ಬೆಂಗಳೂರು:ಕೂಡಲೇ ಹೋರಾಟಗಾರರನ್ನು ಬಿಡುಗಡೆ ಮಾಡನಬೇಕು ಎಂದು ಆಗ್ರಹಿಸಿದ್ದಾರೆ. ಇಲ್ಲವಾದರೆ, ಕ್ರಾಂತಿಕಾರಕ ಹೋರಾಟವನ್ನು ಸರ್ಕಾರ ಎದುರಿಸಬೇಕಾಗಲಿದೆ.ಇಲ್ಲವಾದರೆ ರಾಜಧಾನಿ ಬೆಂಗಳೂರಿನಲ್ಲಿ ದೊಡ್ಡಮಟ್ಟದ ಕ್ರಾಂತಿಕಾರಿ ಹೋರಾಟ ಮಾಡಬೇಕಾಗುತ್ತದೆ ಎಂದು ಕನ್ನಡ ಪರ ಹೋರಾಟಗಾರ ಪ್ರವೀಣ್ ಕುಮಾರ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ. ನಿನ್ನೆ ಬೆಂಗಳೂರಿನ ವಿವಿಧ ರಸ್ತೆಗಳಲ್ಲಿ ಪ್ರತಿಭಟನೆ ಮೆರವಣಿಗೆ ಮಾಡಿದ್ದ ಕರವೇ ಕಾರ್ಯಕರ್ತರು ಇಂಗ್ಲಿಷ್ ಬರಹ ಇದ್ದ ಬೋರ್ಡ್ ಗಳನ್ನು ಹರಿದು ಹಾಕಿದ್ದರು.ಪ್ರತಿಭಟನೆ ಜೋರಾಗಿ ಕಲ್ಲು ತೂರಾಟ ನಡೆದಿತ್ತು.ಹಾಗಾಗಿ ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು. …
Read More »KSRTC ಅಪಘಾತ ಪರಿಹಾರ 3 ಲಕ್ಷ ದಿಂದ 10 ಲಕ್ಷ ರೂ. ಗೆ ಹೆಚ್ಚಳ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಅಪಘಾತ ಪರಿಹಾರ ನಿಧಿ ಟ್ರಸ್ಟ್ ನೀಡುವ ಪರಿಹಾರವನ್ನು ಜನವರಿ 1, 2024 ರಿಂದ ಜಾರಿಗೆ ಬರುವಂತೆ 3 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸಿದೆ. ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಅಪಘಾತ ಪರಿಹಾರ ನಿಧಿ ಟ್ರಸ್ಟ್ ನೀಡುವ ಪರಿಹಾರವನ್ನು ಜನವರಿ 1, 2024 ರಿಂದ ಜಾರಿಗೆ ಬರುವಂತೆ 3 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸಿದೆ. ಅಪಘಾತಕ್ಕೀಡಾದವರ ಅವಲಂಬಿತರಿಗೆ ಹೆಚ್ಚುವರಿ ಪರಿಹಾರ ನೀಡಲು, …
Read More »ಬಿಸಿಯೂಟ ಸೇವಿಸಿ 60ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
ಬಿಸಿಯೂಟ ಸೇವಿಸಿ 60ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ತಾಲೂಕಿನ ಬೀರಾವರ ಗ್ರಾಮದಲ್ಲಿ ನಡೆದಿದೆ. ಮಕ್ಕಳಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದ್ದರಿಂದ ತೀವ್ರ ಸುಸ್ತಾಗಿದ್ದರು. ಹೀಗಾಗಿ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರದುರ್ಗ: ಬಿಸಿಯೂಟ ಸೇವಿಸಿ 60ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ತಾಲೂಕಿನ ಬೀರಾವರ ಗ್ರಾಮದಲ್ಲಿ ನಡೆದಿದೆ. ಮಕ್ಕಳಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದ್ದರಿಂದ ತೀವ್ರ ಸುಸ್ತಾಗಿದ್ದರು. ಹೀಗಾಗಿ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೀರಾವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ …
Read More »51 ಕೋಟಿ ರೂ. ತೆರಿಗೆ ಬಾಕಿ: ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ಗೆ ಮತ್ತೆ ಬೀಗ
ಬೆಂಗಳೂರು: ಬಾಕಿ ಉಳಿದಿರುವ ತೆರಿಗೆ ಬಾಕಿಯನ್ನು ಪಾವತಿಸದ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಂತ್ರಿ ಸ್ಕ್ವೇರ್ ಮಾಲ್ಗೆ ಮತ್ತೊಮ್ಮೆ ಬೀಗ ಜಡಿದಿದೆ. ಮಲ್ಲೇಶ್ವರಂನಲ್ಲಿರುವ ಮಾಲ್ನ ತೆರಿಗೆ ಬಾಕಿಯನ್ನು ಪಾವತಿಸುವಂತೆ ಬಿಬಿಎಂಪಿ ಆಡಳಿತ ಮಂಡಳಿಗೆ ಸೂಚಿಸಿತ್ತು. ಆಡಳಿತ ಮಂಡಳಿಯಿಂದ ಬಾಕಿ ಪಾವತಿಯಾಗದ ಕಾರಣ ಬಿಬಿಎಂಪಿ ಕಂದಾಯ ವಿಭಾಗದ ಸಿಬ್ಬಂದಿ ಬುಧವಾರ ಸ್ಥಳಕ್ಕೆ ಮಾಲ್ಗೆ ಬೀಗ ಜಡಿದಿದ್ದಾರೆ. ಒಟ್ಟಾರೆಯಾಗಿ, ಮಂತ್ರಿ ಸ್ಕ್ವೇರ್ ಬಿಬಿಎಂಪಿಗೆ 51 ಕೋಟಿ ತೆರಿಗೆ ಬಾಕಿ ಪಾವತಿಸಬೇಕಿದೆ. …
Read More »4 ಸಾವಿರ ಕೋಟಿ ಹಗರಣ ಎಂದು ಕೊಂಡಿದ್ದೆವು: ಯತ್ನಾಳ್ ಮಾಹಿತಿಯಿಂದ ನೆರವಾಗಿದೆ; ಜಿ. ಪರಮೇಶ್ವರ
ಕಲಬುರಗಿ: ಕೋವಿಡ್ ಸಂದರ್ಭದಲ್ಲಿ 4 ಸಾವಿರ ಕೋಟಿ ರೂ.ಗಳ ಹಗರಣವಾಗಿರಬಹುದು ಎಂದು ನಾವು ಭಾವಿಸಿದ್ದೆವು. ಈಗ ನಮ್ಮ ಮಾಹಿತಿ ತಪ್ಪು ಎಂದು ಸ್ಪಷ್ಟವಾಗಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು 4 ಸಾವಿರ ಕೋಟಿ ಅಲ್ಲ, 40 ಸಾವಿರ ಕೋಟಿ ಎಂದು ಹೇಳುವ ಮೂಲಕ ತನಿಖೆಗೆ ನೆರವಾಗಿದ್ದಾರೆ ಎಂದು ಗೃಹ ಪರಮೇಶ್ವರ್ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್ ನಿವೃತ್ತ ನ್ಯಾಯಾಧೀಶರು ಹಗರಣದ ತನಿಖೆ ನಡೆಸಲಿದ್ದಾರೆ. ಇದು 4,000 …
Read More »ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಂಚರಿಸುತ್ತಿದ್ದ ಕಾರು ಅಪಘಾತ
ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. (Education minister Madhu Bangarappa) ತುಮಕೂರಿನ ನಂದಿಹಳ್ಳಿಯ ಹೆದ್ದಾರಿಯಲ್ಲಿ ನಿನ್ನೆ ಬುಧವಾರ ಮಧ್ಯರಾತ್ರಿ ಸುಮಾರಿಗೆ ಅಪಘಾತವಾಗಿದೆ. ಚಲಿಸುತ್ತಿದ್ದ ಲಾರಿಗೆ ಕಾರು ಹಿಂಭಾಗದಿಂದ ಗುದ್ದಿದ್ದು, ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿ ಸಚಿವರು ಸೇರಿ ಮೂವರು ಪ್ರಯಾಣಿಸುತ್ತಿದ್ದು, ಎಲ್ಲರೂ ಬಚಾವ್ ಆಗಿದ್ದಾರೆ. ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ಮಾರ್ಗ ಮಧ್ಯೆ ಈ ದುರಂತ …
Read More »ಯತ್ನಾಳ್ ಗೆ ಬಿಜೆಪಿ ಖಡಕ್ ವಾರ್ನಿಂಗ್
ಇತ್ತೀಚಿನ ಕೆಲವು ಬೆಳವಣಿಗೆಗಳನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ ಮತ್ತು ಪಕ್ಷದ ಘನತೆಗೆ ಧಕ್ಕೆ ತರುವ ಯಾವುದೇ ಚಟುವಟಿಕೆಗಳನ್ನು ಸಹಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್ ಬುಧವಾರ ಪರೋಕ್ಷವಾಗಿ… ಬೆಂಗಳೂರು: ಇತ್ತೀಚಿನ ಕೆಲವು ಬೆಳವಣಿಗೆಗಳನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ ಮತ್ತು ಪಕ್ಷದ ಘನತೆಗೆ ಧಕ್ಕೆ ತರುವ ಯಾವುದೇ ಚಟುವಟಿಕೆಗಳನ್ನು ಸಹಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್ ಬುಧವಾರ ಪರೋಕ್ಷವಾಗಿ ಶಾಸಕ ಬಸನಗೌಡ ಪಾಟೀಲ್ …
Read More »ಪ್ರತಾಪ್ ಸಿಂಹಗೆ ಮತ್ತೆ ಸಂಕಷ್ಟ
ಬೆಂಗಳೂರು, ಡಿಸೆಂಬರ್ 28: ಲೋಕಸಭೆ ಭದ್ರತಾ ಲೋಪ ಪ್ರಕರಣದ ಬಳಿಕ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ (Pratap Simha) ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರವಾಗಿ ಎಫ್‌ಐಆರ್ ಸೇರಿದಂತೆ ಹಲವು ಸಮಸ್ಯೆಗಳನ್ನು ಅವರು ಎದುರಿಸುತ್ತಿದ್ದಾರೆ. ಈ ಮಧ್ಯೆ ಇದೀಗ ಅವರು ಪ್ರತಿನಿಧಿಸುವ ಮೈಸೂರು ಲೋಕಸಭಾ ಕ್ಷೇತ್ರವನ್ನು (Mysuru Lok Sabha Constituency) ಜೆಡಿಎಸ್ ಸೆಳೆಯುವ ಅಪಾಯ ಎದುರಾಗಿದೆ. ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಜೆಡಿಎಸ್ ಸೀಟು ಹಂಚಿಕೆ ಒಪ್ಪಂದದ ಮಾತುಕತೆ ಪ್ರಕ್ರಿಯೆ …
Read More »PSI ನೇಮಕಾತಿಯಲ್ಲಿ ಅಕ್ರಮ: ಹೆಚ್ಡಿಕೆ, ಯತ್ನಾಳ್ ಸೇರಿದಂತೆ ಹಲವರಿಗೆ ವೀರಪ್ಪ ಆಯೋಗದಿಂದ ಸಮನ್ಸ್
ಬೆಂಗಳೂರು, (ಡಿಸೆಂಬರ್ 26): 545 ಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ(PSI Scam Case) ಸತ್ಯಾಂಶ ತಿಳಿಯಲು ರಾಜ್ಯ ಸರ್ಕಾರ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ವಿಚಾರಣಾ ಆಯೋಗ ರಚನೆ ಮಾಡಿದ್ದು, ಇದೀಗ ವೀರಪ್ಪ ನೇತೃತ್ವದ ಆಯೋಗ ಪ್ರಕರಣದ ತನಿಖೆ ಚುರುಕುಗೊಳಿಸಿದೆ. ಈ ಸಂಬಂಧ ಹೆಚ್.ಡಿ.ಕುಮಾರಸ್ವಾಮಿ, ಬಸನಗೌಡ ಪಾಟೀಲ್ ಯತ್ನಾಳ್, ಧಡೇಸಗೂರು ಬಸವರಾಜ್, ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣಗೆ ಸಮನ್ಸ್ ಜಾರಿ ಮಾಡಲಾಗಿದ್ದು, ಪ್ರಕರಣ ಸಂಬಂಧ ಸಾಕ್ಷ್ಯಗಳಿದ್ದರೆ ಹಾಜರುಪಡಿಸುವಂತೆ ತಿಳಿಸಲಾಗಿದೆ. ಹೆಚ್.ಡಿ.ಕುಮಾರಸ್ವಾಮಿ, ಬಸನಗೌಡ …
Read More »ಜಾತಿಗಣತಿ ವರದಿ ಜಾರಿಗೆ ಒತ್ತಾಯಿಸಿ ಶೋಷಿತ ಸಮುದಾಯಗಳ ಸಮಾವೇಶಕ್ಕೆ ಮುಹೂರ್ತ ಫಿಕ್ಸ್, ಸಿಎಂಗೆ ಆಹ್ವಾನ
ಬೆಂಗಳೂರು, (ಡಿಸೆಂಬರ್ 27): ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಕಾಂತರಾಜು ಅವರು ಜಾತಿ ಗಣತಿ ವರದಿ (caste census report) ಜಾರಿಗೆ ಸಂಬಂಧ ಪರ-ವಿರೋಧ ಚರ್ಚೆಗಳು ನಡೆದಿವೆ. ಶೋಷಿತ ಸಮುದಾಯದ ನಾಯಕರುಗಳು ಜಾತಿ ಗಣತಿ ವರದಿ ಜಾರಿ ಮಾಡಲೇಬೇಕೆಂದು ಒತ್ತಾಯಿಸಿದರೆ, ಮತ್ತೊಂದೆಡೆ ಮೇಲ್ವರ್ಗ ಸಮುದಾಯಗಳು ಇದಕ್ಕೆ ವಿರೋಧ ವ್ಯಕ್ತಪಪಡಿಸುತ್ತಿವೆ. ಈ ಪರ-ವಿರೋಧದ ಆರ್ಭಟದ ಮಧ್ಯೆ ಕಾಂತರಾಜು ವರದಿ ಜಾರಿಗೆ ಒತ್ತಾಯಿಸಿ ಶೋಷಿತ ಸಮುದಾಯಗಳ ಒಕ್ಕೂಟ ಬೃಹತ್ ಸಮಾವೇಶ ಮಾಡಲು ತೀರ್ಮಾನಿಸಿದ್ದು, ಇದೀಗ …
Read More »
Laxmi News 24×7