Breaking News

ರಾಷ್ಟ್ರೀಯ

”ದೇಶಕ್ಕಾಗಿ ನೆಹರು ಕುಟುಂಬದವರು ಬಲಿದಾನ ಮಾಡಿದ್ದಾರೆ. ಬಿಜೆಪಿ ದೇಶಕ್ಕಾಗಿ ಏನೂ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ”ದೇಶಕ್ಕಾಗಿ ನೆಹರು ಕುಟುಂಬದವರು ಬಲಿದಾನ ಮಾಡಿದ್ದಾರೆ. ಆದ್ರೆ, ಬಿಜೆಪಿಯವರು ದೇಶಕ್ಕಾಗಿ ಏನೂ ಮಾಡಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಕಚೇರಿ ಬಳಿಯ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಇಂದಿರಾ ಗಾಂಧಿ 39ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ”ಇಂದಿರಾ ಗಾಂಧಿ ದೇಶಕ್ಕಾಗಿ ಪ್ರಾಣ ಕಳೆದುಕೊಂಡರು. ಅಟಲ್ ಬಿಹಾರಿ ವಾಜಪೇಯಿ ಅವರು ಇಂದಿರಾ ಗಾಂಧಿಯನ್ನು ದುರ್ಗೆ ಎಂದು ಕರೆದಿದ್ದರು. ಬಿಜೆಪಿಗರು ರಾಷ್ಟ್ರ ಪ್ರೇಮದ ಬಗ್ಗೆ ಮಾತನಾಡುತ್ತಾರೆ. ಆದರೆ, ದೇಶಕ್ಕಾಗಿ ಅವರ್ಯಾರು …

Read More »

ಇಸ್ರೋ ಅಧ್ಯಕ್ಷ ಸೋಮನಾಥ್, ನಟರಾದ ಡಿಂಗ್ರಿ ನಾಗರಾಜ್, ಬ್ಯಾಂಕ್ ಜನಾರ್ದನ ಸೇರಿ 68 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು: ಕನ್ನಡ ರಾಜ್ಯೋತ್ಸವದ ನಿಮಿತ್ತ ರಾಜ್ಯ ಸರ್ಕಾರದಿಂದ ಕೊಡ ಮಾಡುವ ರಾಜ್ಯೋತ್ಸವ ಪ್ರಶಸ್ತಿಗೆ ಈ ಬಾರಿ ಕಲೆ, ಸಾಹಿತ್ಯ, ವಿಜ್ಞಾನ, ಸಿನಿಮಾ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 68 ಸಾಧಕರಿಗೆ ಮತ್ತು 10 ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ‌ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ. ಇಂದು ಬಿಡುಗಡೆ ಆಗಿರುವ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ …

Read More »

ಮಹಾರಾಷ್ಟ್ರದಲ್ಲಿ ಕೆಎಸ್‌ಆರ್​ಟಿಸಿ ಬಸ್ ಸುಟ್ಟಿದ್ದು ತಪ್ಪು, ರಾಜ್ಯದ ಹಿತ ಕಾಯಲು ನಾವು ಬದ್ಧ: ಡಿ ಕೆ ಶಿವಕುಮಾರ್

ಬೆಂಗಳೂರು: ಮಹಾರಾಷ್ಟ್ರದಲ್ಲಿ ಕೆಎಸ್‌ಆರ್​ಟಿಸಿ ಬಸ್ ಸುಟ್ಟಿದ್ದು ತಪ್ಪು, ರಾಜ್ಯದ ಹಿತ ಕಾಯಲು ಬದ್ಧ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಂಇಎಸ್ ಕರಾಳ ದಿನ ಆಚರಣೆಗೆ ಮುಂದಾಗಿರುವ ಬಗ್ಗೆ ಪ್ರತಿಕ್ರಿಯಿಸಿದರು. ಅವರ ನಿರ್ಧಾರ ತಪ್ಪು. ನಾವು ನಮ್ಮ ರಾಜ್ಯದ ಹಿತ ಕಾಯಲು, ಕನ್ನಡಿಗರ ರಕ್ಷಣೆಗೆ ಬದ್ಧ. ಕರ್ನಾಟಕದಲ್ಲಿರುವ ಜನರು, ಅಲ್ಲಿರುವ ಕನ್ನಡಿಗರ ರಕ್ಷಣೆ ವಿಚಾರದಲ್ಲಿ ನಮ್ಮ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ನಿನ್ನೆ ಮುಖ್ಯಮಂತ್ರಿಗಳು …

Read More »

ಕೆಆರ್‌ಎಸ್ ಒಳಹರಿವು ಶೂನ್ಯಕ್ಕೆ ತಲುಪಿದ್ದು, ನೀರು ಬಿಡುವ ಶಕ್ತಿ ನಮ್ಮಲ್ಲಿಲ್ಲ: ಡಿ‌.ಕೆ.ಶಿ.

ಬೆಂಗಳೂರು: ಕೆಆರ್‌ಎಸ್ ಒಳಹರಿವು ಶೂನ್ಯ ಮಟ್ಟ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ. ನೀರು ಬಿಡುವ ಶಕ್ತಿಯೂ ನಮ್ಮಲ್ಲಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಗಿರಿನಗರದ ವೀರಭದ್ರನಗರದಲ್ಲಿ ಸಂಭವಿಸಿದ ಅಗ್ನಿ ಅನಾಹುತದಿಂದ ಬಸ್​ಗಳು ಸುಟ್ಟು ಹೋದ ಸ್ಥಳಕ್ಕೆ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸಿನ ಕುರಿತು …

Read More »

ಶಾಸಕ ರವಿ ಗಣಿಗ ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ: ಸತೀಶ್​ ಜಾರಕಿಹೊಳಿ

ವಿಜಯಪುರ: ಎರಡೂವರೆ ವರ್ಷದ ಬಳಿಕ ಡಿಸಿಎಂ ಡಿಕೆ ಶಿವಕುಮಾರ್​ ಮುಖ್ಯಮಂತ್ರಿಯಾಗುತ್ತಾರೆ ಎನ್ನುವ ಶಾಸಕ ರವಿ ಗಣಿಗ ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಈಗಾಗಲೇ ನಮ್ಮ ಪಕ್ಷದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್​ ಅವರು ಈ ಬಗ್ಗೆ ಯಾರು ಯಾವ ಹೇಳಿಕೆಯನ್ನು ನೀಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹೀಗಾಗಿ ಯಾವ ಹೇಳಿಕೆಯನ್ನು ನಾನು ನೀಡುವುದಿಲ್ಲ ಎಂದು ಸಚಿವ ಸತೀಶ್​ ಜಾರಕಿಹೊಳಿ ಹೇಳಿದರು. ಇಂಡಿ ತಾಲೂಕಿನ ಹಳಗುಣಕಿ ಗ್ರಾಮದಲ್ಲಿ ಸೋಮವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ …

Read More »

ದೇಶದಲ್ಲಿ ಈರುಳ್ಳಿ ದರ ಹೇಗಿದೆ?: ಬೆಲೆ ಏರಿಕೆ ವದಂತಿಗೆ ಕೇಂದ್ರ ಸರ್ಕಾರದಿಂದ ಅಂಕಿಅಂಶ ಬಿಡುಗಡೆ

ನವದೆಹಲಿ: ದೇಶದಲ್ಲಿ ಈರುಳ್ಳಿ ಬೆಲೆ ಏರಿಕೆಯಾಗಿದೆ ಎಂಬ ವದಂತಿಯ ಮಧ್ಯೆ ಸಗಟು ಮತ್ತು ಚಿಲ್ಲರೆ ಮಾರುಕಟ್ಟೆಯಲ್ಲಿನ ದರಗಳ ಅಂಕಿಅಂಶವನ್ನು ಕೇಂದ್ರ ಸರ್ಕಾರ ಸೋಮವಾರ ನೀಡಿದೆ. ದೆಹಲಿಯಲ್ಲಿ ಈರುಳ್ಳಿ ಬೆಲೆ ಕೆಜಿಗೆ 78 ರೂಪಾಯಿ ಇದ್ದು, ಅತ್ಯಧಿಕವಾಗಿದ್ದರೆ, ದೇಶದ ವಿವಿಧೆಡೆ 50.35 ಪೈಸೆಯಷ್ಟು ಬಿಕರಿಯಾಗುತ್ತಿದೆ ಎಂದು ತಿಳಿಸಿದೆ. ದೆಹಲಿಯಲ್ಲಿ ಸೋಮವಾರ ಈರುಳ್ಳಿ ಬೆಲೆ ಗರಿಷ್ಠ ಮಟ್ಟದಲ್ಲಿಯೇ ಇತ್ತು. ಇಲ್ಲಿನ ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ ಸರಾಸರಿ 78 ರೂ. ಮಾರಾಟವಾಗಿದೆ. ದೇಶದಲ್ಲಿ ಸರಾಸರಿ …

Read More »

ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಕಿಚ್ಚು: ಕರ್ನಾಟಕದ ಬಸ್​ಗೆ ಬೆಂಕಿ.. ಮಹಾರಾಷ್ಟ್ರಕ್ಕೆ ಸಂಚಾರ ತಾತ್ಕಾಲಿಕ ಸ್ಥಗಿತ

ಕಲಬುರಗಿ : ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡೆದಿದೆ. ಸೋಮವಾರ ಮಹಾರಾಷ್ಟ್ರದಲ್ಲಿ ಕರ್ನಾಟಕಕ್ಕೆ ಸೇರಿದ ಕೆಕೆಆರ್‌ಟಿಸಿ ಬಸ್ಸಿಗೆ ಬೆಂಕಿ ಹಚ್ಚಿದ ಪರಿಣಾಮ ಅಂತರ ರಾಜ್ಯ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೆಕೆಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ತಿಳಿಸಿದ್ದಾರೆ. ಸೋಮವಾರ ಬೀದರ್​ ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ಹೊರಟಿದ್ದ ಕೆಎ-38 ಎಫ್-1201 ಸಂಖ್ಯೆ ಬಸ್ಸಿಗೆ ಮಹಾರಾಷ್ಟ್ರದ ಉಮರ್ಗಾ ಬಳಿಯ ತರುರಿ ಗ್ರಾಮದಲ್ಲಿ ಬೆಂಕಿ ಹಚ್ಚಲಾಗಿದೆ. ಪ್ರತಿಭಟನಾಕಾರರು ಬಸ್ ತಡೆದು ಪ್ರಯಾಣಿಕರನ್ನು …

Read More »

ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು ಬೆಳಗಾವಿ ನಗರಕ್ಕೆ ವಿಸ್ತರಿಸಿ: ರೈಲ್ವೇ ಸಚಿವರಿಗೆ ಸಿಎಂ ಪತ್ರ

ಬೆಂಗಳೂರು- ಧಾರವಾಡ ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲು ಸೇವೆಯನ್ನು ಬೆಳಗಾವಿವರೆಗೆ ವಿಸ್ತರಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್​ ಅವರಿಗೆ ಪತ್ರ ಬರೆದಿದ್ದಾರೆ. ಬೆಂಗಳೂರು : ಬೆಂಗಳೂರು-ಹುಬ್ಬಳ್ಳಿ-ಧಾರವಾಡ ವಂದೇ ಭಾರತ್ ರೈಲು ಸೇವೆಯನ್ನು ಬೆಳಗಾವಿವರೆಗೆ ವಿಸ್ತರಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಕೇಂದ್ರ ರೈಲ್ವೇ ಸಚಿವ ಅಶ್ವಿನ್ ವೈಷ್ಣವ್​ ಅವರಿಗೆ ಪತ್ರ ಬರೆದಿದ್ದಾರೆ. ಕಿತ್ತೂರು ಕರ್ನಾಟಕ ಬೆಳಗಾವಿ ಭಾಗದ ಲಕ್ಷಾಂತರ ಕನ್ನಡಿಗರ ಪರವಾಗಿ ನಾನು ನಿಮಗೆ ಪತ್ರ ಬರೆಯುತ್ತಿದ್ದೇನೆ. ಕೇಂದ್ರ …

Read More »

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸಿಕ್ಸರ್​ ಬಾರಿಸುತ್ತಿರುವ 22 ಅಡಿ ಉದ್ದದ ಸಚಿನ್​ ಪ್ರತಿಮೆ ನಿರ್ಮಾಣ.. ನಾಳೆ ಅನಾವರಣ

ಮುಂಬೈ (ಮಹಾರಾಷ್ಟ್ರ): ಕ್ರಿಕೆಟ್​ ದೇವರು ಸಚಿನ್​ ತೆಂಡೂಲ್ಕರ್​ ಹೆಸರಿಗೆ ಅದೆಷ್ಟೋ ದಾಖಲೆಗಳಿವೆ. ಅವರಾಡಿದ ಪ್ರತಿ ಮೈದಾನಗಳೂ ದಾಖಲೆಗಳ ಗೂಡೇ. ಸಚಿನ್​ ಇಷ್ಟಪಡುವ ಮತ್ತು ತವರು ಮೈದಾನವಾದ ಮುಂಬೈನಲ್ಲಿರುವ ವಾಂಖೆಡೆ ಸ್ಟೇಡಿಯಂನಲ್ಲಿ ‘ತದ್ರೂಪಿ ಲಿಟಲ್​ ಮಾಸ್ಟರ್’​ ಮೈದಾಳಿದ್ದು, ಬುಧವಾರ (ನವೆಂಬರ್​ 1) ಅದು ಅನಾವರಣಗೊಳ್ಳಲಿದೆ. ಮುಂಬೈ ಕ್ರಿಕೆಟ್ ಅಸೋಸಿಯೇಷನ್ (ಎಂಸಿಎ) ಕ್ರಿಕೆಟ್ ಐಕಾನ್ ಸಚಿನ್ ತೆಂಡೂಲ್ಕರ್ ಅವರ ಜೀವನಗಾಥೆಯನ್ನು ಹೇಳುವ ಪ್ರತಿಮೆಯನ್ನು ​ಭಾರತ- ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯದ ಮುನ್ನಾದಿನದಂದು ಅನಾವರಣ ಮಾಡಲಾಗುತ್ತಿದೆ. …

Read More »

ಮಾನವ ಕಳ್ಳಸಾಗಣೆ ವಿರುದ್ಧ ಸಿಸಿಬಿ ಪೊಲೀಸರ ಕಾರ್ಯಾಚರಣೆ: 14 ಜನರ ಬಂಧನ, 20 ಮಹಿಳೆಯರ ರಕ್ಷಣೆ

ಬೆಂಗಳೂರು: ನಗರದಲ್ಲಿ ಮಾನವ ಕಳ್ಳಸಾಗಣಿಕೆ ಹಾಗೂ ವೇಶ್ಯಾವಾಟಿಕೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ 14 ಜನ ಆರೋಪಿಗಳನ್ನು ಬಂಧಿಸಲಾಗಿದೆ. ನೊಂದ 20 ಮಹಿಳೆಯರನ್ನ ರಕ್ಷಿಸಲಾಗಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ನಗರದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಾಗಲಗುಂಟೆ, ವರ್ತೂರು, ಕೆ.ಆರ್. ಪುರಂ, ವಿದ್ಯಾರಣ್ಯಪುರ, ಅಮೃತಹಳ್ಳಿ ಠಾಣಾ ವ್ಯಾಪ್ತಿಗಳಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಬಾಂಗ್ಲಾದೇಶ ಮೂಲದ ನಾಲ್ವರು, ಪಶ್ಚಿಮ ಬಂಗಾಳದ …

Read More »