ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ ನರ್ಸರಿ ಶಾಲಾ ಕಟ್ಟಡವೊಂದು ಕುಸಿದುಬಿದ್ದಿರುವ ಘಟನೆ ಇಂದು ಮುಂಜಾನೆ ಶಿವಾಜಿನಗರದಲ್ಲಿ ನಡೆದಿದೆ. ಶಿವಾಜಿನಗರದ ಕುಕ್ಸ್ ರಸ್ತೆಯ ಬಿ ಕ್ರಾಸ್ನಲ್ಲಿರುವ ನರ್ಸರಿ ಶಾಲೆಯ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷದಡಿ ಕೆಲ ವಾಹನಗಳು ಸಿಲುಕಿ ಜಖಂಗೊಂಡಿವೆ. ಯಾರೂ ಇರದಿದ್ದಾಗ ಬೆಳಗಿನ ಜಾವ ಘಟನೆ ಸಂಭವಿಸಿದ ಪರಿಣಾಮ ಅದೃಷ್ಟವಶಾತ್ ಭಾರಿ ಅವಘಡವೊಂದು ತಪ್ಪಿದಂತಾಗಿದೆ. ಬಿಬಿಎಂಪಿ ಅಧೀನದ ನರ್ಸರಿ ಸ್ಕೂಲ್ ಕಟ್ಟಡ ಕುಸಿತಬಿಬಿಎಂಪಿಗೆ ಸೇರಿದ ಇಂಗ್ಲಿಷ್ ನರ್ಸರಿ ಸ್ಕೂಲ್ ಕಟ್ಟಡ …
Read More »ರಾಷ್ಟ್ರ ಮಟ್ಟದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ವಿತರಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ
ಗೋಕಾಕ : ರಾಷ್ಟ್ರ ಮಟ್ಟದ ಕ್ರೀಡಾಪಟುಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಪ್ರೋತ್ಸಾಹ ಧನ ವಿತರಣೆ ಮಾಡಿದರು. ಪ್ಯಾರಾ ಟೇಬಲ್ ಟೆನಿಸ್ ಚಾಂಪಿಯನ್ಸ್ ಶಿಪ್ ಯಲ್ಲಿ ಕರ್ನಾಟಕ ರಾಜ್ಯದಿಂದ ಪ್ರತಿನಿಧಿಸಿದ ಕ್ರೀಡಾಪಟು ಸವಿತಾ ಅಜ್ಜನಕಟ್ಟಿ ಸಾಧನೆ ಮಾಡಿದ್ದಾರೆ. ರಾಜ್ಯ ಮಟ್ಟದ ಶಾಲಾ ಮಕ್ಕಳ ಆಟೋಟ ಸ್ಪರ್ಧೆಗಳಲ್ಲಿ ಮುದೋಳ ತಾಲೂಕಿನ ನಾಗಿನ ಮೇತ್ರಿ ಎಂಬ ಕ್ರೀಡಾಪಟು ಕರಾಟೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಇಬ್ಬರು ಕ್ರೀಡಾಪಟುಗಳು ರಾಷ್ಟ್ರ ಮಟ್ಟದ ಕ್ರೀಡೆಗೆ …
Read More »ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. 140 ಕೋಟಿ ಭಾರತೀಯರಿಗೆ ಉತ್ತಮ ಆರೋಗ್ಯ, ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿರುವುದಾಗಿ ಮೋದಿ ಸಾಮಾಜಿಕ ಜಾಲತಾಣ ವೇದಿಕೆ ಎಕ್ಸ್ನಲ್ಲಿ ಫೋಟೋಸಮೇತ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ಕಳೆದ ರಾತ್ರಿ ತಿರುಮಲದಲ್ಲಿ ತಂಗಿದ್ದರು. ಇಂದು ದೇವರ ದರ್ಶನ ಪಡೆದ ಅವರು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡರು. ಇದಕ್ಕೂ ಮುನ್ನ, ಭಾನುವಾರ …
Read More »ರಾತ್ರೋರಾತ್ರಿ ಬಿಜೆಪಿ ನಗರ ಸೇವಕ ಅರೆಸ್ಟ್: ಕಾರ್ಯಕರ್ತರ ಆಕ್ರೋಶ
ಬೆಳಗಾವಿ: ನವೆಂಬರ್ 23ರಂದು ಬೆಳಗಾವಿಯ ಭಾಗ್ಯನಗರದಲ್ಲಿ ಮೊಬೈಲ್ ಟವರ್ ನಿರ್ಮಿಸಲು ಅನುಮತಿ ಸಂಬಂಧ ಬಿಜೆಪಿ ನಗರ ಸೇವಕ ಹಾಗೂ ಸ್ಥಳೀಯರ ನಡುವಿನ ಗಲಾಟೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ನಿನ್ನೆ ತಡರಾತ್ರಿ ನಗರ ಸೇವಕ ಅಭಿಜಿತ್ ಜವಳಕರ್ರನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿಜಿತ್ ಜವಳಕರ್ ಅವರನ್ನು ಬಂಧಿಸಿರುವ ಟಿಳಕವಾಡಿ ಠಾಣೆ ಪೊಲೀಸರು ಹಿಂಡಲಗಾ ಜೈಲಿಗೆ ರವಾನಿಸಿದ್ದಾರೆ. ನಿನ್ನೆಯಷ್ಟೇ ಪಾಲಿಕೆ ಸದಸ್ಯ ಅಭಿಜಿತ್ ಬಂಧಿಸುವಂತೆ ಎಂಇಎಸ್ ಕಾರ್ಯಕರ್ತರು ಟಿಳಕವಾಡಿ …
Read More »ಬಂಗಾರದ ಬೆಲೆ ಹೆಚ್ಚಳ; 10 ಗ್ರಾಂ ದರ ಹೀಗಿದೆ
ಬೆಂಗಳೂರು: ಚಿನ್ನದ ಬೆಲೆ (Gold Rate Today) ಸೋಮವಾರ ಬೆಂಗಳೂರಿನಲ್ಲಿ ಸ್ವಲ್ಪ ಮಟ್ಟಿಗೆ ಏರಿದೆ. 22 ಕ್ಯಾರಟ್ ಮತ್ತು 24 ಕ್ಯಾರಟ್ ಚಿನ್ನದ ಬೆಲೆಗಳು ಕ್ರಮವಾಗಿ ₹25 ಹಾಗೂ ₹27 ಹೆಚ್ಚಿದೆ. ಬೆಂಗಳೂರಿನಲ್ಲಿ ನೀವಿಂದು ಒಂದು ಗ್ರಾಂ 22 ಕ್ಯಾರಟ್ ಚಿನ್ನವನ್ನು ₹5,735ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹45,880 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್ ಚಿನ್ನವನ್ನು ₹57,350 ಮತ್ತು ₹ 5,73,500 ದರದಲ್ಲಿ …
Read More »ಮುಂದಿನ ಐಪಿಎಲ್‌ನಲ್ಲಿ ಆಡಲಿದ್ದಾರೆ ಧೋನಿ; ವಿಸಿಲ್ ಪೋಡೆಂದ ಸಿಎಸ್‌ಕೆ ಫ್ಯಾನ್ಸ್
ಚೆನ್ನೈ(ತಮಿಳುನಾಡು): ಮಹೇಂದ್ರ ಸಿಂಗ್ ಧೋನಿ ಅಭಿಮಾನಿಗಳಿಗೆ ಖುಷಿ ಸಂಗತಿ ಹೊರಬಿದ್ದಿದೆ. ಧೋನಿ 2024ರ ಐಪಿಎಲ್‌ನಲ್ಲಿ ಆಡಲಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಖಚಿತಪಡಿಸಿದೆ. ಮುಂದಿನ ಸೀಸನ್‌ಗಾಗಿ ಶೀಘ್ರದಲ್ಲೇ ಹರಾಜು ಪ್ರಕ್ರಿಯೆ ನಡೆಯಲಿದೆ. ನವೆಂಬರ್ 26ರೊಳಗೆ ತಂಡ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ಬಿಸಿಸಿಐ ಎಲ್ಲಾ ತಂಡಗಳಿಗೆ ಈ ಹಿಂದೆ ಸೂಚಿಸಿತ್ತು. ಅದರಂತೆ, ಚೆನ್ನೈ ತಾನು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ರಿಲೀಸ್ ಮಾಡಿದ್ದು, ನಿರೀಕ್ಷೆಯಂತೆ ಧೋನಿ ಹೆಸರೂ ಇದೆ. ಇದರೊಂದಿಗೆ ಮುಂದಿನ …
Read More »ರಾಯಚೂರು: ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಪತ್ನಿಯನ್ನೇ ಕೊಂದ ಪತಿ
ರಾಯಚೂರು: ಮದ್ಯ ಸೇವಿಸಲು ಹಣ ನೀಡದ ಪತ್ನಿಯನ್ನು ಭೀಕರವಾಗಿ ಪತಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಚಿಕ್ಕ ಉಪ್ಪೇರಿ ಗ್ರಾಮದಲ್ಲಿ ನಡೆದಿದೆ. ಸುನಿತಾ (28) ಪತಿಯ ಕೈಯಿಂದ ಹತ್ಯೆಯಾದ ಗೃಹಿಣಿಯಾಗಿದ್ದು, ಬಸವರಾಜ ಕಂಬಳಿ ಕೊಲೆ ಮಾಡಿರುವ ಪತಿ. ಬಸವರಾಜ ಹಾಗೂ ಸುನಿತಾ ಮನಸಾರೆ ಪರಸ್ಪರ ಪ್ರೀತಿಸಿ 2014ರಲ್ಲಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ರಿಜಿಸ್ಟರ್ ವಿವಾಹವಾಗಿದ್ದರು. ಭಾನುವಾರದಂದು ಸಂಜೆ ಸುನಿತಾ ತಮ್ಮ ಹೊಲದಲ್ಲಿ ನೀರು ಕಟ್ಟುತ್ತಿದ್ದರು. ಆಗ ಪತಿ ಬಸವರಾಜ …
Read More »ಅಪಾಯಕಾರಿ ಟ್ರಾನ್ಸ್‌ಫಾರ್ಮರ್ ವೈರ್ಗಳನ್ನು ಸರಿಪಡಿಸುವಂತೆ ಹೆಸ್ಕಾಂಗೆ ಒತ್ತಾಯ
ಬೆಳಗಾವಿ: ಬೆಳಗಾವಿಯ ಎಚ್.ಡಿ.ಕುಮಾರಸ್ವಾಮಿ ಲೇಔಟ್ನಲ್ಲಿ ವಿದ್ಯುತ್ ಟ್ರಾನ್ಸ್ಫಾರ್ಮರ್ಗಳ ವೈರ್ಗಳು ನೇತಾಡುತ್ತಿವೆ. ಈ ಪ್ರದೇಶದಲ್ಲಿ ಜನರು ಜೀವಭಯದಲ್ಲಿ ಸಂಚರಿಸುತ್ತಿದ್ದಾರೆ. ಅರೆಕ್ಷಣ ಯಾಮಾರಿದ್ರೂ ಜೀವಕ್ಕೆ ಕುತ್ತು ಬರುವ ಸಾಧ್ಯತೆ ಹೆಚ್ಚು ಅನ್ನೋದು ಜನರ ಆತಂಕ. ಇಲ್ಲಿ 15 ವಿದ್ಯುತ್ ಟ್ರಾನ್ಸ್ಫಾರ್ಮರ್ಗಳನ್ನು ಅಳವಡಿಸಲಾಗಿದ್ದು, ಅವುಗಳು ನೆಲದಿಂದ ಕೇವಲ ಎರಡು ಅಡಿಯಷ್ಟು ಮಾತ್ರ ಎತ್ತರದಲ್ಲಿವೆ. ಟಿಸಿ ಬಾಕ್ಸ್ನ ಬಾಗಿಲುಗಳು ತೆರೆದುಕೊಂಡಿದ್ದು, ವೈರ್ಗಳು ನೇತಾಡುತ್ತಿವೆ. ಟಿಸಿ ಪಕ್ಕದ ಕಟ್ಟಡದಲ್ಲೇ ಅಂಗಡಿ, ಆಸ್ಪತ್ರೆಯೂ ಇದ್ದು, ನೂರಾರು ಜನ ನಿತ್ಯ ಈ …
Read More »ಸಿದ್ದರಾಮಯ್ಯನವರ ಜನತಾ ದರ್ಶನ ಜನಸ್ಪಂದನಕ್ಕೆ ಹರಿದು ಬಂದ ಜನ
ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆಯುತ್ತಿರುವ ಸಿಎಂ ಜನಸ್ಪಂದನ ಕಾರ್ಯಕ್ರಮಕ್ಕೆ ಜನಸಮೂಹವೇ ಹರಿದುಬಂದಿದೆ. ಅಹವಾಲು ಸಲ್ಲಿಸಲು ಬೆಳಿಗ್ಗೆಯಿಂದಲೇ ಜನರು ಸರದಿ ಸಾಲಿನಲ್ಲಿ ನಿಂತಿದ್ದು, ಸಿಎಂ ಸಿದ್ದರಾಮಯ್ಯ ಜನರ ಸಮಸ್ಯೆ ಆಲಿಸುತ್ತಿದ್ದಾರೆ. ಹಲವು ವರ್ಷಗಳಿಂದ ಬಾಕಿ ಉಳಿದುಕೊಂಡು ಸರ್ಕಾರಿ ಕದ ತಟ್ಟುತ್ತಿರುವ ಸಾರ್ವಜನಿಕರು ನೇರವಾಗಿ ಸಿಎಂ ಬಳಿ ಪರಿಹಾರಕ್ಕೆ ಮೊರೆ ಇಡುತ್ತಿದ್ದಾರೆ. ಸಿಎಂ ಸಹನೆಯಿಂದ ಜನರ ಸಮಸ್ಯೆ ಆಲಿಸುತ್ತಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡುತ್ತಿದ್ದಾರೆ. ವಿಶೇಷಚೇತನರು, ಹಿರಿಯ ನಾಗರಿಕರು, ಮಹಿಳೆಯರು …
Read More »ಅಡಿಕೆ ದೋಚುತ್ತಿದ್ದ ವೇಳೆ ಆರೋಪಿಯನ್ನು ಹಿಡಿದ ಸ್ಥಳೀಯರು
ಕಡಬ (ದಕ್ಷಿಣ ಕನ್ನಡ) : ಅಡಿಕೆಯನ್ನು ಕದ್ದು ವಾಹನಕ್ಕೆ ತುಂಬಿಸುತ್ತಿರುವುದನ್ನು ಕಂಡು ಅದನ್ನು ತಡೆದ ವೇಳೆ ಅಪರಿಚಿತ ವ್ಯಕ್ತಿಗಳು ವ್ಯಕ್ತಿಯೋರ್ವರಿಗೆ ತಲವಾರಿನಿಂದ ಹಲ್ಲೆ ನಡೆಸಿ, ಕದ್ದ ಅಡಿಕೆಯೊಂದಿಗೆ ಪರಾರಿಯಾಗಿದ್ದಾರೆ. ಈ ವೇಳೆ ಓರ್ವ ಕಳ್ಳನನ್ನು ಅಡಿಕೆ ಚೀಲಗಳ ಮಾಲೀಕ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರು ಗ್ರಾಮದ ಪಣೆಮಜಲು ಎಡಪತ್ಯ ಫಾರ್ಮ್ಸ್ ಎಂಬಲ್ಲಿ ನಡೆದಿದೆ. ಈ ಬಗ್ಗೆ ಕಡಬ ತಾಲೂಕಿನ ಸವಣೂರು ಗ್ರಾಮದ ಕಡಬ ನಿವಾಸಿ …
Read More »