇಥಿಯೋಪಿಯಾ ವಿಮಾನದಲ್ಲಿ …

Read More »

ಸೈಕಲ್ ಮೂಲಕ ದೇಶ ಪರ್ಯಟನೆ: ಹಾವೇರಿಗೆ ಆಗಮಿಸಿದ ಯುಪಿ ಯುವಕ​

ಹಾವೇರಿ: ಪರಿಸರ ಸಂರಕ್ಷಣೆಗಾಗಿ ಉತ್ತರ ಪ್ರದೇಶ ಇಟಾವಾ ನಗರದ ರಾಬಿನಸಿಂಗ್ ಸೈಕಲ್ ಮೇಲೆ ದೇಶ ಪರ್ಯಟನೆ ಕೈಗೊಂಡಿದ್ದಾರೆ. 2022 ಆಕ್ಟೋಬರ್ 6 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭವಾಗಿರುವ ಇವರ ಸೈಕಲ್ ಯಾತ್ರೆ ಈಗಾಗಲೇ 26 ಸಾವಿರ ಕಿಲೋ ಮೀಟರ್ ಪ್ರವಾಸ ಪೂರ್ಣಗೊಂಡಿದೆ. ಸೈಕಲ್ ಜಾಥಾ ಆರಂಭಿಸಿ ಇಂದಿಗೆ 440 ದಿನವಾಗಿದ್ದು, ಈ ದಿನ ಹಾವೇರಿಗೆ ಆಗಮಿಸಿದ್ದಕ್ಕೆ ರಾಬಿನಸಿಂಗ್ ಸಂತಸ ವ್ಯಕ್ತಪಡಿಸಿದರು. ತಮಿಳನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ಒಡಿಶಾ, ಜಾರ್ಖಂಡ್​, ಪಶ್ಚಿಮ ಬಂಗಾಳ, …

Read More »