ಬೆಂಗಳೂರು, (ಜುಲೈ 09): ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾದ ಸ್ನೇಹಿತೆಯರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಮಹಿಳೆ ಸಿಕ್ಕಿಬಿದ್ದಿದ್ದಾಳೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹೆಸರು ಹೇಳಿಕೊಂಡು ಗಾಳ ಹಾಕುತ್ತಿದ್ದ ಸವಿತಾ ಎನ್ನುವ ಮಹಿಳೆಯನ್ನು ಬೆಂಗಳೂರಿನ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಕಿಟ್ಟಿ ಪಾರ್ಟಿಯಲ್ಲಿ ನೆಪದಲ್ಲಿ ಶ್ರೀಮಂತ ಮಹಿಳೆಯರನ್ನೇ ಟಾರ್ಗೇಟ್ ಮಾಡುತ್ತಿದ್ದ ಸವಿತಾ, ಈವರೆಗೆ 20ಕ್ಕೂ ಹೆಚ್ಚು ಮಹಿಳೆಯರಿಗೆ ಬರೋಬ್ಬರಿ 30 ಕೋಟಿ ರೂಪಾಯಿಗೂ ಅಧಿಕ ಹಣ ವಂಚನೆ ಮಾಡಿದ್ದಾಳೆ …
Read More »ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲ ರೀತಿಯಲ್ಲೂ ಉತ್ತಮವಾಗಿದೆ: ಗೃಹ ಸಚಿವ ಡಾ.ಜಿ. ಪರಮೇಶ್ವರ್
ಸುಬ್ರಹ್ಮಣ್ಯ(ದ.ಕನ್ನಡ): “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಾ ರೀತಿಯಲ್ಲೂ ಉತ್ತಮವಾಗಿದೆ” ಎಂದು ರಾಜ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಮಂಗಳವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಇತ್ತೀಚೆಗೆ ನಡೆದ ಕಾನ್ಫೆರೆನ್ಸ್‌ನಲ್ಲಿ ಮಾನ್ಯ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ, ವಿವಿಧ ಅಪರಾಧಗಳ ಬಗ್ಗೆ ಮಾಹಿತಿ ಪಡೆದ ವೇಳೆ ಕ್ರೈಮ್ ರೇಟ್ ಕಡಿಮೆಯಾಗಿರುವುದು ಕಂಡು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೇ ಎಲ್ಲ ಕಡೆ ಕಾನೂನುನನ್ನು ಬಹಳ ಕಠಿಣವಾಗಿ ತೆಗೆದುಕೊಳ್ಳಲಾಗಿದೆ. ದಕ್ಷಿಣ ಕನ್ನಡ …
Read More »ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆ”
ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆ” ಸರ್ಕಾರಿ ಶಾಲೆಗಳಿಗೆ ಮಕ್ಕಳ ಪ್ರವೇಶಾತಿ ಹೆಚ್ಚಿಸುವಂತೆ ಕ್ರಮ ವಹಿಸಲು ಸಚಿವ ಮಧು ಬಂಗಾರಪ್ಪ ಸೂಚನೆ ಬೆಳಗಾವಿ,ಮುಖ್ಯಮಂತ್ರಿಗಳ ನಿರ್ದೇಶನದಂತೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಪ್ರವೇಶಾತಿ ಹೆಚ್ಚಾಗಬೇಕು. ಖಾಸಗಿ ಶಾಲೆಗಳ ಮಾದರಿಯಲ್ಲೇ ಸರ್ಕಾರಿ ಶಾಲೆಗಳು ನಿರ್ವಹಿಸುವದರ ಜೊತೆಗೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಪ್ರಾಥಮಿಕ ಪ್ರೌಢಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅವರು …
Read More »ಕೊಪ್ಪಳದ ಗಾಂಜಾ ಪ್ರಕರಣ ಶಿಫ್ಟ್ ವಿಚಾರ: ಗಂಗಾವತಿಗೆ ಮಸಿ ಬಳಿಯುವ ಯತ್ನ ಎಂದ ಜನಾರ್ದನ ರೆಡ್ಡಿ
ಗಂಗಾವತಿ: ರಾಮಾಯಣದಂತ ಪೌರಾಣಿಕ ಹಿನ್ನೆಲೆ, ವಿಜಯನಗರದ ಐತಿಹಾಸಿಕ ಹಿನ್ನೆಲೆಯ ನಂಟು ಹೊಂದಿರುವ ಗಂಗಾವತಿಯಂಥ ಕ್ಷೇತ್ರಕ್ಕೆ ಪೊಲೀಸ್ ಮತ್ತು ಅಬಕಾರಿ ಇಲಾಖೆಯ ಅಧಿಕಾರಿಗಳಾದ ನೀವು ಕಳಂಕ ಉಂಟು ಮಾಡಲು ಯತ್ನಿಸುತ್ತಿದ್ದೀರಿ ಎಂದು ಶಾಸಕ ಜಿ. ಜನಾರ್ದನ ರೆಡ್ಡಿ ಅಧಿಕಾರಿಗಳನ್ನು ಸಾರ್ವಜನಿಕವಾಗಿಯೇ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿರುವ ಮಂಥನ ಸಭಾಂಗಣದಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, …
Read More »ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ
ಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು ಪತ್ತೆ ಮಾಡಿದ್ದಾರೆ. ಆರೋಪಿಗಳಿಂದ 4.5 ಕೋಟಿ ಮೌಲ್ಯದ ಮಾದಕ ದ್ರವ್ಯಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಯಲಹಂಕ ತಾಲೂಕು ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅದ್ದಿಗಾನಹಳ್ಳಿ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಿದೇಶಿ ಪ್ರಜೆಗಳು ವಾಸವಾಗಿದ್ದು, ಅವರ ಚಲನವಲನದ ಬಗ್ಗೆ ಪೊಲೀಸರಿಗೆ ಸಂಶಯ ಇತ್ತು. ಹೀಗಾಗಿ ಖಚಿತ ಮಾಹಿತಿ ಪಡೆದ ಮೇರೆಗೆ ರಾಜಾನುಕುಂಟೆ ಪೊಲೀಸರು ಅವರ …
Read More »ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ
ಆನಂದ್ ನಗರದಲ್ಲಿ ೩೦ ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಎನ್.ಸಿ.ಡಿ.ಎಫ್.ಐ ಕಚೇರಿಯ ಕಟ್ಟಡವನ್ನು ಉದ್ಘಾಟಿಸಿದ ಕೇಂದ್ರ ಸಹಕಾರ ಸಚಿವ ಅಮಿತ್ ಷಾ ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಸಹಕಾರಿ ಸಂಘಗಳ ಆರ್ಥಿಕ ಮತ್ತು ತಾಂತ್ರಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (NCDFI) ಗುಜರಾತ್ ನ ಆನಂದ್ …
Read More »ಚೇರಿಯಲ್ಲಿ ರಾಜ್ಯದ ಎಐಸಿಸಿ ಉಸ್ತುವಾರಿ ರಂದೀಪ್ ಸುರ್ಜೇವಾಲಾ (Randeep Surjewala) ಅವರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ, ಪ್ರಮುಖವಾಗಿ ಪಕ್ಷದ ಸಂಘಟನೆ ವಿಷಯದಲ್ಲಿ ಚರ್ಚೆ
ಬೆಂಗಳೂರು, ಜುಲೈ 7: ಕೆಪಿಸಿಸಿ ಕಚೇರಿಯಲ್ಲಿ ರಾಜ್ಯದ ಎಐಸಿಸಿ ಉಸ್ತುವಾರಿ ರಂದೀಪ್ ಸುರ್ಜೇವಾಲಾ (Randeep Surjewala) ಅವರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅಥಣಿ ಶಾಸಕ ಲಕ್ಷ್ಮಣ ಸವದಿ, ಪ್ರಮುಖವಾಗಿ ಪಕ್ಷದ ಸಂಘಟನೆ ವಿಷಯದಲ್ಲಿ ಚರ್ಚೆ ಆಯಿತು, ಮುಂಬರುವ ಎಲ್ಲ ಸ್ಥಳೀಯ ಮತ್ತು ಪಂಚಾಯತ್ ಚುನಾವಣೆ ಮತ್ತು ಮೂರು ವರ್ಷಗಳ ನಂತರ ನಡೆಯುವ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪುನಃ ಅಧಿಕಾರಕ್ಕೆ ತರುವ ಬಗ್ಗೆ ಸುರ್ಜೇವಾಲಾ ಅವರೊಂದಿಗೆ ಮಾತುಕತೆ ನಡೆಯಿತು ಎಂದು ಸವದಿ …
Read More »ಮನೆಯಲ್ಲೇ ಹೈಟೆಕ್ ವೇಶ್ಯವಾಟಿಕೆ ದಂಧೆ
ಮೈಸೂರು, (ಜುಲೈ 07): ಮೈಸೂರು (Mysuru) ತಾಲ್ಲೂಕಿನ ದಾಸನಕೊಪ್ಪಲಿನಲ್ಲಿ (Dasanakoppalu Village) ಅಕ್ರಮವಾಗಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ (Prostitution) ದಂಧೆಯ ಮೇಲೆ ಪೊಲೀಸರು ದಾಳಿ ಮಾಡಿದ್ದು, ಆರು ಜನರನ್ನು ಬಂಧಿಸಿದ್ದಾರೆ. ಓಡನಾಡಿ ಸಂಸ್ಥೆ ನೀಡಿದ ಖಚಿತ ಮಾಹಿತಿಯ ಮೇರೆಗ ಪೊಲೀಸರು ದಾಳಿ ಮಾಡಿದ್ದು, ಆರೋಪಿಗಳನ್ನು ರೆಡ್ ಹ್ಯಾಂಡ್ ಆಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ದಾಳಿಯ ವೇಳೆ ಆ ಮನೆಯಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆ ಬೆಳಕಿಗೆ ಬಂದಿದ್ದು, 6 ಪುರುಷರು ಮತ್ತು ಇಬ್ಬರು ಮಹಿಳೆಯರು ಸಿಕ್ಕಿಬಿದ್ದಿದ್ದಾರೆ.ಮಹಿಳಾ ಮತ್ತು ಮಕ್ಕಳ ಸುರಕ್ಷತೆಯ ಹೆಸರಿನಲ್ಲಿ …
Read More »ಗರ್ಭಿಣಿಯಾದಳೆಂದು ಪತ್ನಿಯನ್ನೇ ಕೊಲೆ ಮಾಡಿದ ಪತಿ!
ಚಾಮರಾಜನಗರ : ಗರ್ಭಿಣಿಯೊಬ್ಬರನ್ನು ತಾಳಿ ಕಟ್ಟಿದ ಪತಿಯೇ ಕೊಲೆ ಮಾಡಿರುವ ಘಟನೆ ತಾಲೂಕಿನ ಡೊಳ್ಳಿಪುರದ ತೋಟದ ಮನೆಯಲ್ಲಿ ನಡೆದಿದೆ. ಈ ಕುರಿತು ಎಸ್ಪಿ ಡಾ. ಬಿ. ಟಿ. ಕವಿತಾ ಅವರು ಮಾತನಾಡಿದ್ದು, ಮಹಿಳೆಯ ಕೊಲೆ ಕುರಿತು ಕಂಟ್ರೋಲ್ ರೂಮ್ಗೆ ಕರೆ ಬಂದಿತ್ತು. ನಂತರ ನಮ್ಮ ಠಾಣಾ ವ್ಯಾಪ್ತಿಗೆ ಬಂದಿದ್ದರಿಂದಾಗಿ ನಾವು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದೆವು. ಅಲ್ಲಿ ಶುಭಾ(38) ಎಂಬ ಮಹಿಳೆ ಮನೆ ಮುಂದೆ ಕೊಲೆಯಾಗಿ ಬಿದ್ದಿದ್ದರು ಎಂದು ತಿಳಿಸಿದರು.ಮೃತ ಮಹಿಳೆ …
Read More »ಶಾಲೆಗೆ ಹೋಗದ ಶಿಕ್ಷಕರು – ಅಧಿಕಾರಿಗಳ ಸನ್ಮಾನಕ್ಕೆ ದಂಡಾಗಿ ಹಾಜರಾತಿ!
ಶಾಲೆಗೆ ಹೋಗದ ಶಿಕ್ಷಕರು – ಅಧಿಕಾರಿಗಳ ಸನ್ಮಾನಕ್ಕೆ ದಂಡಾಗಿ ಹಾಜರಾತಿ! ಅಥಣಿ, ಜುಲೈ 2:ತಾಲೂಕಿನ ಹಲವು ಸರಕಾರಿ ಶಾಲೆಗಳಲ್ಲಿ ಹಾಜರಾತಿ ತಪ್ಪಿಸುತ್ತಿರುವ ಹಾಗೂ ಕರ್ತವ್ಯ ಮರೆತ ಶಿಕ್ಷಕರು, ಈ ಬಾರಿ ತರಗತಿ ಕೊಠಡಿಗೆ ಅಲ್ಲ, ಬದಲಿಗೆ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸನ್ಮಾನಕ್ಕೆ ದಂಡಾಗಿ ಹಾಜರಾಗಿ ಗಮನಸೆಳೆದಿದ್ದಾರೆ. ಅಥಣಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಹೊಸ ಬಿಇಒ ಎಂ. ಆರ್. ಮುಂಜೆ ಅವರು ಅಧಿಕಾರ ಸ್ವೀಕರಿಸಿದರು. ಅವರನ್ನು ಅಭಿನಂದಿಸಲು ಹಲವಾರು ಶಾಲೆಗಳ …
Read More »
Laxmi News 24×7