Breaking News

ರಾಷ್ಟ್ರೀಯ

ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ,ಮಂಗಗಳ ಉಪಟಳ ಹೆಚ್ಚಾಗಿದ್ದು, ರೋಗಿಗಳು ತಳಮಳಗೊಂಡಿದ್ದಾರೆ.

ಚಿತ್ರದುರ್ಗ: ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ, ಔಷಧಗಳು ಸಮರ್ಪಕವಾಗಿ ನೀಡುತ್ತಿಲ್ಲ, ಚಿಕಿತ್ಸೆ ಸರಿ ಇಲ್ಲವೆಂಬ ದೂರುಗಳು ಕೇಳಿಬರುವುದು ಸಾಮಾನ್ಯ. ಆದರೆ, ನಗರದ ಜಿಲ್ಲಾಸ್ಪತ್ರೆಯೊಳಗೆ ಕೆಲ ದಿನಗಳಿಂದ ಮಂಗಗಳ ಉಪಟಳ ಹೆಚ್ಚಾಗಿದ್ದು, ರೋಗಿಗಳು ತಳಮಳಗೊಂಡಿದ್ದಾರೆ.   ಐತಿಹಾಸಿಕ ಕಲ್ಲಿನ ಕೋಟೆ, ನಲ್ಲಿಕಾಯಿ ಸಿದ್ದಪ್ಪನ ಬೆಟ್ಟ, ಚಂದ್ರವಳ್ಳಿ, ಆಡುಮಲ್ಲೇಶ್ವರ ಕಿರು ಮೃಗಾಲಯ ಆವರಣ ಸಾಮಾನ್ಯವಾಗಿ ಕೋತಿಗಳಿಗೆ ಆಶ್ರಯ ತಾಣಗಳಾಗಿವೆ. ಆಹಾರ, ನೀರು ಸಿಗದ ಸಂದರ್ಭ ಎದುರಾದಾಗ ನಗರ ಪ್ರವೇಶಿಸುತ್ತಿವೆ. ಈ …

Read More »

ಶಾಲಾ ಮಕ್ಕಳ ಪೋಷಕರು ಆತಂಕಪಡಬೇಕಾದ ಅಗತ್ಯವಿಲ್ಲ, ದುಷ್ಟಶಕ್ತಿಗಳನ್ನು ಆದಷ್ಟು ಬೇಗ ಪತ್ತೆಹಚ್ಚುತ್ತೇವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ವಿದ್ವಂಸಕ ಕೃತ್ಯ ನಡೆಸುವುದಾಗಿ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಬಾಂಬ್ ಪತ್ತೆ ದಳ ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಈಗಾಗಲೇ ಶಾಲೆಗಳಲ್ಲಿ ಪರಿಶೀಲನೆ ನಡೆಸುತ್ತಿವೆ. ಸಾರ್ವಜನಿಕರು ಮತ್ತು ಶಾಲಾ ಮಕ್ಕಳ ಪೋಷಕರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.   ಈ ಪ್ರಕರಣವನ್ನು ನಮ್ಮ‌ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿ ಶಾಲೆಗಳು ಮತ್ತು ದೇವಾಲಯಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಸೂಚನೆ ನೀಡಿದ್ದೇನೆ. ನಾಡಿನ …

Read More »

ದ್ವಿತೀಯ ಪಿಯುಸಿ, ಎಸ್​​​ಎಸ್​​ಎಲ್​​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2023-24ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್​ಎಸ್​ಎಲ್​ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಜಾಲತಾಣದಲ್ಲಿ ಇಂದು ಪ್ರಕಟಿಸಲಾಗಿದೆ. 2024 ಮಾರ್ಚ್​ 02ರಿಂದ ಮಾರ್ಚ್​ 22ರವರೆಗೆ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಇನ್ನು ಮಾರ್ಚ್​ 25 ರಿಂದ ಏಪ್ರಿಲ್​​ 06 ರವರೆಗೆ ಎಸ್‌ಎಸ್‌ಎಲ್ ಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಮಂಡಲಿ ಮೂರು ತಿಂಗಳ ಮುಂಚಿತವಾಗಿಯೇ ತಾತ್ಕಲಿಕ ವೇಳಾಪಟ್ಟಿ ಪ್ರಕಟ ಮಾಡಿದೆ. ಮಂಡಲಿಯಿಂದ …

Read More »

ಸಿಎಂ ಸಿದ್ದರಾಮಯ್ಯ ಅವರು ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ಬೆಂಗಳೂರು : ಇತ್ತೀಚೆಗೆ ಮಂಡ್ಯದಲ್ಲಿ ಬೆಳಕಿಗೆ ಬಂದ ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆಗೆ ಸಿಎಂ ಆದೇಶ ಮಾಡಿದ್ದು, ಈ ಕುರಿತಂತೆ ಗೃಹ ಸಚಿವರಿಗೆ ನಿರ್ದೇಶನ ನೀಡಿದ್ದಾರೆ.   ಇತ್ತೀಚೆಗೆ ಹೆಣ್ಣು ಭ್ರೂಣ ಪತ್ತೆ ಹಾಗೂ ಗರ್ಭಪಾತ ಪ್ರಕರಣ ಭೇದಿಸಿದ್ದ ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಮೈಸೂರಿನ ಖಾಸಗಿ ಆಸ್ಪತ್ರೆ ವೈದ್ಯ ದಂಪತಿ ಹಾಗೂ ಇತರ ಮೂವರು ಸೇರಿದಂತೆ ಐವರನ್ನು ಬಂಧಿಸಿದ್ದರು. ಇದಕ್ಕೂ ಮುನ್ನ ಕಳೆದ ಅಕ್ಟೋಬರ್‌ನಲ್ಲಿ ಶಿವನಂಜೇಗೌಡ, ವೀರೇಶ್, …

Read More »

ವುಮೆನ್​ ಸೇಫ್ಟಿ’ ಆಯಪ್; ಅಪಾಯದ ವೇಳೆ​ ಒಂದು ಬಟನ್​ ಒತ್ತಿದ್ರೆ, ಲೊಕೇಶನ್ ಸಹಿತ ಬರುತ್ತೆ ಸಂದೇಶ

ವುಮೆನ್​ ಸೇಫ್ಟಿ’ ಆಯಪ್; ಅಪಾಯದ ವೇಳೆ​ ಒಂದು ಬಟನ್​ ಒತ್ತಿದ್ರೆ, ಲೊಕೇಶನ್ ಸಹಿತ ಬರುತ್ತೆ ಸಂದೇಶ ಬೆಂಗಳೂರು: ನೀವೇನಾದರೂ ಅಪರಿಚಿತ ಸ್ಥಳಕ್ಕೆ ಹೋದಾಗ ಅಪಾಯವಿದೆ ಎಂದು ನಿಮಗೆ ಅನ್ನಿಸಿದೆಯಾ? ಪ್ರಯಾಣದ ವೇಳೆ ಸಹ ಪ್ರಯಾಣಿಕರು ಕಿರುಕುಳ ಕೊಡುತ್ತಿದ್ದಾರೆ ಅನ್ನೋದು ಮನವರಿಕೆಯಾದರೆ ಕೂಡಲೇ ಪ್ಯಾನಿಕ್ ಬಟನ್ ಒತ್ತಿದರೆ ಸಾಕು ನೀವು ಕಳುಹಿಸಬೇಕಾದ ವ್ಯಕ್ತಿಗಳಿಗೆ ಅಲರ್ಟ್ ಸಂದೇಶ ರವಾನೆಯಾಗುವಂತಹ ನೂತನ ಅಪ್ಲಿಕೇಶನ್​ವೊಂದನ್ನು ಕಾಲೇಜು ವಿದ್ಯಾರ್ಥಿನಿಯೊಬ್ಬರು ಅಭಿವೃದ್ಧಿ ಪಡಿಸಿದ್ದಾರೆ. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಟೆಕ್​ ಸಮ್ಮಿಟ್​ನಲ್ಲಿ …

Read More »

ಚಳಿಗಾಲ ಅಧಿವೇಶನ ಮುಗಿಯುವವರೆಗೂ ಎಂಇಎಸ್​ ಮುಖಂಡರನ್ನು ಗಡಿಪಾರು ಮಾಡಬೇಕು:ಕರವೇ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಮಹಾಮೇಳಾವ್​ ನಡೆಸಲು ಸಿದ್ದತೆ ಮಾಡಿಕೊಳ್ಳುತ್ತಿದೆ. ಇದು ಗಡಿ ನಾಡ ಕನ್ನಡಿಗರ ಕಣ್ಣು ಕೆಂಪಾಗಿಸಿದೆ ಯಾವುದೇ ಕಾರಣಕ್ಕೂ ಮಹಾಮೇಳಾವ್ ನಡೆಸಲು ಅನುಮತಿ ನೀಡಬಾರದು ಜೊತೆಗೆ ಎಂಇಎಸ್ ಸಂಘಟನೆ ಬ್ಯಾನ್ ಮಾಡಿ ಗಡಿಪಾರು ಮಾಡಬೇಕು ಎಂದು ಕರವೇ ಶಿವರಾಮೇಗೌಡ ಬಣ ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿತು. ಎಂಇಎಸ್ ಪದೇ ಪದೆ ಗಡಿಯಲ್ಲಿ ಖ್ಯಾತೆ ತೆಗೆಯುವ ಕೆಲಸ ಮಾಡುತ್ತಲೇ ಬರುತ್ತಿದೆ.‌ ಇತ್ತೀಚೆಗಷ್ಟೇ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ …

Read More »

2ಎ ಮೀಸಲಾತಿಗೆ ಆಗ್ರಹಿಸಿ ಡಿ.5ರಂದು ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ ಹಾಲಿ, ಮಾಜಿ ಶಾಸಕರ ಸಭೆ

ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಚಳಿಗಾಲ ಅಧಿವೇಶನ ವೇಳೆ ಸರ್ಕಾರದ ಗಮನ ಸೆಳೆಯಲು ಡಿ.5ರಂದು ಬೆಳಗಾವಿಯಲ್ಲಿ ಸಮಾಜದ ಹಾಲಿ – ಮಾಜಿ ಶಾಸಕರ ಸಭೆ ಕರೆದಿದ್ದೇವೆ. ಈ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಮಂತ್ರಿಸಲು ನಿರ್ಧರಿಸಿದ್ದೇವೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ ರಾಜ್ಯ ಕಾರ್ಯ ಕಾರಿಣಿ ಸಭೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳನ್ನು ಸಭೆಗೆ …

Read More »

ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನ್ನ ಜೊತೆ ಚರ್ಚಿಸಿ ಸಮಸ್ಯೆ ಬಗೆಹರಿಸಿದ್ದಾರೆ. ಆದ್ದರಿಂದ, ಅಧಿವೇಶನದಲ್ಲಿ ಭಾಗವಹಿಸುತ್ತೇನೆ:

ಬೆಂಗಳೂರು: ತನ್ನ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪದಿಂದ ತೀವ್ರ ಅಸಮಾಧಾನಗೊಂಡು ಸಿಎಂಗೆ ಪತ್ರ ಬರೆದಿದ್ದ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಶಕ್ತಿ ಭವನಕ್ಕೆ ಬುಧವಾರ ರಾತ್ರಿ ಪಾಟೀಲರನ್ನು ಕರೆಯಿಸಿಕೊಂಡು ಅರ್ಧ ಗಂಟೆಗೂ ಹೆಚ್ಚು ಕಾಲ ಮಾತನಾಡಿ ಸಮಸ್ಯೆ ಪರಿಹರಿಸಿದರು. ಸಿಎಂ ಭೇಟಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕರು, “ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನಗೆ ಕರೆ ಮಾಡಿ ಬರುವುದಕ್ಕೆ ಹೇಳಿದ್ದರು. …

Read More »

ಪಂಚರಾಜ್ಯ ಚುನಾವಣೆಯಲ್ಲಿ ಕನಿಷ್ಠ ಮೂರು ಕಡೆ ಅಧಿಕಾರ ಹಿಡಿಯುತ್ತೇವೆ : M.B. ಪಾಟೀಲ್​

ವಿಜಯಪುರ : ಪಂಚರಾಜ್ಯ ಚುನಾವಣೆಯಲ್ಲಿ ಐದು ರಾಜ್ಯಗಳ ಪೈಕಿ ಕನಿಷ್ಠ ಮೂರು ರಾಜ್ಯಗಳಲ್ಲಿ ಅಧಿಕಾರ ಹಿಡಿಯುತ್ತೇವೆ. ನಾಲ್ಕನೇ ಕಡೆಯೂ ಅಧಿಕಾರ ಹಿಡಿಯೋ ಸಾಧ್ಯತೆ ಇದೆ. ಎಕ್ಸಿಟ್ ಪೋಲ್ ನೋಡಿ ಗೊತ್ತಾಗುತ್ತದೆ ಎಂದು ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಅವರು ತಿಳಿಸಿದ್ದಾರೆ. ಪಂಚ ರಾಜ್ಯ ಚುನಾವಣೆ ವಿಚಾರದಲ್ಲಿ ಮೋದಿ ವರ್ಚಸ್ಸು ಕಡಿಮೆಯಾಗುತ್ತಾ? ಎಂಬ ಮಾಧ್ಯಮದವರ ಪ್ರಶ್ನೆಗೆ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಮೋದಿ ವರ್ಚಸ್ಸು ಕಡಿಮೆಯಾಗುತ್ತಿದೆ ಎಂದು ನೀವೇ …

Read More »

ಭ್ರೂಣ ಹತ್ಯೆ ಮಾಡಿದವರು ಜೊತೆಗೆ ಭ್ರೂಣ ಹತ್ಯೆಗೆ ಮಾಡಿಸಿಕೊಂಡವರು ಕಠಿಣ ಶಿಕ್ಷೆ ಆಗಬೇಕು : ಸಚಿವ ವೆಂಕಟೇಶ್

ಚಾಮರಾಜನಗರ : ಭ್ರೂಣ ಹತ್ಯೆಯಂತಹ ದ್ರೋಹದ ಕೆಲಸ ಮತ್ತೊಂದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಅವರು ಹೇಳಿದರು. ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಭ್ರೂಣ ಹತ್ಯೆ ಮಾಡಿದವರ ಜೊತೆಗೆ ಭ್ರೂಣ ಹತ್ಯೆಗೆ ಒಳಗಾದವರಿಗೂ ಕಠಿಣ ಶಿಕ್ಷೆ ಆಗಬೇಕು. ಆಗ ಮಾತ್ರ ಈ ರೀತಿ ಪಾಪದ ಕೃತ್ಯ ನಿಲ್ಲಲ್ಲಿದೆ. ಈ ಘಟನೆ ಬೆಳಕಿಗೆ ಬಂದ ನಂತರ ಸರ್ಕಾರ ಹಲವು ಕ್ರಮ ತೆಗೆದುಕೊಂಡಿದೆ ಎಂದರು. ಇನ್ನು ಚೀನಾದಲ್ಲಿ ನ್ಯುಮೋನಿಯಾ ಸೋಂಕು ಹೆಚ್ಚಳವಾದ ಸಂಬಂಧ …

Read More »