ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ರಸ್ತೆ ಅಪಘಾತಗಳ ಪ್ರಮಾಣ ತಗ್ಗಿಸಲು ಕರ್ನಾಟಕ ರಸ್ತೆ ಸುರಕ್ಷತಾ ಪ್ರಾಧಿಕಾರ ವಾಹನಗಳ ವೇಗವನ್ನು ಕಡಿಮೆ ಮಾಡಲು ಸಮೂಹ ಮಾಧ್ಯಮ ಅಭಿಯಾನ ಆರಂಭಿಸಿದ್ದು, ಸಾರಿಗೆ ಮತ್ತು ಪೊಲೀಸ್ ಇಲಾಖೆಯ ಜಂಟಿ ಅಭಿಯಾನಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ವಾಹನ ಚಲಾಯಿಸುವವರು ತಮ್ಮ ಕುಟುಂಬದ ಹಿತಾಸಕ್ತಿಗಳನ್ನು ಗಮನದಲ್ಲಿರಿಸಿಕೊಂಡ ವಾಹನ ಚಲಾಯಿಸಿದಾಗ ಮಾತ್ರ ಅಪಘಾತಗಳ ಪ್ರಮಾಣ ಕಡಿಮೆ ಮಾಡಲು ಸಾಧ್ಯ. ಏನೆಲ್ಲಾ …
Read More »ಭ್ರೂಣ ಹತ್ಯೆ ತಡೆಯುವಲ್ಲಿ ಕರ್ತವ್ಯ ಲೋಪ; ಇಬ್ಬರು ಅಧಿಕಾರಿಗಳ ಅಮಾನತು
ನಗರದ ಮಾತಾ ಆಸ್ಪತ್ರೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ (Female foeticide) ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಸರ್ಕಾರಿ ಸೇವೆಯಿಂದ ಅಮಾನತು ಮಾಡಲಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಆದೇಶ ಹೊರಡಿಸಿದ್ದಾರೆ. ಮೈಸೂರಿನ ಹಿಂದಿನ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ರವಿ. ಪಿ ಮತ್ತು ಮೈಸೂರು ತಾಲೂಕು ಆರೋಗ್ಯಾಧಿಕಾರಿ ರಾಜೇಶ್ವರಿ ಅವರನ್ನು ಅಮಾನತು ಮಾಡಲಾಗಿದೆ. ಭ್ರೂಣ ಹತ್ಯೆ ತಡೆಯುವಲ್ಲಿ ಕರ್ತವ್ಯ ಲೋಪವೆಸಗಿದ …
Read More »ಶಾಲೆಗಳಿಗೆ ಬೆದರಿಕೆ ಇ-ಮೇಲ್ ಕಳುಹಿಸಿದವರನ್ನು ಪತ್ತೆ ಹಚ್ಚಲು ಹೇಳಿದ್ದೇನೆ, ಆತಂಕ ಬೇಡ: ಸಿಎಂ
ಬೆಂಗಳೂರು: ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಕಳುಹಿಸಿದವರನ್ನು ಪತ್ತೆ ಹಚ್ಚಲು ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಬೆಂಗಳೂರಿನ ಶಾಲೆಗಳಿಗೆ ಬೆದರಿಕೆ ಇ-ಮೇಲ್ ಬಂದಿರುವ ಬಗ್ಗೆ ಪ್ರತಿಕ್ರಿಯಿಸಿ, ಪೊಲೀಸರ ಜೊತೆ ಈಗಾಗಲೇ ಮಾತನಾಡಿದ್ದೇನೆ. ಎಲ್ಲಾ ಶಾಲೆಗಳನ್ನು ಪರಿಶೀಲನೆ ನಡೆಸಲು ತಿಳಿಸಿದ್ದೇನೆ. ಎಚ್ಚರದಿಂದ ಇರಲು ಹೇಳಿದ್ದೇನೆ. ಈ ರೀತಿ ಬೆದರಿಕೆ ಹಾಕಿದವರನ್ನು ಪತ್ತೆ ಹಚ್ಚಲು ಸೂಚಿಸಿದ್ದೇನೆ ಎಂದರು. ಈ ಹಿಂದೆಯೂ ಇಂಥ ಬೆದರಿಕೆಗಳು ಬಂದಿದ್ದವು. ಆದರೆ …
Read More »ಏಡ್ಸ್ ತಡೆಗಟ್ಟಲು ಆರೋಗ್ಯ ಇಲಾಖೆಯವರು ಹೆಚ್ಚು ಸಂಶೋಧನೆ, ಐದು ವರ್ಷಗಳಲ್ಲಿ ಭಾರತ, ಕರ್ನಾಟಕ ಏಡ್ಸ್ ಮುಕ್ತವಾಗಲಿ: ಸಿಎಂ
ಬೆಂಗಳೂರು: “ಮುಂದಿನ ಐದು ವರ್ಷಗಳಲ್ಲಿ ಭಾರತ ಹಾಗೂ ಕರ್ನಾಟಕ ಏಡ್ಸ್ ಮುಕ್ತ ದೇಶ, ರಾಜ್ಯ ಆಗಲಿ. ಈ ದಿಕ್ಕಿನಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಲಾಗಿದ್ದ ವಿಶ್ವ ಏಡ್ಸ್ ದಿನ 2023 ಮತ್ತು 25ನೇ ರಜತ ಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, “ಇಂದು ವಿಶ್ವ ಏಡ್ಸ್ ದಿನ. ಈ ಸಾಂಕ್ರಾಮಿಕ ರೋಗ ತಡೆಯುವ ಜವಾಬ್ದಾರಿ ಎಲ್ಲರ ಮೇಲಿದೆ. ಈ ರೋಗ 1986ರಲ್ಲಿ ಭಾರತದಲ್ಲಿ …
Read More »2000 ರೂ. ನೋಟು ಹಿಂಪಡೆದ RBI: ಈವರೆಗೆ 97% ನೋಟುಗಳು ವಾಪಸ್, ಬಾಕಿ ಉಳಿದಿರುವ ಹಣವೆಷ್ಟು?
ನವದೆಹಲಿ: ಕಳೆದ ಮೇ 19ರಂದು 2000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಮಹತ್ವದ ಘೋಷಣೆ ಮಾಡಿದಾಗಿನಿಂದ ಈವರೆಗೂ ಶೇ. 97.26 ರಷ್ಟು ನೋಟುಗಳು ಬ್ಯಾಂಕಿಂಗ್ ವ್ಯವಸ್ಥೆಗೆ ಮರಳಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಇಂದು (ಡಿ.01) ತಿಳಿಸಿದೆ. ಮೇ 19ರಂದು 2000 ರೂ. ನೋಟುಗಳ ಚಲಾವಣೆಯನ್ನು ಹಿಂಪಡೆದ ಸಂದರ್ಭದಲ್ಲಿ 2000 ರೂ. ಮುಖಬೆಲೆಯ 3.56 ಲಕ್ಷ ಕೋಟಿ ರೂ. ಚಾಲನೆಯಲ್ಲಿದ್ದವು. ಕೇವಲ 6 ತಿಂಗಳಲ್ಲಿ ತೀವ್ರ ಕುಸಿತಕೊಂಡಿದ್ದು, …
Read More »ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ,ಮಂಗಗಳ ಉಪಟಳ ಹೆಚ್ಚಾಗಿದ್ದು, ರೋಗಿಗಳು ತಳಮಳಗೊಂಡಿದ್ದಾರೆ.
ಚಿತ್ರದುರ್ಗ: ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ, ಔಷಧಗಳು ಸಮರ್ಪಕವಾಗಿ ನೀಡುತ್ತಿಲ್ಲ, ಚಿಕಿತ್ಸೆ ಸರಿ ಇಲ್ಲವೆಂಬ ದೂರುಗಳು ಕೇಳಿಬರುವುದು ಸಾಮಾನ್ಯ. ಆದರೆ, ನಗರದ ಜಿಲ್ಲಾಸ್ಪತ್ರೆಯೊಳಗೆ ಕೆಲ ದಿನಗಳಿಂದ ಮಂಗಗಳ ಉಪಟಳ ಹೆಚ್ಚಾಗಿದ್ದು, ರೋಗಿಗಳು ತಳಮಳಗೊಂಡಿದ್ದಾರೆ. ಐತಿಹಾಸಿಕ ಕಲ್ಲಿನ ಕೋಟೆ, ನಲ್ಲಿಕಾಯಿ ಸಿದ್ದಪ್ಪನ ಬೆಟ್ಟ, ಚಂದ್ರವಳ್ಳಿ, ಆಡುಮಲ್ಲೇಶ್ವರ ಕಿರು ಮೃಗಾಲಯ ಆವರಣ ಸಾಮಾನ್ಯವಾಗಿ ಕೋತಿಗಳಿಗೆ ಆಶ್ರಯ ತಾಣಗಳಾಗಿವೆ. ಆಹಾರ, ನೀರು ಸಿಗದ ಸಂದರ್ಭ ಎದುರಾದಾಗ ನಗರ ಪ್ರವೇಶಿಸುತ್ತಿವೆ. ಈ …
Read More »ಶಾಲಾ ಮಕ್ಕಳ ಪೋಷಕರು ಆತಂಕಪಡಬೇಕಾದ ಅಗತ್ಯವಿಲ್ಲ, ದುಷ್ಟಶಕ್ತಿಗಳನ್ನು ಆದಷ್ಟು ಬೇಗ ಪತ್ತೆಹಚ್ಚುತ್ತೇವೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ವಿದ್ವಂಸಕ ಕೃತ್ಯ ನಡೆಸುವುದಾಗಿ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಬಾಂಬ್ ಪತ್ತೆ ದಳ ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಈಗಾಗಲೇ ಶಾಲೆಗಳಲ್ಲಿ ಪರಿಶೀಲನೆ ನಡೆಸುತ್ತಿವೆ. ಸಾರ್ವಜನಿಕರು ಮತ್ತು ಶಾಲಾ ಮಕ್ಕಳ ಪೋಷಕರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಪ್ರಕರಣವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿ ಶಾಲೆಗಳು ಮತ್ತು ದೇವಾಲಯಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಸೂಚನೆ ನೀಡಿದ್ದೇನೆ. ನಾಡಿನ …
Read More »ದ್ವಿತೀಯ ಪಿಯುಸಿ, ಎಸ್ಎಸ್ಎಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಬೆಂಗಳೂರು: 2023-24ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಜಾಲತಾಣದಲ್ಲಿ ಇಂದು ಪ್ರಕಟಿಸಲಾಗಿದೆ. 2024 ಮಾರ್ಚ್ 02ರಿಂದ ಮಾರ್ಚ್ 22ರವರೆಗೆ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಇನ್ನು ಮಾರ್ಚ್ 25 ರಿಂದ ಏಪ್ರಿಲ್ 06 ರವರೆಗೆ ಎಸ್‌ಎಸ್‌ಎಲ್ ಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಮಂಡಲಿ ಮೂರು ತಿಂಗಳ ಮುಂಚಿತವಾಗಿಯೇ ತಾತ್ಕಲಿಕ ವೇಳಾಪಟ್ಟಿ ಪ್ರಕಟ ಮಾಡಿದೆ. ಮಂಡಲಿಯಿಂದ …
Read More »ಸಿಎಂ ಸಿದ್ದರಾಮಯ್ಯ ಅವರು ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.
ಬೆಂಗಳೂರು : ಇತ್ತೀಚೆಗೆ ಮಂಡ್ಯದಲ್ಲಿ ಬೆಳಕಿಗೆ ಬಂದ ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆಗೆ ಸಿಎಂ ಆದೇಶ ಮಾಡಿದ್ದು, ಈ ಕುರಿತಂತೆ ಗೃಹ ಸಚಿವರಿಗೆ ನಿರ್ದೇಶನ ನೀಡಿದ್ದಾರೆ. ಇತ್ತೀಚೆಗೆ ಹೆಣ್ಣು ಭ್ರೂಣ ಪತ್ತೆ ಹಾಗೂ ಗರ್ಭಪಾತ ಪ್ರಕರಣ ಭೇದಿಸಿದ್ದ ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಮೈಸೂರಿನ ಖಾಸಗಿ ಆಸ್ಪತ್ರೆ ವೈದ್ಯ ದಂಪತಿ ಹಾಗೂ ಇತರ ಮೂವರು ಸೇರಿದಂತೆ ಐವರನ್ನು ಬಂಧಿಸಿದ್ದರು. ಇದಕ್ಕೂ ಮುನ್ನ ಕಳೆದ ಅಕ್ಟೋಬರ್‌ನಲ್ಲಿ ಶಿವನಂಜೇಗೌಡ, ವೀರೇಶ್, …
Read More »ವುಮೆನ್ ಸೇಫ್ಟಿ’ ಆಯಪ್; ಅಪಾಯದ ವೇಳೆ ಒಂದು ಬಟನ್ ಒತ್ತಿದ್ರೆ, ಲೊಕೇಶನ್ ಸಹಿತ ಬರುತ್ತೆ ಸಂದೇಶ
ವುಮೆನ್ ಸೇಫ್ಟಿ’ ಆಯಪ್; ಅಪಾಯದ ವೇಳೆ ಒಂದು ಬಟನ್ ಒತ್ತಿದ್ರೆ, ಲೊಕೇಶನ್ ಸಹಿತ ಬರುತ್ತೆ ಸಂದೇಶ ಬೆಂಗಳೂರು: ನೀವೇನಾದರೂ ಅಪರಿಚಿತ ಸ್ಥಳಕ್ಕೆ ಹೋದಾಗ ಅಪಾಯವಿದೆ ಎಂದು ನಿಮಗೆ ಅನ್ನಿಸಿದೆಯಾ? ಪ್ರಯಾಣದ ವೇಳೆ ಸಹ ಪ್ರಯಾಣಿಕರು ಕಿರುಕುಳ ಕೊಡುತ್ತಿದ್ದಾರೆ ಅನ್ನೋದು ಮನವರಿಕೆಯಾದರೆ ಕೂಡಲೇ ಪ್ಯಾನಿಕ್ ಬಟನ್ ಒತ್ತಿದರೆ ಸಾಕು ನೀವು ಕಳುಹಿಸಬೇಕಾದ ವ್ಯಕ್ತಿಗಳಿಗೆ ಅಲರ್ಟ್ ಸಂದೇಶ ರವಾನೆಯಾಗುವಂತಹ ನೂತನ ಅಪ್ಲಿಕೇಶನ್ವೊಂದನ್ನು ಕಾಲೇಜು ವಿದ್ಯಾರ್ಥಿನಿಯೊಬ್ಬರು ಅಭಿವೃದ್ಧಿ ಪಡಿಸಿದ್ದಾರೆ. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಟೆಕ್ ಸಮ್ಮಿಟ್ನಲ್ಲಿ …
Read More »