ಬೆಳಗಾವಿ: ಬೆಳಗಾವಿಯ ಎಚ್.ಡಿ.ಕುಮಾರಸ್ವಾಮಿ ಲೇಔಟ್ನಲ್ಲಿ ವಿದ್ಯುತ್ ಟ್ರಾನ್ಸ್ಫಾರ್ಮರ್ಗಳ ವೈರ್ಗಳು ನೇತಾಡುತ್ತಿವೆ. ಈ ಪ್ರದೇಶದಲ್ಲಿ ಜನರು ಜೀವಭಯದಲ್ಲಿ ಸಂಚರಿಸುತ್ತಿದ್ದಾರೆ. ಅರೆಕ್ಷಣ ಯಾಮಾರಿದ್ರೂ ಜೀವಕ್ಕೆ ಕುತ್ತು ಬರುವ ಸಾಧ್ಯತೆ ಹೆಚ್ಚು ಅನ್ನೋದು ಜನರ ಆತಂಕ. ಇಲ್ಲಿ 15 ವಿದ್ಯುತ್ ಟ್ರಾನ್ಸ್ಫಾರ್ಮರ್ಗಳನ್ನು ಅಳವಡಿಸಲಾಗಿದ್ದು, ಅವುಗಳು ನೆಲದಿಂದ ಕೇವಲ ಎರಡು ಅಡಿಯಷ್ಟು ಮಾತ್ರ ಎತ್ತರದಲ್ಲಿವೆ. ಟಿಸಿ ಬಾಕ್ಸ್ನ ಬಾಗಿಲುಗಳು ತೆರೆದುಕೊಂಡಿದ್ದು, ವೈರ್ಗಳು ನೇತಾಡುತ್ತಿವೆ. ಟಿಸಿ ಪಕ್ಕದ ಕಟ್ಟಡದಲ್ಲೇ ಅಂಗಡಿ, ಆಸ್ಪತ್ರೆಯೂ ಇದ್ದು, ನೂರಾರು ಜನ ನಿತ್ಯ ಈ …
Read More »ಸಿದ್ದರಾಮಯ್ಯನವರ ಜನತಾ ದರ್ಶನ ಜನಸ್ಪಂದನಕ್ಕೆ ಹರಿದು ಬಂದ ಜನ
ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆಯುತ್ತಿರುವ ಸಿಎಂ ಜನಸ್ಪಂದನ ಕಾರ್ಯಕ್ರಮಕ್ಕೆ ಜನಸಮೂಹವೇ ಹರಿದುಬಂದಿದೆ. ಅಹವಾಲು ಸಲ್ಲಿಸಲು ಬೆಳಿಗ್ಗೆಯಿಂದಲೇ ಜನರು ಸರದಿ ಸಾಲಿನಲ್ಲಿ ನಿಂತಿದ್ದು, ಸಿಎಂ ಸಿದ್ದರಾಮಯ್ಯ ಜನರ ಸಮಸ್ಯೆ ಆಲಿಸುತ್ತಿದ್ದಾರೆ. ಹಲವು ವರ್ಷಗಳಿಂದ ಬಾಕಿ ಉಳಿದುಕೊಂಡು ಸರ್ಕಾರಿ ಕದ ತಟ್ಟುತ್ತಿರುವ ಸಾರ್ವಜನಿಕರು ನೇರವಾಗಿ ಸಿಎಂ ಬಳಿ ಪರಿಹಾರಕ್ಕೆ ಮೊರೆ ಇಡುತ್ತಿದ್ದಾರೆ. ಸಿಎಂ ಸಹನೆಯಿಂದ ಜನರ ಸಮಸ್ಯೆ ಆಲಿಸುತ್ತಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡುತ್ತಿದ್ದಾರೆ. ವಿಶೇಷಚೇತನರು, ಹಿರಿಯ ನಾಗರಿಕರು, ಮಹಿಳೆಯರು …
Read More »ಅಡಿಕೆ ದೋಚುತ್ತಿದ್ದ ವೇಳೆ ಆರೋಪಿಯನ್ನು ಹಿಡಿದ ಸ್ಥಳೀಯರು
ಕಡಬ (ದಕ್ಷಿಣ ಕನ್ನಡ) : ಅಡಿಕೆಯನ್ನು ಕದ್ದು ವಾಹನಕ್ಕೆ ತುಂಬಿಸುತ್ತಿರುವುದನ್ನು ಕಂಡು ಅದನ್ನು ತಡೆದ ವೇಳೆ ಅಪರಿಚಿತ ವ್ಯಕ್ತಿಗಳು ವ್ಯಕ್ತಿಯೋರ್ವರಿಗೆ ತಲವಾರಿನಿಂದ ಹಲ್ಲೆ ನಡೆಸಿ, ಕದ್ದ ಅಡಿಕೆಯೊಂದಿಗೆ ಪರಾರಿಯಾಗಿದ್ದಾರೆ. ಈ ವೇಳೆ ಓರ್ವ ಕಳ್ಳನನ್ನು ಅಡಿಕೆ ಚೀಲಗಳ ಮಾಲೀಕ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರು ಗ್ರಾಮದ ಪಣೆಮಜಲು ಎಡಪತ್ಯ ಫಾರ್ಮ್ಸ್ ಎಂಬಲ್ಲಿ ನಡೆದಿದೆ. ಈ ಬಗ್ಗೆ ಕಡಬ ತಾಲೂಕಿನ ಸವಣೂರು ಗ್ರಾಮದ ಕಡಬ ನಿವಾಸಿ …
Read More »ಅಕ್ರಮ ಮರಳು ದಂಧೆಕೋರರ ಅಟ್ಟಹಾಸ: ಕಂದಾಯ ಅಧಿಕಾರಿ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ
ಶಹದೋಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆಕೋರರು ಅಟ್ಟಹಾಸ ಮೆರೆದಿದ್ದಾರೆ. ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ತಡೆಯಲು ಹೋದ ಕಂದಾಯ ಇಲಾಖೆಯ ಅಧಿಕಾರಿ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆ ಮಾಡಲಾಗಿದೆ. ಪ್ರಸನ್ನ ಸಿಂಗ್ (45) ಎಂಬುವವರೇ ಹತ್ಯೆಗೀಡಾದ ಅಧಿಕಾರಿ ಎಂದು ಎಂದು ಗುರುತಿಸಲಾಗಿದೆ. ಇಲ್ಲಿನ ಗೋಪಾಲ್‌ಪುರ ಪ್ರದೇಶದ ಸೋನ್ ನದಿಯ ಶನಿವಾರ ಮಧ್ಯರಾತ್ರಿ ನಡೆದ ಈ ಘಟನೆ ನಡೆದಿದೆ. ಕಂದಾಯ ಇಲಾಖೆಯಲ್ಲಿ ಪಟ್ವಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸನ್ನ …
Read More »ಒಂದೇ ಕುಟುಂಬದ ಐವರು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ
ತುಮಕೂರು: ಒಂದೇ ಕುಟುಂಬದ ಐವರು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ನಗರದ ಸದಾಶಿವನಗರದ ಗರೀಬ್‌ಸಾಬ್ (32), ಸುಮಯಾ (30), ಹಜೀರಾ, ಮಹ್ಮದ್ ಶುಭಾನ್, ಮಹ್ಮದ್ ಮುನೀರ್ ಮೃತರು. ಮೃತರೆಲ್ಲರುವ ಶಿರಾ ತಾಲೂಕು ಚಿಕ್ಕನಹಳ್ಳಿಯ ನಿವಾಸಿಗಳು ಎನ್ನಲಾಗಿದ್ದು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತುಮಕೂರಿನ ಸದಾಶಿವನಗರದಲ್ಲಿ ವಾಸವಿದ್ದರು. ಜೀವನ ನಿರ್ವಹಣೆಗೆ ಕಬಾಬ್ ಅಂಗಡಿ ನಡೆಸುತ್ತಿದ್ದ ಕುಟುಂಬ ಆತ್ಮಹತ್ಯೆಗೆ ಶರಣಾಗಿರುವುದು ಬಂಧುಗಳಲ್ಲಿ ಆತಂಕಕ್ಕೆ ದೂಡಿದೆ. ಅಕ್ಕಪಕ್ಕದ ಮನೆಯವರು ಪ್ರತಿನಿತ್ಯ …
Read More »ಆತ್ಮಹತ್ಯೆ ತಡೆಗೆ HELP LINE _82779-46600ಗೆ ಕರೆ ಮಾಡಿ
ಬೆಂಗಳೂರು: ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಡೆಗಟ್ಟಲು ನಗರ ಪೊಲೀಸರು ಪ್ರತ್ಯೇಕ ಸಹಾಯವಾಣಿ ಸ್ಥಾಪಿಸಿದ್ದಾರೆ. ಆಗ್ನೇಯ ವಿಭಾಗದಲ್ಲಿ ವೀ ಕೇರ್ (ನಾವು ಕಾಳಜಿ ವಹಿಸುತ್ತೆವೆ) ಸಹಾಯವಾಣಿ 82779 46600 ಸ್ಥಾಪಿಸಲಾಗಿದೆ. ಆರು ಮಹಿಳಾ ಪೊಲೀಸರನ್ನು ನೇಮಕ ಮಾಡಲಾಗಿದೆ. ಪಾಳಿಯಲ್ಲಿ ದಿನ 24*7 ಕಾರ್ಯ ನಿರ್ವಹಿಸಲಿದ್ದಾರೆ. ಇವರಿಗೆ ನಿಮ್ಹಾನ್ಸ್ ವೈದ್ಯರಿಂದ ಪೊಲೀಸರಿಗೆ ತರಬೇತಿ ನೀಡಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಆಲೋಚನೆ ಮಾಡುವವರು ಈ ಕೂಡಲೇ ವೀ ಕೇರ್ ಹೆಲ್ಪ್‌ಲೈನ್‌ಗೆ ಕರೆ ಮಾಡಬಹುದು, ವಾಟ್ಸ್‌ಆಯಪ್ ಸಂದೇಶ, …
Read More »ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಬಿಜೆಪಿಯವರಿಗೆ ಹೊಟ್ಟೆಯುರಿ ಏಕೆ: ಸಿಎಂ
ಬೆಂಗಳೂರು:ದೇಶದಲ್ಲಿ ಯಾವ ಸರ್ಕಾರಗಳೂ ಹಿಂದೆಂದೂ ಮಾಡದ ಸಾಧನೆಯನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ 6 ತಿಂಗಳಲ್ಲಿ ಸಾಧಿಸಿ ತೋರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಾರಿಗೆ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಕಾರ್ಯಕಮವನ್ನು ಉದ್ಘಾಟಿಸಿ, ಅಪಘಾತ ರಹಿತ ಚಾಲಕರಿಗೆ ಚಿನ್ನದ ಪದಕ ಪ್ರದಾನ ಮಾಡಿ ಮಾತನಾಡಿದರು. ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು …
Read More »ಅರ್ಜಿ ಸಲ್ಲಿಸಿದ ಎಲ್ಲರಿಗೂ 10 ದಿನದೊಳಗೆ ಬರುತ್ತೆ ‘ಗೃಹಲಕ್ಷ್ಮಿ’ ಹಣ
ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಜಮಾ ಆಗಿಲ್ಲ. ಇದೀಗ ಯಜಮಾನಿಯರಿಗೆ ಗುಡ್ ನ್ಯೂಸ್ ಏನಪ್ಪ ಅಂದರೆ ಅರ್ಜಿ ಸಲ್ಲಿಸಿದ ಎಲ್ಲರಿಗೂ 10 ದಿನದೊಳಗೆ ‘ಗೃಹಲಕ್ಷ್ಮಿ’ ಹಣ ಜಮಾ ಆಗಲಿದೆ. ಹೌದು, ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪರಿಶೀಲನಾ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ …
Read More »2024 ರಲ್ಲಿ ಕರ್ನಾಟಕದಲ್ಲಿ ಯುವನಿಧಿ ಜಾರಿ:C.M.
ತೆಲಂಗಾಣ : 2024 ರಲ್ಲಿ ಕರ್ನಾಟಕದಲ್ಲಿ ಯುವನಿಧಿ ಜಾರಿಗೊಳಿಸಲಾಗುತ್ತದೆ ಹಾಗೂ ಯುವಜನರಿಗೆ ಕೌಶಾಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಭಾನುವಾರ ತೆಲಂಗಾಣಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾತನಾಡಿದರು. . ಕರ್ನಾಟಕ ರಾಜ್ಯದ ಜನತೆಗೆ ಮೋಸ ಮಾಡಿರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ..ಯುವ ನಿಧಿ ಯೋಜನೆಯನ್ನು ಜಾರಿಗೆ ಮಾಡಿದರೆ ನಾವು ಘೋಷಣೆ ಮಾಡಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಒಂದೇ ವರ್ಷದೊಳಗೆ ಜಾರಿಗೊಳಿಸಿದಂತಾಗುತ್ತದೆ …
Read More »ನಮ್ಮ ದೇಶದ ಸಂಸ್ಕøತಿ, ಆಚಾರ, ವಿಚಾರಗಳು ಇಡೀ ವಿಶ್ವಕ್ಕೆ ಮಾದರಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಸಂಗನಕೇರಿ ಪಟ್ಟಣದ ಹನಮಂತ ದೇವರ ಕಾರ್ತಿಕೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ ಘಟಪ್ರಭಾ : ನಮ್ಮ ರಾಷ್ಟ್ರವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವ ವಿಶ್ವದ ಏಕಮೇವ ರಾಷ್ಟ್ರವಾಗಿದೆ. ನೂರಾರು ಜಾತಿ-ಧರ್ಮಗಳಿದ್ದರೂ ಆಚರಣೆಗಳು ಮಾತ್ರ ಒಂದೇ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಗೆ ಸಮೀಪದ ಸಂಗನಕೇರಿ ಪಟ್ಟಣದ ಹನಮಂತ ದೇವರ ಕಾರ್ತಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಭಾರತೀಯ ಸಂಸ್ಕøತಿ, ಆಚಾರ, ವಿಚಾರಗಳು ಇಡೀ ವಿಶ್ವಕ್ಕೆ ಮಾದರಿಯಾಗಿವೆ …
Read More »
Laxmi News 24×7