Breaking News

ರಾಷ್ಟ್ರೀಯ

ದೀಪಾವಳಿ ಹಬ್ಬ : ಮಣ್ಣಿನ ಹಣತೆಗಳ ಖರೀದಿಯಲ್ಲಿ ನಿರತರಾದ ಸಿಲಿಕಾನ್ ಸಿಟಿ ಮಂದಿ

ಬೆಂಗಳೂರು : ದೀಪಾವಳಿ ಹಬ್ಬದಲ್ಲಿ ಎಲ್ಲೆಡೆ ಸಂಭ್ರಮ ಮನೆಮಾಡಿದೆ. ಮೂರು ದಿನಗಳ ಕಾಲ ಸಾಲು ಸಾಲು ದೀಪಗಳನ್ನು ಹಚ್ಚಿ ಸಂಭ್ರಮಿಸುವುದು ಈ ಹಬ್ಬದ ಸಂಪ್ರದಾಯ. ಅಂಧಕಾರವ ಕಳೆದು ಬೆಳಕಿನೆಡೆಗೆ ಕರೆದುಕೊಂಡು ಹೋಗುವ ದೀಪಗಳ ಹಬ್ಬವನ್ನು ಸ್ವಾಗತಿಸಲು ನಗರದ ಮಾರುಕಟ್ಟೆಯಲ್ಲಿ ಬಗೆಬಗೆಯ ಹಣತೆಗಳು ಬಂದಿವೆ. ಮಣ್ಣಿನ ದೀಪಗಳು ದುಬಾರಿ ಎನಿಸಿದರೂ ಪರಿಸರ ಸ್ನೇಹಿ ದೀಪಗಳಾಗಿರುವುದರಿಂದ ಬೇಡಿಕೆ ಹೆಚ್ಚಿದೆ. ನಗರದಲ್ಲಿ ಜೇಡಿ ಮಣ್ಣಿನಿಂದ ಹೂವು, ಆನೆಯ ಮಾದರಿಯ ದೀಪ, ನವಿಲುಗರಿ ಮತ್ತು ಮಹಿಳಾ ಪ್ರತಿರೂಪದ …

Read More »

ಡಿಕೆಶಿಯವರೊಂದಿಗೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ ಎಂದ ಜಾರಕಿಹೊಳಿ

ಬೆಳಗಾವಿ: ನಾನು ಯಾವುದೇ ಹುದ್ದೆಗೆ ಬೇಡಿಕೆ ಇಟ್ಟಿಲ್ಲ. ಉಪಮುಖ್ಯಮಂತ್ರಿ (DCM) ಡಿ.ಕೆ. ಶಿವಕುಮಾರ್ (D.K. Shivakumar) ಅವರೊಂದಿಗೆ ಹೊಂದಾಣಿಕೆ ಆಗುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಸತೀಶ್​ ಜಾರಕಿಹೊಳಿ (Sathish jarakiholi) ಹೇಳಿದರು. ಬೆಳಗಾವಿ (belagavi) ರಾಜಕಾರಣದಲ್ಲಿ ಬೇರೆಯವರ ಹಸ್ತಕ್ಷೇಪದ ಕುರಿತು ಮುನಿಸಿಕೊಂಡಿರುವ ಜಾರಕಿಹೊಳಿ ಬೆಳಗಾವಿಯಲ್ಲಿ ಮಾತನಾಡಿ, ಈ ಬಗ್ಗೆ ಪಕ್ಷದ ವತಿಯಿಂದ ಚರ್ಚೆ ನಡೆಯಬೇಕು. ನಾವು ಏನೂ ಮಾಡಲು ಸಾಧ್ಯವಿಲ್ಲ ಎಂದರು. ಡಿ.ಕೆ. ಶಿವಕುಮಾರ್ ಅವರು ಹಲವು ಬಾರಿ …

Read More »

ಸರ್ಕಾರದಲ್ಲಿ ಹಣ ಇಲ್ಲ, ದಿವಾಳಿಯಾಗಿರುವುದು ಸ್ಪಷ್ಟ:B.S.Y.

ಬೆಂಗಳೂರು: ರಾಜ್ಯದಲ್ಲಿ ಬರಗಾಲ (Drought) ಆವರಿಸಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ (BJP) ಮುಖಂಡರು ಬರ ಅಧ್ಯಯನ ನಡೆಸುತ್ತಿದ್ದಾರೆ. ಬರ ಅಧ್ಯಯನದ ನಂತರ ಸರ್ಕಾರಕ್ಕೂ ಒಂದು ವಾಸ್ತವದ ಚಿತ್ರಣ ನೀಡುತ್ತೇವೆ. ರಾಜ್ಯದಲ್ಲಿ ಎಲ್ಲ ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗಿದೆ. ಸರ್ಕಾರದಲ್ಲಿ ಹಣ ಇಲ್ಲ, ದಿವಾಳಿಯಾಗಿರುವುದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ (Bengaluru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬಿಎಸ್ ವೈ, …

Read More »

ಬೆಂಗಳೂರಲ್ಲಿ ಇಸ್ಟೀಟ್ ಜೂಜು ಅಡ್ಡೆ ಮೇಲೆ ದಾಳಿ; 150ಕ್ಕೂ ಹೆಚ್ಚು ಜೂಜುಕೋರರು ಪೊಲೀಸ್ ವಶಕ್ಕೆ

ಬೆಂಗಳೂರು: ಅಕ್ರಮವಾಗಿ ನಡೆಯುತ್ತಿದ್ದ ಇಸ್ಟೀಟ್ ಅಡ್ಡೆ ಮೇಲೆ ಏಕಾಏಕಿ ದಾಳಿ ನಡೆಸಿದ ನಗರ ಪಶ್ಚಿಮ ವಿಭಾಗದ‌ ಪೊಲೀಸರು 150ಕ್ಕೂ ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.   ಬಸವೇಶ್ವರ ನಗರದಲ್ಲಿರುವ ಅಡಿಗ ರಮ್ಮಿ‌ ಕ್ಲಬ್​ನಲ್ಲಿ ಅಕ್ರಮ ಚಟುವಟಿಕೆ ಕುರಿತು ಖಚಿತ ಮಾಹಿತಿ ಮೇರೆಗೆ ಬಸವೇಶ್ವರ ನಗರ ಹಾಗೂ ಗೋವಿಂದರಾಜ ನಗರ ಪೊಲೀಸರು ದಾಳಿ ನಡೆಸಿದ್ದಾರೆ‌.‌ ಕ್ಲಬ್​ನಲ್ಲಿ‌ 150ಕ್ಕೂ ಹೆಚ್ಚು ಮಂದಿ ಇಸ್ಟೀಟ್ ದಂಧೆಯಲ್ಲಿ ತೊಡಗಿಸಿಕೊಂಡಿದ್ದರು. ಎಲ್ಲರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ. ದಾಳಿ ಲಕ್ಷಾಂತರ ರೂಪಾಯಿ …

Read More »

ನಾನೊಬ್ಬ ಸಾಮಾನ್ಯ ಕಾರ್ಯಕರ್ತ, ಈಗೇನಾದ್ರು ಮಾತನಾಡಿದ್ರೆ ನಮಗೇ ತಿರುಗುಬಾಣವಾಗುತ್ತೆ; ಸಿ ಟಿ ರವಿ

ಬೆಂಗಳೂರು: ಬಹುದಿನಗಳಿಂದ ಚರ್ಚೆಯಲ್ಲಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ವಿಚಾರ ಇದೀಗ ಪೂರ್ಣಗೊಂಡಿದೆ. ಬಿಜೆಪಿ ಹೈಕಮಾಂಡ್​ ಕೊನೆಗೂ ಅಳೆದು ತೂಗಿ ಬಿ ವೈ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಪಟ್ಟವನ್ನು ನೀಡಿದೆ. ಇನ್ನು ರಾಜ್ಯಾಧ್ಯಕ್ಷರ ರೇಸ್​ನಲ್ಲಿ ಸಿ ಟಿ ರವಿ ಸೇರಿದಂತೆ ಹಲವು ನಾಯಕರ ಹೆಸರು ಮುಂಚೂಣಿಯಲ್ಲಿದ್ದವು. ಈ ಬಗ್ಗೆ ಸ್ವತಃ ಬಿಜೆಪಿ ನಾಯಕ ಸಿ ಟಿ ರವಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮಧ್ಯಪ್ರದೇಶದಿಂದ ಬೆಂಗಳೂರಿಗೆ ಆಗಮಿಸಿದ ಸಿ ಟಿ ರವಿ ಅವರು ಈ …

Read More »

ಪೇಪರ್ ಮಿಲ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪೇಪರ್ ಭಸ್ಮ

ಮೈಸೂರು : ಪೇಪರ್ ಮಿಲ್ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪೇಪರ್ ಭಸ್ಮವಾಗಿರುವ ಘಟನೆ ಜಿಲ್ಲೆಯ ನಂಜನಗೂಡಿನ ಬಳಿ ನಡೆದಿದೆ. ಇಲ್ಲಿನ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿರುವ ಸೌತ್ ಇಂಡಿಯಾ ಪೇಪರ್ ಮಿಲ್​ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸುದ್ದಿ ತಿಳಿದಾಕ್ಷಣ ಅಗ್ನಿಶಾಮಕ ದಳದವರು ತಕ್ಷಣ ಘಡನಾ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ನಂಜನಗೂಡು ಬಳಿಯ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ ಇರುವ ಸೌತ್ ಇಂಡಿಯಾ ಪೇಪರ್ ಮಿಲ್ …

Read More »

ಬಿಡದಿಗೆ ‘ನಮ್ಮ ಮೆಟ್ರೋ’ : ಡಿಸಿಎಂ ಡಿಕೆ ಶಿವಕುಮಾರ್​ ಘೋಷಣೆ

ರಾಮನಗರ: ಬಿಡದಿಯು ಕೈಗಾರಿಕಾ ಪ್ರದೇಶವಾಗಿದ್ದು, ಇಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನ ಉದ್ಯೋಗ ಮಾಡುತ್ತಿದ್ದಾರೆ. ಅವರ ಓಡಾಟಕ್ಕೆ ಅನುಕೂಲವಾಗಲಿ ಎಂಬ ದೃಷ್ಠಿಯಿಂದ ಬಿಡದಿಗೆ ನಮ್ಮ ಮೆಟ್ರೋ ಘೋಷಣೆ ಮಾಡಲಾಗಿದೆ. ಹಾಗೆಯೇ ಇನ್ನು ಮುಂದೆ ಬಿಡದಿ ಪ್ರಾಧಿಕಾರ ಹೆಸರಿಗೆ ಬದಲಾಗಿ ಗ್ರೇಟರ್ ಬೆಂಗಳೂರು ಎಂಬ ಹೊಸ ನಾಮಕರಣ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾತನಾಡಿದ ಅವರು, ಬಿಡದಿಯಲ್ಲಿ ನಮ್ಮ ಮೆಟ್ರೋ ಮಾಡುವ ಬಗ್ಗೆ ಇಲ್ಲಿನ ಎಂಎಲ್‌ಎ …

Read More »

ಬೌರಿಂಗ್ ಆಸ್ಪತ್ರೆಯ ಡಾ ಶ್ರೀಕಾಂತ್ ಅಮಾನತುಗೊಳಿಸಿ: ಸಚಿವ ಡಾ ಶರಣ ಪ್ರಕಾಶ್ ಪಾಟೀಲ್​ಗೆ ದೂರು

ಬೆಂಗಳೂರು : ರಾಜ್ಯ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ನಡುವೆ ವೈದ್ಯಸೇವೆ ಬಿಟ್ಟು ಡಿ ದರ್ಜೆ ನೌಕರನಂತೆ ಕೆಲಸ ನಿರ್ವಹಣೆ ಮಾಡುತ್ತಿರುವ ಬೌರಿಂಗ್ ಸಂಸ್ಥೆಯ ಡಾ. ಹೆಚ್. ಎಂ ಶ್ರೀಕಾಂತ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರಿಗೆ ದೂರು ಸಲ್ಲಿಕೆ ಮಾಡಲಾಗಿದೆ. ನಗರದಲ್ಲಿಂದು ಜನತಾ ಪಕ್ಷದ ಕರ್ನಾಟಕ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ಎನ್. ನಾಗೇಶ್ ಅವರು ದೂರು ಸಲ್ಲಿಕೆ ಮಾಡಿದ್ದು, ರಾಜಧಾನಿ …

Read More »

ಅಂಗಾಂಗ ದಾನ ಮಾಡದ ವ್ಯಕ್ತಿಗೆ ಸರ್ಕಾರಿ ಗೌರವ ಸಲ್ಲಿಸಿದ ತಮಿಳುನಾಡು ಸರ್ಕಾರ

ಚೆನ್ನೈ (ತಮಿಳುನಾಡು): ರಸ್ತೆ ಅಪಘಾತದಿಂದ ಮೃತಪಟ್ಟ ವ್ಯಕ್ತಿಯ ಅಂಗಾಂಗ ದಾನ ಮಾಡುವ ಮೂಲಕ ಆತನ ಕುಟುಂಬಸ್ಥರು ಸಾರ್ಥಕತೆ ಮೆರೆದಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದ ತಿರುಪತಿಯ ಚಿತ್ತೂರು ರಾಘವೇಂದ್ರ ನಗರದ ನಿವಾಸಿಯಾದ ಯುವರಾಜುಲು ನಾಯ್ಡು (61) ಅವರು, ನವೆಂಬರ್ 3 ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರದೃಷ್ಟವಾಶತ್​ ಅವರು ಚಿಕಿತ್ಸೆ ಫಲಕಾರಿಯಾಗದೇ ನವೆಂಬರ್ 7ರ ಸಂಜೆ 5.52ಕ್ಕೆ ನಿಧನರಾಗಿದ್ದರು. ನಂತರ ಯುವರಾಜುಲು ನಾಯ್ಡು …

Read More »

ಬೆಳಗಾವಿಯಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮುಗಿಬಿದ್ದ ಕೇಸರಿ ಪಡೆ

ಬೆಳಗಾವಿ : ಚಳಿಗಾಲ ಅಧಿವೇಶನಕ್ಕಿಂತ ಮುಂಚೆ ತುಘಲಕ್ ದರ್ಬಾರ್​​ನ ರೈತ ವಿರೋಧಿ ಆದೇಶಗಳನ್ನು ವಾಪಸ್​ ಪಡೆದು ಮುಖ್ಯಮಂತ್ರಿಗಳು ಬೆಳಗಾವಿಗೆ ಬರಬೇಕು. ಇಲ್ಲದಿದ್ದರೆ ರೈತರು ಅಧಿವೇಶನದ ವೇಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಬೇಕಾಗುತ್ತದೆ. ಅಲ್ಲದೇ ವಿದ್ಯುತ್ ಖಾತೆ ಬಗ್ಗೆ ಜ್ಞಾನವಿಲ್ಲದ ಕೆ. ಜೆ ಜಾರ್ಜ್ ಅವರನ್ನು ಸಂಪುಟದಿಂದ ಕೈ ಬಿಡುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆಗ್ರಹಿಸಿದರು. ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬೆಳಗಾವಿಯಲ್ಲಿ ಬಿಜೆಪಿ …

Read More »