Breaking News

ರಾಷ್ಟ್ರೀಯ

ಪರಪ್ಪನ ಅಗ್ರಹಾರದಲ್ಲಿರುವ ಚೈತ್ರಾ ಮೇಲೆ ಮಹಿಳಾ ಕೈದಿಗಳಿಂದ ಹಲ್ಲೆ

 (ಬೆಂಗಳೂರು): ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಚೈತ್ರಾ ಮೇಲೆ ಆಫ್ರಿಕನ್ ಮಹಿಳಾ ಕೈದಿಗಳಿಂದ ಹಲ್ಲೆಯಾಗಿದೆ ಎಂದು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಷ್ಟ್ರಗೀತೆ ವಿಚಾರಕ್ಕೆ ನಡೆದ ಜಗಳದಲ್ಲಿ ಚೈತ್ರಾ ಮೇಲೆ ಆಫ್ರಿಕನ್ ಮಹಿಳಾ ಕೈದಿಗಳಿಂದ ಹಲ್ಲೆ ನಡೆದಿದೆ. ಇಂದು ಮಧ್ಯಾಹ್ನ ಮಹಿಳಾ ವಿಚಾರಣಾಧೀನ ಕೈದಿಗಳ ಬ್ಯಾರಕ್‌ನಲ್ಲಿ ರಾಷ್ಟ್ರಗೀತೆ ವಿಚಾರಕ್ಕೆ ಆಫ್ರಿಕನ್ ಮಹಿಳಾ ಕೈದಿಗಳು ಮತ್ತು ಚೈತ್ರಾ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಆಫ್ರಿಕನ್ ಮಹಿಳಾ ಕೈದಿಗಳು …

Read More »

ಅಮಲು ಪದಾರ್ಥ ಕುಡಿಸಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ

ಚಿಕ್ಕಮಗಳೂರು: ನರ್ಸ್​ವೊಬ್ಬಳು ತನ್ನ ಪ್ರಿಯಕರನಿಗಾಗಿ​ ವಸತಿ ಶಾಲೆಯ ಅಪ್ರಾಪ್ತ ವಯಸ್ಸಿನ ಹುಡುಗಿಯರಿಗೆ ಅಮಲು ಪದಾರ್ಥ ನೀಡಿ ಪ್ರಜ್ಞೆ ತಪ್ಪಿಸಿ ತನ್ನ ಲವರ್ ಜೊತೆ ಬಿಡುತ್ತಿದ್ದ ಪ್ರಕರಣವೊಂದು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಈ ಪ್ರಕರಣದಡಿ ನರ್ಸ್​ ಸೇರಿ ಮೂವರು ಆರೋಪಿಗಳನ್ನು ಕಡೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ವಸತಿ ಶಾಲೆಯ ಪ್ರಾಂಶುಪಾಲರು ಕಡೂರು ಠಾಣೆಗೆ ದೂರು ನೀಡಿದ್ದು, ತನಿಖೆ ಮುಂದುವರಿದಿದೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ವಸತಿ ಶಾಲೆಯ ಪಕ್ಕದ ಹಳ್ಳಿಯಲ್ಲಿ ಎನ್‌ಎಂ …

Read More »

ಆಟಗಾರರು ಸಾಂಪ್ರದಾಯಿಕ ಉಡುಗೆ ತೊಟ್ಟು ದೀಪಾವಳಿ ಹಬ್ಬವನ್ನು ಆದ್ಧೂರಿಯಾಗಿ ಆಚರಿಸಿದರು.

ಬೆಂಗಳೂರು: ದೇಶಾದ್ಯಂತ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಜೊತೆಗೆ ವಿಶ್ವಕಪ್​ನ ಲೀಗ್ ಹಂತದ ಕೊನೆ ಪಂದ್ಯಾಟಕ್ಕೆ ಬೆಂಗಳೂರಿಗೆ ಬಂದಿಳಿದಿರುವ ಭಾರತ ತಂಡದ ಆಟಗಾರರು ದೀಪಾವಳಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದರು. ಇಂದು ಭಾರತ ಮತ್ತು ನೆದರ್ಲೆಂಡ್ಸ್​ ನಡುವಿನ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈಗಾಗಲೇ ಭಾರತವು ಲೀಗ್ ಹಂತದ 8 ಪಂದ್ಯಗಳಲ್ಲಿ ಗೆದ್ದು ಬೀಗಿದ್ದು, ಸೆಮಿಫೈನಲ್​ ಸೆಣಸಾಟಕ್ಕೆ ಸಜ್ಜಾಗಿದೆ. ಭಾರತವು ಇಂದು ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ನೆದರ್ಲೆಂಡ್ಸ್​ ತಂಡವನ್ನು …

Read More »

ಯುವತಿಯರ ಡೀಪ್​ ಫೇಕ್ ಫೋಟೋ ಪ್ರಕರಣ: ಎಸ್​ಪಿ ಪ್ರತಿಕ್ರಿಯೆ

ಬೆಳಗಾವಿ: ದೇಶಾದ್ಯಂತ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್​ ಫೇಕ್ ವಿಡಿಯೋ ಸದ್ದು ಮಾಡುತ್ತಿರುವಾಗಲೇ ಬೆಳಗಾವಿ ಜಿಲ್ಲೆಯಲ್ಲಿ ಡೀಪ್ ಫೇಕ್ ಫೋಟೋ ಎಡಿಟ್ ಪ್ರಕರಣ ಬೆಳಕಿಗೆ ಬಂದಿದೆ. ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿ ಹಾಗೂ ಆಕೆಯ ಇಬ್ಬರು ಸ್ನೇಹಿತೆಯರ ನಗ್ನ ಫೋಟೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದ ಖಾನಾಪುರದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಯುವಕನ ಪ್ರೀತಿಯನ್ನು ಯುವತಿ ನಿರಾಕರಿಸಿದ್ದಳು. ಇದರಿಂದಾಗಿ ನಿನ್ನ ಮತ್ತು ಸ್ನೇಹಿತೆಯರ …

Read More »

ಕುಂದಾನಗರಿಯಲ್ಲಿ ಕೋಟೆ ಕಟ್ಟಿ ಬೆಳಕಿನ ಹಬ್ಬ ಸಂಭ್ರಮಿಸುವ ಮಕ್ಕಳು

ಬೆಳಗಾವಿ: ದೀಪಾವಳಿ ಹಬ್ಬವನ್ನು ಒಂದೊಂದು ಭಾಗಗಳಲ್ಲಿ ಒಂದೊಂದು ರೀತಿ ಆಚರಿಸುತ್ತಾರೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಕ್ಕಳು ಕೋಟೆ ಕಟ್ಟಿ ಸಂಭ್ರಮಿಸುತ್ತಾರೆ. ಛತ್ರಪತಿ ಶಿವಾಜಿ ಮಹಾರಾಜರ ಧೈರ್ಯ, ಸಾಹಸ, ಪರಾಕ್ರಮವನ್ನು ಇಂದಿನ ಪೀಳಿಗೆಗೆ ತಿಳಿಸುವ ಕೆಲಸ ಮಾಡುತ್ತಿದ್ದಾರೆ. ಆ ಕುರಿತು ಈಟಿವಿ ಭಾರತದ ವಿಶೇಷ ವರದಿ ಇಲ್ಲಿದೆ. ದೀಪಾವಳಿ ಹಬ್ಬಕ್ಕೆ ಪಟಾಕಿ ಹಚ್ಚಿ, ದೀಪ ಬೆಳಗಿಸಿ, ಸಿಹಿ ಹಂಚಿ ಸಂಭ್ರಮಿಸುವುದು ಸಾಮಾನ್ಯ. ಆದರೆ ಕುಂದಾನಗರಿಯ ಮಕ್ಕಳು ಮಾತ್ರ ಐತಿಹಾಸಿಕ ಕೋಟೆಗಳ ಮಾದರಿ ನಿರ್ಮಿಸಿ …

Read More »

ದೀಪಾವಳಿ ಹಬ್ಬ : ಮಣ್ಣಿನ ಹಣತೆಗಳ ಖರೀದಿಯಲ್ಲಿ ನಿರತರಾದ ಸಿಲಿಕಾನ್ ಸಿಟಿ ಮಂದಿ

ಬೆಂಗಳೂರು : ದೀಪಾವಳಿ ಹಬ್ಬದಲ್ಲಿ ಎಲ್ಲೆಡೆ ಸಂಭ್ರಮ ಮನೆಮಾಡಿದೆ. ಮೂರು ದಿನಗಳ ಕಾಲ ಸಾಲು ಸಾಲು ದೀಪಗಳನ್ನು ಹಚ್ಚಿ ಸಂಭ್ರಮಿಸುವುದು ಈ ಹಬ್ಬದ ಸಂಪ್ರದಾಯ. ಅಂಧಕಾರವ ಕಳೆದು ಬೆಳಕಿನೆಡೆಗೆ ಕರೆದುಕೊಂಡು ಹೋಗುವ ದೀಪಗಳ ಹಬ್ಬವನ್ನು ಸ್ವಾಗತಿಸಲು ನಗರದ ಮಾರುಕಟ್ಟೆಯಲ್ಲಿ ಬಗೆಬಗೆಯ ಹಣತೆಗಳು ಬಂದಿವೆ. ಮಣ್ಣಿನ ದೀಪಗಳು ದುಬಾರಿ ಎನಿಸಿದರೂ ಪರಿಸರ ಸ್ನೇಹಿ ದೀಪಗಳಾಗಿರುವುದರಿಂದ ಬೇಡಿಕೆ ಹೆಚ್ಚಿದೆ. ನಗರದಲ್ಲಿ ಜೇಡಿ ಮಣ್ಣಿನಿಂದ ಹೂವು, ಆನೆಯ ಮಾದರಿಯ ದೀಪ, ನವಿಲುಗರಿ ಮತ್ತು ಮಹಿಳಾ ಪ್ರತಿರೂಪದ …

Read More »

ಡಿಕೆಶಿಯವರೊಂದಿಗೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ ಎಂದ ಜಾರಕಿಹೊಳಿ

ಬೆಳಗಾವಿ: ನಾನು ಯಾವುದೇ ಹುದ್ದೆಗೆ ಬೇಡಿಕೆ ಇಟ್ಟಿಲ್ಲ. ಉಪಮುಖ್ಯಮಂತ್ರಿ (DCM) ಡಿ.ಕೆ. ಶಿವಕುಮಾರ್ (D.K. Shivakumar) ಅವರೊಂದಿಗೆ ಹೊಂದಾಣಿಕೆ ಆಗುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಸತೀಶ್​ ಜಾರಕಿಹೊಳಿ (Sathish jarakiholi) ಹೇಳಿದರು. ಬೆಳಗಾವಿ (belagavi) ರಾಜಕಾರಣದಲ್ಲಿ ಬೇರೆಯವರ ಹಸ್ತಕ್ಷೇಪದ ಕುರಿತು ಮುನಿಸಿಕೊಂಡಿರುವ ಜಾರಕಿಹೊಳಿ ಬೆಳಗಾವಿಯಲ್ಲಿ ಮಾತನಾಡಿ, ಈ ಬಗ್ಗೆ ಪಕ್ಷದ ವತಿಯಿಂದ ಚರ್ಚೆ ನಡೆಯಬೇಕು. ನಾವು ಏನೂ ಮಾಡಲು ಸಾಧ್ಯವಿಲ್ಲ ಎಂದರು. ಡಿ.ಕೆ. ಶಿವಕುಮಾರ್ ಅವರು ಹಲವು ಬಾರಿ …

Read More »

ಸರ್ಕಾರದಲ್ಲಿ ಹಣ ಇಲ್ಲ, ದಿವಾಳಿಯಾಗಿರುವುದು ಸ್ಪಷ್ಟ:B.S.Y.

ಬೆಂಗಳೂರು: ರಾಜ್ಯದಲ್ಲಿ ಬರಗಾಲ (Drought) ಆವರಿಸಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ (BJP) ಮುಖಂಡರು ಬರ ಅಧ್ಯಯನ ನಡೆಸುತ್ತಿದ್ದಾರೆ. ಬರ ಅಧ್ಯಯನದ ನಂತರ ಸರ್ಕಾರಕ್ಕೂ ಒಂದು ವಾಸ್ತವದ ಚಿತ್ರಣ ನೀಡುತ್ತೇವೆ. ರಾಜ್ಯದಲ್ಲಿ ಎಲ್ಲ ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗಿದೆ. ಸರ್ಕಾರದಲ್ಲಿ ಹಣ ಇಲ್ಲ, ದಿವಾಳಿಯಾಗಿರುವುದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ (Bengaluru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬಿಎಸ್ ವೈ, …

Read More »

ಬೆಂಗಳೂರಲ್ಲಿ ಇಸ್ಟೀಟ್ ಜೂಜು ಅಡ್ಡೆ ಮೇಲೆ ದಾಳಿ; 150ಕ್ಕೂ ಹೆಚ್ಚು ಜೂಜುಕೋರರು ಪೊಲೀಸ್ ವಶಕ್ಕೆ

ಬೆಂಗಳೂರು: ಅಕ್ರಮವಾಗಿ ನಡೆಯುತ್ತಿದ್ದ ಇಸ್ಟೀಟ್ ಅಡ್ಡೆ ಮೇಲೆ ಏಕಾಏಕಿ ದಾಳಿ ನಡೆಸಿದ ನಗರ ಪಶ್ಚಿಮ ವಿಭಾಗದ‌ ಪೊಲೀಸರು 150ಕ್ಕೂ ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.   ಬಸವೇಶ್ವರ ನಗರದಲ್ಲಿರುವ ಅಡಿಗ ರಮ್ಮಿ‌ ಕ್ಲಬ್​ನಲ್ಲಿ ಅಕ್ರಮ ಚಟುವಟಿಕೆ ಕುರಿತು ಖಚಿತ ಮಾಹಿತಿ ಮೇರೆಗೆ ಬಸವೇಶ್ವರ ನಗರ ಹಾಗೂ ಗೋವಿಂದರಾಜ ನಗರ ಪೊಲೀಸರು ದಾಳಿ ನಡೆಸಿದ್ದಾರೆ‌.‌ ಕ್ಲಬ್​ನಲ್ಲಿ‌ 150ಕ್ಕೂ ಹೆಚ್ಚು ಮಂದಿ ಇಸ್ಟೀಟ್ ದಂಧೆಯಲ್ಲಿ ತೊಡಗಿಸಿಕೊಂಡಿದ್ದರು. ಎಲ್ಲರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ. ದಾಳಿ ಲಕ್ಷಾಂತರ ರೂಪಾಯಿ …

Read More »

ನಾನೊಬ್ಬ ಸಾಮಾನ್ಯ ಕಾರ್ಯಕರ್ತ, ಈಗೇನಾದ್ರು ಮಾತನಾಡಿದ್ರೆ ನಮಗೇ ತಿರುಗುಬಾಣವಾಗುತ್ತೆ; ಸಿ ಟಿ ರವಿ

ಬೆಂಗಳೂರು: ಬಹುದಿನಗಳಿಂದ ಚರ್ಚೆಯಲ್ಲಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ವಿಚಾರ ಇದೀಗ ಪೂರ್ಣಗೊಂಡಿದೆ. ಬಿಜೆಪಿ ಹೈಕಮಾಂಡ್​ ಕೊನೆಗೂ ಅಳೆದು ತೂಗಿ ಬಿ ವೈ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಪಟ್ಟವನ್ನು ನೀಡಿದೆ. ಇನ್ನು ರಾಜ್ಯಾಧ್ಯಕ್ಷರ ರೇಸ್​ನಲ್ಲಿ ಸಿ ಟಿ ರವಿ ಸೇರಿದಂತೆ ಹಲವು ನಾಯಕರ ಹೆಸರು ಮುಂಚೂಣಿಯಲ್ಲಿದ್ದವು. ಈ ಬಗ್ಗೆ ಸ್ವತಃ ಬಿಜೆಪಿ ನಾಯಕ ಸಿ ಟಿ ರವಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮಧ್ಯಪ್ರದೇಶದಿಂದ ಬೆಂಗಳೂರಿಗೆ ಆಗಮಿಸಿದ ಸಿ ಟಿ ರವಿ ಅವರು ಈ …

Read More »