ಬೆಂಗಳೂರು: ಬೆಂಗಳೂರು ಕಂಬಳ – ನಮ್ಮ ಕಂಬಳಕ್ಕೆ ದಕ್ಷಿಣ ಕನ್ನಡದ ನಂಟು ಇರುವ ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿದೆ. ಇದು ಯಾವುದೇ ಕಮರ್ಷಿಯಲ್ ಅಗ್ರಿಮೆಂಟ್ ಅಲ್ಲ. ಆದರೆ ಕಾರ್ಯಕ್ರಮಕ್ಕೆ ಎಲ್ಲರ ಬೆಂಬಲವಿದೆ ಎಂದು ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಹಾಗೂ ಸಂಗೀತ ನಿರ್ದೇಶಕ ಗುರುಕಿರಣ್ ತಿಳಿಸಿದರು. ಕನ್ನಡ ಸಿನಿಮಾರಂಗದ ಎಲ್ಲರಿಗೂ ಆಮಂತ್ರಣ ನೀಡಲಾಗಿದ್ದು, ಎಲ್ಲರೂ ಬರುವ ನಿರೀಕ್ಷೆಯಿದೆ. ಶಿವಣ್ಣ ಹಾಗೂ ಅವರ ಪತ್ನಿ ಬರುತ್ತಿದ್ದಾರೆ. ಅಶ್ವಿನಿ ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ಯುವ ಬರುತ್ತಿದ್ದಾರೆ. …
Read More »ಎಲ್‌ಎಂವಿ ಪರವಾನಗಿ ಹೊಂದಿರುವವರು ಲಘು ಸಾರಿಗೆ ವಾಹನ ಓಡಿಸಬಹುದೇ?; ಕೇಂದ್ರಕ್ಕೆ ಸ್ಪಷ್ಟನೆ ಕೇಳಿದ ಸುಪ್ರೀಂಕೋರ್ಟ್
ನವದೆಹಲಿ: ಲಘು ಮೋಟಾರು ವಾಹನ (ಎಲ್‌ಎಂವಿ) ಚಾಲನಾ ಪರವಾನಗಿ ಹೊಂದಿರುವವರು ಎಲ್‌ಎಂವಿ ವರ್ಗದ ಸಾರಿಗೆ ವಾಹನ ಓಡಿಸಲು ಪ್ರತ್ಯೇಕ ಅನುಮೋದನೆಯ ಅಗತ್ಯವಿದೆಯೇ ಎಂಬ ಪ್ರಶ್ನೆಗೆ ಮುಂದಿನ ವರ್ಷದ ಜನವರಿ 17ರೊಳಗೆ ಸ್ಪಷ್ಟ ಮಾರ್ಗಸೂಚಿ ಒದಗಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರಕಾರಕ್ಕೆ ಸೂಚಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್, ಪಿ.ಎಸ್.ನರಸಿಂಹ, ಪಂಕಜ್ ಮಿಥಾಲ್ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಸಾಂವಿಧಾನಿಕ ಪೀಠವು …
Read More »ಸಮಾಜ ಒಡೆಯುವುದೇ ಕಾಂಗ್ರೆಸ್ ಸರ್ಕಾರದ ಉದ್ದೇಶ.: H.D.K.
ಮಂಡ್ಯ: ಸಮಾಜ ಒಡೆಯುವುದೇ ಕಾಂಗ್ರೆಸ್ ಸರ್ಕಾರದ ಉದ್ದೇಶ. ಪಾಪ ಕಾಂಗ್ರೆಸ್ನವರು ಸತ್ಯಹರಿಶ್ಚಂದ್ರನ ವಂಶದವರು ಎಂದು ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ. ಜಾತಿಗಣತಿಗೆ ಒಕ್ಕಲಿಗರ ವಿರೋಧ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜೊತೆ ಮಾತನಾಡಿದ ಅವರು, ಸಿಎಂ ಟ್ವೀಟ್ ಅನ್ನು ನಾನು ಗಮನಿಸಿದ್ದೇನೆ. ರಾಹುಲ್ ಗಾಂಧಿ ಭಾವನೆಗೆ ಸ್ಪಂದಿಸಿ ಜಾತಿಗಣತಿ ಪಡೆಯುವ ನಿರ್ಧಾರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. “ಕಾಂತರಾಜು ವರದಿ ಮೂಲ ಪ್ರತಿ ಕಳ್ಳತನವಾದ ಮಾಹಿತಿ ಇದೆ. ಒಂದು …
Read More »ಆನೇಕಲ್: ಅಡುಗೆ ಅನಿಲ ಸಿಲಿಂಡರ್ ಸ್ಫೋಟ, ಐವರಿಗೆ ಗಂಭೀರ ಗಾಯ
ಆನೇಕಲ್ (ಬೆಂಗಳೂರು): ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಏಳು ಮಂದಿ ಗಾಯಗೊಂಡಿರುವ ಘಟನೆ ಇಂದು ಇಲ್ಲಿನ ಬೆಂಗಳೂರು-ವೀವರ್ಸ್ ಕಾಲೊನಿಯ ಮಾರುತಿ ಬಡಾವಣೆಯಲ್ಲಿ ಸಂಭವಿಸಿತು. ಮಾರ್ಟಿನ್ ಎಂಬವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ವಾಸವಿದ್ದ ಉತ್ತರ ಪ್ರದೇಶದ ಬನಾರಸ್ ಮೂಲದ ಜಮಾಲ್ (32), ನಾಜಿಯಾ (22), ಇರ್ಫಾನ್ (21), ಗುಲಾಬ್ (18) ಹಾಗು ಶಹಜಾದ್ (9) ಗಾಯಗೊಂಡಿದ್ದಾರೆ. ಮುಂಜಾನೆ 5:30ರ ಸುಮಾರಿಗೆ ವಿದ್ಯುತ್ ಬಲ್ಬ್ ಸ್ವಿಚ್ ಆನ್ ಮಾಡಿದಾಗ ಆಡುಗೆ ಅನಿಲ ಸೋರಿಕೆಯಾಗಿ ಸಿಲಿಂಡರ್ …
Read More »ಐಡಿಬಿಐನಲ್ಲಿ 2,100 ಹುದ್ದೆಗಳ ಭರ್ತಿಗೆ
ಬೆಂಗಳೂರು: ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಐಡಿಬಿಐ) ಖಾಲಿ ಇರುವ 2,100 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಭಾರತದಾದ್ಯಂತ ನೇಮಕಾತಿ ನಡೆಯಲಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಹುದ್ದೆಗಳ ವಿವರ: ಜ್ಯೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ 800, ಎಕ್ಸಿಕ್ಯುಟಿವ್ (ಸೇಲ್ಸ್ ಆಯಂಡ್ ಆಪರೇಷನ್ಸ್) 1,300 ಹುದ್ದೆಗಳಿವೆ. ಅಧಿಸೂಚನೆವಿದ್ಯಾರ್ಹತೆ: ಅಧಿಕೃತ ವಿಶ್ವವಿದ್ಯಾಲಯ/ಮಂಡಳಿಯಿಂದ ಪದವಿ ಶಿಕ್ಷಣ. ವೇತನ: ಜ್ಯೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ಗೆ ವಾರ್ಷಿಕ ಪ್ಯಾಕೇಜ್ 6,14,00-6,50,000 ರೂ. ಎಕ್ಸಿಕ್ಯೂಟಿವ್ (ಸೇಲ್ಸ್ ಆಯಂಡ್ …
Read More »ನಾಳೆಯಿಂದ ಭಾರತ-ಆಸ್ಟ್ರೇಲಿಯಾ ಟಿ20 ಸರಣಿ
ಏಕದಿನ ವಿಶ್ವಕಪ್ ಕ್ರಿಕೆಟ್ ಬೆನ್ನಲ್ಲೇ ಭಾರತ ಮತ್ತು ಆಸ್ಟ್ರೇಲಿಯಾ 5 ಟಿ20 ಪಂದ್ಯಗಳ ಸರಣಿ ಆಡುತ್ತಿದ್ದು, ಮೊದಲ ಪಂದ್ಯ ನಾಳೆ ವಿಶಾಖಪಟ್ಟಣಂನಲ್ಲಿ ನಡೆಯಲಿದೆ. ವಿಶಾಖಪಟ್ಟಣಂ(ಆಂಧ್ರ ಪ್ರದೇಶ): 2024ರ ಟಿ20 ವಿಶ್ವಕಪ್ಗೆ ಇನ್ನೂ 8 ತಿಂಗಳಿದ್ದರೂ ಈಗಾಗಲೇ ಎಲ್ಲಾ ರಾಷ್ಟ್ರೀಯ ತಂಡಗಳು ಸಿದ್ಧತೆ ಆರಂಭಿಸಿವೆ. ಪ್ರಸಕ್ತ ಸಾಲಿನ ಏಕದಿನ ವಿಶ್ವಕಪ್ ಮುಗಿಯುತ್ತಿದ್ದಂತೆ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಐದು ಟಿ20 ಪಂದ್ಯಗಳ ಸರಣಿ ಶುರುವಾಗುತ್ತಿದೆ. ನಾಳೆ ಮೊದಲ ಪಂದ್ಯ ವಿಶಾಖಪಟ್ಟಣಂನ ರಾಜಶೇಖರ ರೆಡ್ಡಿ …
Read More »ಬೆಂಗಳೂರು ಕಂಬಳ: ನಾಳೆ ಮೆರವಣಿಗೆ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಿಂದ ಕೋಣಗಳ ನಿರ್ಗಮನ
ಮಂಗಳೂರು: ಬೆಂಗಳೂರು ಕಂಬಳಕ್ಕೆ ಈಗಾಗಲೇ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರಲ್ಲೂ ಕುತೂಹಲ ಆವರಿಸಿದೆ. ಕರಾವಳಿ ಜಿಲ್ಲೆಗಳ ಜಾನಪದೀಯ ಕ್ರೀಡೆ ಕಂಬಳ ಮೊದಲ ಬಾರಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿದೆ. ಬೆಂಗಳೂರು ಕಂಬಳಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕೋಣಗಳು ಮೆರವಣಿಗೆ ಮೂಲಕ ಹೊರಡಲಿದೆ. ಬೆಂಗಳೂರು ಕಂಬಳದಲ್ಲಿ ಭಾಗವಹಿಸಲಿರುವ ಕೋಣಗಳು ನಾಳೆ ದಕ್ಷಿಣ ಕನ್ನಡ ಜಿಲ್ಲೆಯಿಂದ ತೆರಳಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಿಂದ ಕಂಬಳದ ಕೋಣಗಳು ಒಟ್ಟಾಗಿ ತೆರಳಲಿದೆ. ಈಗಾಗಲೇ …
Read More »ತೆಲಂಗಾಣ ವಿಧಾನಸಭೆ ಚುನಾವಣೆಯ ಪ್ರಚಾರಕ್ಕಾಗಿ ಮಾಜಿ ಮುಖ್ಯಮಂತ್ರಿ:B.S.Y.
ಬೆಂಗಳೂರು: ತೆಲಂಗಾಣ ವಿಧಾನಸಭೆ ಚುನಾವಣೆಯ ಪ್ರಚಾರಕ್ಕಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು (ಬುಧವಾರ) ತೆಲಂಗಾಣಕ್ಕೆ ತೆರಳುವರು. ಬೆಳಿಗ್ಗೆ 7.40ಕ್ಕೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಹೈದರಾಬಾದ್ಗೆ ಪ್ರಯಾಣಿಸಲಿದ್ದಾರೆ. ಬೆಳಿಗ್ಗೆ 11.20ಕ್ಕೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ಜಹೀರಾಬಾದ್ನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುವ ಅವರು ಮಧ್ಯಾಹ್ನ 2ಕ್ಕೆ ರ‍್ಯಾಲಿಯಲ್ಲಿ ಭಾಗವಹಿಸುವರು. ಬಳಿಕ ಬೀದರ್ಗೆ ಆಗಮಿಸಿ, ವಿಮಾನದ ಮೂಲಕ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ …
Read More »ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಪಕ್ಷದ ನಿಲುವು:ಡಿ .ಕೆ. ಶಿ.
ಬೆಂಗಳೂರು : ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಪಕ್ಷದ ನಿಲುವು. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ. ಆದರೆ ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ಆಗಬೇಕು ಎಂದು ವಿವಿಧ ಸಮುದಾಯಗಳು ಆಗ್ರಹಿಸಿವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಬಳಿ ಇಂದು ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಸಿಗಬೇಕು ಎಂದು ಅನೇಕ ಸಮುದಾಯಗಳು …
Read More »ತಾಯಿ, ಮಗು ಸಾವು ಪ್ರಕರಣ: ಸಚಿವ ಜಾರ್ಜ್ ರಾಜೀನಾಮೆಗೆ ಆರ್ ಅಶೋಕ್ ಆಗ್ರಹ
ಬೆಂಗಳೂರು : ನಗರದಲ್ಲಿ ಇತ್ತೀಚೆಗೆ ವಿದ್ಯುತ್ ಅವಘಡದಲ್ಲಿ ತಾಯಿ, ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬೂಬುಗಳನ್ನು ಹೇಳುವುದನ್ನು ಬಿಟ್ಟು ನೈತಿಕ ಹೊಣೆ ಹೊತ್ತು ಇಂಧನ ಸಚಿವ ಕೆ ಜೆ ಜಾರ್ಜ್ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವೈರ್ಗಳಿಗೆ ಇಲಿ ಕಚ್ಚಿ ಘಟನೆ ಸಂಭವಿಸಿದೆ ಎಂಬ ನೆಪ ಹೇಳಿಕೊಂಡು ತಿಪ್ಪೆ ಸಾರಿಸುವ ಮಟ್ಟಕ್ಕೆ ಸಚಿವರು ಇಳಿದಿರುವುದು …
Read More »
Laxmi News 24×7