Breaking News

ರಾಷ್ಟ್ರೀಯ

ಹುಕ್ಕೇರಿ: ಸಮಾಜದ ಮುಖ್ಯ ವಾಹಿನಿಗೆ ಬರಲು ಮಹಿಳೆಯರಿಗೆ ಸಲಹೆ

ಹುಕ್ಕೇರಿ: ಧರ್ಮಸ್ಥಳ ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ ಕೂಸಾದ ಜ್ಞಾನ ವಿಕಾಸ ಕಾರ್ಯಕ್ರಮ ಅರಿತುಕೊಂಡು ಮಹಿಳೆಯರು ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ಧಾರವಾಡ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್ ಅಭಿಮತ ವ್ಯಕ್ತಪಡಿಸಿದರು. ತಾಲ್ಲೂಕಿನ ಸಂಕೇಶ್ವರದಲ್ಲಿ ಶನಿವಾರ ಹಮ್ಮಿಕೊಂಡ ಮಹಿಳಾ ಸಮಾವೇಶ ಮತ್ತು ವಿಚಾರಗೋಷ್ಟಿ ಸಮಾರಂಭದಲ್ಲಿ ಅತಿಥಿಯಾಗಿ ಮಾತನಾಡಿದರು.   ಯೋಜನೆಯ ಪರಿಣಾಮ ಮತ್ತು ಅನುಷ್ಠಾನ ಕುರಿತು ಮಾಹಿತಿ ಮತ್ತು ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ, ಸ್ವ ಉದ್ಯೋಗಗಳಿಗೆ ಪೂರಕವಾಗಿ ಯೋಜನೆಯಲ್ಲಿ ಇರುವಂತಹ …

Read More »

ಅಂಚೆ ಕಚೇರಿಯಲ್ಲಿ ಬಂದಿದೆ ಭರ್ಜರಿ ಲಾಭ ತರುವ ಹೊಸ ಸ್ಕೀಮ್ : ಯಾವುದದು.?

ಅಂಚೆ ಕಛೇರಿಯ ಮೂಲಕ ನಿಮ್ಮ ಹಣವನ್ನು ಸುರಕ್ಷಿತವಾಗಿರಿಸಲು ಉತ್ತಮ ಮಾರ್ಗವಾಗಿದೆ. ಇಲ್ಲಿ ಹಲವಾರು ರೀತಿಯ ಸಣ್ಣ ಉಳಿತಾಯ ಯೋಜನೆಗಳು ಮತ್ತು FD ಗಳನ್ನು ಹೊಂದಿದೆ. ಮುಖ್ಯವಾಗಿ ಎಸ್‌ಬಿಐಗಿಂತ ಹೆಚ್ಚಿನ ಬಡ್ಡಿಯನ್ನು ನೀಡುವ ಪೋಸ್ಟ್ ಆಫೀಸ್ ಟೈಮ್ ಡೆಪಾಸಿಟ್ ಸ್ಕೀಮ್ ಅಂತಹ ಒಂದು ಯೋಜನೆ ಇದೆ. ಇಲ್ಲಿ ಹೂಡಿಕೆದಾರರು ಈ ಯೋಜನೆಯಲ್ಲಿ 1 ವರ್ಷ, 2 ವರ್ಷ, 3 ವರ್ಷ ಮತ್ತು 5 ವರ್ಷಗಳವರೆಗೆ ಹಣವನ್ನು ಠೇವಣಿ ಮಾಡಬಹುದು. ಪೋಸ್ಟ್ ಆಫೀಸ್ …

Read More »

ಕನ್ನಡಿಗರಿಂದ 4 ಲಕ್ಷ ಕೋಟಿ ತೆರಿಗೆ, ಕೇಂದ್ರದಿಂದ ಕೇವಲ 50 ಸಾವಿರ ಕೋಟಿ ಮಾತ್ರ ವಾಪಸ್ : ಸಿಎಂ

ಹುಬ್ಬಳ್ಳಿ:, ರಾಜ್ಯದ ಜನರು 4 ಲಕ್ಷ ಕೋಟಿ ತೆರಿಗೆ ಪಾವತಿಸುತ್ತಿದ್ದರೂ ಕರ್ನಾಟಕಕ್ಕೆ ಕೇಂದ್ರದಿಂದ ಕೇವಲ 50,000 ಕೋಟಿ ರೂ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್ಡಿಆರ್‌ಎಫ್) ಕೇಂದ್ರ ಸರ್ಕಾರದ ಹಣವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ನಮ್ಮ ರಾಜ್ಯದಿಂದ 4 ಲಕ್ಷ ಕೋಟಿ ತೆರಿಗೆ ಸಂಗ್ರಹವಾಗಿದೆ. ಅದರಲ್ಲಿ ನಾವು 37,000 ಕೋಟಿ ರೂ.ಗಳ ತೆರಿಗೆ ಪಾಲನ್ನು ಪಡೆಯುತ್ತಿದ್ದೇವೆ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗೆ 13,000 ಕೋಟಿ ರೂ. ಇದು …

Read More »

ಹಗಲು ಹೊತ್ತಿನಲ್ಲಿ ಬೈಕ್​ ಕಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರ ಬಂಧನ

ಹಾವೇರಿ : ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿದ ಬೈಕ್‌ಗಳನ್ನು ಹಗಲು ಹೊತ್ತಿನಲ್ಲಿ ಹೊಂಚು ಹಾಕಿ ಕದಿಯುತ್ತಿದ್ದ ಇಬ್ಬರು ಆರೋಪಿಗಳನ್ನು ಹಾವೇರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹಾವೇರಿ ತಾಲೂಕು ಹೊಸರಿತ್ತಿ ಗ್ರಾಮದ ಸಚಿನ್ ಸಂಕ್ಲಿಪುರ (24) ಮತ್ತು ಉಡಚಪ್ಪ ದಿಪಾಳಿ (25) ಎಂದು ಗುರುತಿಸಲಾಗಿದೆ. ಸುಮಾರು 4,65,000 ಲಕ್ಷ ಮೌಲ್ಯದ 13 ಬೈಕ್​ಗಳ ಜಪ್ತಿ ಮಾಡಿ, ವಶಕ್ಕೆ ಪಡೆಯಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿದ ಬೈಕ್‌ಗಳನ್ನು ಟಾರ್ಗೆಟ್ ಮಾಡಿಕೊಂಡು ಬಸ್ ನಿಲ್ದಾಣ, ಹೋಟೆಲ್, ಹಾಗೂ …

Read More »

ಪತ್ನಿಯ ಕೊಲೆಗೈದು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ಪತಿ ಬಂಧನ

ರಾಯಚೂರು: ಪತ್ನಿಯ ಕೊಲೆಗೈದು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ್ದ ಪತಿಯನ್ನು ಬಂಧಿಸಿರುವುದಾಗಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ನಿಖಿಲ್.ಬಿ.ತಿಳಿಸಿದರು. ಸೋನಿ ಕೊಲೆಯಾದ ಮಹಿಳೆ. ಅವಿನಾಶ್ ಹಂತಕ. ಎಸ್​ಪಿ​ ನಿಖಿಲ್.ಬಿ. ಮಾತನಾಡಿ, “ರಾಯಚೂರಿನ ಪಶ್ಚಿಮ​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಡಿ.13ರಂದು ಕೊಲೆ ನಡೆದಿತ್ತು. ಅವಿನಾಶ್​ ಎಂಬಾತ ತನ್ನ ಪತ್ನಿ ಸೋನಿ ಅವರನ್ನು ವೇಲ್‌ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದ. ಇವರು ಒಂದು ವರ್ಷದ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಒಂದು ತಿಂಗಳ ಮಗು ಇದೆ. ಮಗು …

Read More »

ಹಿಂದೂ ರಾಷ್ಟ್ರ ಎನ್ನುವುದು ಬಿಜೆಪಿಯ ಸ್ಲೋಗನ್ ಇಲ್ಲಿ ಮುಸ್ಲಿಂ, ಕ್ರಿಶ್ಚಿಯನ್, ದಲಿತರು ಹೀಗೆ ಅನೇಕ ಜಾತಿ, ಜನಾಂಗದವರಿದ್ದಾರೆ:C.M.

ಗದಗ: ಭಾರತ ಕೇವಲ ಹಿಂದೂಗಳ ದೇಶ ಮಾತ್ರವಲ್ಲ. ಇಲ್ಲಿ ಮುಸ್ಲಿಂ, ಕ್ರಿಶ್ಚಿಯನ್, ದಲಿತರು ಹೀಗೆ ಅನೇಕ ಜಾತಿ, ಜನಾಂಗದವರಿದ್ದಾರೆ. ಇದು ಬಹುತ್ವದ ದೇಶ. ಹಿಂದೂ ರಾಷ್ಟ್ರ ಎನ್ನುವುದು ಬಿಜೆಪಿಯ ಸ್ಲೋಗನ್ ಅಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿಂದು ಸರಕಾರಿ ಬಾಲಕಿಯರ ಬಾಲಮಂದಿರ ಉದ್ಘಾಟಿಸಿದ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. 1950ರಲ್ಲಿ ಜನಸಂಘ ಸ್ಥಾಪನೆಯಾಯಿತು. ಅಂದಿನಿಂದ ಇಂದಿನವರೆಗೆ ಭಾರತವನ್ನು ಹಿಂದೂ ರಾಷ್ಟ್ರ ಮಾಡುತ್ತೇವೆ ಎಂದು ಹೇಳುತ್ತಾ ಬಂದಿದ್ದಾರೆ. ಭಾರತ …

Read More »

ಶಿರಸಿ: ಶಾಲ್ಮಲಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ಶಿರಸಿ: ರಜೆಯ ದಿನ ಕಳೆಯಲು ತೆರಳಿದ್ದ ಒಂದೇ ಕುಟುಂಬದ ಐವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶಾಲ್ಮಲಾ ನದಿಯಲ್ಲಿ ಇಂದು ನಡೆದಿದೆ. ಇತ್ತೀಚೆಗೆ ಶಿರಸಿಯ ಬಂಡಲದಲ್ಲಿ ಸಂಭವಿಸಿದ್ದ ಬಸ್​ ಮತ್ತು ಕಾರು ನಡುವಿನ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಜರುಗಿದೆ.‌ ಶಿರಸಿಯ ಭೈರುಂಭೆ ಸಮೀಪ ಶಾಲ್ಮಲಾ ನದಿಯಲ್ಲಿ ಘಟನೆ ಸಂಭವಿಸಿದೆ.‌ ಮೃತರೆಲ್ಲರೂ ಶಿರಸಿ ನಗರದವರು. ರಾಮನಬೈಲಿನ ಮೌಲಾನಾ ಅಹಮ್ಮದ್ …

Read More »

ವಂಟಮೂರಿ ಹಲ್ಲೆ ಪ್ರಕರಣ – ಸಂತ್ರಸ್ತ ಭೇಟಿಗೆ ಹೈಕೋರ್ಟ್‌ ನಿರ್ಬಂಧ

ಬೆಳಗಾವಿ : ವಂಟಮೂರಿಯಲ್ಲಿ (Vantamoori) ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ (Assault) ನಡೆಸಿದ್ದ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯ ಭೇಟಿಗೆ ಹೈಕೋರ್ಟ್‌ (High court) ನಿರ್ಬಂಧ ವಿಧಿಸಿದೆ. ಶನಿವಾರವಷ್ಟೇ ಬಿಜೆಪಿ (BJP) ಮಹಿಳಾ ನಿಯೋಗ ತಂಡದೊಡನೆ ತೆರಳಿ ಮಹಿಳೆಯೊಡನೆ ಮಾತುಕತೆ ನಡೆಸಿತ್ತು.   ಇನ್ನು ಮುಂದೆ ಮಹಿಳೆಯನ್ನು ಭೇಟಿಯಾಗುವ ಮಾಧ್ಯಮದವರು, ರಾಜಕಾರಣಿಗಳು ಹಾಗೂ ಮಾನವಹಕ್ಕು ಹೋರಾಟಗಾರರಿಗೆ ಹೈಕೋರ್ಟ್‌ ಷರತ್ತುಬದ್ದ ನಿರ್ಬಂಧ ವಿಧಿಸಿದೆ. ಮಹಿಳೆಯನ್ನು ಭೇಟಿಯಾಗಲು ವೈದ್ಯರ ಲಿಖಿತ ಪೂರ್ವಾನುಮತಿ ಅವಶ್ಯ ಎಂದು ಹೈಕೋರ್ಟ್‌ …

Read More »

ಮುಖ್ಯಮಂತ್ರಿಯಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ನಲ್ಲಿ ಗೊಂದಲ

ಗದಗ: ಮುಖ್ಯಮಂತ್ರಿ (CM) ಸಿದ್ದರಾಮಯ್ಯ (siddaramaiah) ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ (helicopter landing) ವೇಳೆ ಗೊಂದಲವಾದ ಘಟನೆ ಗದಗದಲ್ಲಿ (gadag) ಭಾನುವಾರ ನಡೆದಿದೆ. ಬಾಲಕಿಯರ ಬಾಲ ಮಂದಿರ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಲಿಕಾಪ್ಟರ್ ನಲ್ಲಿ ಆಗಮಿಸಿದ್ದರು. ಈ ವೇಳೆ ಎರಡು ಹೆಲಿಕಾಪ್ಟರ್ ಗಳಿದ್ದು, ಲ್ಯಾಂಡಿಂಗ್ ವೇಳೆ ಪೈಲೆಟ್ ಗಳಲ್ಲಿ ಗೊಂದಲ ಉಂಟಾಗಿತ್ತು. ಹೆಲಿಪ್ಯಾಡ್ ಗೆ ಮೊದಲು ಆಗಮಿಸಿದ ಒಂದು ಹೆಲಿಕಾಪ್ಟರ್ ಅರ್ಧ ಇಳಿಸಿ ಮತ್ತೆ ಮೇಲೆ ಹಾರಿತು. ಬಳಿಕ …

Read More »

ಲೋಕಸಭೆ ಚುನಾವಣೆ: ಶೆಟ್ಟರ್‌ಗೆ ಕಾಂಗ್ರೆಸ್ ಟಿಕೆಟ್?

ಹುಬ್ಬಳ್ಳಿ: “ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಂಬಂಧ ಜಗದೀಶ್ ಶೆಟ್ಟರ್ ಅವರ ಅಭಿಪ್ರಾಯ ಕೇಳ್ತಿದ್ದೀವಿ. ಅವರೂ ಆಕಾಂಕ್ಷಿ ಅಂತ ಅಂದುಕೊಂಡಿದ್ದೀವಿ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಶೆಟ್ಟರ್ ನಿವಾಸದಲ್ಲಿಂದು ಮಾತನಾಡಿದ ಅವರು, “ನಮ್ಮ ಶಾಸಕರು, ಕಾರ್ಯಕರ್ತರು ಹಾಗೂ ಈ ಹಿಂದೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಯಾರಿಗೆ ಟಿಕೆಟ್​ ಕೊಡಬೇಕು ಎಂದು ಹೇಳ್ತಾರೋ ಅವರಿಗೆ ಟಿಕೆಟ್ ಕೊಡುತ್ತೇವೆ” ಎಂದರು. ಮುಂದುವರಿದು ಮಾತನಾಡಿದ ಸಿಎಂ, “ಪ್ರತಿ ಜಿಲ್ಲೆಯಲ್ಲೂ ಕೂಡ ಒಬ್ಬೊಬ್ಬ ಸಚಿವರನ್ನು ವೀಕ್ಷಕರನ್ನಾಗಿ ನೇಮಕ ಮಾಡಿದ್ದೇವೆ. ಅವರು …

Read More »