Breaking News

ರಾಷ್ಟ್ರೀಯ

ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡು ನಿತ್ರಾಣ ಸ್ಥಿತಿಯಲ್ಲಿ ಹುಲಿ ಪತ್ತೆ: ರಕ್ಷಣೆಗೆ ಮುಂದಾದ ಅರಣ್ಯ ಇಲಾಖೆ

ಚಾಮರಾಜನಗರ: ಸರಹದ್ದಿನ ಕಾದಾಟದಲ್ಲಿ ಹುಲಿಯೊಂದು ತೀವ್ರವಾಗಿ ಗಾಯಗೊಂಡು ಮೇಲಕ್ಕೆ ಏಳಲಾರದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಕಾಲೋನಿ ಸಮೀಪ ನಡೆದಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಜನವಸತಿ ಸಮೀಪವೇ ಗಾಯಗೊಂಡ ಹುಲಿ ತೀರಾ ನಿತ್ರಾಣಗೊಂಡ ಸ್ಥಿತಿಯಲ್ಲಿ ಕಾಣಿಸಿಕೊಂಡಿದೆ. ಹುಲಿಗೆ 4 ವರ್ಷಗಳಾಗಿರಬಹುದು ಎಂದು ಅಂದಾಜು ಮಾಡಲಾಗಿದ್ದು, ಮತ್ತೊಂದು ಗಂಡು ಹುಲಿ ಜೊತೆಗಿನ ಸರಹದ್ದಿನ ಕಾದಾಟದಲ್ಲಿ ಗಾಯಗೊಂಡಿದೆ. ಹುಲಿ ಈಗಾಗಲೇ ನಿತ್ರಾಣಗೊಂಡಿರುವುದರಿಂದ ಚುಚ್ಚುಮದ್ದು ಕೊಟ್ಟು ಸೆರೆ …

Read More »

ಯುನೆಸ್ಕೊದ ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ಗೋಲ್ ಗುಂಬಜ್ ಸೇರ್ಪಡೆ ಮಾಡಲು ಸರ್ಕಾರದಿಂದ ಕ್ರಮ!

ಯುನೆಸ್ಕೊದ ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ಗೋಲ್ ಗುಂಬಜ್ ಸೇರ್ಪಡೆ ಮಾಡಲು ಸರ್ಕಾರದಿಂದ ಕ್ರಮ!   ಗೋಲ್ ಗುಂಬಜ್ ಸ್ಮಾರಕಕ್ಕೆ ಯುನೆಸ್ಕೋ ಪಾರಂಪರಿಕ ತಾಣ ಎಂದು ಗುರುತು ಪಟ್ಟಿ ಪಡೆಯುವ ಬಹುಕಾಲದ ಬೇಡಿಕೆಯನ್ನು ಈಡೇರಿಸಲು ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ಸೂಚಿಸಿದ್ದಾರೆ. ವಿಜಯಪುರ: ಗೋಲ್ ಗುಂಬಜ್ ಸ್ಮಾರಕಕ್ಕೆ ಯುನೆಸ್ಕೋ ಪಾರಂಪರಿಕ ತಾಣ ಎಂದು ಗುರುತು ಪಟ್ಟಿ ಪಡೆಯುವ ಬಹುಕಾಲದ ಬೇಡಿಕೆಯನ್ನು ಈಡೇರಿಸಲು ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಪ್ರವಾಸೋದ್ಯಮ …

Read More »

2024ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರವು 2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 2ನೇ ಶನಿವಾರ, 4ನೇ ಶನಿವಾರ ಹಾಗೂ ಭಾನುವಾರದ ರಜಾ ದಿನಗಳನ್ನು ಹೊರತುಪಡಿಸಿ 2024 ರಲ್ಲಿ 21 ಸಾರ್ವತ್ರಿಕ ರಜಾ ದಿನಗಳು ಇರಲಿವೆ. ಬೆಂಗಳೂರು: ರಾಜ್ಯ ಸರ್ಕಾರವು 2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 2ನೇ ಶನಿವಾರ, 4ನೇ ಶನಿವಾರ ಹಾಗೂ ಭಾನುವಾರದ ರಜಾ ದಿನಗಳನ್ನು ಹೊರತುಪಡಿಸಿ 2024 ರಲ್ಲಿ 21 ಸಾರ್ವತ್ರಿಕ …

Read More »

ನ. 27 ರಂದು ಸಿಎಂ ಸಿದ್ದರಾಮಯ್ಯ (CM Siddaramaiah) ಬೆಳಗ್ಗೆ 9.30 ರಿಂದ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ

ಬೆಂಗಳೂರು : ನ. 27 ರಂದು ಸಿಎಂ ಸಿದ್ದರಾಮಯ್ಯ (CM Siddaramaiah) ಬೆಳಗ್ಗೆ 9.30 ರಿಂದ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ (Janata Darshana) ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಪ್ರತಿ ತಿಂಗಳು ಜನತಾ ದರ್ಶನ ನಡೆಸುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದರು. ಇದೀಗ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಲಿದ್ದಾರೆ. ಮುಖ್ಯಮಂತ್ರಿ …

Read More »

ವಿಜಯೇಂದ್ರ ಹೂಗುಚ್ಚ ನೀಡಿ ನಾಟಕೀಯ ಪೋಸ್ ಕೊಡೋದು ಬೇಡ: ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಯತ್ನಾಳ್ ಕಿಡಿ

ನನ್ನ ಭೇಟಿಗೆ ಬರೋದು ಬೇಡ ಅಂತ ಬಿಜೆಪಿ ರಾಜ್ಯಾಧ್ಯಕ್ಷ ವಿ.ವೈ. ವಿಜೇಂದ್ರ ಅವರಿಗೆ ಹೇಳಿರುವುದಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶುಕ್ರವಾರ ಹೇಳಿದ್ದಾರೆ. ವಿಜಯಪುರ: ನನ್ನ ಭೇಟಿಗೆ ಬರೋದು ಬೇಡ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜೇಂದ್ರ ಅವರಿಗೆ ಹೇಳಿರುವುದಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶುಕ್ರವಾರ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್ ಅವರು, ವಿಜಯೇಂದ್ರ ಯಾಕ್ ಬರುತ್ತಾರೆ ನನ್ನ ಭೇಟಿಗೆ. …

Read More »

ಶೀಘ್ರವೇ ಬರ ಪರಿಹಾರ ಬಿಡುಗಡೆಗೊಳಿಸಿ: ನಿರ್ಮಲಾ ಸೀತಾರಾಮನ್​ಗೆ ರಾಜ್ಯ ಸಚಿವರ ಮನವಿ

ದೆಹಲಿ/ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಬರ ಘೋಷಣೆ ಮಾಡಲಾಗಿದ್ದು, ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಈ ಸಂಬಂಧ ಶೀಘ್ರ ನಿರ್ಧಾರ ತೆಗೆದುಕೊಂಡು ಬರ ಪರಿಹಾರ ಹಣ ಬಿಡುಗಡೆಗೊಳಿಸಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಕೃಷಿ ಸಚಿವ ಚೆಲುವರಾಯಸ್ವಾಮಿ ಜೊತೆಗೂಡಿ ಗುರುವಾರ ದೆಹಲಿಯಲ್ಲಿ ಸಚಿವೆಯನ್ನು ಭೇಟಿ ಮಾಡಿದ ನಂತರ ಪತ್ರಕರ್ತರ ಜೊತೆ ಮಾತನಾಡಿದ ಕೃಷ್ಣ ಬೈರೇಗೌಡ, ರಾಜ್ಯದ 223 ತಾಲೂಕುಗಳನ್ನು …

Read More »

ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸಿಬಿಐ ತನಿಖೆಗೆ ನೀಡಿದ್ದ ಆದೇಶ ವಾಪಸ್​ ಪಡೆದ ಸರ್ಕಾರ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿ ಆದೇಶಿಸಿದ್ದ ಈ ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಆದೇಶವನ್ನು ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.   ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಡಿಕೆಶಿ ವಿರುದ್ಧ ತನಿಖೆಯನ್ನು ಸಿಬಿಐಗೆ ವಹಿಸಲು ಹಿಂದಿನ‌ ಸರ್ಕಾರ ನಿರ್ಣಯ ಮಾಡಿತ್ತು. ಕಾನೂನಾತ್ಮಕವಾಗಿ ಸ್ಪೀಕರ್ ರಿಂದ ನಿರ್ಣಯ ಪಡೆಯಬೇಕಿತ್ತು. ಅದನ್ನು …

Read More »

ರಾಜ್ಯ ಸರ್ಕಾರದಿಂದ ದರೋಡೆಕೋರರ ರಕ್ಷಣೆ:H.D.K.

ಬೆಂಗಳೂರು: ದರೋಡೆಕೋರರ ರಕ್ಷಣೆಗೆ ಕಾಂಗ್ರೆಸ್ ಸರ್ಕಾರ ನಿಂತಿದೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು. ಜೆ.ಪಿ.ನಗರದ ತಮ್ಮ ನಿವಾಸದ ಬಳಿ ಇಂದು ಬೆಳಿಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ತನಿಖೆಗಾಗಿ ಸಿಬಿಐಗೆ ನೀಡಿದ್ದ ಅನುಮತಿಯನ್ನು ಸರ್ಕಾರ ವಾಪಸ್​ ಪಡೆದ ವಿಚಾರಕ್ಕೆ ಅವರು ಖಾರವಾಗಿ ಪ್ರತಿಕ್ರಿಯಿಸಿದರು. ಈ ಸರ್ಕಾರದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಮಾತನಾಡುವುದು ಬಹಳ ಇದೆ. ಚರ್ಚೆ ಮಾಡೋಣ, ಇದರ ಬಗ್ಗೆ ಆತುರ ಬೇಡ. ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಹೆಚ್ಚು ಮಾತು …

Read More »

ನ.28ಕ್ಕೆ ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಎಲೆಕ್ಷನ್‍

ಬಳ್ಳಾರಿ ನ.11: ಬಳ್ಳಾರಿ (Bellari) ಜಿಲ್ಲೆ ಕಾಂಗ್ರೆಸ್ (Congress)​ ಹಿಡಿತದಲ್ಲಿದೆ. ಜಿಲ್ಲೆಯ ಐದೂ ಕ್ಷೇತ್ರದಲ್ಲಿ ಕಾಂಗ್ರೆಸ್​ ಶಾಸಕರಿದ್ದಾರೆ. ಇದೀಗ ಬಳ್ಳಾರಿ ಮಹಾನಗರ ಪಾಲಿಕೆ (Bellari City Corporation) ಮೇಯರ್ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಇದು “ಕೈ” ಗೆ ಪ್ರತಿಷ್ಠೆಯಾಗಿದೆ. ನ.28ರಂದು ಬಳ್ಳಾರಿ ಪಾಲಿಕೆ ಮೇಯರ್​, ಉಪಮೇಯರ್ ಚುನಾವಣೆ ನಡೆಯಲಿದೆ. ರಾಜ್ಯದ ಕಿರಿಯ ಮೇಯರ್ ಹೆಗ್ಗಳಿಕೆಗೆ ಪಾತ್ರವಾಗಿದ್ದ 23 ವರ್ಷದ ಡಿ.ತ್ರಿವೇಣಿ ಏಳು ತಿಂಗಳು ಆಡಳಿತ ನಡೆಸಿ, ನವೆಂಬರ್​​ 4ರಂದು ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ನೂತನ …

Read More »

ಮದ್ವೆ ಮಂಟಪಕ್ಕೆ ಹೋಗುತ್ತಿದ್ದಾಗ ವರ ಎಸ್ಕೇಪ್: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಕೈಕೊಟ್ಟ ಪ್ರಿಯಕರ

ತುಮಕೂರು, (ನವೆಂಬರ್ 08): ಬೆಂಗಳೂರಿನ ನೆಲಗದರನಹಳ್ಳಿ ಹಾಗೂ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಯುವತಿ ಸಾಮಾಜಿಕ ಜಾಲತಾಣಗಳಲ್ಲಿ (Social Media) ಪರಿಚಯವಾಗಿದ್ದು, ಬಳಿಕ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ(Love). ಬಳಿಕ ಬೆಂಗಳೂರಿನ (Bengaluru) ನೆಲಗದರನಹಳ್ಳಿ ಮೂಲಕ ಗಜೇಂದ್ರ, ಮದುವೆಯಾಗುವುದಾಗಿ (Marriage) ಎರಡು ವರ್ಷಗಳಿಂದ ಯುವತಿಯನ್ನು ಕರೆದುಕೊಂಡು ಎಲ್ಲೊಂದರಲ್ಲಿ ಸುತ್ತಾಡಿದ್ದಾನೆ. ಆದ್ರೆ, ಇದೀಗ ಮದುವೆ ಮುಹೂರ್ತ ಸಮೀಪಿಸುತ್ತಿದ್ದಂತೆಯೇ ಗಜೇಂದ್ರ ಎಸ್ಕೇಪ್ ಆಗಿದ್ದಾನೆ. ಹೌದು…ಬೆಂಗಳೂರಿನ ಪಿಣ್ಯಾದ ದುಗ್ಗಾಲಮ್ಮ ದೇವಾಲಯದಲ್ಲಿ ಇಬ್ಬರ ಮದುವೆ ಫಿಕ್ಸ್ ಆಗಿತ್ತು. ಆದ್ರೆ, …

Read More »