ಹಾವೇರಿ: ಮಂಜೂರಾದ ಮನೆಯ ಜಿಪಿಎಸ್ ಮಾಡಿಸಿ ಕೊಡಲು ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಸದಸ್ಯನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಸವಣೂರು ತಾಲೂಕಿನ ಕಾರಡಗಿ ಗ್ರಾಮದ ಗ್ರಾಮ ಪಂಚಾಯತ್ ಸದಸ್ಯ ಮಹಮ್ಮದ್ ಜಾಪರ್ ಸಂಶಿ ಬಂಧಿತ ಆರೋಪಿ. ದಾದಾಪೀರ್ ಲೋಹರ್ ಎಂಬವರಿಗೆ ಸರ್ಕಾರದಿಂದ 5 ಲಕ್ಷ ರೂಪಾಯಿ ಮನೆ ಮಂಜೂರಾಗಿತ್ತು. ಈ ಮನೆಗೆ ಜಿಪಿಎಸ್ ಮಾಡಿಸಲು ಮಹಮ್ಮದ್ ಜಾಪರ್ ಸಂಶಿ 40 ಸಾವಿರ ರೂಪಾಯಿ ಲಂಚ ಬೇಡಿಕೆಯಿಟ್ಟದ್ದರು. 20 ಸಾವಿರ ರೂಪಾಯಿ ಲಂಚ …
Read More »ಪೊಲೀಸ್ ಇನ್ಸ್ಪೆಕ್ಟರ್ ಬ್ಯಾಂಕ್ ಖಾತೆಗೆ ಆನ್ಲೈನ್ ವಂಚಕರ ಕನ್ನ: ₹8.25 ಲಕ್ಷ ವರ್ಗಾವಣೆ
ಹುಬ್ಬಳ್ಳಿ: ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರ ಖಾತೆಗೆ ಆನ್ಲೈನ್ ವಂಚಕರು ಕನ್ನ ಹಾಕಿದ ಘಟನೆ ಬೆಳಕಿಗೆ ಬಂದಿದೆ. ಧಾರವಾಡ ಉಪನಗರ ಠಾಣೆ ಇನ್ಸ್ಪೆಕ್ಟರ್ ದಯಾನಂದ ಶೇಗುಣಿಸಿ ಅವರ ಬ್ಯಾಂಕ್ ಖಾತೆಯಲ್ಲಿದ್ದ 8.25 ಲಕ್ಷ ಹಣವನ್ನು ಅಪರಿಚಿತರು ವರ್ಗಾವಣೆ ಮಾಡಿಕೊಂಡಿದ್ದು, ಈ ಕುರಿತಂತೆ ಅವರು ಹುಬ್ಬಳ್ಳಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದಯಾನಂದ ಯಾರೊಂದಿಗೂ ಮಾಹಿತಿ ಹಂಚಿಕೊಂಡಿಲ್ಲ. ಆದರೂ ಅವರ ಹಣ ವರ್ಗಾವಣೆಯಾಗಿದೆ. ಬ್ಯಾಂಕಿನವರು ನೆಟ್ ಸೆಕ್ಯೂರಿಟಿ ಬಳಸದೆ ನಿಷ್ಕಾಳಜಿಯಿಂದಲೋ ಅಥವಾ …
Read More »ಲೋಕಸಭೆ ಚುನಾವಣೆ: ಎಲ್ಲರೂ ಕೂಡಿ ಕೆಲಸ ಮಾಡಲು ಒಪ್ಪಿದ್ದೇವೆ- ರಮೇಶ್ ಜಾರಕಿಹೊಳಿ
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಎಲ್ಲರೂ ಕೂಡಿ ಕೆಲಸ ಮಾಡಲು ಒಪ್ಪಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಭೇಟಿ ಬಳಿಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸದಾಶಿವನಗರ ತಮ್ಮ ನಿವಾಸದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಮ್ಮ ನೋವು ಏನು ಅಂತ ಈಗ ಹೇಳೋದಕ್ಕೆ ಬರಲ್ಲ. ನಾವು ಇಬ್ಬರೂ ಸೇರಿ ಚರ್ಚೆ ಮಾಡಿದ್ದೇವೆ. ನಾಲ್ಕು ಗೋಡೆಗಳ ಮಧ್ಯೆ ಮಾಡಿದ ಚರ್ಚೆಯನ್ನು ಬಹಿರಂಗವಾಗಿ ಹೇಳಲ್ಲ. …
Read More »ಈ ಜೋಡಿಗೆ ಮಾತು ಬರುವುದಿಲ್ಲ, ಕಿವಿಯೂ ಕೇಳಿಸದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಶೇಷಚೇತನ ನವಜೋಡಿ
ಹಾಸನ: ಈ ಜೋಡಿಗೆ ಮಾತು ಬರುವುದಿಲ್ಲ, ಕಿವಿಯೂ ಕೇಳಿಸದು. ಆದರೂ ತಮ್ಮ ತಮ್ಮ ನಡುವಿನ ಸನ್ನೆ ಮಾತುಗಳ ಮೂಲಕ, ನೀ ನನಗೆ ನಾ ನಿನಗೆ ಎಂಬಂತೆ ಹಸಮಣೆ ಏರುವ ಮೂಲಕ ದಾಂಪತ್ಯ ಜೀವನಕ್ಕೆ ಶುರುವಿಟ್ಟಿದ್ದಾರೆ. ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯಲ್ಲಿ ಇಂತಹದ್ದೊಂದು ಅಪರೂಪದ ಮದುವೆ ನಡೆಯಿತು. ಬಾಳ್ಳುಪೇಟೆ ಗ್ರಾಮದ ಕೆಂಚಮ್ಮ- ಮಲ್ಲೇಗೌಡ ಸಮುದಾಯ ಭವನದಲ್ಲಿ ನಡೆದ ವಿಶೇಷ ಮದುವೆಯಲ್ಲಿ ಇವರು ಹೊಸ ಜೀವನಕ್ಕೆ ಕಾಲಿಟ್ಟರು. ಈ ಸನ್ನಿವೇಶಕ್ಕೆ ಎರಡೂ ಮನೆಯ ಕುಟುಂಬರಷ್ಟೇ ಅಲ್ಲದೇ, …
Read More »ನಟನೆಯಲ್ಲಿ ಅಭಿ ಸಾಮರ್ಥ್ಯ ಬೇರೇನೇ ಇದೆ.
ಸೂರಿ ನಿರ್ದೇಶನದಲ್ಲಿ ಅಭಿಷೇಕ್ ಅಂಬರೀಶ್ ನಾಯಕರಾಗಿರುವ “ಬ್ಯಾಡ್ ಮ್ಯಾನರ್ಸ್’ ಚಿತ್ರ ನ.24ರಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಟ್ರೇಲರ್ ಹಿಟ್‌ಲಿಸ್ಟ್ ಸೇರಿದೆ. ನಿರ್ದೇಶಕ ಸೂರಿ ಹೊಸ ಲೋಕವನ್ನು ಕಟ್ಟಿಕೊಟ್ಟಿರೋದು ಕಾಣುತ್ತಿದೆ. ಸಿನಿಮಾ ಬಿಡುಗಡೆ ಹಿನ್ನೆಲೆಯಲ್ಲಿ ನಿರ್ದೇಶಕ ಸೂರಿ “ಬ್ಯಾಡ್ ಮ್ಯಾನರ್ಸ್’ ಬಗ್ಗೆ ಮಾತನಾಡಿದ್ದಾರೆ. ಬ್ಯಾಡ್ ಮ್ಯಾನರ್ ಆರಂಭ ಹೇಗೆ? ಅಭಿ ಮಾಡಿರುವ “ಅಮರ್’ ಸಿನಿಮಾ ನಂಗೆ ಇಷ್ಟವಾಗಿತ್ತು. ನಾನು ಆ ಸಿನ್ಮಾನ ಅಭಿ ಪೋರ್ಟ್‌ಪೋಲಿಯೋ ಥರಾನೇ ನೋಡಿದ್ದೆ. ತಡಮಾಡದೇ ದರ್ಶನ್ ಸರ್‌ಗೆ …
Read More »ಎಲ್ಲರಿಗೂ ಗ್ಯಾರಂಟಿ ಲಾಭ ತಲುಪಿಸಿ- ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತಾಕೀತು
ಬೆಂಗಳೂರು: ” ಗ್ಯಾರಂಟಿಗಳು ಜನರಿಗೆ ತಲುಪುತ್ತಲೇ ಇಲ್ಲ. ಸರ್ಕಾರದ ನುಡಿದಂತೆ ನಡೆಯುತ್ತಿಲ್ಲ” ಎಂದು ಪ್ರತಿಪಕ್ಷಗಳ ಆರೋಪದ ಬೆನ್ನಲ್ಲೇ ನಾಲ್ಕೂ ಯೋಜನೆಗಳ ಇಲಾಖೆಗಳ ಅಧಿಕಾರಿಗಳ ಜತೆಗೆ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಸಭೆ ನಡೆಸಿದ್ದಾರೆ. ಯಾರೊಬ್ಬ ಫಲಾನುಭವಿಯೂ “ಗ್ಯಾರಂಟಿ’ಗಳಿಂದ ವಂಚಿತವಾಗಬಾರದು. ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದರೂ ಬಗೆಹರಿಸಿ, ಸೌಲಭ್ಯ ತಲುಪುವಂತೆ ಕ್ರಮ ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಮತ್ತು ಗೃಹಲಕ್ಷ್ಮೀ ಸೇರಿದಂತೆ ನಾಲ್ಕೂ …
Read More »ಹಳೆ ವಿದ್ಯಾರ್ಥಿಗಳಿಂದ ಶಾಲೆಯ ದುರಸ್ತಿ ಒಂದು ಕೋಟಿ 18 ಲಕ್ಷ ರೂಪಾಯಿ ಹಣ ನೀಡಿದ ಮಾಜಿ ವಿದ್ಯಾರ್ಥಿಗಳು
ಹಾವೇರಿ : ಜಿಲ್ಲೆಯ ಬ್ಯಾಡಗಿ ತಾಲೂಕಿನ ಕದರಮಂಡಲಗಿ ಐತಿಹಾಸಿಕ ಹಿನ್ನೆಲೆ ಇರುವ ಗ್ರಾಮ. ಇಲ್ಲಿಯ ಕಾಂತೇಶ ದೇವಸ್ಥಾನ ವಿಶ್ವಪ್ರಸಿದ್ದಿಯಾಗಿದೆ. ಈ ಗ್ರಾಮದಲ್ಲಿ135 ವರ್ಷಗಳ ಹಿಂದೆ ಕನ್ನಡ ಮಾದರಿ ಪ್ರಾಥಮಿಕ ಶಾಲೆ ಇತ್ತು. ಈ ಶಾಲೆ ಕಳೆದ ಕೆಲವರ್ಷಗಳಿಂದ ಮಳೆಗಾಲದಲ್ಲಿ ಸೋರಲಾರಂಭಿಸಿದೆ. ಮಳೆಯಿಂದ ಶಾಲೆ ಹಾಳಾಗಲಾರಂಭಿಸಿದೆ. ಪರಿಣಾಮ ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆಯಾಗಿದೆ. ಮಳೆಯಿಂದ ಹಾಳಾದ ಶಾಲೆಯೊಳಗೆ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹೋಗಲು ಹೆದರಲಾರಂಭಿಸಿದ್ದಾರೆ. ಪರಿಣಾಮ ಶಾಲೆಯ ಅಕ್ಕಪಕ್ಕದಲ್ಲಿದ್ದ ಮರಗಳ ನೆರಳಿನಲ್ಲಿ ವಿದ್ಯಾರ್ಥಿಗಳು ವ್ಯಾಸಂಗ …
Read More »ರಾಯಬಾಗ ಶಾಲೆಯ ಕೊಳವೆಬಾವಿಯಲ್ಲಿ ಕಲುಷಿತ ನೀರು: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹುಬ್ಬಾರವಾಡಿ ಗ್ರಾಮದಲ್ಲಿ ಖಾಸಗಿ ಕಂಪೆನಿಯೊಂದರ ರಾಸಾಯನಿಕ ಗೊಬ್ಬರ ಸಂಗ್ರಹಣಗಾರದಿಂದಾಗಿ ಪಕ್ಕದಲ್ಲಿರುವ ಪ್ರಾಥಮಿಕ ಮತ್ತು ಅಂಗನವಾಡಿ ಕೇಂದ್ರದ ಕೊಳವೆಬಾವಿಯ ನೀರು ಕಲುಷಿತಗೊಳ್ಳುತ್ತಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಸ್ಥಳೀಯ ಆಡಳಿತಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸ್ಥಳೀಯ ನಿವಾಸಿ ಪಾಂಡುರಂಗ ಮಹದೇವ ಕಾಂಬ್ಳೆ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಹಾಗೂ …
Read More »ರಾಜಕೀಯ, ಜಾತಿ, ಭಾಷೆಗಳನ್ನ ಮೀರಿದ ಕಾರ್ಯಕ್ರಮ ಕಂಬಳ: ಗುರುಕಿರಣ್
ಬೆಂಗಳೂರು: ಬೆಂಗಳೂರು ಕಂಬಳ – ನಮ್ಮ ಕಂಬಳಕ್ಕೆ ದಕ್ಷಿಣ ಕನ್ನಡದ ನಂಟು ಇರುವ ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿದೆ. ಇದು ಯಾವುದೇ ಕಮರ್ಷಿಯಲ್ ಅಗ್ರಿಮೆಂಟ್ ಅಲ್ಲ. ಆದರೆ ಕಾರ್ಯಕ್ರಮಕ್ಕೆ ಎಲ್ಲರ ಬೆಂಬಲವಿದೆ ಎಂದು ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಹಾಗೂ ಸಂಗೀತ ನಿರ್ದೇಶಕ ಗುರುಕಿರಣ್ ತಿಳಿಸಿದರು. ಕನ್ನಡ ಸಿನಿಮಾರಂಗದ ಎಲ್ಲರಿಗೂ ಆಮಂತ್ರಣ ನೀಡಲಾಗಿದ್ದು, ಎಲ್ಲರೂ ಬರುವ ನಿರೀಕ್ಷೆಯಿದೆ. ಶಿವಣ್ಣ ಹಾಗೂ ಅವರ ಪತ್ನಿ ಬರುತ್ತಿದ್ದಾರೆ. ಅಶ್ವಿನಿ ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ಯುವ ಬರುತ್ತಿದ್ದಾರೆ. …
Read More »ಎಲ್‌ಎಂವಿ ಪರವಾನಗಿ ಹೊಂದಿರುವವರು ಲಘು ಸಾರಿಗೆ ವಾಹನ ಓಡಿಸಬಹುದೇ?; ಕೇಂದ್ರಕ್ಕೆ ಸ್ಪಷ್ಟನೆ ಕೇಳಿದ ಸುಪ್ರೀಂಕೋರ್ಟ್
ನವದೆಹಲಿ: ಲಘು ಮೋಟಾರು ವಾಹನ (ಎಲ್‌ಎಂವಿ) ಚಾಲನಾ ಪರವಾನಗಿ ಹೊಂದಿರುವವರು ಎಲ್‌ಎಂವಿ ವರ್ಗದ ಸಾರಿಗೆ ವಾಹನ ಓಡಿಸಲು ಪ್ರತ್ಯೇಕ ಅನುಮೋದನೆಯ ಅಗತ್ಯವಿದೆಯೇ ಎಂಬ ಪ್ರಶ್ನೆಗೆ ಮುಂದಿನ ವರ್ಷದ ಜನವರಿ 17ರೊಳಗೆ ಸ್ಪಷ್ಟ ಮಾರ್ಗಸೂಚಿ ಒದಗಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರಕಾರಕ್ಕೆ ಸೂಚಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್, ಪಿ.ಎಸ್.ನರಸಿಂಹ, ಪಂಕಜ್ ಮಿಥಾಲ್ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಸಾಂವಿಧಾನಿಕ ಪೀಠವು …
Read More »