ಬೆಳಗಾವಿ: ಬೆಳಗಾವಿಯ ಚಳಿಗಾಲ ಅಧಿವೇಶನ ಕೇವಲ ಪ್ರತಿಭಟನೆಯ ಅಧಿವೇಶನ ಆಗಬಾರದು. ಈ ಭಾಗದ ನೈಜ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಪ್ರತಿಭಟನೆಗಳ ಉದ್ದೇಶ ಸರಿ ಇರಬಹುದು. ಆದರೆ, ಇಲ್ಲಿ ಅಧಿವೇಶನ ನಡೆಯೋದೇ ಪ್ರತಿಭಟನೆ ನಡೆಯಲು ಎಂಬ ಅಪಖ್ಯಾತಿಯಿದೆ. ಹಾಗಾಗಿ, ಪ್ರತಿಭಟನೆಗಳನ್ನು ಕಡಿಮೆಗೊಳಿಸಲು ಸಂಬಂಧಿಸಿದ ಇಲಾಖೆಗಳ ಜೊತೆಗೆ ಮಾತನಾಡಿ ಅಧಿವೇಶನದೊಳಗೆ ಅವರ ಸಮಸ್ಯೆ ಬಗೆಹರಿಸಲು …
Read More »ಮತ್ತೆ ಮುರುಘಾ ಶರಣರನ್ನು ಬಂಧಿಸಿದ ಪೊಲೀಸರು
ಚಿತ್ರದುರ್ಗ: ಪೋಕ್ಸೊ ಪ್ರಕರಣ ಸಂಬಂಧ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿದ್ದ ಹಿನ್ನೆಲೆ ಮುರುಘಾ ಮಠದ ಡಾ ಶಿವಮೂರ್ತಿ ಶರಣರನ್ನು ಪೊಲೀಸರು ಬಂಧಿಸಿದ್ದಾರೆ. ಮುರುಘಾ ಶ್ರೀಗಳ ವಿರುದ್ಧದ ಮೊದಲ ಪೋಕ್ಸೊ ಪ್ರಕರಣದಲ್ಲಿ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಕಳೆದ ಶನಿವಾರ ಅವರು ಜೈಲಿನಿಂದ ಬಿಡುಗಡೆಯಾಗಿದ್ದರು. ಇದೀಗ ಎರಡನೇ ಪ್ರಕರಣ ಸಂಬಂಧ ನ್ಯಾಯಧೀಶರಾದ ಬಿ ಕೆ ಕೋಮಲಾ ಅವರು ಬಂಧನ ವಾರೆಂಟ್ ಆದೇಶ ಹೊರಡಿಸಿದ್ದರು. ಚಿತ್ರದುರ್ಗದ …
Read More »ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಡಿ.10 ರಿಂದ 24ರ ವರೆಗೆ ಚಂಪಾಷಷ್ಠಿ ಮಹೋತ್ಸವ
ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂರ್ವಶಿಷ್ಟ ಸಂಪ್ರದಾಯ ಪ್ರಕಾರ ಈ ವರ್ಷದ ಚಂಪಾಷಷ್ಠಿ ಮಹೋತ್ಸವವು ಅದ್ಧೂರಿಯಾಗಿ ನಡೆಯಲಿದೆ. ಇದೇ ಶೋಭಕೃತ್ ನಾಮ ಸಂವತ್ಸರದ ಕಾರ್ತಿಕ ಬಹುಳ ದ್ವಾದಶಿ ಆದಿತ್ಯವಾರ 10-12-2023 ರಿಂದ ಲಾಗ್ಯಾತು ಮಾರ್ಗಶಿರ ಶುದ್ಧ ದ್ವಾದಶಿ ಆದಿತ್ಯವಾರ 24-12-2023ರ ವರೆಗೆ ಈ ಕೆಳಗಿನ ವಿವರದಂತೆ ವಾರ್ಷಿಕ ಜಾತ್ರಾ ಉತ್ಸವಾದಿಗಳು ಜರುಗಲಿವೆ. ಭಗವತ್ಸಂಕಲ್ಪ ಪ್ರಕಾರ ನಡೆಯುವ ಈ ಮಹೋತ್ಸವಗಳಿಗೆ ಭಕ್ತರು …
Read More »ರಾತ್ರೋರಾತ್ರಿ 200 ದಾಳಿಂಬೆ ಗಿಡ ಕತ್ತರಿಸಿದ ಕಿಡಿಗೇಡಿಗಳು, ರೈತನಿಗೆ ಆಘಾತ
ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ) : ರೈತರಿಗೆ ಅತಿವೃಷ್ಟಿ, ಅನಾವೃಷ್ಟಿ ಕಾಡುತ್ತಲೇ ಇರುತ್ತವೆ. ಈ ಮಧ್ಯೆ ಕೆಲವರು ಹೇಗಾದರೂ ಮಾಡಿ ಅಲ್ಪ ಸ್ವಲ್ಪ ಬೆಳೆಯನ್ನಾದರೂ ಉಳಿಸಿಕೊಂಡು ಜೀವನ ಬಂಡಿ ಸಾಗಿಸುತ್ತಾರೆ. ಈ ಬಾರಿಯಂತೂ ಬರಗಾಲದ ಹೊಡೆತಕ್ಕೆ ಅನ್ನದಾತರು ನಲುಗಿದ್ದಾರೆ. ಈ ನಡುವೆ ಕಳೆದ ಒಂದು ವರ್ಷದಿಂದ ಕಷ್ಟಪಟ್ಟು ದಾಳಿಂಬೆ ಬೆಳೆಯನ್ನು ಉಳಿಸಿಕೊಂಡಿದ್ದ ರೈತನಿಗೆ ಒಂದೇ ದಿನದಲ್ಲಿ ಆಘಾತ ಉಂಟಾಗಿದೆ. ಇದಕ್ಕೆ ಕಾರಣ ಹುಲುಸಾಗಿ ಬೆಳೆದಿದ್ದ ದಾಳಿಂಬೆ ಗಿಡಗಳನ್ನು ಯಾರೋ ಕಡಿದು ಹಾಕಿರುವುದು. ಹೌದು, …
Read More »ನಮ್ಮ ಯೋಜನೆ ವಿರೋಧಿಸಿದವರೇ ಈಗ ಗ್ಯಾರಂಟಿ ಹಿಂದೆ ಬಿದ್ದಿದ್ದಾರೆ: ಸಿಎಂ ಸಿದ್ದರಾಮಯ್ಯ
ಕೊಪ್ಪಳ: ”ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ವಿರೋಧಿಸಿದವರೇ, ಇಂದು ಬೇರೆ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಜನರಿಗೆ ಗ್ಯಾರಂಟಿ ನೀಡಲು ಮುಂದಾಗಿರುವುದು ವಿಪರ್ಯಾಸ” ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ಬಿಜೆಪಿಯವರು ನುಡಿದಂತೆ ನಡೆಯದವರು. ನಾವು ಯಾವುದೇ ಯೋಜನೆ ಮಾಡಿದರೆ ರಾಜ್ಯ, ದೇಶ ದಿವಾಳಿಯಾಗುತ್ತದೆ. ಅದೇ ಬಿಜೆಪಿಯವರು ಮಾಡಿದರೆ, ಅದು ಹೇಗೆ ಉದ್ಧಾರ ಮಾಡುವ ಕೆಲಸವಾಗುತ್ತದೆ” ಎಂದು ಪ್ರಶ್ನಿಸಿದರು. ಮಾಜಿ ಸಿಎಂ ಹೆಚ್ …
Read More »ಮುರುಘಾಶ್ರೀ ವಿರುದ್ಧ ಮತ್ತೆ ಬಂಧನ ವಾರೆಂಟ್
ದಾವಣಗೆರೆ: ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಮುರುಘಾಶ್ರೀ ವಿರುದ್ಧ ಮತ್ತೆ ಬಂಧನ ವಾರೆಂಟ್ ಹೊರಡಿಸಿದೆ. ಕೋರ್ಟ್ ಆದೇಶ ಪಡೆದ ಬಳಿಕ ಪೊಲೀಸರಿಂದ ಬಂಧನ ಪ್ರಕ್ರಿಯೆ ನಡೆಯಲಿದೆ. ಇಂದು ಸಂಜೆ ಶ್ರೀಗಳನ್ನು ಪೊಲೀಸರು ಕೋರ್ಟ್ಗೆ ಹಾಜರುಪಡಿಸುವ ಸಾಧ್ಯತೆ ಇದೆ. ಮುರುಘಾ ಶ್ರೀಗಳ ವಿರುದ್ಧದ ಎರಡು ಪೋಕ್ಸೋ ಪ್ರಕರಣಗಳ ಪೈಕಿ ಮೊದಲ ಪ್ರಕರಣದಲ್ಲಿ ಜಾಮೀನಿನ ಮೇಲೆ ಶನಿವಾರ ಬಿಡುಗಡೆಯಾಗಿದ್ದರು. ಇದೀಗ ಎರಡನೇ ಪ್ರಕರಣ ಸಂಬಂಧ ಶ್ರೀಗಳ ವಿರುದ್ಧ ಚಿತ್ರದುರ್ಗ 2ನೇ …
Read More »ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸ್ವಕ್ಷೇತ್ರದಲ್ಲೇ ಮುಖಭಂಗ: ಶಿಕಾರಿಪುರದ ತರಲಘಟ್ಟ ಗ್ರಾ.ಪಂಚಾಯತಿ ಕಾಂಗ್ರೆಸ್ ತೆಕ್ಕೆಗೆ
ಶಿವಮೊಗ್ಗ: ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮ ಪಂಚಾಯತಿಯಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕವಾದ ಬೆನ್ನಲ್ಲೇ ಸ್ವಕ್ಷೇತ್ರ ಶಿಕಾರಿಪುರದಲ್ಲೇ ಅವರಿಗೆ ಮುಖಭಂಗವಾಗಿದೆ. ತರಲಘಟ್ಟ ಗ್ರಾಮ ಪಂಚಾಯತಿ 30 ವರ್ಷದ ನಂತರ ಕಾಂಗ್ರೆಸ್ ತೆಕ್ಕೆ ಸೇರಿದೆ. ತರಲಘಟ್ಟ ಗ್ರಾಮ ಪಂಚಾಯತಿಯು ಒಟ್ಟು 16 ಗ್ರಾಮ ಪಂಚಾಯತಿ ಸದಸ್ಯರನ್ನು ಒಳಗೊಂಡಿದೆ. ಇದರಲ್ಲಿ ಕಾಂಗ್ರೆಸ್ ಬೆಂಬಲಿತ 8 ಹಾಗೂ ಬಿಜೆಪಿ ಬೆಂಬಲಿತ 8 ಸದಸ್ಯರು ಇದ್ದಾರೆ. …
Read More »ನಮ್ಮ ಗ್ಯಾರಂಟಿ ಯೋಜನೆ ಕದ್ದು ಮೋದಿ ಪಂಚರಾಜ್ಯ ಚುನಾವಣೆ ಎದುರಿಸುತ್ತಿದ್ದಾರೆ: ಡಿ ಕೆ ಶಿವಕುಮಾರ್
ಬೆಂಗಳೂರು: ಪ್ರಧಾನಿ ಮೋದಿಯವರು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಕದ್ದು ಪಂಚರಾಜ್ಯಗಳ ಚುನಾವಣೆ ಎದುರಿಸುತ್ತಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಲೇವಡಿ ಮಾಡಿದರು. ಕೆಪಿಸಿಸಿ ಕಚೇರಿ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮದಿನಾಚರಣೆ ಮತ್ತು ಬೆಂಗಳೂರು ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ದಳಕ್ಕೆ ಮತಹಾಕಿದರೆ ಅವರು ಗ್ಯಾರಂಟಿ ಯೋಜನೆಗಳನ್ನು ವಾಪಸು ತೆಗೆದುಕೊಳ್ಳುವಂತಹ ಕಾನೂನು ತರುತ್ತಾರೆ. ಈ ವಿಚಾರಗಳನ್ನು …
Read More »ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ
ಕಲಬುರಗಿ: ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆಗೈದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ರಾಠೋಡ ಜೊತೆಗಿದ್ದ ಆಪ್ತ ಸಹಾಯಕನಿಗೂ ಗಾಯಗಳಾಗಿದೆ. ಇಬ್ಬರನ್ನೂ ಕಲಬುರಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಚಿತ್ತಾಪುರ ತಾಲೂಕಿನ ಶಂಕರ್‌ವಾಡಿ ಬಳಿ ಘಟನೆ ನಡೆದಿದೆ. ಮಾಲಗತ್ತಿ ಬಳಿಯ ನ್ಯಾಷನಲ್ ಹೈವೆ ಸಮೀಪದ ತಮ್ಮ ಫಾರಂಹೌಸ್ನಿಂದ ತಡರಾತ್ರಿ ಕಲಬುರಗಿಗೆ ಬರುತ್ತಿದ್ದಾಗ ಮಾರ್ಗಮಧ್ಯೆ ಶಂಜರ್ ವಾಡಿ ಬಳಿ ದುಷ್ಕರ್ಮಿಗಳು ಮದ್ಯದ ಬಾಟಲಿ, …
Read More »ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸರ್ಕಾರ ಕೂಡಲೇ ಸ್ಪಂದಿಸಬೇಕು: ಬಸವಜಯ ಮೃತ್ಯುಂಜಯ ಸ್ವಾಮೀಜಿ
ವಿಜಯಪುರ: “ಜಿಲ್ಲೆಯ ನೂತನ ತಾಲೂಕು ತಿಕೋಟಾದ ಕನಮಡಿಯಲ್ಲಿ ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟ ಮಾಡಿ ಸರ್ಕಾರದ ಗಮನ ಸೆಳೆಯಲು ನಿರ್ಧರಿಸಲಾಗಿದೆ” ಎಂದು ಕೂಡಲಸಂಗಮದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ತಿಕೋಟಾ ತಾಲೂಕಿನಲ್ಲಿ ಅತೀ ಹೆಚ್ಚು ಪಂಚಮಸಾಲಿ ಸಮಾಜದವರು ಇರುವ ಗ್ರಾಮವೆಂದರೆ ಅದು ಕನಮಡಿ ಗ್ರಾಮ, ಇಲ್ಲಿಯೇ ಪಂಚಮಸಾಲಿ ಸಮಾಜದ ಮೀಸಲಾತಿ ಹಕ್ಕೊತ್ತಾಯ ಬೃಹತ್ ಸಮಾವೇಶ ಮಾಡಲಿದ್ದೇವೆ” ಎಂದರು. “ರಾಣಿ ಚೆನ್ನಮ್ಮ ಅವರ ಜಯಂತ್ಯುತ್ಸವ ಮಾಡಬೇಕೆಂದು …
Read More »
Laxmi News 24×7