Breaking News

ರಾಷ್ಟ್ರೀಯ

ಕೆಇಎ ಪರೀಕ್ಷಾ ಹಗರಣದ ಪ್ರಮುಖ ಆರೋಪಿ ಆರ್‌ಡಿ ಪಾಟೀಲ್​​ನ​ನ್ನು ಕಲಬುರಗಿ ಜಿಲ್ಲೆಯ ವಿಶೇಷ ಪೊಲೀಸ್ ತಂಡ ಮಹಾರಾಷ್ಟ್ರ ಗಡಿಯಲ್ಲಿ ಬಂಧಿಸಿದ್ದಾರೆ.

ಕಲಬುರಗಿ: ಕೆಇಎ ನಡೆಸಿರೋ ಎಫ್‌ಡಿಎ ಪರೀಕ್ಷೆಯಲ್ಲಿ ಅಕ್ರಮ ಎಸೆಗಿರುವ ಆರೋಪ ಎದುರಿಸುತ್ತಿರುವ ಪ್ರಕರಣದ ಕಿಂಗ್‌ಪಿನ್ ಆರ್‌ಡಿ ಪಾಟೀಲ್​ನ್ನು ಕೊನೆಗೂ ಬಂಧನ ಮಾಡಲಾಗಿದೆ. ಮಹಾರಾಷ್ಟ್ರ ಗಡಿಯಲ್ಲಿ ಕಲಬುರಗಿ ಜಿಲ್ಲೆಯ ವಿಶೇಷ ಪೊಲೀಸ್ ತಂಡದಿಂದ ಕಿಂಗ್‌ಪಿನ್ ಆರ್‌ಡಿ ಪಾಟೀಲ್ ನನ್ನು ಅರೆಸ್ಟ್​ ಮಾಡಲಾಗಿದೆ. ಆರ್‌ಡಿಪಿಯನ್ನು ಬಂಧಿಸಿದ್ದು, ಕಲಬುರಗಿಗೆ ಕರೆತರುವ ಸಾಧ್ಯತೆ ಇದೆ. ಕಳೆದ 12 ದಿನಗಳಿಂದ ತಲೆಮರೆಸಿಕೊಂಡಿದ್ದ ಕೆಇಎ ಪರೀಕ್ಷಾ ಹಗರಣದ ಪ್ರಮುಖ ಆರೋಪಿ ಆರ್‌ಡಿ ಪಾಟೀಲ್, ನವೆಂಬರ್​ 6 ರಂದು ಕಲಬುರಗಿ ನಗರದ …

Read More »

ಹಾಡಹಗಲೇ ರಸ್ತೆಯಲ್ಲಿ ಮಹಿಳೆ ಅಟ್ಟಾಡಿಸಿ ಹಿಗ್ಗಾಮುಗ್ಗಾ ಥಳಿತ

ಹುಬ್ಬಳ್ಳಿ: ಹಾಡಹಗಲೇ ಮಹಿಳೆಯೊಬ್ಬಳನ್ನು ನಡುರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಇಟ್ಟಿಗೆ, ಚಪ್ಪಲಿಯಿಂದ ಥಳಿಸಿದ ಘಟನೆ ವಿದ್ಯಾನಗರದ ಕಿಮ್ಸ್ ಆಸ್ಪತ್ರೆಯ ಹಿಂಭಾಗದಲ್ಲಿ ಗುರುವಾರ ನಡೆದಿದೆ. ಹಲ್ಲೆಗೊಳಗಾದ ಮಹಿಳೆ ಸುಮಾರು 10 ವರ್ಷಗಳಿಂದ ಕಿಮ್ಸ್​ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಮಹಿಳೆ ಮೇಲೆ ವ್ಯಕ್ತಿ ಸೇರಿದಂತೆ ಕೆಲ ಮಹಿಳೆಯರು ಹಲ್ಲೆ ನಡೆಸಿದ್ದು, ಕಾರಣ ಏನೆಂಬುದು ತಿಳಿದು ಬಂದಿಲ್ಲ. ವ್ಯಕ್ತಿಯ ಕುಟುಂಬಸ್ಥರೂ ಸೇರಿಕೊಂಡು ಮಹಿಳೆಗೆ ನಡುರಸ್ತೆಯಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವೇಳೆ ಮಹಿಳೆಯ ಸಹೋದರಿ ಮಧ್ಯ …

Read More »

ಹೊಸ ಸಂಸತ್​ ಭವನದಲ್ಲಿ ಡಿಸೆಂಬರ್​ 4 ರಿಂದ ಚಳಿಗಾಲದ ಅಧಿವೇಶನ

ನವದೆಹಲಿ: ಪಂಚರಾಜ್ಯ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಚಳಿಗಾಲದ ಸಂಸತ್​ ಅಧಿವೇಶನ ಡಿಸೆಂಬರ್​ 4 ರಿಂದ ಆರಂಭವಾಗಲಿದೆ. ಡಿಸೆಂಬರ್ 22 ರವರೆಗೆ ಅಂದರೆ 19 ದಿನಗಳ ಕಾಲ ನಡೆಯಲಿದೆ. ಇಷ್ಟು ದಿನಗಳಲ್ಲಿ 15 ಕಲಾಪಗಳನ್ನು ನಡೆಸಲು ಕೇಂದ್ರ ಸರ್ಕಾರ ಯೋಜಿಸಿದೆ.     ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ (ಟ್ವಿಟರ್​) ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್​ ಜೋಶಿ ಅವರು, ಅಮೃತ ಕಾಲದ ಅಧಿವೇಶನದಲ್ಲಿ ಸರ್ಕಾರದ ಕಾರ್ಯಗಳು …

Read More »

ಬರ ಪರಿಹಾರದ ಬಗ್ಗೆ ಕೇಂದ್ರದ ಮಲತಾಯಿ ಧೋರಣೆಗೆ ಸಚಿವ ಸಂಪುಟ ಸಭೆಯಲ್ಲಿ ತೀವ್ರ ಕಳವಳ: ಹೆಚ್​ ಕೆ ಪಾಟೀಲ್

ಬೆಂಗಳೂರು: ಬರ ಪರಿಹಾರಕ್ಕೆ ಕೇಂದ್ರದಿಂದ ಸ್ಪಂದಿಸದೇ ಇರುವ ಬಗ್ಗೆ ಸಚಿವ ಸಂಪುಟದಲ್ಲಿ ಕಳವಳ ವ್ಯಕ್ತವಾಗಿದ್ದು, ಸಚಿವರು ಎಲ್ಲ ತಾಲೂಕು, ಜಿಲ್ಲಾ ಕೇಂದ್ರಗಳಿಗೆ ತೆರಳಿ ಬರ ಪರಿಸ್ಥಿತಿ, ನಿರ್ವಹಣೆ ಬಗ್ಗೆ ಪರಿಶೀಲಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಹೆಚ್ ಕೆ ಪಾಟೀಲ್, ಇಂದಿನವರೆಗೆ ಕೇಂದ್ರ ಸರ್ಕಾರದಿಂದ ನಯಾ ಪೈಸೆ ಬರ ಪರಿಹಾರ ಬಂದಿಲ್ಲ. ಸಂಪುಟ ಸಭೆಯಲ್ಲಿ ಬರದ ಬಗ್ಗೆ ಸುದೀರ್ಘ …

Read More »

ಸತೀಶ್ ಜಾರಕಿಹೊಳಿ ಹೆಗಲಿಗೆ ಕೈ ಹಾಕಿಕೊಂಡು ಸಂಪುಟ ಸಭೆಗೆ ಬಂದ ಡಿಕೆಶಿ

ಬೆಂಗಳೂರು: ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಕೆಂಗಲ್ ಗೇಟ್ ಮೂಲಕ ಆಗಮಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಚಿವರಾದ ಕೆ.ಎನ್.ರಾಜಣ್ಣ ಹಾಗೂ ಸತೀಶ್ ಜಾರಕಿಹೊಳಿ ಹೆಗಲಿಗೆ ಕೈ ಹಾಕುತ್ತಾ ಬಂದು ಗಮನ ಸೆಳೆದರು. ಇತ್ತೀಚೆಗೆ ಕೆ.ಎನ್.ರಾಜಣ್ಣ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ರಾಜ್ಯದಲ್ಲಿ ಮೂರು ಡಿಸಿಎಂ ಆಗಬೇಕು ಎಂದು ಹೈಕಮಾಂಡ್ ನಾಯಕರನ್ನು ಒತ್ತಾಯಿಸಿದ್ದರು. ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಬೇಕೆಂಬ ಅಪೇಕ್ಷೆ ಇದೆ ಎಂದಿದ್ದರು. ಸಿಎಂ ಸ್ಥಾನಕ್ಕೆ ಡಾ.ಜಿ.ಪರಮೇಶ್ವರ್ …

Read More »

ಹಳೆ ಜಾತಿ ಗಣತಿ ವರದಿ ಕೈಬಿಡಿ, ಹೊಸದಾಗಿ ಸಮೀಕ್ಷೆ ನಡೆಸಿ: ವೀರಶೈವ ಮಹಾಸಭೆ ಆಗ್ರಹ

ಬೆಂಗಳೂರು: ಹಲವು ಲೋಪದೋಷಗಳಿಂದ ಕೂಡಿರುವ ಜಾತಿ ಗಣತಿ ಸಮೀಕ್ಷಾ ವರದಿಯನ್ನು ಸ್ವೀಕರಿಸದೆ ಹೊಸದಾಗಿ ವೈಜ್ಞಾನಿಕತೆಯಿಂದ ಕೂಡಿದ ಜಾತಿ ಗಣತಿ ಸಮೀಕ್ಷೆ ನಡೆಸಬೇಕೆಂದು ಅಖಿಲ ಭಾರತ ವೀರಶೈವ ಮಹಾಸಭೆಯು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಜಾತಿ ಗಣತಿ ವರದಿ ಈ ತಿಂಗಳ ಅಂತ್ಯದೊಳಗೆ ಸಲ್ಲಿಕೆಯಾಗುತ್ತಿರುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಗುರುವಾರ ಅಖಿಲ ಭಾರತ ವೀರಶೈವ ಮಹಾಸಭೆ ಪದಾಧಿಕಾರಿಗಳು ಸಭೆ ನಡೆಸಿದರು. ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷರಾದ ಮಾಜಿ ಸಚಿವ …

Read More »

ವಿರುಷ್ಕಾ’ ಜೋಡಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ವದಂತಿ ಹರಡಿದೆ.

ವಿರುಷ್ಕಾ’ ಜೋಡಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ವದಂತಿ ಹರಡಿದೆ. ಬಾಲಿವುಡ್​​ ನಟಿ ಅನುಷ್ಕಾ ಶರ್ಮಾ ಎರಡನೇ ಮಗುವಿಗೆ ತಾಯಿಯಾಗುತ್ತಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿದೆ. ಈ ಸುದ್ದಿಯನ್ನು ತಾರಾ ದಂಪತಿ ಖಚಿತಪಡಿಸಿಲ್ಲ. ಆದ್ರೀಗ ವಿರುಷ್ಕಾ ಜೋಡಿಯ ವಿಡಿಯೋವೊಂದು ಆನ್​​ಲೈನ್​ನಲ್ಲಿ ಕಾಡ್ಗಿಚ್ಚಿನಂತೆ ವೈರಲ್​ ಆಗಿದೆ. ಇದರಲ್ಲಿ ಅನುಷ್ಕಾ ಶರ್ಮಾ ಪ್ರೆಗ್ನೆಂಟ್​ ಎಂಬುದು ನೆಟ್ಟಿಗರ ಗುಮಾನಿ.

Read More »

ಟಿಪ್ಪು ಜಯಂತಿ: ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ

ಮಂಡ್ಯ: ಟಿಪ್ಪು ವಕ್ಫ್ ಬೋರ್ಡ್​ನಿಂದ ಇಂದು ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬೆಳಿಗ್ಗೆ 6 ರಿಂದ 11 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಆದೇಶ ಹೊರಡಿಸಿದ್ದಾರೆ.   ಶ್ರೀರಂಗಪಟ್ಟಣ ಸೂಕ್ಷ್ಮ ಪ್ರದೇಶವಾಗಿದ್ದು ಬೆಳಿಗ್ಗೆ 11 ಗಂಟೆಯವರೆಗೆ 144 ಸೆಕ್ಷನ್ ಜಾರಿಯಲ್ಲಿರಲಿದೆ. ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ. ನಗರದಲ್ಲಿ ಮೆರವಣಿಗೆ, ಪ್ರತಿಭಟನೆ, ಸಭೆ-ಸಮಾರಂಭ, ರ್ಯಾಲಿ, ಪಟಾಕಿ ಸಿಡಿಸುವುದು, …

Read More »

ಗ್ರಾಹಕರ ಸೋಗಿನಲ್ಲಿ ಬಂದು ಬೆಳಗಾವಿಯ ಬಟ್ಟೆ ಅಂಗಡಿಯೊಂದರಲ್ಲಿ ಬೆಲೆಬಾಳುವ ಸೀರೆ ಕದ್ದೊಯ್ದಿದ್ದ 8 ಅಂತರರಾಜ್ಯ ಕಳ್ಳರ ಬಂಧನ

ಬೆಳಗಾವಿ: ಗ್ರಾಹಕರ ಸೋಗಿನಲ್ಲಿ ಬಂದು ಬೆಳಗಾವಿಯ ಬಟ್ಟೆ ಅಂಗಡಿಯೊಂದರಲ್ಲಿ ಬೆಲೆಬಾಳುವ ಸೀರೆ ಕದ್ದೊಯ್ದಿದ್ದ ಅಂತರರಾಜ್ಯ ಕಳ್ಳರನ್ನು ಹೆಡೆಮುರಿ ಕಟ್ಟುವಲ್ಲಿ ಬೆಳಗಾವಿ ಖಡೇಬಜಾರ್ ಪೊಲೀಸರು ಯಶಸ್ವಿಯಾಗಿದ್ದಾರೆ‌. ಆಂಧ್ರಪ್ರದೇಶದ ಗುಂಟೂರಿನ ಕಳ್ಳರ ಗ್ಯಾಂಗ್ ಇದಾಗಿದ್ದು, ಮಹಾರಾಷ್ಟ್ರದ ಶಿರಡಿಯಲ್ಲಿ ಆರು ಜನ ಮಹಿಳೆಯರು, ಇಬ್ಬರು ಪುರುಷರು ಸೇರಿ ಒಟ್ಟು 8 ಜನರನ್ನು ಬಂಧಿಸಿ ಪೊಲೀಸರು ಬೆಳಗಾವಿಗೆ ಕರೆತಂದಿದ್ದಾರೆ. ಖಡೇಬಜಾರ್​ನಲ್ಲಿರುವ ವಿರೂಪಾಕ್ಷಿ ಬಟ್ಟೆ ಅಂಗಡಿಯಲ್ಲಿ ನವೆಂಬರ್​ 3ರಂದು ಕಳ್ಳತನ ನಡೆದಿತ್ತು. ಎರಡು ತಂಡಗಳಲ್ಲಿ ಅಂಗಡಿಗೆ ಬಂದಿದ್ದ ಆರೋಪಿಗಳು …

Read More »

ತೆಲಂಗಾಣದಲ್ಲಿಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಮತಬೇಟೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ತೆಲಂಗಾಣಕ್ಕೆ ತೆರಳಲಿದ್ದಾರೆ. ಚುನಾವಣಾ ರ‍್ಯಾಲಿಯಲ್ಲಿ ಭಾಗವಹಿಸಲಿರುವ ಅವರು ಕಾಂಗ್ರೆಸ್ ಪರ ಮತಯಾಚನೆ ಮಾಡುವರು. ಬೆಳಿಗ್ಗೆ 11.30ಗಂಟೆಗೆ ಸಿದ್ದರಾಮಯ್ಯ ಬೆಂಗಳೂರಿನಿಂದ ಹೈದರಾಬಾದ್​ಗೆ ಹೊರಡಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ‌ಮೂಲಕ ಕಾಮರೆಡ್ಡಿ ಜಿಲ್ಲೆಗೆ ತೆರಳುವರು. ಕಾಮರೆಡ್ಡಿ ನಗರದಲ್ಲಿ 2 ಗಂಟೆಗೆ ಬೃಹತ್ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಮತಯಾಚಿಸುವರು. ಸಂಜೆ 6.30ಕ್ಕೆ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಡಿ.ಕೆ.ಶಿವಕುಮಾರ್ ಕ್ಯಾಂಪೇನ್: ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ತೆಲಂಗಾಣದ ಕೋದಡ್​ನಲ್ಲಿ ಪ್ರಚಾರ ನಡೆಸಲಿದ್ದಾರೆ. ಶುಕ್ರವಾರ …

Read More »