Breaking News

ರಾಷ್ಟ್ರೀಯ

ಪ್ರಧಾನಮಂತ್ರಿ ಜನಔಷಧಿ ಕೇಂದ್ರಗಳನ್ನು ಮುಚ್ಚುವಂತೆ ರಾಜ್ಯ ಸರ್ಕಾರದ ಆದೇಶ ರಾಜಕೀಯಪ್ರೇರಿತ: ಅಶೋಕ್

ಬೆಂಗಳೂರು: ರಾಜ್ಯ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಪ್ರಧಾನಮಂತ್ರಿ ಜನಔಷಧಿ ಕೇಂದ್ರಗಳನ್ನು ಮುಚ್ಚುವಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಹೊರಡಿಸಿರುವ ಆದೇಶ ಅತ್ಯಂತ ಜನವಿರೋಧಿ ನಡೆಯಾಗಿದ್ದು, ಇದು ರಾಜಕೀಯ ಪ್ರೇರಿತ ನಿರ್ಧಾರ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಬಡವರು, ಜನಸಾಮಾನ್ಯರಿಗೆ ಅಗ್ಗದ ಬೆಲೆಯಲ್ಲಿ ಉತ್ಕೃಷ್ಟ ಗುಣಮಟ್ಟದ ಒದಗಿಸುತ್ತಿರುವ ಜನ ಔಷಧಿ ಕೇಂದ್ರಗಳಿಗೆ ಅವಕಾಶ ನೀಡದಿರಲು ಕಾರಣವೇನು? ಸರ್ಕಾರಿ …

Read More »

ಇದೇನಾ ಬ್ರ್ಯಾಂಡ್ ಬೆಂಗಳೂರು?

ಬೆಂಗಳೂರು: ಭಾನುವಾರ ರಾತ್ರಿ ಸುರಿದ ಪೂರ್ವ ಮುಂಗಾರು ಮಳೆಗೆ ಉದ್ಯಾನ ನಗರಿ ಅಕ್ಷರಶ: ನಲುಗಿದೆ. ವರುಣಾರ್ಭಟದಿಂದ ನಾಗರಿಕರು ಇದೇನಾ ಬ್ರ್ಯಾಂಡ್ ಬೆಂಗಳೂರು, ಗ್ರೇಟರ್ ಬೆಂಗಳೂರು ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರೇಟರ್ ಬೆಂಗಳೂರು ಎಂದು ಬದಲಾಗಿರುವ ರಾಜಧಾನಿಯಲ್ಲಿ ಪ್ರತೀ ಬಾರಿ ಮಳೆ ಸುರಿದಾಗಲೆಲ್ಲ ಮನೆಗಳಿಗೆ ನೀರು ನುಗ್ಗುವುದು, ರಸ್ತೆಯಲ್ಲಿ ನೀರು ನಿಲ್ಲುವುದು ಸಾಮಾನ್ಯ ಎಂಬಂತಾಗಿದೆ. ಮಳೆ ಹಾನಿ ಪ್ರದೇಶಗಳಿಗೆ ಎಡತಾಕುವ ಜನಪ್ರತಿನಿಧಿಗಳು ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆಗಳನ್ನು ನೀಡುತ್ತಿದ್ಧಾರೆ. ಗೃಹ …

Read More »

ಹುಬ್ಬಳ್ಳಿ – ಧಾರವಾಡದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಗಳು ತನಿಖೆಯಿಂದ ಪತ್ತೆ: ಎನ್ ಶಶಿಕುಮಾರ್

ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡದ ಎರಡು ನಗರದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಗಳು ಸೂರತ್ ಮೂಲದವರು ಅನ್ನೋದು ತನಿಖೆಯಿಂದ ಪತ್ತೆಯಾಗಿದೆ ಎಂದು ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಎನ್ ಶಶಿಕುಮಾರ್ ತಿಳಿಸಿದರು. ಅವಳಿ ನಗರದ ಕೆಲ ಪ್ರಾರ್ಥನಾ ಮಂದಿರಗಳಲ್ಲಿ ಅಪರಿಚಿತರ ಓಡಾಟ ಹೆಚ್ಚಾಗುತ್ತಿದ್ದು, ಅನುಮಾನಾಸ್ಪದವಾಗಿ ಓಡಾಡುವ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಶಾಸಕ ಅರವಿಂದ ಬೆಲ್ಲದ್ ಬರೆದ ಪತ್ರದ ವಿಚಾರ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಅವರು ಮಾಹಿತಿ ನೀಡಿದರು.ಹುಬ್ಬಳ್ಳಿ – ಧಾರವಾಡ ನಗರ …

Read More »

ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಅವಾಚ್ಯ ಪದ ಬಳಕೆ ಆರೋಪ: ಸಿ.ಟಿ ರವಿಗೆ ಬಿಗ್ ರಿಲೀಫ್

ನವದೆಹಲಿ, (ಮೇ 19): ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ಗೆ​  (Lakshmi Hebbalkar) ಅವಾಚ್ಯ ಪದದಿಂದ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ವಿರುದ್ಧ ಪ್ರಕರಣಕ್ಕೆ ಸುಪ್ರೀಂಕೋರ್ಟ್ (supreme court)​ ತಡೆಯಾಜ್ಞೆ ನೀಡಿದೆ.  ಬೆಳಗಾವಿ ಅಧಿವೇಶನದ (Belagavi Session) ವೇಳೆ ಅವಾಚ್ಯ ಪದದಿಂದ ನಿಂದನೆ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್​ ಅವರು ದೂರು ನೀಡಿದ್ದರು. ಆದ್ರೆ, ಈ ದೂರು ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದ …

Read More »

ಬೆಂಗಳೂರಿನ ವರುಣಾರ್ಭಟಕ್ಕೆ ಮೊದಲ ಬಲಿ

ಬೆಂಗಳೂರು, ಮೇ 19: ನಗರದಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಸುರಿದ ಮಳೆ (rain) ಹಲವು ಅನಾಹುತಗಳನ್ನು ಸೃಷ್ಟಿಸಿದೆ. ನಿನ್ನೆ ತಡರಾತ್ರಿ ಕೂಡ ಮಳೆ ಆರ್ಭಟಿಸಿದ್ದು, ವರ್ಷದ ಮೊದಲ ಬಲಿ (death) ಪಡೆದುಕೊಂಡಿದೆ. ರಣ ರಕ್ಕಸ ಮಳೆಗೆ ಗೋಡೆ ಕುಸಿದು 35 ವರ್ಷದ ಮಹಿಳೆಯೋರ್ವರು ಪ್ರಾಣಬಿಟ್ಟಿದ್ದಾರೆ. ನಗರದ ವೈಟ್ ಫೀಲ್ಡ್​​ನ ಚನ್ನಸಂದ್ರದಲ್ಲಿ ದುರಂತ ಸಂಭವಿಸಿದೆ. ಖಾಸಗಿ ಕಂಪನಿಯ ಉದ್ಯೋಗಿ ಶಶಿಕಲಾ(35) ಮೃತ ಮಹಿಳೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಭೇಟಿ ನೀಡಿದ್ದಾರೆ. ವೈಟ್ ಫೀಲ್ಡ್​​ …

Read More »

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ರೈಲ್ವೆಯ ನಾಲ್ವರು ಅಧಿಕಾರಿಗಳ ವಿರುದ್ಧ ಪ್ರಕರಣ

ಮೈಸೂರು: ನಗರದ ಕೇಂದ್ರೀಯ ರೈಲ್ವೆ ವರ್ಕ್‌ಶಾಪ್‌ನಲ್ಲಿನ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಹಿಳಾ ಅಧಿಕಾರಿ ಸೇರಿದಂತೆ ನಾಲ್ವರು ಹಿರಿಯ ಅಧಿಕಾರಿಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ. ವರ್ಕ್‌ಶಾಪ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆ ನೀಡಿದ ದೂರಿನ ಮೇರೆಗೆ ಮೂವರು ಸೀನಿಯರ್ ಸೆಕ್ಷನ್ ಇಂಜಿನಿಯರ್​ಗಳು ಹಾಗೂ ಓರ್ವ ಮಹಿಳಾ ಅಧಿಕಾರಿಯ ವಿರುದ್ದ ಅಶೋಕಪುರಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದೂರಿನ ವಿವರ: ಕೆಲಸದ ವೇಳೆ ಇಂಜಿನಿಯರ್​ವೊಬ್ಬರು ಲೈಂಗಿಕ ಪದ ಬಳಸಿ ಮಾತನಾಡುವುದು, ಲೈಂಗಿಕ …

Read More »

ಭೀಮಗಡ ದಟ್ಟಾರಣ್ಯದ 27 ಕುಟುಂಬಗಳಿಗೆ ಪುನರ್ವಸತಿ, ತಳೆವಾಡಿ ಫಲಾನುಭವಿಗಳಿಗೆ ತಲಾ 10 ಲಕ್ಷ ರೂ. ಚೆಕ್

ಬೆಳಗಾವಿ: “ಭೀಮಗಡ ಸೇರಿ ರಾಜ್ಯದ ವಿವಿಧೆಡೆ ಅರಣ್ಯ ಪ್ರದೇಶದಲ್ಲಿ ವಾಸವಿರುವ ಜನರಿಗೆ ಶಾಶ್ವತ ನೆಲೆ ಕಟ್ಟಿಕೊಡಲು ಒಂದು ಸಾವಿರ ಕೋಟಿ ಅನುದಾನದ ಅವಶ್ಯಕತೆ ಇದೆ. ಅನುದಾನ ನೀಡುವ ಸಂಬಂಧ ಕೇಂದ್ರದ ಪರಿಸರ ಇಲಾಖೆಗೆ ಈಗಾಗಲೇ ಪ್ರಸ್ತಾವನೆ ಕಳಿಸಿದ್ದೇವೆ” ಎಂದು ಅರಣ್ಯ ಸಚಿವ ಈಶ್ವರ್​ ಖಂಡ್ರೆ ಹೇಳಿದರು. “ಹಿಂದಿನ ತಲೆಮಾರಿನ ಅರಣ್ಯವಾಸಿಗಳಿಗೆ ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸುವುದು ಚೆನ್ನಾಗಿ ತಿಳಿದಿತ್ತು, ಆದರೆ ಇಂದಿನ ಪೀಳಿಗೆಯ ಅರಣ್ಯವಾಸಿಗಳಿಗೆ ಅಷ್ಟು ಪರಿಣತಿ ಇಲ್ಲ. ಹೀಗಾಗಿ ನಾಗರಿಕ ಸಮಾಜದಲ್ಲಿ …

Read More »

ಸೈನಿಕರ ಒಳಿತಿಗಾಗಿ ಪ್ರಾರ್ಥಿಸಿದ ಗಣಪತಿ ಸಚ್ಚಿದಾನಂದ ಸ್ವಾಮೀ

ಮೈಸೂರು: ಮೈಸೂರಿನ ಅವಧೂತ‌ ದತ್ತ ಪೀಠದಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು ಭಗವದ್ಗೀತಾ ಪಾರಾಯಣ ಮಾಡಿ, ನಮ್ಮ ದೇಶದ ಸೈನಿಕರಿಗೆ ಒಳಿತಾಗಲಿ ಎಂದು ಪ್ರಾರ್ಥಿಸಿದ್ದಾರೆ. ಆಶ್ರಮದ ನಾದ ಮಂಟಪದಲ್ಲಿ ಇಂಟರ್​​ನ್ಯಾಷನಲ್ ಗೀತಾ ಫೌಂಡೇಶನ್ ವತಿಯಿಂದ ನಡೆದ ಭಗವದ್ಗೀತೆ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದವರಿಗೆ ಪದಕ ಮತ್ತು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಲ್ಲಿ ಶ್ರೀಗಳು ಪದಕ ಮತ್ತು ಪ್ರಮಾಣ ಪತ್ರ ವಿತರಿಸುವ ಮೊದಲು ಗೀತಾ ಪಾರಾಯಣ ಮಾಡಿದರು. ನಮ್ಮ …

Read More »

ಅನಧಿಕೃತ ಓ.ಎಫ್‌.ಸಿ ಕೇಬಲ್ ಗಳನ್ನು ತೆರವುಗೊಳಿಸಿ: ಎಂ. ಮಹೇಶ್ವರ್ ರಾವ್

ಅನಧಿಕೃತ ಓ.ಎಫ್‌.ಸಿ ಕೇಬಲ್ ಗಳನ್ನು ತೆರವುಗೊಳಿಸಿ: ಎಂ. ಮಹೇಶ್ವರ್ ರಾವ್ ಬೆಂಗಳೂರು: ನಗರದ ಪೂರ್ವ ವಲಯ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಓಎಫ್‌ಸಿ ಕೇಬಲ್ ಗಳನ್ನು ತೆರವುಗೊಳಿಸಲು *ಮುಖ್ಯ ಆಯುಕ್ತರಾದ ಎಂ. ಮಹೇಶ್ವರ್ ರಾವ್* ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿಯ ಪೂರ್ವ ವಲಯ ವ್ಯಾಪ್ತಿಯಲ್ಲಿ ಗುಟ್ಟಹಳ್ಳಿ ಮೇಲ್ಸೆತುವೆ ಬಳಿಯಿಂದ ಇಂದು ಪರಿಶೀಲನೆ ಪ್ರಾರಂಭಿಸಿದ ವೇಳೆ ಮಾತನಾಡಿದ ಅವರು, ಪಾದಚಾರಿ ಮಾರ್ಗದಲ್ಲಿ ಅನಧಿಕೃತ ಓಎಫ್‌ಸಿ ಕೇಬಲ್‌ಗಳು ನೇತಾಡುತ್ತಿರುವುದನ್ನು ಕಂಡು ಅದನ್ನು ಕೂಡಲೆ …

Read More »

ಅಮೇರಿಕಾದ ಪ್ರಖ್ಯಾತ ನ್ಯೂಯಾರ್ಕ್ ವಿಶ್ವವಿದ್ಯಾಲಕ್ಕೆ ಟಾಪರ್ ಆದ ಸಚಿವ ಎಂಬಿಪಿ ಪುತ್ರ*

ಅಮೇರಿಕಾದ ಪ್ರಖ್ಯಾತ ನ್ಯೂಯಾರ್ಕ್ ವಿಶ್ವವಿದ್ಯಾಲಕ್ಕೆ ಟಾಪರ್ ಆದ ಸಚಿವ ಎಂಬಿಪಿ ಪುತ್ರ* ವಿಜಯಪುರದ ಧ್ರುವ ಎಂ ಪಾಟೀಲ ಅಮೇರಿಕಾದ ಪ್ರಖ್ಯಾತ ನ್ಯೂಯಾರ್ಕ್ ವಿಶ್ವವಿದ್ಯಾಲಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಬಿ ಎಲ್ ಡಿ ಇ ಸಂಸ್ಥೆ ಅಧ್ಯಕ್ಷ, ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಅವರ ಕಿರಿಯ ಪುತ್ರನಾಗಿರುವ ಧ್ರುವ ಎಂ ಪಾಟೀಲ ಅಮೆರಿಕಾದ ನ್ಯೂಯಾರ್ಕ್ ವಿವಿಯಲ್ಲಿ ಬ್ಯಾಚರ್ ಆಫ್ ಸೈನ್ಸ್ ಪದವಿಯನ್ನು ನ್ಯೂಯಾರ್ಕ್ ವಿವಿಗೆ ಟಾಫ್ 5 ವಿದ್ಯಾರ್ಥಿಗಳಲ್ಲಿ ಒಬ್ಬರಾಗಿದ್ದು, …

Read More »