ಕರ್ನಾಟಕ ಮಹಾರಾಷ್ಟ್ರ (Maharashtra) ಗಡಿಯಲ್ಲಿ ಚೀಟಿ ತೋರಿಸಿ ಯಾಮಾರಿಸಿ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣ ವರದಿಯಾಗಿದೆ. ಕಿರಾಣಿ ಅಂಗಡಿಗೆ ಆಗಮಿಸಿದ ವ್ಯಕ್ತಿ ಒಂದು ಬಿಳಿ ಬಣ್ಣದ ಚೀಟಿ ತೋರಿಸುತ್ತಿದ್ದಂತೆ ಅಂಗಡಿ ಮಾಲಕಿ ತನ್ನ ಚಿನ್ನದ ಮಾಂಗಲ್ಯ (gold chain) ತೆಗೆದು ಆ ಚೀಟಿಯಲ್ಲಿ ಇಟ್ಟಿದ್ದಾಳೆ ಅಷ್ಟೇ. ಜಸ್ಟ್ ಎರಡೂವರೆ ನಿಮಿಷದಲ್ಲಿ ತನ್ನ ಕೈಚೆಳಕ ತೋರಿಸಿ ಚಿನ್ನದ ಸರದೊಂದಿಗೆ ಎಸ್ಕೇಪ್ ಆಗಿದ್ದಾನೆ. ಈ ಕುರಿತು ಡಿಟೇಲ್ ರಿಪೋರ್ಟ್ ಇಲ್ಲಿದೆ ನೋಡಿ. ಹೌದು …
Read More »ಚಳಿಗಾಲದ ಅಧಿವೇಶನದ ಭದ್ರತೆಗಾಗಿ 5 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ
ಬೆಳಗಾವಿ ನ.28: ಡಿಸೆಂಬರ್ 4 ರಿಂದ 15 ರವರೆಗೆ ಸುವರ್ಣ ವಿಧಾನಸೌಧದಲ್ಲಿ (Suvarna Soudha) ನಡೆಯಲಿರುವ ರಾಜ್ಯ ವಿಧಾನಮಂಡಲದಚಳಿಗಾಲದ ಅಧಿವೇಶನದ ಭದ್ರತೆಗಾಗಿ 5 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ (Police) ಆಯುಕ್ತ ಎಸ್.ಎನ್.ಸಿದ್ರಾಮಪ್ಪ ಹೇಳಿದರು. ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ವಿಧಾನಮಂಡಲ ಅಧಿವೇಶನಕ್ಕೆ ಅಗತ್ಯ ಭದ್ರತಾ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು. 12 ಜನ ಎಸ್ಪಿ, 42 ಡಿವೈಎಸ್ಪಿಗಳು ಮತ್ತು 100 ಜನ ಪೊಲೀಸ್ ಇನ್ಸ್‌ಪೆಕ್ಟರ್‌ಗಳು …
Read More »ಜಮೀರ್ ಅಹ್ಮದ್ ಖಾನ್ ವಿವಾದಾತ್ಮಕ ಹೇಳಿಕೆ: ಡಿಸೆಂಬರ್ 4 ರಂದು ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ
ತೆಲಂಗಾಣ ಚುನಾವಣಾ ಪ್ರಚಾರದ ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು, ಮೊದಲ ಬಾರಿಗೆ ಯು.ಟಿ ಖಾದರ್ ಅವರನ್ನು ವಿಧಾನಸಭಾ ಸ್ಪೀಕರ್ ಆಗಿ ನೇಮಿಸಲಾಗಿದೆ. ಈಗ ಬಿಜೆಪಿ ಶಾಸಕರು ಕೂಡ ನಮಸ್ಕಾರ ಸ್ಪೀಕರ್ ಸಾಬ್ ಎನ್ನುತ್ತಾರೆ ಎಂದು ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದರು. ಬೆಂಗಳೂರು, ನ.28: ಸ್ಪೀಕರ್ ಸ್ಥಾನದ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ಮೊದಲ ದಿನವೇ ಸಚಿವಜಮೀರ್ ಅಹ್ಮದ್ …
Read More »ಪಾರ್ಟ್ಟೈಮ್ ಜಾಬ್ ಕೊಡಿಸುವುದಾಗಿ ಹೇಳಿ ಸಾರ್ವಜನಿಕರನ್ನು ವಂಚಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಪಾರ್ಟ್ಟೈಮ್ ಜಾಬ್ ಕೊಡಿಸುವುದಾಗಿ ಸಾರ್ವಜನಿಕರನ್ನು ನಂಬಿಸಿ ಹಂತ ಹಂತವಾಗಿ ಹಣ ಪಡೆದು ವಂಚಿಸುತ್ತಿದ್ದ ಜಾಲ ಬೇಧಿಸಿರುವ ನಗರದ ಈಶಾನ್ಯ ವಿಭಾಗದ ಸೆನ್ ಠಾಣೆ ಪೊಲೀಸರು ನಾಲ್ವರು ಸೈಬರ್ ವಂಚಕರನ್ನು ಬಂಧಿಸಿದ್ದಾರೆ. ಸೈಯದ್ ಯೂನಸ್, ಮೊಹಮ್ಮದ್ ಕಲೀಮುಲ್ಲಾ, ಸೈಯ್ಯದ್ ಅರ್ಬಾಜ್ ಹಾಗೂ ಇಬ್ರಾಹಿಂ ಕಲೀಂ ಬಂಧಿತ ಆರೋಪಿಗಳು. ಏನಿದು ಪ್ರಕರಣ?: ವಂಚನೆಗೊಳಗಾದ ಸಾವಂತ್ ಪೂಜಾರಿ ಎಂಬುವರು ಫೇಸ್ಬುಕ್ ನೋಡುವಾಗ ಆನ್ಲೈನ್ ಶಾಪಿಂಗ್ ಆಯಪ್ವೊಂದರಲ್ಲಿ ಪಾರ್ಟ್ ಟೈಮ್ ವರ್ಕ್ ಫ್ರಂ ಹೋಮ್ ಕೆಲಸ ಇರುವುದನ್ನು …
Read More »ನಿಗಮ ಮಂಡಳಿ ನೇಮಕದಲ್ಲಿ ಪಕ್ಷದ ಕಾರ್ಯಕರ್ತರನ್ನು ಪರಿಗಣಿಸುವಂತೆ ಮನವಿ : ಸತೀಶ್ ಜಾರಕಿಹೊಳಿ
ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ ವಿಚಾರ: ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ, ಡಿಸಿಎಂ ಜಂಟಿಯಾಗಿ ನಿರ್ಧಾರ ಮಾಡುತ್ತಾರೆ. ಹಿರಿಯ ಶಾಸಕರನ್ನು ಆಯ್ಕೆ ಮಾಡುತ್ತೇವೆ ಎಂದು ತಿಳಿಸಿದ್ದು, ನಾವು ಹಿರಿಯ ಶಾಸಕರ ಜೊತೆ ಕಾರ್ಯಕರ್ತರಿಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಹೇಳಿದ್ದೇವೆ. ಶೇಕಡಾ 50ರಷ್ಟು ಕಾರ್ಯಕರ್ತರಿಗೆ, ಶೇಕಡಾ 50ರಷ್ಟು ಶಾಸಕರಿಗೆ ನೀಡಲು ಮನವಿ ಮಾಡಿದ್ದೇವೆ. ಕಾರ್ಯಕರ್ತರಿಗೆ ಕೊಟ್ಟರೆ ಒಳ್ಳೆಯದು ಎಂದು ಹೇಳಿದರು. ಚಿಕ್ಕೋಡಿ: ರಾಜ್ಯ ಸರ್ಕಾರದಹಲವು ಇಲಾಖೆಗಳಲ್ಲಿ ಅಧಿಕಾರಿಗಳ ವರ್ಗಾವಣೆ …
Read More »ಐಟಿ ದಾಳಿ ವೇಳೆ 42 ಕೋಟಿ ರೂ. ಪತ್ತೆ ಪ್ರಕರಣ: ಹೃದಯಾಘಾತದಿಂದ ಗುತ್ತಿಗೆದಾರ ಅಂಬಿಕಾಪತಿ ಸಾವು
ಬೆಂಗಳೂರು: ಐಟಿ ದಾಳಿಯ ವೇಳೆ ಕೋಟಿ ಕೋಟಿ ಹಣ ಪತ್ತೆಯಾದ ವಿಚಾರದಲ್ಲಿ ಭಾರೀ ಸುದ್ದಿಯಾಗಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಇಂದು ಸಂಜೆ 6.40 ಸುಮಾರಿಗೆ ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ಅಂಬಿಕಾಪತಿ ಮೃತಪಟ್ಟಿದ್ದಾರೆ. ಕಳೆದ ತಿಂಗಳಷ್ಟೇ ಅಂಬಿಕಾಪತಿ ಮನೆಯ ಮೇಲೆ ಐಟಿ ದಾಳಿ ನಡೆದಾಗ 42 ಕೋಟಿ ರೂ. ಹಣ ಪತ್ತೆಯಾಗಿತ್ತು. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಯಾಗಿ ಆರೋಪ-ಪ್ರತ್ಯಾರೋಪಗಳಿಗೆ ಎಡೆಮಾಡಿಕೊಟ್ಟಿತ್ತು. ತಮ್ಮ ಮನೆಯಲ್ಲಿದ್ದ ಹಣ …
Read More »ಜಾನಪದ ಲೋಕ ವಿದೇಶಗಳಿಗೂ ಮಾದರಿ: ಚಂದ್ರಶೇಖರ ಕಂಬಾರ ಬಣ್ಣನೆ
ಬೆಂಗಳೂರು ರಾಮನಗರದಲ್ಲಿ ನಾಗೇಗೌಡರು ನಿರ್ಮಿಸಿರುವ ಜಾನಪದ ಲೋಕವು ರಾಜ್ಯ, ದೇಶಕ್ಕೆ ಮಾತ್ರವಲ್ಲದೆ, ವಿದೇಶಗಳಿಗೂ ಮಾದರಿಯಾಗಿದೆ. ಇತ್ತೀಚೆಗೆ ಸ್ಪೇನ್, ಇಂಗ್ಲೆಂಡಿನಿಂದಲೂ ಜಾನಪದ ತಜ್ಞರು ಭೇಟಿ ಮಾಹಿತಿ ಪಡೆದಿದ್ದಾರೆಂದು ಹಿರಿಯ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಶ್ಲಾಘನೆ ವ್ಯಕ್ತಪಡಿಸಿದರು. ಸೋಮವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಜಾನಪದ ಪರಿಷತ್ತು ಆಯೋಜಿಸಿದ್ದ ನಾಡೋಜ ಎಚ್.ಎಲ್. ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದೊಮ್ಮೆ ಜಾನಪದ ಲೋಕದ ಬಗ್ಗೆ ರಷ್ಯಾದಲ್ಲಿ ಉಲ್ಲೇಖಿಸಿದ್ದ ಸಂದರ್ಭದಲ್ಲಿ ಅಲ್ಲಿನ ಕಲಾವಿದರು …
Read More »ವಿಧಾನಸೌಧ ಸಚಿವಾಲಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಚಿತ್ತ ಬೆಳಗಾವಿಯತ್ತ
ಬೆಂಗಳೂರು:ವಿಧಾನಸೌಧ ಸಚಿವಾಲಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಚಿತ್ತ ಬೆಳಗಾವಿಯತ್ತ ಹರಿದಿದೆ. ಜ.4ರಿಂದ ಪ್ರಾರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ತೆರಳಲು ಸಿದ್ಧತೆಗಳು ನಡೆದಿದ್ದು, ಆಫೀಸ್‌ನಲ್ಲಿ ಅಗತ್ಯವಿರುವುದನ್ನು ಪ್ಯಾಕಿಂಗ್ ಮಾಡಲಾಗುತ್ತಿದೆ. ಬೆಳಗಾವಿಗೆ ಏನೇನು ತೆಗೆದುಕೊಂಡು ಹೋಗಬೇಕು ಎನ್ನುವುದನ್ನು ಎರಡೆರಡು ಬಾರಿ ಖಚಿತಪಡಿಸಿಕೊಂಡು ಮೇಲಾಧಿಕಾರಿಗಳ ಅನುಮತಿ ಪಡೆದು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬೆಳಗಾವಿಗೆ ಕಡತಗಳನ್ನು ಸಾಗಿಸಲು ಅನುಕೂಲವಾಗುವಂತೆ ಟ್ರಂಕ್‌ಗಳನ್ನು ಮಾಡಿಸಿದ್ದು, ಆ ಮೂಲಕವೇ ಪ್ಯಾಕಿಂಗ್ ಮಾಡಲಾಗುತ್ತಿದೆ ಎಂದು ವಿಧಾನಸಭಾಧ್ಯಕ್ಷರ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲಾ ವಿಭಾಗಕ್ಕೂ ಪ್ರತ್ಯೇಕ …
Read More »500 ಮಕ್ಕಳಿರುವ ಶಾಲೆಗಳನ್ನು ಕೆಪಿಎಸ್ ಎಂದು ಪರಿಗಣಿಸುವಂತೆ ಶಿಕ್ಷಣ ಇಲಾಖೆ ಸೂಚನೆ
ಒಂದೇ ಆವರಣದಲ್ಲಿ ಅಥವಾ 500 ಮೀ. ಅಂತರದಲ್ಲಿ 500 ವಿದ್ಯಾರ್ಥಿಗಳ ದಾಖಲಾತಿ ಹೊಂದಿರುವ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳೆಂದು ಪರಿಗಣಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕವು ನಿರ್ದೇಶನ ನೀಡಿದೆ. ರಾಜ್ಯದಲ್ಲಿ ಪ್ರಸ್ತುತ 285 ಕೆಪಿಎಸ್ ಶಾಲೆಗಳು ಕಾರ್ಯನಿರ್ವಹಿಸತ್ತಿವೆ. ಒಂದೇ ಸೂರಿನಡಿ ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವದವರೆಗೂ ಶಿಕ್ಷಣ ನೀಡುವ ಸಲುವಾಗಿ ಹಂತ ಹಂತವಾಗಿ ಒಂದು ಸಾವಿರ ಕೆಪಿಎಸ್ ಸ್ಥಾಪಿಸುವ ಗುರಿ ಹೊಂದಲಾಗಿದೆ. ಈ ಸಂಬಂಧ ಹಲವು ಜನಪ್ರತಿನಿಧಿಗಳು, ಸ್ಥಳೀಯ ಸಂಘ …
Read More »ಪತ್ರಿಕಾ ವಿತರಕರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಹೊಸ ಯೋಜನೆ ಜಾರಿ: ಸಚಿವ ಸಂತೋಷ್ ಲಾಡ್
ಬೆಂಗಳೂರು:ಪತ್ರಿಕಾ ವಿತರಕರು ಶ್ರಮಜೀವಿಗಳಾಗಿದ್ದು, ಅವರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಹೊಸದಾಗಿ ಯೋಜನೆ ರೂಪಿಸಿ, ಅಪಘಾತದಲ್ಲಿ ಮೃತಪಟ್ಟ ಪತ್ರಿಕಾ ವಿತರಕರಿಗೆ 2 ಲಕ್ಷ ವೈದ್ಯಕೀಯ ನೆರವಿಗೆ 1 ಲಕ್ಷ ರೂ ನೆರವಿನ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಪತ್ರಿಕಾ ವಿತರಕರ ಸಮಸ್ಯೆಗೆ ಸ್ಪಂಧಿಸಿ ಯೋಜನೆಯನ್ನು ಜಾರಿಗೊಳಿಸಿದ್ದಕ್ಕಾಗಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ) ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಭಿನಂದನೆ ಸ್ವೀಕರಿಸಿ …
Read More »