Breaking News

ರಾಷ್ಟ್ರೀಯ

ಮಧ್ಯಮಾವಧಿ, ದೀರ್ಘಾವಧಿ ಸಾಲದ ಅಸಲು ಕಟ್ಟಿದರೆ ಸಂಪೂರ್ಣ ಬಡ್ಡಿ ಮನ್ನಾ: ಸಿಎಂ

ಬೆಳಗಾವಿ/ಬೆಂಗಳೂರು: ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡುವ ಬಗ್ಗೆ ನಮ್ಮ ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಸಾಲಮನ್ನಾ ಮಾಡುವ ಕುರಿತು ನಾವು ನಮ್ಮ ಪ್ರಣಾಳಿಕೆಯಲ್ಲಿ ಹೇಳಿಲ್ಲ. ಬಿಜೆಪಿಯವರು 2018ರ ತಮ್ಮ ಪ್ರಣಾಳಿಕೆಯಲ್ಲಿ “ನಮ್ಮ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕು ಮತ್ತು ಸಹಕಾರಿ ಸಂಘಗಳಲ್ಲಿ ಇರುವ 1 ಲಕ್ಷದವರೆಗೆ ರೈತರ ಬೆಳೆ ಸಾಲ ಮನ್ನಾ ಮಾಡಲಾಗುವುದು” …

Read More »

ಕೋಟಿ ಕೋಟಿ ವಿದ್ಯುತ್​ ಬಿಲ್​ ಬಾಕಿ ಇಟ್ಕೊಂಡ ಧಾರವಾಡ ಜಿಲ್ಲೆಯ ಸರ್ಕಾರಿ ಕಚೇರಿಗಳು

ಧಾರವಾಡ, ಡಿ.08: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ(Hescom)ವು ಒಟ್ಟು ಏಳು ಜಿಲ್ಲೆಗಳಲ್ಲಿ ಬರುತ್ತದೆ. ರಾಜ್ಯದ ಪ್ರತಿಷ್ಠಿತ ವಿದ್ಯುತ್ ಸರಬರಾಜು ಕಂಪನಿಗಳ ಪೈಕಿ ಇದು ಕೂಡ ಒಂದು. ಈ ಕಂಪನಿ ಅಡಿಯಲ್ಲಿ ರಾಜ್ಯದ ಎರಡನೇ ದೊಡ್ಡ ನಗರ ಖ್ಯಾತಿಯಹುಬ್ಬಳ್ಳಿ-ಧಾರವಾಡ(Hubballi-Dharwad) ಅವಳಿ ನಗರ ಹಾಗೂ ಬೆಳಗಾವಿ ಬರುತ್ತವೆ. ಇದೀಗ ಈ ಏಳು ಜಿಲ್ಲೆಗಳ ವ್ಯಾಪ್ತಿಯಲ್ಲಿನ ಸರಕಾರಿ ಕಚೇರಿಗಳಿಂದಲೇ ಹೆಸ್ಕಾಂ ಗೆ ನೂರಾರು ಕೋಟಿ ರೂಪಾಯಿ ವಿದ್ಯುತ್ ಬಿಲ್ ಬರಬೇಕಿದೆ. ಇಂತಹ ವೇಳೆ …

Read More »

ಗುಡ್​ನ್ಯೂಸ್: ಸಹಕಾರಿ ಬ್ಯಾಂಕ್‌ಗಳ ಸಾಲದ ಮೇಲಿನ ಬಡ್ಡಿ ಮನ್ನಾ, ಸಿದ್ದರಾಮಯ್ಯ ಘೋಷಣೆ

ಬೆಳಗಾವಿ (ಡಿಸೆಂಬರ್ 15): ಸಹಕಾರಿ ಬ್ಯಾಂಕ್‌ಗಳ (cooperative bank) ಸಾಲ ಮೇಲಿನ ಬಡ್ಡಿ ಮನ್ನಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಘೋಷಿಸಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಕೊನೆ ದಿನವಾದ ಇಂದು (ಡಿಸೆಂಬರ್ 15) ಈ ಘೋಷಣೆ ಮಾಡಿದ್ದು. ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಸಂಬಂಧಿಸಿದಂತೆ ಅವಧಿಯೊಳಗೆ ಸಾಲ ಮರುಪಾವತಿ ಮಾಡಿದವರ ಬಡ್ಡಿ ಮನ್ನಾ ಆಗಲಿದೆ ಎಂದು ಮಾಹಿತಿ ನೀಡಿದರು. ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ …

Read More »

ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಸರ್ಕಾರದ ವಿರುದ್ಧ ಬಿಜೆಪಿ ಧರಣಿ

ಬೆಳಗಾವಿ: ಬೆಳಗಾವಿ (Belagavi) ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಸದನಲ್ಲಿ ಚರ್ಚಿಸುವಂತೆ ಬಿಜೆಪಿ (BJP) ಹೈಕಮಾಂಡ್​ ನಾಯಕರು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರಿಗೆ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಈ ಬಗ್ಗೆ ಪ್ರತಿಭಟನೆ ನಡೆಸಲು ಬಿಜೆಪಿ ಮುಂದಾಗಿದೆ. ಈ ಬಗ್ಗೆ ಬೆಳಗಾವಿಯಲ್ಲಿ (Belagavi) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕಳೆದ ವಾರ ಬೆಳಗಾವಿ ಗ್ರಾಮಾಂತರದ ವಂಟಮೂರಿಯಲ್ಲಿ ದಲಿತ …

Read More »

ಗಾಂಧಿ ಭೇಟಿ ನೀಡಿದ ಸ್ಥಳಗಳ ಅಭಿವೃದ್ಧಿಗಾಗಿ ಶಾಸಕ ಅಭಯ ಪಾಟೀಲ್​ ಮಂಡಿಸಿದ ಖಾಸಗಿ ಬಿಲ್ ಅಂಗೀಕಾರ

ಬೆಳಗಾವಿ/ ಬೆಂಗಳೂರು: ಮಹಾತ್ಮಗಾಂಧೀಜಿಯವರು ಭೇಟಿ ನೀಡಿದ ಸ್ಥಳಗಳನ್ನು ಸ್ಮಾರಕವಾಗಿ ರೂಪಿಸಲು ಕ್ರಮವಹಿಸಬೇಕು ಎಂಬ ಕೈ ಶಾಸಕ ಅಭಯ ಪಾಟೀಲ್ ಮಂಡಿಸಿದ ಖಾಸಗಿ ಮಸೂದೆ ವಿಧಾನಸಭೆಯಲ್ಲಿ ಅಂಗೀಕೃತಗೊಂಡಿದೆ.   ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಬೆಳಗಾವಿಗೆ ಭೇಟಿ ನೀಡಿದ ಸವಿ ನೆನಪಿಗಾಗಿ ರಾಜ್ಯ ಸರ್ಕಾರ ಶತಮಾನೋತ್ಸವ ಸಂಭ್ರಮ ಆಚರಿಸಲು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ಅನುದಾನ ಬಿಡುಗಡೆ ಮಾಡಬೇಕು ಮತ್ತು ಮಹಾತ್ಮ ಗಾಂಧೀಜಿಯವರು ಭೇಟಿ ನೀಡಿದ ಸ್ಥಳಗಳನ್ನು ಅಭಿವೃದ್ಧಿಪಡಿಸಲು ಮತ್ತು ಭಾಗವಹಿಸಿದ ಸ್ಥಳವನ್ನು ಸ್ಮಾರಕವಾಗಿ ರೂಪಿಸಲು …

Read More »

ರಾಜ್ಯಸಭೆಯಿಂದ ಟಿಎಂಸಿ ಸಂಸದ ಅಮಾನತು

ನವದೆಹಲಿ: ರಾಜ್ಯಸಭೆಯಲ್ಲಿ ಅಶಿಸ್ತಿನ ನಡುವಳಿಕೆ ತೋರಿದ ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ಅವರನ್ನು ಗುರುವಾರ ಅಧಿವೇಶನದ ಇನ್ನುಳಿದ ಅವಧಿ ವರೆಗೆ ಅಮಾನತು ಮಾಡಲಾಯಿತು. ಗುರುವಾರ ಕಲಾಪ ಶುರುವಾಗುತ್ತಿದ್ದಂತೆ ನಿನ್ನೆ ನಡೆದ ಸಂಸತ್‌ ಭದ್ರತಾ ಲೋಪದ ಕುರಿತು ಚರ್ಚಿಸುವಂತೆ ಪಟ್ಟು ಹಿಡಿದ ಡೆರೆಕ್‌ ಒಬ್ರಿಯಾನ್‌ ದುರ್ವರ್ತನೆ ತೋರುವ ಮೂಲಕ ಸದನಕ್ಕೆ ಅಗೌರವ ತೋರಿದರು. ಈ ಹಿನ್ನೆಲೆ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್‌, ಒಬ್ರಿಯಾನ್‌ಗೆ ಸದನದಿಂದ ಹೊರಗೆ ಹೋಗುವಂತೆ ಸೂಚಿಸಿದರು. ಡೆರೆಕ್ ಒ’ಬ್ರೇನ್ …

Read More »

ನಮ್ಮ ಜೋಡೆತ್ತಿನ ಬಗ್ಗೆಯೂ ಸ್ವಲ್ಪ ಮಾತಾಡ್ರೀ.’ ಎಂದ ಯತ್ನಾಳ್‌

ಬೆಳಗಾವಿ : ಅಧಿವೇಶನ(Session) ಆರಂಭವಾದಾಗಿನಿಂದಲೂ ಸ್ವಪಕ್ಷದ ನಾಯಕರನ್ನು ಎಷ್ಟು ಕೆಣಕಲು ಸಾಧ್ಯವೋ ಎಲ್ಲಾ ಅವಕಾಶವನ್ನೂ ಯತ್ನಾಳ್‌(yatnal) ಬಳಸಿಕೊಳ್ಳುತ್ತಿರುವಂತಿದೆ. ಇಂದು ಕೂಡ ಪೂರಕ ಬಜೆಟ್‌ ವಿಚಾರದ ಚರ್ಚೆಯಲ್ಲಿ ಆರ್‌ ಅಶೋಕ್‌, ಬಿ ವೈ ವಿಜಯೇಂದ್ರ ಅವರನ್ನು ಯತ್ನಾಳ್‌ ಎಳೆದು ತಂದಿದ್ದಾರೆ.   ನಿನ್ನೆ ಕಾಂಗ್ರೆಸ್‌ ನಾಯಕರು ಮಂಡಿಸಿದ ಪೂರಕ ಬಜೆಟ್‌ ಬಗ್ಗೆ ವಿಚಾರ ಎತ್ತಿದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಪ್ರತಿ ಸಲ ಪ್ರಧಾನಿ ಮೋದಿ ಅವರ ಹೆಸರನ್ನು ಎಳೆದು ತರಲಾಗುತ್ತಿದೆ, …

Read More »

ಯತ್ನಾಳ್, ವಿ ಸೋಮಣ್ಣ ಅವರ ಪಾಪದ ಕೊಡ ತುಂಬಿದೆ: ರೇಣುಕಾಚಾರ್ಯ

ದಾವಣಗೆರೆ, ಡಿಸೆಂಬರ್​​ 14: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಸಚಿವ ವಿ. ಸೋಮಣ್ಣ ಅವರ ಪಾಪದ ಕೊಡ ತುಂಬಿದೆ. ಅವರು ನಾಶ ಆಗುತ್ತಾರೆ. ಇದೇ ಕಾರಣಕ್ಕೆ ಇಬ್ಬರು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಮಾತಾಡುತ್ತಿದ್ದಾರೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ(MP Renukacharya)ವಾಗ್ದಾಳಿ ಮಾಡಿದ್ದಾರೆ. ನಗದರಲ್ಲಿ ಮಾತನಾಡಿದ ಅವರು, ಇವರಿಬ್ಬರಿಗೂ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ದ ಮಾತನಾಡುವುದು ಬಿಟ್ಟು ಬೇರೆ ಕೆಲಸವಿಲ್ಲ ಎಂದು …

Read More »

ಹಾಸ್ಟೆಲ್ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಬೆಳಗಾವಿ: ಸೇವಾ ಭದ್ರತೆ, ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹಾಸ್ಟೆಲ್ ಹೊರ ಗುತ್ತಿಗೆ ನೌಕರರು ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್ ನಲ್ಲಿ ಪ್ರತಿಭಟನೆ ನಡೆಸಿದರು. ಹಾಸ್ಟೆಲ್ ಹೊರ ಗುತ್ತಿಗೆ ನೌಕರರ ಸಂಘದ ಆಶ್ರಯದಲ್ಲಿ ನಡೆದ ಪ್ರತಿಭಟನೆಯಲ್ಲಿ‌ ಭಾಗಿಯಾಗಿದ್ದ ನೂರಕ್ಕೂ ಅಧಿಕ ಹೊರ ಗುತ್ತಿಗೆ ನೌಕರರು, ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು. ನಮಗೆ ಕನಿಷ್ಠ ವೇತನ ಸಿಗುತ್ತಿಲ್ಲ‌. ಪಿ ಎಫ್ ಕಟ್ಟುತ್ತಿಲ್ಲ, ಸಾಕಷ್ಟು ಮ್ಯಾನ್​​ ಪವರ್ …

Read More »

ತಮ್ಮ ಪಕ್ಷದ ವಿರುದ್ಧವೇ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಬೇಸರ

ಬೆಳಗಾವಿ: ಯಾರೇ ಮಂತ್ರಿಯಾಗಬೇಕಂದರೂ, ಅದಕ್ಕೆ ಜಾದು ಮಾಡ್ಬೇಕು. ನಮಗೆ ಮಂತ್ರಿಯಾಗೋ ಜಾದುವೇ ಗೊತ್ತಿಲ್ಲ. ಇನ್ನು ಮುಖ್ಯಮಂತ್ರಿಯಾಗೋದು ಎಲ್ಲಿಂದ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಪರೋಕ್ಷವಾಗಿ ಬಿಜೆಪಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಕರ್ನಾಟಕ ಭಾಗದ ಚರ್ಚೆಯಲ್ಲಿ ಬಿ.ಆರ್‌. ಪಾಟೀಲ್‌ ಮಾತನಾಡುತ್ತಾ, ಕೇಂದ್ರ ಸಾರಿಗೆ ಸಚಿವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯ ಕೆಲಸ ಮಾಡುವ ಕನಸುಗಳಿವೆ. ಆದರೆ, ನಿಮ್ಮವರು ಅದನ್ನು ಮಾಡಲು ಬಿಡುತ್ತಿಲ್ಲ. ನನಗೆ ಅನುಕಂಪ ಇದೆ …

Read More »