ಬೆಳಗಾವಿ: ಯಾರೇ ಮಂತ್ರಿಯಾಗಬೇಕಂದರೂ, ಅದಕ್ಕೆ ಜಾದು ಮಾಡ್ಬೇಕು. ನಮಗೆ ಮಂತ್ರಿಯಾಗೋ ಜಾದುವೇ ಗೊತ್ತಿಲ್ಲ. ಇನ್ನು ಮುಖ್ಯಮಂತ್ರಿಯಾಗೋದು ಎಲ್ಲಿಂದ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪರೋಕ್ಷವಾಗಿ ಬಿಜೆಪಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಕರ್ನಾಟಕ ಭಾಗದ ಚರ್ಚೆಯಲ್ಲಿ ಬಿ.ಆರ್. ಪಾಟೀಲ್ ಮಾತನಾಡುತ್ತಾ, ಕೇಂದ್ರ ಸಾರಿಗೆ ಸಚಿವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯ ಕೆಲಸ ಮಾಡುವ ಕನಸುಗಳಿವೆ. ಆದರೆ, ನಿಮ್ಮವರು ಅದನ್ನು ಮಾಡಲು ಬಿಡುತ್ತಿಲ್ಲ. ನನಗೆ ಅನುಕಂಪ ಇದೆ …
Read More »ಬಾಕಿ ಬಿಲ್ ಕೊಡಿ ಇಲ್ಲ ವಿಷ ಕೊಡಿ:
ಬೆಳಗಾವಿ : ಪೂರ್ಣಗೊಂಡ ಕಾಮಗಾರಿಗಳ ಬಾಕಿ ಬಿಲ್ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ಮೂಲೆ ಮೂಲೆಯಿಂದ ಆಗಮಿಸಿದ್ದ ಗುತ್ತಿಗೆದಾರರು ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್ನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಸರ್ಕಾರಿ ಗುತ್ತಿಗೆದಾರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಅವರು ಬಾಕಿ ಬಿಲ್ ಕೊಡಿ ಇಲ್ಲವೇ ವಿಷ ಕೊಡಿ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಬೃಹತ್ ಮತ್ತು ಮಧ್ಯಮ ನೀರಾವರಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …
Read More »ರೈತರ ಕಾಳಜಿ ಇದ್ದರೆ ತಕ್ಷಣ ಸರ್ಕಾರ ಕಬ್ಬು ತೂಕದಲ್ಲಿ ಆಗುತ್ತಿರುವ ಮೋಸವನ್ನು ತಡೆಯಬೇಕು: ಶ್ರೀಮಂತ ಪಾಟೀಲ್
ಚಿಕ್ಕೋಡಿ: ವಿಧಾನಸಭೆ ಸದನದಲ್ಲಿ ಕಬ್ಬು ಬೆಳೆಗಾರರ ಕುರಿತು ಒಳ್ಳೆಯ ಚರ್ಚೆಗಳು ನಡೆಯುತ್ತಿವೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡು ಕಾಂಗ್ರೆಸ್ ಸರ್ಕಾರ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ. ರೈತರ ಪರ ಕಾಳಜಿ ಇದ್ದರೆ ತಕ್ಷಣ ಸರ್ಕಾರ ನುಡಿದಂತೆ ನಡೆದು ಕಬ್ಬು ತೂಕದಲ್ಲಿ ಆಗುತ್ತಿರುವ ಮೋಸವನ್ನು ತಡೆಯಬೇಕು ಎಂದು ಮಾಜಿ ಸಚಿವ ಶ್ರೀಮಂತ ಪಾಟೀಲ್ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗುರುವಾರ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, …
Read More »ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಅವರ ಮಾತು ಕೇಳಿ ಬಿದ್ದು ಬಿದ್ದ ನಕ್ಕ ಸಂತೋಷ ಲಾಡ್
ಬೆಳಗಾವಿ : ವಿವಿಧ ಸಂಘ ಸಂಸ್ಥೆಗಳು ತಮ್ಮ ಬೇಡಿಕೆ ಈಡೇರಿಸುವಂತೆ ಕಳೆದ 9 ದಿನಗಳಿಂದ ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್ನಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆಯುತ್ತಿವೆ. ಇಂದು ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪ್ರತಿಭಟನಾಕಾರರು ವಿವಿಧ ಬೇಡಿಕೆ ಮುಂದಿಟ್ಟರು. ಕಾರ್ಮಿಕ ಮಂಡಳಿಯ ಅಡಿ ಮಧ್ಯಪಾನ ಪ್ರಿಯರ ಕಲ್ಯಾಣ ನಿಧಿ ಸ್ಥಾಪಿಸಬೇಕು. ವಾರ್ಷಿಕ ಆದಾಯದಲ್ಲಿ ಶೇ.10ರಷ್ಟು ಕಲ್ಯಾಣ ನಿಧಿಗೆ ವರ್ಗಾಯಿಸಬೇಕು. ಮಧ್ಯಪಾನ …
Read More »ಅರಣ್ಯಭೂಮಿ ಗಡಿ ಗುರುತಿಸಲು ಕಂದಾಯ ಅರಣ್ಯ ಇಲಾಖೆ ಜಂಟಿ ಸರ್ವೆ: ಸಚಿವ ಈಶ್ವರ್ ಖಂಡ್ರೆ
ಬೆಳಗಾವಿ(ಬೆಂಗಳೂರು) :ಅರಣ್ಯ ಭೂಮಿ ಗಡಿ ಗುರುತಿಸಿ ನಿಖರ ನಕ್ಷೆ ಮಾಡುವ ಸಲುವಾಗಿ ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಜಂಟಿ ಸರ್ವೆ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಇಂದು ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಹರೀಶ್ ಪೂಂಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಮೀಕ್ಷೆಯನ್ನು ಕಾಲಮಿತಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಕರ್ನಾಟಕ ಅರಣ್ಯ ನಿಯಮದ ಪ್ರಕಾರ ಜಿಲ್ಲಾ ಅರಣ್ಯ ಅಥವಾ ರಕ್ಷಿತ ಅರಣ್ಯಕ್ಕೆ ಹೊಂದಿಕೊಂಡಂತೆ ಇರುವ …
Read More »ತಾಲೂಕು ಕೇಂದ್ರಗಳ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲು ಪ್ರಸ್ತಾವನೆ: ದಿನೇಶ್ ಗುಂಡೂರಾವ್
ಬೆಂಗಳೂರು/ ಬೆಳಗಾವಿ : ರಾಜ್ಯದಲ್ಲಿ ಘೋಷಣೆಯಾದ ಹೊಸ ತಾಲೂಕು ಕೇಂದ್ರಗಳ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಯಲ್ಲಿ ಹೇಳಿದ್ದಾರೆ. ಗುರುವಾರ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಹೊಸದಾಗಿ ಘೋಷಣೆಯಾದ ತಾಲೂಕು ಕೇಂದ್ರಗಳ ಬಹಳಷ್ಟು ಆಸ್ಪತ್ರೆಗಳು ತಾಲೂಕು ಆಸ್ಪತ್ರೆಗಳಾಗಿ ಮೇಲ್ದರ್ಜೆಗೆ ಏರಿಕೆಯಾಗಿಲ್ಲ. ಇದರೊಂದಿಗೆ ರಾಜ್ಯದಲ್ಲಿ 160 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಹ …
Read More »ನಾನು ಸಿಎಲ್‌ಪಿ ಸಭೆಗೆ ಹೋಗಿಲ್ಲ, ನಾನು ಡಿಸಿಎಂ ಕರೆದ ಭೋಜನಕೂಟಕ್ಕೆ ಹೋಗಿದ್ದೆ
ಬೆಳಗಾವಿ : ನಾನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹೋಗಿಲ್ಲ. ನಾನು ಡಿಸಿಎಂ ಡಿಕೆ ಶಿವಕುಮಾರ್ ಕರೆದ ಭೋಜನಕೂಟಕ್ಕೆ ಮಾತ್ರ ಹೋಗಿದ್ದು ಎಂದು ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ತಿಳಿಸಿದರು. ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹಾಜರಾದ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ನಾನು ನಿನ್ನೆ 8 ಗಂಟೆಯಿಂದ 10 ಗಂಟೆ ತನಕ ವಿಜಯೇಂದ್ರ ಜೊತೆಗೆ ಇದ್ದೆ. ನಮ್ಮ ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರು ಭೋಜನ ಕೂಟ ಇಟ್ಟುಕೊಂಡಿದ್ದರು. ಅವರ …
Read More »ಆಸ್ತಿ ವಿವಾದದ ಕಲಹಕ್ಕೆ ವಿಕಲಚೇತನನ ಮನೆ ಬಲಿ
ಬೆಳಗಾವಿ: ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. 30 ವರ್ಷಗಳಿಂದ ಕುಟುಂಬದೊಂದಿಗೆ ಶೆಡ್ನಲ್ಲಿ ವಾಸವಿದ್ದ ವಿಕಲಚೇತನನ ಮನೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿ ಅಟ್ಟಹಾಸ ಮೆರೆದಿರುವ ಆರೋಪ ಗೋಕಾಕ ತಾಲೂಕಿನ ಉದಗಟ್ಟಿ ಗ್ರಾಮದಿಂದ ತಡವಾಗಿ ಬೆಳಕಿಗೆ ಬಂದಿದೆ. ಹಾಡಹಗಲೇ ಬಡಿಗೆ ಕೋಲುಗಳಿಂದ ಮನೆ ಒಡೆದು ಧ್ವಂಸಗೊಳಿಸಲಾಗಿದೆ. ಉದಗಟ್ಟಿ ಗ್ರಾಮದ ಸಿದ್ದಪ್ಪ ಅಪ್ಪಯ್ಯ ತುರಬಿ (44) ವಾಸವಿದ್ದ ಪತ್ರಾಸ್ ಶೆಡ್ ಇದಾಗಿದೆ. ಆಸ್ತಿ ವಿವಾದದ ಕಲಹಕ್ಕೆ ವಿಕಲಚೇತನನ ಮನೆ ಬಲಿಯಾಗಿದೆ ಎಂದು ಸಂತ್ರಸ್ತ ಸಿದ್ದಪ್ಪ …
Read More »ಏಕವಚನದಲ್ಲಿ ಬೈದಾಡಿಕೊಂಡ ಜನಾರ್ದನ್ ರೆಡ್ಡಿ, ಭರತ್ ರೆಡ್ಡಿ
ಬೆಳಗಾವಿ: ವಿಧಾನಸಭೆಯಲ್ಲಿ ಮಂಗಳವಾರ ಬಳ್ಳಾರಿ ರಾಜಕೀಯ ಗುದ್ದಾಟ ಜೋರಾಗಿತ್ತು. ಸದನ ಜನಾರ್ದನ ರೆಡ್ಡಿ ಹಾಗೂ ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಶಾಸಕರ ವಾಕ್ಸಮರಕ್ಕೆ ಸಾಕ್ಷಿಯಾಯಿತು. ಉತ್ತರ ಕರ್ನಾಟಕ ಚರ್ಚೆಯ ವೇಳೆ ಮಾತನಾಡುವಾಗ ಕಾಂಗ್ರೆಸ್ ಶಾಸಕ ನಾ ರಾ ಭರತ್‌ರೆಡ್ಡಿ, ಬ್ರಾಹ್ಮಿಣಿ ಸ್ಟೀಲ್ಸ್ ಸಂಸ್ಥೆ, ಬಳ್ಳಾರಿ ಜಿಲ್ಲೆಯಲ್ಲಿ 10 ಸಾವಿರ ಎಕರೆ ಜಮೀನನ್ನು ಬಲವಂತವಾಗಿ ರೈತರಿಂದ ವಶಪಡಿಸಿಕೊಂಡಿತ್ತು. ರೈತರ ಮೇಲೆ ಗೂಂಡಾಗಿರಿ ಮಾಡಿ ಭೂಮಿಯನ್ನ ಕಿತ್ತುಕೊಂಡಿದ್ದ ವ್ಯಕ್ತಿಗಳು ಈಗ ನಮ್ಮಿಂದಲೇ ಬಳ್ಳಾರಿ ಅಭಿವೃದ್ಧಿಯಾಗಿದೆ ಎನ್ನುತ್ತಿದ್ದಾರೆ. …
Read More »34,115 ಕೋಟಿ ರೂ ಮೊತ್ತದ ಬಂಡವಾಳ ಹೂಡಿಕೆ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ :ಎಂ.ಬಿ.ಪಾಟೀಲ
ಬೆಳಗಾವಿ:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ, ಒಟ್ಟು 34,115 ಕೋಟಿ ರೂ ಮೊತ್ತದ ಬಂಡವಾಳ ಹೂಡಿಕೆ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು. ಸಿಎಂ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆದ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ, ಹೆಚ್ಚುವರಿ ರೂ 13,911 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್‌ಕಾನ್ ಕಂಪನಿ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ …
Read More »