ಗೋಕಾಕ : ಅರಭಾವಿ ಮಠದ ಶ್ರೀ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠಕ್ಕೆ ಇಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಇಂದು ಮಠಕ್ಕೆ ಭೇಟಿ ನೀಡಿದರು. ನಂತರ ಪೀಠಾಧಿಪತಿಗಳಾಗಿ ಶ್ರೀ ಮ.ನಿ.ಪ್ರ.ಸ್ವ. ಶ್ರೀ ಗುರು ಬಸವಲಿಂಗ ಮಹಾಸ್ವಾಮಿಜೀ ಅವರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, ಪ್ರಹ್ಲಾದ್ ನಾಡಿಗೇರ ಮುಖಂಡರಾದ ಶಂಕರ ಬಿಲಕುಂದಿ, ಮಾರುತಿ ವಿಜಯನಗರ ಹಾಗೂ ಮಠದ ಭಕ್ತರು ಉಪಸ್ಥಿತರಿದ್ದರು.
Read More »ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಬಹಿರಂಗಪಡಿಸಬೇಕು
ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಬಹಿರಂಗಪಡಿಸಬೇಕು ಎಂಬ ಸುಪ್ರೀಂ ಕೋರ್ಟ್ ನಿರ್ದೇಶನ ಪಾಲಿಸಲು ಅಭ್ಯರ್ಥಿಗಳು ಬಾಕಿಯಿರುವ ಕ್ರಿಮಿನಲ್ ಕೇಸ್‌ಗಳ ವಿವರ ನೀಡಲು ಪ್ರತ್ಯೇಕ ನಮೂನೆಯನ್ನು ಒದಗಿಸಬೇಕು ಎಂದು ಹೈಕೋರ್ಟ್ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಕ್ರಿಮಿನಲ್ ಪ್ರಕರಣಗಳ ಮಾಹಿತಿ ನೀಡುವಂತೆ ಆದೇಶಿಸಿದ್ದ ಏಕ ಸದಸ್ಯಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿರುವ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ಕೃಷ್ಣ ಎಸ್.ದೀಕ್ಷಿತ್ ಅವರಿದ್ದ …
Read More »ಚಿತ್ರ ನಿರ್ದೇಶಕ ರಾಕ್ಲೈನ್ ವೆಂಕಟೇಶ್ ಸಹೋದರನ ಮನೆಯಲ್ಲಿ ಕಳ್ಳತನ ಎಸಗಿದ್ದ ನೇಪಾಳ ಮೂಲದ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು : ವಿದೇಶ ಪ್ರವಾಸಕ್ಕೆ ತೆರಳಿದ್ದ ರಾಕ್ ಲೈನ್ ವೆಂಕಟೇಶ್ ಸಹೋದರನ ಮನೆಯಲ್ಲಿ ಕಳ್ಳತನ ಎಸಗಿದ್ದ 7 ಜನ ಆರೋಪಿಗಳನ್ನು ಮಹಾಲಕ್ಷ್ಮಿ ಲೇಔಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನೇಪಾಳ ಮೂಲದ ಉಪೇಂದ್ರ ಬಹದ್ದೂರ್ ಶಾಹಿ, ನಾರಾ ಬಹದ್ದೂರ್ ಶಾಹಿ, ಖಾಕೇಂದ್ರ ಬಹದ್ದೂರ್ ಶಾಹಿ, ಕೋಮಲ್ ಶಾಹಿ, ಸ್ವಸ್ತಿಕ್ ಶಾಹಿ, ಪಾರ್ವತಿ ಶಾಹಿ ಹಾಗೂ ಶಾದಲ ಶಾಹಿ ಎಂದು ಗುರುತಿಸಲಾಗಿದೆ. ಬಂಧಿತರ ಪೈಕಿ ಆರೋಪಿಯೊಬ್ಬ ಭ್ರಮರೇಶ್ ಮನೆಯ ಪಕ್ಕದಲ್ಲೇ ನಿರ್ಮಾಣ …
Read More »ನಟಿ ಲೀಲಾವತಿ ಕನಸಿನ ಪಶು ಆಸ್ಪತ್ರಯನ್ನು ಉದ್ಘಾಟಿಸಿದ ಡಿಸಿಎಂ ಡಿ.ಕೆ .ಶಿ.
ಬೆಂಗಳೂರು : ಸಮಾಜಮುಖಿ ಕೆಲಸಗಳ ಮೂಲಕ ಜನರ ಹೃದಯಕ್ಕೆ ಬಹಳ ಹತ್ತಿರವಾದ ಹಿರಿಯ ನಟಿ ಲೀಲಾವತಿ ಕನಸಿನ ಪಶು ಆಸ್ಪತ್ರಯನ್ನು ಡಿಸಿಎಂ ಡಿಕೆ ಶಿವಕುಮಾರ್ ಉದ್ಘಾಟಿಸಿದ್ದಾರೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ ಸುಸಜ್ಜಿತ ಪಶು ಆಸ್ಪತ್ರೆಯನ್ನು ಡಿಸಿಎಂ ಡಿಕೆ ಶಿವಕುಮಾರ್ ಇಂದು ಉದ್ಘಾಟಿಸಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಲೀಲಾವತಿ ಅವರ ಆಸೆ ಇದಾಗಿದ್ದು, ಸರ್ಕಾರ ಇದಕ್ಕೆ ಇತ್ತೀಚೆಗೆ ಗ್ರೀನ್ ಸಿಗ್ನಲ್ ನೀಡಿತ್ತು.ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ ಸುಸಜ್ಜಿತ ಪಶು ಆಸ್ಪತ್ರೆಯನ್ನು …
Read More »ಮಹಿಳೆಯನ್ನು ಬಲಿ ಪಡೆದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ.
ಮೈಸೂರು: ಮಹಿಳೆ ಹಾಗೂ ಜಾನುವಾರುಗಳನ್ನು ಬಲಿ ಪಡೆದಿದ್ದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಹೆಡಿಯಾಲ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿರುವ ನಂಜನಗೂಡು ತಾಲೂಕಿನ ಕಾಡಂಚಿನ ಪ್ರದೇಶವಾದ ಬಳ್ಳೂರು ಹುಂಡಿ ಗ್ರಾಮದ ಕಾಡಂಚಿನಲ್ಲಿ ಸೋಮವಾರ ಮಧ್ಯರಾತ್ರಿ ಹುಲಿ ಬೋನಿಗೆ ಬಿದ್ದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸೇರಿದಂತೆ 207 ಕಾರ್ಯಾಚರಣೆಯಲ್ಲಿ ತೊಡಗಿದ್ದರು. 50ಕ್ಕೂ ಹೆಚ್ಚು ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಡ್ರೋನ್ ಕ್ಯಾಮೆರಾದ ಮೂಲಕವೂ ಹುಲಿ ಚಲನವಲನಗಳ ಮೇಲೆ ನಿಗಾ ಇಡಲಾಗಿತ್ತು. ಅಂತೆಯೇ ಇಂದು …
Read More »ಬೆಳಗಾವಿ, ಚಿಕ್ಕೋಡಿ ಮೇಲೆ ಕಾಂಗ್ರೆಸ್ ಕಣ್ಣು: ಯಾರಿಗೆ ಒಲಿಯುತ್ತದೆ ಲೋಕಸಭೆ TIKET
ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳೆರಡರಲ್ಲೂ ಬಿಜೆಪಿ ತನ್ನ ಹಿಡಿತ ಸಾಧಿಸಲು ಸಮರ್ಥವಾಗಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಪುಟಿದೇಳಲು ಸಜ್ಜಾಗಿದೆ. ಬೆಳಗಾವಿ: ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳೆರಡರಲ್ಲೂ ಬಿಜೆಪಿ ತನ್ನ ಹಿಡಿತ ಸಾಧಿಸಲು ಸಮರ್ಥವಾಗಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಪುಟಿದೇಳಲು ಸಜ್ಜಾಗಿದೆ. ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ 18 ಸ್ಥಾನಗಳಲ್ಲಿ …
Read More »ಚಿಕ್ಕೋಡಿ ಲೋಕಸಭಾ ಟಿಕೆಟ್ ಕೇಳಿದ್ರಾ ರಮೇಶ್ ಕತ್ತಿ?
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ರಮೇಶ್ ವಿ ಕತ್ತಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ್ದು, ಭೇಟಿ ವೇಳೆ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಬೆಂಗಳೂರು: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ರಮೇಶ್ ವಿ ಕತ್ತಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ್ದು, …
Read More »ಟಿ20 ಸರಣಿ ಗೆಲುವಿನತ್ತ ಭಾರತದ ಚಿತ್ತ
ಗುವಾಹಟಿ(ಅಸ್ಸಾಂ): ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಕ್ರಿಕೆಟ್ ಸರಣಿಯ 3ನೇ ಪಂದ್ಯ ಇಲ್ಲಿನ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಸಂಜೆ 7 ಗಂಟೆಗೆ ನಡೆಯಲಿದೆ. ಎರಡು ಪಂದ್ಯಗಳು ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಳ್ಳುವ ಗುರಿ ಹೊಂದಿರುವ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಬಳಗ ಆಸ್ಟ್ರೇಲಿಯಾ ವಿರುದ್ಧದ ಹೊಸ ಹೋರಾಟಕ್ಕೆ ಸಜ್ಜಾಗಿದೆ. ಈ ಪಂದ್ಯದ ಗೆಲುವಿನೊಂದಿಗೆ ಭಾರತ ಸರಣಿ ವಶಪಡಿಸಿಕೊಳ್ಳುತ್ತಾ ಅಥವಾ ಆಸ್ಟ್ರೇಲಿಯಾ ಪುಟಿದೇಳುತ್ತಾ ಎಂಬುದು ಕುತೂಹಲಕಾರಿಯಾಗಿದೆ. ಮೊದಲ ಪಂದ್ಯವನ್ನು …
Read More »ಅಕ್ರಮ ಸಕ್ರಮ ಯೋಜನೆಯಡಿ ಜಮೀನು ಪಡೆಯಲು ಹೊಸ ಕಾರ್ಯಕ್ರಮ ರೂಪಿಸುತ್ತಿರುವ ರಾಜ್ಯ ಸರ್ಕಾರ
ಬೆಂಗಳೂರು: ಹಲವಾರು ವರ್ಷಗಳಿಂದ ಸರ್ಕಾರದ ಭೂಮಿಯಲ್ಲಿ ವ್ಯವಸಾಯ ಮಾಡುತ್ತಿರುವವರಿಗೆ ಅಕ್ರಮ ಸಕ್ರಮ ಯೋಜನೆಯಡಿ ಜಮೀನು ಪಡೆಯಲು ರಾಜ್ಯ ಸರ್ಕಾರ ಹೊಸ ಕಾರ್ಯಕ್ರಮ ರೂಪಿಸುತ್ತಿದೆ. ರಾಜ್ಯದ ಕಂದಾಯ ಇಲಾಖೆಯಿಂದ ಬಗರ್ ಹುಕುಂ ವ್ಯವಸ್ಥೆ ಜಾರಿಯಲ್ಲಿದ್ದು, ಕೃಷಿ ಭೂಮಿಯ ಸಕ್ರಮಕ್ಕೆ ಫಾರಂ 57 ರಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಈ ಅರ್ಜಿಯನ್ನು ಪರಿಶೀಲನೆ ಮಾಡಿ ಸಾಗುವಳಿ ಚೀಟಿ ವಿತರಣೆ ಮಾಡಲು ರಾಜ್ಯ ಸರ್ಕಾರ ಈ ವ್ಯವಸ್ಥೆ ಜಾರಿಗೊಳಿಸಿದೆ. ಹದಿನೈದು ವರ್ಷಗಳಿಂದ ಉಳುಮೆ ಮಾಡುತ್ತಿರುವವರಿಗೆ ಮಾತ್ರ ಸಕ್ರಮಕ್ಕೆ …
Read More »ಶಬರಿಮಲೆಗೆ ವೋಲ್ವೊ ಬಸ್ ಸೇವೆ ಆರಂಭ
ಬೆಂಗಳೂರು: ರಾಜ್ಯದಿಂದ ಶಬರಿಮಲೆಗೆ ತೆರಳಲು ಪ್ರಯಾಣಿಕರ ಅನುಕೂಲತೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬೆಂಗಳೂರಿನಿಂದ ನೇರ ಶಬರಿಮಲೆಗೆ ವೋಲ್ವೊ ಬಸ್ ಸೇವೆ ಆರಂಭ ಮಾಡಲಿದೆ. ಡಿಸೆಂಬರ್ 1 ರಿಂದ ಕೆಎಸ್‌ಆರ್‌ಟಿಸಿ ವೋಲ್ವೊ ಬಸ್ ಸಂಚಾರ ಪ್ರಾರಂಭವಾಗಲಿದೆ. ಪ್ರತಿ ನಿತ್ಯ ಬೆಂಗಳೂರು – ನೀಲಕ್ಕಲ್ (ಪಂಪಾ- ಶಬರಿಮಲೈ) ನಡುವೆ ಬಸ್ ಸಂಚಾರ ಇರಲಿದೆ. ವೋಲ್ವೊ ಬಸ್ ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದಿಂದ ಹೊರಡಲಿದೆ. ಪ್ರತಿದಿನ ಮಧ್ಯಾಹ್ನ 1.50 ಗಂಟೆಗೆ ಹೊರಡಲಿರುವ …
Read More »