ಬೆಂಗಳೂರು,ಸೆ.2- ಬಿಜೆಪಿ ಸರ್ಕಾರದ ಅವಧಿಯಲ್ಲಿನ ಎಲ್ಲಾ ಹಗರಣಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು. ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಸಾವಿನ ನಡುವೆಯೂ ಹಣ ಲೂಟಿ ಹೊಡೆದಿದ್ದಾರೆ. ಪಿಎಸ್‌ಐ, ಬಿಟ್ ಕಾಯಿನ್ ಹಗರಣ ಸೇರಿದಂತೆ ಎಲ್ಲವನ್ನೂ ತನಿಖೆಗೊಳಪಡಿಸಲಾಗಿದೆ. ವರದಿ ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಕೋವಿಡ್ ಸಂದರ್ಭದಲ್ಲಿನ ಹಗರಣಗಳಿಗೆ ಆಗಿನ ಸಚಿವರೇ …
Read More »ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್’ ವೇನಲ್ಲಿ ರಾಂಗ್ ರೂಟ್ ನಲ್ಲಿ `ಶಾಲಾ ಬಸ್’ ಚಲಾಯಿಸಿದ ಚಾಲಕ : `FIR’ ದಾಖಲು
ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್’ ವೇನಲ್ಲಿ ರಾಂಗ್ ರೂಟ್ ನಲ್ಲಿ `ಶಾಲಾ ಬಸ್’ ಚಲಾಯಿಸಿದ ಚಾಲಕನ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಜೀವಕ್ಕೆ ಅಪಾಯ ತಂದೊಡ್ಡಿದ್ದ ಶಾಲೆಯೊಂದರ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಚಾಲಕ ಬೆಂಗಳೂರು-ಮೈಸೂರು ಇ ರೈಲಿನ ರಾಂಗ್ ಸೈಡ್ ನಲ್ಲಿ ಬಸ್ ಚಾಲನೆ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಯಾಣಿಕರೊಬ್ಬರು ವೀಡಿಯೊವನ್ನು ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದರು ಮತ್ತು ಅಂತಿಮವಾಗಿ ಚಾಲಕನ …
Read More »ಮಹಿಳೆಯ ಹತ್ಯೆ ಪ್ರಕರಣ. 48 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು
ವಿಜಯನಗರ ( ಕಾನಾಹೊಸಹಳ್ಳಿ) : ನಿರ್ಜನ ಪ್ರದೇಶದಲ್ಲಿ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ ಪ್ರಕರಣವನ್ನು 48 ಗಂಟೆಯಲ್ಲಿ ಪೊಲೀಸರು ಭೇದಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ. ಕಾನಾಹೊಸಹಳ್ಳಿ ಸಮೀಪದ ತಿಪ್ಪೆಹಳ್ಳಿ ಗ್ರಾಮದಲ್ಲಿ ಕಳೆದ ಶನಿವಾರ ಚಿತ್ರದುರ್ಗ ವಿಜಯನಗರ ಗಡಿ ತಿಪ್ಪೆಹಳ್ಳಿಯ ಸಮೀಪ ಅಬ್ಬೇನಹಳ್ಳಿ ಯ ನೇತ್ರಾವತಿ ಎನ್ನುವ ಮಹಿಳೆಯನ್ನು ಅತ್ಯಾಚಾವೆಸಗಿ ಹತ್ಯೆ ಮಾಡಲಾಗಿತ್ತು ಈ ಘಟನೆಯಿಂದ ಗಡಿಗ್ರಾಮಗಧ ಜನರು ಬೆಚ್ಚಿಬಿದ್ದಿದ್ದರು ಘಟನಾ ಸ್ಥಳಕ್ಕೆ ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ …
Read More »ಮಾನವೀಯ ಮೌಲ್ಯಗಳೊಂದಿಗೆ ಪ್ರಾಮಾಣಿಕ ಬದುಕು ಕಟ್ಟಿಕೊಳ್ಳಿ; ಜ| ಸಂತೋಷ್ ಹೆಗ್ಡೆ
ಶಿರ್ವ: ದುರಾಸೆ ದೇಶದಲ್ಲಿ ರೋಗವಾಗಿ ಬೆಳೆಯುತ್ತಿದ್ದು, ಯುವಜನತೆ ಹೆತ್ತವರ ಸಹಕಾರದೊಂದಿಗೆ ಇದ್ದುದರಲ್ಲಿಯೇ ಸಂತಸ ಪಡುವ ಗುಣಗಳನ್ನು ಬೆಳೆಸಿಕೊಂಡಲ್ಲಿ ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಸಾಧ್ಯ.ಮಾನವೀಯತೆ ಇದ್ದರೆ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸುತ್ತದೆ. ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪ್ರಾಮಾಣಿಕ ಬದುಕು ಕಟ್ಟಿಕೊಳ್ಳುವುದ ರೊಂದಿಗೆ ಸಮಾಜದ ಭಾವನೆಗಳನ್ನು ಬದಲಾಯಿಸಬಹುದು ಎಂದು ಸರ್ವೋತ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಜ| ಎನ್.ಸಂತೋಷ್ ಹೆಗ್ಡೆ ಹೇಳಿದರು. ಅವರು ಸೆ.1 ರಂದು ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ …
Read More »ಕೋವಿಡ್ ಹಗರಣದ ತನಿಖೆಯಾಗಲಿ, ನಮಗೆ ಯಾವುದೇ ತೊಂದರೆಯಿಲ್ಲ: ಜೋಶಿ
ಹುಬ್ಬಳ್ಳಿ: ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆ ಮಾಡಲಿ ನಮಗೆ ಯಾವುದೇ ತೊಂದರೆಯಿಲ್ಲ. ಯಾರಾದರು ಭ್ರಷ್ಟಾಚಾರ ಮಾಡಿದ್ದರೆ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾದರೂ ಕೋವಿಡ್ ಕಾಲದ ಹಗರಣದ ಬಗ್ಗೆ ಇವರಿಗೆ ನೆನಪಾಗಲಿಲ್ಲವಾ? ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ತಪ್ಪು ಮಾಡಿದ್ದರೂ ಕಾನೂನಿನ ಪ್ರಕಾರ ಶಿಕ್ಷೆಯಾಗಲಿ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರ …
Read More »ಧರ್ಮ ಗೌರವಿಸುವ ಜನರೊಂದಿಗೆ ವ್ಯಾಪಾರ ಮಾಡಿ: ಯತ್ನಾಳ್
ವಿಜಯಪುರ: ಹಬ್ಬ-ಹರಿದಿನಗಳು ಸೇರಿ ಇತರ ದಿನಗಳಲ್ಲೂ ಸನಾತನ ಹಿಂದೂ ಧರ್ಮ, ಸಂಸ್ಕೃತಿ, ಆಚರಣೆ, ಸಂಪ್ರದಾಯವನ್ನು ಗೌರವಿಸುವ, ಪ್ರೀತಿಸುವ ಹಾಗೂ ಉಳಿಸಿ ಬೆಳೆಸುವ ಜನರೊಂದಿಗೆ ವ್ಯಾಪಾರ, ವ್ಯವಹಾರ ಮಾಡಬೇಕೆಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಮ್ಮ ಹಿಂದೂ ಧರ್ಮ ನಮ್ಮ ದೇಶದ ಒಂದು ಜೀವನದ ಪದ್ದತಿ, ಸಂಸ್ಕೃತಿಯಾಗಿದೆ. ದೇಶದ ಸುರಕ್ಷತೆ, ಅಭಿವೃದ್ಧಿ ಜತೆಗೆ ಧರ್ಮದ ಉಳಿವಿಗಾಗಿ, ನಮ್ಮ ಧರ್ಮವನ್ನು ಗೌರವಿಸುವ, ದೇಶಾಭಿಮಾನ ಹೊಂದಿರುವ ಪ್ರತಿಯೊಬ್ಬ ಬೀದಿ ಬದಿ ವ್ಯಾಪಾರಸ್ಥರಿಂದ ಹಿಡಿದು, ದೊಡ್ಡ …
Read More »ʼಸಿಎಂ ಕುರ್ಚಿʼಗೆ ಕರ್ಚೀಫ್ ಹಾಕಿದ ಮತ್ತೊಬ್ಬ ನಾಯಕ; ಯಾರು?
ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಮಾತುಗಳು ಜೋರಾಗಿ ಕೇಳಿಬರುತ್ತಿರುವುದರ ನಡುವೆಯೇ ಈ ರೇಸ್‌ಗೆ ಮತ್ತೊಬ್ಬ ಕಾಂಗ್ರೆಸ್ ನಾಯಕ ಇಳಿದಿದ್ದಾರೆ. ಸಿದ್ದರಾಮಯ್ಯ ಅವರ ನಂತರ ಡಿ.ಕೆ.ಶಿವಕುಮಾರ್ ಅವರೇ ಸಿಎಂ ಕುರ್ಚಿಯ ಪ್ರಬಲ ಆಕಾಂಕ್ಷಿ ಎನ್ನುವ ಗುಸುಗುಸು ಇದೆ. ಇದಲ್ಲದೆ ಈಗಾಗಲೇ ಹಲವು ಕಾಂಗ್ರೆಸ್ ನಾಯಕರು ಸಿಎಂ ಆಗುವ ಬಗ್ಗೆ ಕನಸು ಕಾಣುತ್ತಿದ್ದಾರೆ. ಈಗ ಈ ಸಿಎಂ ರೇಸ್‌ಗೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಕೂಡ ಇಳಿದಿದ್ದಾರೆ. ತಾವು ಕೂಡ ಸಿಎಂ ಆಗಬೇಕು ಎನ್ನುವ …
Read More »ಗದಗ- ಬೆಟಗೇರಿ ನಗರಸಭೆ | ಗದ್ದುಗೆ ಗುದ್ದಾಟ: ಎರಡೂ ಪಕ್ಷದಿಂದ ‘ಚತುರ ನಡೆ’
ಗದಗ: ಇಲ್ಲಿನ ಗದಗ- ಬೆಟಗೇರಿ ನಗರಸಭೆಯಲ್ಲಿ ಅಧಿಕಾರದಲ್ಲಿದ್ದ ಬಿಜೆಪಿಯ ಮೊದಲನೇ ಅವಧಿ ಮುಗಿದು, ಎರಡನೇ ಅವಧಿಗೆ ಮೀಸಲಾತಿ ಪ್ರಕಟಗೊಂಡ ನಂತರದಿಂದ ಇಲ್ಲೀವರೆಗೆ ಹಲವು ರಾಜಕೀಯ ಮೇಲಾಟಗಳು, ಆರೋಪ- ಪ್ರತ್ಯಾರೋಪಗಳು, ಕಾನೂನು ಹೋರಾಟಗಳು ನಡೆದಿದ್ದು, ನಗರಸಭೆ ಗದ್ದುಗೆ ಏರಲು ಎರಡೂ ಪಕ್ಷಗಳು ನಡೆಸಿರುವ ಚತುರ ನಡೆಗಳು ಚುನಾವಣಾ ಕಣವನ್ನು ರಂಗೇರಿಸಿವೆ. ಇದರ ಮಧ್ಯೆ, ಮೀಸಲಾತಿ ಪ್ರಕಟಗೊಂಡು 23 ದಿನಗಳ ಬಳಿಕ ಕಾಂಗ್ರೆಸ್‌ನ ಇಬ್ಬರು ಸದಸ್ಯರು ಮೀಸಲಾತಿಗೆ ಆಕ್ಷೇಪ ವ್ಯಕ್ತಪಡಿಸಿ ಧಾರವಾಡದ ಹೈಕೋರ್ಟ್ …
Read More »ಜಮಾತ್-ಇ-ಇಸ್ಲಾಮಿ ಹಿಂದ್‌ನಿಂದ ನೈತಿಕತೆಯೇ ಸ್ವಾತಂತ್ರ್ಯ ಅಭಿಯಾನ ಸೆ.1ರಿಂದ
ಬೆಳಗಾವಿ: ‘ಜಮಾತ್-ಇ-ಇಸ್ಲಾಮಿ ಹಿಂದ್’ ವತಿಯಿಂದ ನೈತಿಕತೆಯೇ ಸ್ವಾತಂತ್ರ್ಯ ಅಭಿಯಾನ ಸೆ.1ರಿಂದ 30ರವರೆಗೆ ನಡೆಯಲಿದೆ’ ಎಂದು ಸಂಘಟನೆಯ ರಾಜ್ಯ ಮಹಿಳಾ ಘಟಕದ ಸಲಹಾ ಪರಿಷತ್ತಿನ ಸದಸ್ಯೆ ಸಾಜೀದುನ್ ನಿಸ್ಸಾ ಲಾಲ್ಮಿಯ ಹೇಳಿದರು. ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಹಿಳೆಯರ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ, ಕೊಲೆ ಪ್ರಕರಣಗಳು ದೇಶದ ಶಾಂತಿ ಮತ್ತು ಪ್ರಗತಿಗೆ ಧಕ್ಕೆ ತರುತ್ತಿವೆ. ಮಹಿಳೆಯರ ಆತ್ಮಹತ್ಯೆಗಳ ಪ್ರಮಾಣವೂ ಏರಿಕೆಯಾಗಿದೆ. ಸಮಾಜದಲ್ಲಿ ಸ್ತ್ರೀಯರಿಗೆ ಅಸುರಕ್ಷಿತ ವಾತಾವರಣ ನಿರ್ಮಾಣವಾಗಿದೆ. ನೈತಿಕ ಮೌಲ್ಯಗಳ …
Read More »ಗೋಕಾಕ: ‘ಈದ್ ಮಿಲಾದ ಮತ್ತು ಗಣೇಶ್ ಹಬ್ಬವನ್ನು ಎಲ್ಲರೂ ಒಂದಾಗಿ ಭಾವೈಕ್ಯ ಮತ್ತು ಶಾಂತಿಯುತವಾಗಿ ಆಚರಿಸೋಣ’ ಎಂದ ತಹಶೀಲ್ದಾರ್ ಮೋಹನ ಭಸ್ಮೆ
ಗೋಕಾಕ: ‘ಈದ್ ಮಿಲಾದ ಮತ್ತು ಗಣೇಶ್ ಹಬ್ಬವನ್ನು ಎಲ್ಲರೂ ಒಂದಾಗಿ ಭಾವೈಕ್ಯ ಮತ್ತು ಶಾಂತಿಯುತವಾಗಿ ಆಚರಿಸೋಣ’ ಎಂದು ತಹಶೀಲ್ದಾರ್ ಮೋಹನ ಭಸ್ಮೆ ಕರೆ ನೀಡಿದರು. ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆ ಹಾಗೂ ನಗರಸಭೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಶಾಂತಿ ಪಾಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ‘ಗಣೇಶ ಚತುರ್ಥಿಯಲ್ಲಿ ಹಸಿರು ಪಟಾಕಿಗಳನ್ನು ಬಳಸಬೇಕು. ಸಾರ್ವಜನಿಕರ ಭಾವನೆಗೆ ಧಕ್ಕೆಯಾಗದಂತೆ ಹಬ್ಬಗಳನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಹಬ್ಬದ …
Read More »