Breaking News

ರಾಷ್ಟ್ರೀಯ

ಹಳೆ ವೈಷಮ್ಯ ಹಿನ್ನೆಲೆ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್​ನಲ್ಲಿ ನಡೆದಿದೆ.

ಬೆಳಗಾವಿ : ಹಳೇ ವೈಷಮ್ಯ ಹಿನ್ನೆಲೆ ಪೆಟ್ರೋಲ್ ಬಂಕ್​​ನಲ್ಲಿ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಭಾನುವಾರ ರಾತ್ರಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದೆ. ಗೋಕಾಕ್​ ಪಟ್ಟಣದ ಆದಿಜಾಂಬವ ನಗರದ ನಿವಾಸಿ ಶಾನೂರು ಪೂಜಾರಿ (27) ಕೊಲೆಯಾದ ಯುವಕ. ಘಟನೆಯಿಂದ ಕೆರಳಿದ ಮೃತ ಯುವಕನ ಕುಟುಂಬಸ್ಥರು ಅದೇ ಕಾಲೋನಿಯ ಯುವಕರು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ, ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ 1 ಬೈಕ್, …

Read More »

ನೆದರ್ಲೆಂಡ್ಸ್​​​ ವಿರುದ್ಧ ಭಾರತ 160 ರನ್​ಗಳ ಗೆಲುವು

ಬೆಂಗಳೂರು: ಕಿವೀಸ್ ವಿರುದ್ಧದ ಸೆಮೀಸ್​ ಪಂದ್ಯಕ್ಕೂ ಮುನ್ನ ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ಭಾರತ ತಂಡ ನೆದರ್ಲೆಂಡ್ಸ್​ ಜೊತೆಗೆ ಉತ್ತಮ ಅಭ್ಯಾಸ ಪಂದ್ಯವನ್ನಾಡಿತು. 2023ರ ವಿಶ್ವಕಪ್​ನಲ್ಲಿ ಭಾರತ ತಂಡ ಲೀಗ್​ ಹಂತದಲ್ಲಿ ಒಂದೂ ಸೋಲನ್ನು ಕಾಣದೇ ಸೆಮಿ ಫೈನಲ್​ ಪ್ರವೇಶ ಪಡೆದುಕೊಂಡಿತು. ಬ್ಯಾಟಿಂಗ್​ ಮತ್ತು ಬೌಲಿಂಗ್ ತಂಡ ತನ್ನ ಪ್ರದರ್ಶನವನ್ನು ಹಾಗೇ ಮುಂದುವರೆಸಿದೆ.     ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು 4 ವಿಕೆಟ್ ​ನಷ್ಟಕ್ಕೆ 410 ರನ್​ …

Read More »

ಎನ್​ಡಿಆರ್​ಎಫ್​, ಎಸ್​​ಡಿಆರ್​ಎಫ್​ ನಿಯಮಗಳ ಪ್ರಕಾರ ರೈತರ ಖಾತೆಗೆ ಹಣ ಹಾಕಿ: ಹಾವೇರಿ ರೈತರ ಆಗ್ರಹ

ಹಾವೇರಿ: ಜಿಲ್ಲೆಯು ಹಿಂದೆಂದೂ ಕಾಣರಿಯದ ಬರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಹೀಗಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಮಯದಲ್ಲಿ ನೆರವಿಗೆ ಧಾವಿಸಬೇಕಿದ್ದ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಕೈಕಟ್ಟಿ ಕುಳಿತಿವೆ ಎಂದು ಜಿಲ್ಲಾ ರೈತ ಸಂಘ ಮತ್ತು ಹಸಿರು ಸೇನೆ ಆರೋಪಿಸಿದೆ. ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, “ಹಾವೇರಿ ಕೃಷಿ ಪ್ರಧಾನ ಜಿಲ್ಲೆ, ಆದ್ರೆ ಸತತ ಮೂರು ವರ್ಷ ಅತಿವೃಷ್ಟಿ ಇತ್ತು. ಈ ವರ್ಷ ಬರಗಾಲ ಉಂಟಾಗಿದೆ, …

Read More »

ಪಂಚರಾಜ್ಯ ಚುನಾವಣೆಯಲ್ಲಿ ಮೂರು ರಾಜ್ಯದಲ್ಲಿ ಬಿಜೆಪಿ ಬಹುಮತದೊಂದಿಗೆ ಆಡಳಿತಕ್ಕೆ ಬರುತ್ತದೆ ಎಂದ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ಪಂಚರಾಜ್ಯ ಚುನಾವಣೆಯಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢ ಈ ಮೂರು ರಾಜ್ಯದಲ್ಲಿ ಬಿಜೆಪಿ ಬಹುಮತದೊಂದಿಗೆ ಆಡಳಿತಕ್ಕೆ ಬರುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈಗಾಗಲೇ ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದ ದುರಾಡಳಿತದಿಂದ ಜನರು ಬೇಸತ್ತು ಹೋಗಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಜನರಿಗೆ ಮಾಡಿದ ಮೋಸದಂತೆ ರಾಜಸ್ಥಾನದಲ್ಲಿ ಮಾಡಿದ್ದಾರೆ” ಎಂದು ಕಿಡಿಕಾರಿದರು. “ಕರ್ನಾಟಕ ಸರ್ಕಾರ ಉಚಿತದ ಹೆಸರಿನಲ್ಲಿ ಹೇಳೋದು ಒಂದು ಮಾಡೋದು ಒಂದು ರೀತಿ. …

Read More »

ಯೋಧರೊಂದಿಗೆ ಬೆಳಕಿನ ಹಬ್ಬ ಆಚರಿಸಿದ ಮೋದಿ

ಹಿಮಾಚಲಪ್ರದೇಶ): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರತಿವರ್ಷದಂತೆ ಈ ಬಾರಿಯೂ ಬೆಳಕಿನ ಹಬ್ಬ ದೀಪಾವಳಿಯನ್ನು ಗಡಿ ಕಾಯುತ್ತಿರುವ ಸೈನಿಕರೊಂದಿಗೆ ಆಚರಿಸಿದ್ದಾರೆ. ಯೋಧರಿಗೆ ಸಿಹಿ ತಿನ್ನಿಸುವ ಮೂಲಕ ಹಬ್ಬದ ಶುಭಾಶಯ ಕೋರಿದ್ದಾರೆ. ಹಿಮಾಚಲಪ್ರದೇಶದ ಲೆಪ್ಚಾ ಪೋಸ್ಟ್​ಗೆ ಭಾನುವಾರ ಭೇಟಿ ನೀಡಿದ ಪ್ರಧಾನಿ, ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದರು. ಐಟಿಬಿಪಿ ಸೇನಾಧಿಕಾರಿಗಳ ಸಮವಸ್ತ್ರದಲ್ಲಿದ್ದ ಪ್ರಧಾನಿ ಭಾರತ್​ ಮಾತಾ ಕೀ ಜೈ ಎಂದು ಘೋಷಣೆ ಕೂಗಿದರು. ಬಳಿಕ ಮಾತನಾಡಿದ …

Read More »

ಪರಪ್ಪನ ಅಗ್ರಹಾರದಲ್ಲಿರುವ ಚೈತ್ರಾ ಮೇಲೆ ಮಹಿಳಾ ಕೈದಿಗಳಿಂದ ಹಲ್ಲೆ

 (ಬೆಂಗಳೂರು): ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಚೈತ್ರಾ ಮೇಲೆ ಆಫ್ರಿಕನ್ ಮಹಿಳಾ ಕೈದಿಗಳಿಂದ ಹಲ್ಲೆಯಾಗಿದೆ ಎಂದು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಷ್ಟ್ರಗೀತೆ ವಿಚಾರಕ್ಕೆ ನಡೆದ ಜಗಳದಲ್ಲಿ ಚೈತ್ರಾ ಮೇಲೆ ಆಫ್ರಿಕನ್ ಮಹಿಳಾ ಕೈದಿಗಳಿಂದ ಹಲ್ಲೆ ನಡೆದಿದೆ. ಇಂದು ಮಧ್ಯಾಹ್ನ ಮಹಿಳಾ ವಿಚಾರಣಾಧೀನ ಕೈದಿಗಳ ಬ್ಯಾರಕ್‌ನಲ್ಲಿ ರಾಷ್ಟ್ರಗೀತೆ ವಿಚಾರಕ್ಕೆ ಆಫ್ರಿಕನ್ ಮಹಿಳಾ ಕೈದಿಗಳು ಮತ್ತು ಚೈತ್ರಾ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಆಫ್ರಿಕನ್ ಮಹಿಳಾ ಕೈದಿಗಳು …

Read More »

ಅಮಲು ಪದಾರ್ಥ ಕುಡಿಸಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ

ಚಿಕ್ಕಮಗಳೂರು: ನರ್ಸ್​ವೊಬ್ಬಳು ತನ್ನ ಪ್ರಿಯಕರನಿಗಾಗಿ​ ವಸತಿ ಶಾಲೆಯ ಅಪ್ರಾಪ್ತ ವಯಸ್ಸಿನ ಹುಡುಗಿಯರಿಗೆ ಅಮಲು ಪದಾರ್ಥ ನೀಡಿ ಪ್ರಜ್ಞೆ ತಪ್ಪಿಸಿ ತನ್ನ ಲವರ್ ಜೊತೆ ಬಿಡುತ್ತಿದ್ದ ಪ್ರಕರಣವೊಂದು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಈ ಪ್ರಕರಣದಡಿ ನರ್ಸ್​ ಸೇರಿ ಮೂವರು ಆರೋಪಿಗಳನ್ನು ಕಡೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ವಸತಿ ಶಾಲೆಯ ಪ್ರಾಂಶುಪಾಲರು ಕಡೂರು ಠಾಣೆಗೆ ದೂರು ನೀಡಿದ್ದು, ತನಿಖೆ ಮುಂದುವರಿದಿದೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ವಸತಿ ಶಾಲೆಯ ಪಕ್ಕದ ಹಳ್ಳಿಯಲ್ಲಿ ಎನ್‌ಎಂ …

Read More »

ಆಟಗಾರರು ಸಾಂಪ್ರದಾಯಿಕ ಉಡುಗೆ ತೊಟ್ಟು ದೀಪಾವಳಿ ಹಬ್ಬವನ್ನು ಆದ್ಧೂರಿಯಾಗಿ ಆಚರಿಸಿದರು.

ಬೆಂಗಳೂರು: ದೇಶಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಜೊತೆಗೆ ವಿಶ್ವಕಪ್​ನ ಲೀಗ್ ಹಂತದ ಕೊನೆ ಪಂದ್ಯಾಟಕ್ಕೆ ಬೆಂಗಳೂರಿಗೆ ಬಂದಿಳಿದಿರುವ ಭಾರತ ತಂಡದ ಆಟಗಾರರು ದೀಪಾವಳಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದರು. ಇಂದು ಭಾರತ ಮತ್ತು ನೆದರ್ಲೆಂಡ್ಸ್​ ನಡುವಿನ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈಗಾಗಲೇ ಭಾರತವು ಲೀಗ್ ಹಂತದ 8 ಪಂದ್ಯಗಳಲ್ಲಿ ಗೆದ್ದು ಬೀಗಿದ್ದು, ಸೆಮಿಫೈನಲ್​ ಸೆಣಸಾಟಕ್ಕೆ ಸಜ್ಜಾಗಿದೆ. ಭಾರತವು ಇಂದು ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ನೆದರ್ಲೆಂಡ್ಸ್​ ತಂಡವನ್ನು …

Read More »

ಯುವತಿಯರ ಡೀಪ್​ ಫೇಕ್ ಫೋಟೋ ಪ್ರಕರಣ: ಎಸ್​ಪಿ ಪ್ರತಿಕ್ರಿಯೆ

ಬೆಳಗಾವಿ: ದೇಶಾದ್ಯಂತ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್​ ಫೇಕ್ ವಿಡಿಯೋ ಸದ್ದು ಮಾಡುತ್ತಿರುವಾಗಲೇ ಬೆಳಗಾವಿ ಜಿಲ್ಲೆಯಲ್ಲಿ ಡೀಪ್ ಫೇಕ್ ಫೋಟೋ ಎಡಿಟ್ ಪ್ರಕರಣ ಬೆಳಕಿಗೆ ಬಂದಿದೆ. ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿ ಹಾಗೂ ಆಕೆಯ ಇಬ್ಬರು ಸ್ನೇಹಿತೆಯರ ನಗ್ನ ಫೋಟೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದ ಖಾನಾಪುರದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಯುವಕನ ಪ್ರೀತಿಯನ್ನು ಯುವತಿ ನಿರಾಕರಿಸಿದ್ದಳು. ಇದರಿಂದಾಗಿ ನಿನ್ನ ಮತ್ತು ಸ್ನೇಹಿತೆಯರ …

Read More »

ಕುಂದಾನಗರಿಯಲ್ಲಿ ಕೋಟೆ ಕಟ್ಟಿ ಬೆಳಕಿನ ಹಬ್ಬ ಸಂಭ್ರಮಿಸುವ ಮಕ್ಕಳು

ಬೆಳಗಾವಿ: ದೀಪಾವಳಿ ಹಬ್ಬವನ್ನು ಒಂದೊಂದು ಭಾಗಗಳಲ್ಲಿ ಒಂದೊಂದು ರೀತಿ ಆಚರಿಸುತ್ತಾರೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಕ್ಕಳು ಕೋಟೆ ಕಟ್ಟಿ ಸಂಭ್ರಮಿಸುತ್ತಾರೆ. ಛತ್ರಪತಿ ಶಿವಾಜಿ ಮಹಾರಾಜರ ಧೈರ್ಯ, ಸಾಹಸ, ಪರಾಕ್ರಮವನ್ನು ಇಂದಿನ ಪೀಳಿಗೆಗೆ ತಿಳಿಸುವ ಕೆಲಸ ಮಾಡುತ್ತಿದ್ದಾರೆ. ಆ ಕುರಿತು ಈಟಿವಿ ಭಾರತದ ವಿಶೇಷ ವರದಿ ಇಲ್ಲಿದೆ. ದೀಪಾವಳಿ ಹಬ್ಬಕ್ಕೆ ಪಟಾಕಿ ಹಚ್ಚಿ, ದೀಪ ಬೆಳಗಿಸಿ, ಸಿಹಿ ಹಂಚಿ ಸಂಭ್ರಮಿಸುವುದು ಸಾಮಾನ್ಯ. ಆದರೆ ಕುಂದಾನಗರಿಯ ಮಕ್ಕಳು ಮಾತ್ರ ಐತಿಹಾಸಿಕ ಕೋಟೆಗಳ ಮಾದರಿ ನಿರ್ಮಿಸಿ …

Read More »