Breaking News

ರಾಷ್ಟ್ರೀಯ

ಲಕ್ಷ್ಮೇಶ್ವರ: ರೈತನ ಕೈ ಹಿಡಿದ ತರಕಾರಿ ಕೃಷಿ

ಲಕ್ಷ್ಮೇಶ್ವರ: ಅಲ್ಪಸ್ವಲ್ಪ ಭೂಮಿಯಲ್ಲೇ ಕಷ್ಪಪಟ್ಟು, ವಿವಿಧ ತರಕಾರಿಗಳನ್ನು ಬೆಳೆದು ಸೈ ಎನಿಸಿಕೊಂಡವರು ತಾಲ್ಲೂಕಿನ ಗುಲಗಂಜಿಕೊಪ್ಪ ಗ್ರಾಮದ ರಾಮನಗೌಡ ಶಂಕರಗೌಡ ದುರುಗನಗೌಡ್ರ. ಮೂಲತಃ ಲಕ್ಷ್ಮೇಶ್ವರ ತಾಲ್ಲೂಕು ಗುಲಗಂಜಿಕೊಪ್ಪದ ನಿವಾಸಿಯಾದ ರಾಮನಗೌಡ್ರ ಈಗ ಲಕ್ಷ್ಮೇಶ್ವರದ ರಂಭಾಪುರಿ ನಗರದ ಆಶ್ರಯ ಕಾಲೊನಿಯಲ್ಲಿ ವಾಸವಾಗಿದ್ದಾರೆ.   ಲಕ್ಷ್ಮೇಶ್ವರದ ಮಾನ್ವಿ ಎಂಬುವವರಿಗೆ ಸೇರಿದ ಆರು ಎಕರೆ ತೋಟವನ್ನು ವರ್ಷಕ್ಕೆ ₹50 ಸಾವಿರದಂತೆ ಇವರು ಲಾವಣಿ ಆಧಾರದ ಮೇಲೆ ಪಡೆದುಕೊಂಡು ವಿವಿಧ ತರಕಾರಿ, ಗಲಾಟೆ ಹೂವು ಬೆಳೆಯುತ್ತಿದ್ದಾರೆ. ಹದಿನೈದು ಗುಂಟೆಯಲ್ಲಿ …

Read More »

ಶಿವಾಪುರ ಅಡವಿಸಿದ್ದೇಶ್ವರ ಜಾತ್ರೆ ಇಂದಿನಿಂದ

ಮೂಡಲಗಿ: ತಾಲ್ಲೂಕಿನ ಶಿವಾಪುರ (ಹ) ಗ್ರಾಮದ ಅಂಬಲಿ ಒಡೆಯ ಅಡವಿಸಿದ್ಧೇಶ್ವರ ಜಾತ್ರೆ ಸೆ. 6ರಿಂದ 9ರವರೆಗೆ ಪೀಠಾಧಿಪತಿ ಅಡವಿಸಿದ್ಧರಾಮ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿದೆ. ಸೆ.6ರಂದು ಬೆಳಿಗ್ಗೆ ಜಾತ್ರೆಯು ಷಟಸ್ಥಲ್‌ ಧ್ವಜಾರೋಹಣದೊಂದಿಗೆ ಆರಂಭವಾಗುವುದು. ನಿಡಗುಂದಿಕೊಪ್ಪದ ಅಭಿನವ ಚನ್ನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.   ಮುಖ್ಯ ಅತಿಥಿಗಳಾಗಿ ಗೋಕಾಕದ ಅಶೋಕ ಪೂಜೇರಿ, ಭೀಮಪ್ಪ ಗಡಾದ, ಸರ್ವೋತ್ತಮ ಜಾರಕಿಹೊಳಿ ಭಾಗವಹಿಸುವರು. ಬೆಳಿಗ್ಗೆ 10ಕ್ಕೆ ಆರೋಗ್ಯ ಉಚಿತ ತಪಾಸಣೆ ಇರುವುದು. ಸಂಜೆ 4ಕ್ಕೆ ತಾಯಂದಿರಿಂದ ಬಸವ …

Read More »

ಜಿ.ಪಂ., ತಾ.ಪಂ. ಮೀಸಲು: ಸಮಯ ಕೇಳಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದ ತಾ.ಪಂ. ಹಾಗೂ ಜಿ.ಪಂ. ಕ್ಷೇತ್ರಗಳಿಗೆ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರ ಮತ್ತೆ 3 ವಾರ ಕಾಲಾವಕಾಶ ಕೇಳಿದೆ. ನ್ಯಾಯಾಲಯಕ್ಕೆ ನೀಡಿದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿ.ಪಂ., ತಾ.ಪಂ. ಕ್ಷೇತ್ರ ಪುನರ್‌ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ವಿಫ‌ಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಜತೆಗೆ, ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟಿಸಲು ಏಕಸದಸ್ಯ ನ್ಯಾಯಪೀಠ ಆದೇಶ ಪಾಲಿಸುವಲ್ಲಿ ಸರ್ಕಾರ …

Read More »

ಜನನಿಬಿಡ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಪಟಾಕಿ ಜಪ್ತಿ

ಗದಗ: ಜನನಿಬಿಡ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿ ಜಪ್ತಿ ಮಾಡಲಾಗಿದೆ. ಗದಗ ನಗರದ ದಾಸರ ಓಣಿಯ ಜನನಿಬಿಡ ಪ್ರದೇಶದಲ್ಲಿ ಪಟಾಕಿ ಜಪ್ತಿ ಮಾಡಲಾಗಿದೆ. ರಾಮಚಂದ್ರ ಸಿದ್ದಲಿಂಗ ಎಂಬುವರ ಮನೆಯಲ್ಲಿ ಪಟಾಕಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗಿತ್ತು. ಗದಗ ಶಹರ ಠಾಣೆ ಸಿಪಿಐ ಡಿ.ಬಿ. ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿ ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ. ಗದಗ ಶಹರ ಪೊಲೀಸ್ …

Read More »

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ SDPI ಖ್ಯಾತೆ

ಹುಬ್ಬಳ್ಳಿ, ಸೆಪ್ಟಂಬರ್ 06: ಇಲ್ಲಿನ ಚೆನ್ನಮ್ಮ ವೃತ್ತದ ಬಳಿ ಇರುವ ವಿವಾದಿತ ಈದ್ಗಾ ಮೈದಾನದಲ್ಲಿ ನಿರಂತರ ಪ್ರಯತ್ನ, ಹೋರಾಟಗಳ ಫಲವಾಗಿ ಗಣೇಶ ಕೂರಿಸಲು, ಆಗಸ್ಟ್ 15ರಂದು ಧ್ವಜಾರೋಹಣ ಮಾಡಲು ಅವಕಾಶ ಸಿಕ್ಕಿದೆ. ಮೊನ್ನೆಯಷ್ಟೆ ಸರ್ಕಾರವೇ ಇಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡಿದರೂ ಸಹಿತ ಇಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್‌ಡಿಪಿಐ) ವಿರೋಧ ವ್ಯಕ್ತಪಡಿಸಿದೆ. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮೂರು ದಿನಗಳ ಅವಕಾಶ ಸಿಕ್ಕಿದೆ. ಪೊಲೀಸ್ ಬಿಗಿ …

Read More »

ಸೆ.22ಕ್ಕೆ ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ವಕೀಲರ ಬೃಹತ್ ಸಮಾವೇಶ

ಚಿಕ್ಕೋಡಿ: ಪಂಚಮಸಾಲಿ ಲಿಂಗಾಯತ ಸಮಾಜಕ್ಕೆ 2ಎ ಮೀಸಲಾತಿಗೆ ಕಾನೂನು ಮೂಲಕ ಹೋರಾಟ ನಡೆಸಲು ಪಂಚಮಸಾಲಿ ಲಿಂಗಾಯತ ಹೋರಾಟ ಸಮಿತಿ ನಿರ್ಧರಿಸಿದ್ದು, ಹೀಗಾಗಿ ಸೆ.22ರಂದು ಬೆಳಗಾವಿಯಲ್ಲಿ ಬೃಹತ್ ಪಂಚಮಸಾಲಿ ಲಿಂಗಾಯತ ವಕೀಲರ ಸಮಾವೇಶ ಆಯೋಜಿಸಲಾಗಿದೆ ಎಂದು ಕೂಡಲಸಂಗಮದ ಶ್ರೀ ಬಸವ ಜಯ ಮೃತುಂಜ್ಯಯ ಸ್ವಾಮೀಜಿ ಹೇಳಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಚಿಕ್ಕೋಡಿ ಪಂಚಮಸಾಲಿ ಲಿಂಗಾಯತ ವಕೀಲರ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ …

Read More »

ಮಂಡ್ಯದಲ್ಲಿ 10 ಸಾವಿರ ಲಂಚ ಪಡೆಯುತ್ತಿದ್ದಾಗ ತಹಶೀಲ್ದಾರ್ ಕಚೇರಿ FDA ಲೋಕಾಯುಕ್ತ ಬಲೆಗೆ

ಮಂಡ್ಯ: ಜಿಲ್ಲೆಯಲ್ಲಿ ರೈತರೊಬ್ಬರಿಂದ 10,000 ಲಂಚವನ್ನು ಪಡೆಯುತ್ತಿದ್ದಾಗ ತಹಶೀಲ್ದಾರ್ ಕಚೇರಿಯ ಎಫ್ ಡಿಎ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಡ್ಯ ತಹಶೀಲ್ದಾರ್ ಕಚೇರಿಯ ಲಂಚಾವತಾರ ಬಯಲಾಗಿದೆ. ಮರಕಾಡುದೊಡ್ಡಿ ಗ್ರಾಮದ ರೈತ ಮೋಹನ್ ಎಂಬುವರು ಭೂಮಿ ಶಾಖೆಯ ಎಫ್ ಡಿಎ ತಿಪ್ಪೇಸ್ವಾಮಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.   ಇಂದು ಮಂಡ್ಯ ತಹಶೀಲ್ದಾರ್ ಕಚೇರಿಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಭೂಮಿ ಶಾಖೆಯ …

Read More »

ಪಾತ್ರ ಬೇಕಾ ಪಲ್ಲಂಗಕ್ಕೆ ಬನ್ನಿ ,ಲೈಂಗಿಕ ಹಗರಣದ ಸುಳಿಯಲ್ಲಿ ಸ್ಟಾರ್‌ ನಟರು & ನಿರ್ದೇಶಕರು?

Sex scandal: ಮೀಟೂ ಅಭಿಯಾನದಿಂದ ಕನ್ನಡ ಚಿತ್ರರಂಗದ ಕೆಲವು ಸ್ಟಾರ್‌ ನಟರು, ನಿರ್ದೇಶಕರಲ್ಲಿ ನಡುಕವುಂಟಾಗಿದೆ. ಕೇರಳ ಚಿತ್ರರಂಗದಲ್ಲಿ ಈಗಾಗಲೇ ಘಾಟಾನುಘಟಿ ಸ್ಟಾರ್‌ ನಟರ ಹೆಸರು ಕೇಳಿ ಬಂದಿದೆ. ಸೂಪರ್‌ ಸ್ಟಾರ್‌ ನಟರಾದ ನವಿನ್‌ ಪೌಲಿ ಹಾಗೂ ಜಯಸೂರ್ಯ ಸೇರಿದಂತೆ ಹಲವರ ಮೇಲೆ ಕೇರಳದ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಅಲ್ಲಿ ಹೇಮಾ ಕಮಿಟಿ ವರದಿ ಮಂಡನೆಯ ನಂತರ ಮೀಟೂ ಅಭಿಯಾನಕ್ಕೆ ಅಲ್ಲಿ ಬೆಲೆ ಬಂದಿದ್ದು, ಸ್ಟಾರ್‌ ನಟರನ್ನು ನಡುಗಿಸಿದೆ. ಇದೀಗ ಕನ್ನಡ …

Read More »

ಮಳೆ: ಹಳ್ಳದಲ್ಲಿ ಕೊಚ್ಚಿ ಹೋದ ಯುವಕ

ರಾಯಚೂರು: ಜಿಲ್ಲೆಯ ವಿವಿಧೆಡೆ ಮಂಗಳವಾರ ದಿನವಿಡೀ ಸುರಿದ ಜಿಟಿಜಿಟಿ ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳಲ್ಲಿ ನೀರು ನುಗ್ಗಿ ಅವಾಂತರ ಸೃಷ್ಠಿಯಾಯಿತು. ತಾಲ್ಲೂಕಿನ ಪತ್ತೆಪುರ ಗ್ರಾಮದ ಹಳ್ಳ ದಾಟುತ್ತಿದ್ದ ಜಾಗೀರ ವೆಂಕಟಾಪುರ ಗ್ರಾಮದ ಯುವಕ ಬಸವರಾಜ (33) ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಮಂಗಳವಾರ ರಾತ್ರಿ ಮಳೆ ಸುರಿದಿದೆ. ಹಳ್ಳದಲ್ಲಿ ರಭಸವಾಗಿ ನೀರು ಹರಿಯುತ್ತಿತ್ತು. ಬಸವರಾಜ ಸೇರಿ ಸುಮಾರು 8 ಜನ ಪರಸ್ಪರ ಕೈ ಹಿಡಿದುಕೊಂಡು ಹಳ್ಳ ದಾಟುತ್ತಿದ್ದರು. ಬಸವರಾಜ ಅವರು ಕೈಯಲ್ಲಿ …

Read More »

ಇಬ್ಬರ ಬಂಧನ, 30 ಜಾನುವಾರು ರಕ್ಷಣೆ

ಮದ್ದೂರು: ಹಿಂದೂಪರ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಹಾಗೂ ತಂಡ ಪಟ್ಟಣದಲ್ಲಿ ಬುಧವಾರ ಸರಕು ವಾಹನೊಂದನ್ನು ತಡೆದು ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 30ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಿಸಿ ವಾಹನ ಸಹಿತ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ನಸುಕಿನ 5.45 ರ ಸಂದರ್ಭದಲ್ಲಿ ಐಷರ್ ಸರಕು ಸಾಗಣೆ ವಾಹನದಲ್ಲಿ ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಕಸಾಯಿಖಾನೆಗೆ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯನ್ನಾಧರಿಸಿ ಪುನೀತ್ ಕೆರೆಹಳ್ಳಿ ಹಾಗೂ ಅವರ ತಂಡದವರು ವಾಹನವನ್ನು ಪಟ್ಟಣದ ಪ್ರವಾಸಿ ಮಂದಿರದ …

Read More »