Breaking News

ರಾಷ್ಟ್ರೀಯ

ಮೆಡಿಕಲ್ ಸೀಟ್ ಕೊಡಿಸುವುದಾಗಿ ವಂಚನೆ.. ಹೈದರಾಬಾದ್ ಮೂಲದ ಆರೋಪಿ ಬಂಧನ

ಬೆಂಗಳೂರು: ವೈದ್ಯಕೀಯ ಶಿಕ್ಷಣದ ಸೀಟು ಕೊಡಿಸುವುದಾಗಿ ವಂಚಿಸುತ್ತಿದ್ದ ಆರೋಪಿಯನ್ನು ಸಂಜಯನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ ಮೂಲದ ಶರತ್ ಗೌಡ ಬಂಧಿತ ಆರೋಪಿ.   ಹೇಗಿತ್ತು ಈತನ ಮೋಸದ ಹಾದಿ.. ಸಂಜಯ ನಗರ ವ್ಯಾಪ್ತಿಯ ನ್ಯೂ ಬಿಇಎಲ್ ರಸ್ತೆಯಲ್ಲಿ ನೆಕ್ಸಸ್ ಎಡು ಎಂಬ ಹೆಸರಿನ ಕಚೇರಿ ತೆರೆದಿದ್ದ ಆರೋಪಿ, ಸಿಇಟಿಯಲ್ಲಿ ರ್ಯಾಂಕಿಂಗ್‌ ಕಡಿಮೆ ಬಂದ ವಿದ್ಯಾರ್ಥಿಗಳ ಪೋಷಕರು, ವೈದ್ಯಕೀಯ ಶಿಕ್ಷಣ ಪಡೆಯಲು ಪ್ರಯತ್ನಿಸುತ್ತಿರುವವರ ಮಾಹಿತಿಯನ್ನು ಬೇರೆ ಬೇರೆ ಮೂಲಗಳಿಂದ ಸಂಗ್ರಹಿಸುತ್ತಿದ್ದ. ನಂತರ ಅವರುಗಳನ್ನ …

Read More »

ಬಿಜೆಪಿ ನಾಯಕರೇ ನೀವು ಯಾತ್ರೆ ಮಾಡಬೇಕಾಗಿರುವುದು ರಾಜ್ಯದಲ್ಲಿ ಅಲ್ಲ, ನೀವು ದೆಹಲಿಗೆ ಯಾತ್ರೆ ಹೊರಡಬೇಕು.

ಬೆಂಗಳೂರು : ದೊರೆಯ ತನಕ ದೂರು ಕೊಂಡು ಹೋಗಲಾಗದವರು ಹೊಳೆಯ ತನಕ ಓಟ ಮಾಡಿದರಂತೆ ಎಂಬ ಗಾದೆ ಮಾತಿನಂತಾಗಿದೆ ರಾಜ್ಯ ಬಿಜೆಪಿ ನಾಯಕರ ದಿಕ್ಕೆಟ್ಟ ಬರ ಅಧ್ಯಯನ ಯಾತ್ರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿಎಂ, ಬರಕ್ಕೆ ಪರಿಹಾರ ಕೊಡಬೇಕಾದವರು ದೆಹಲಿಯಲ್ಲಿ ಕೂತಿದ್ದಾರೆ. ಈ ಬಿಜೆಪಿ ನಾಯಕರು ಬರ ಅಧ್ಯಯನಕ್ಕೆ ರಾಜ್ಯದಲ್ಲಿ ಸುತ್ತಾಡಲು ಹೊರಟಿದ್ದಾರೆ. ಬಿಜೆಪಿ ನಾಯಕರೇ, ನಿಮ್ಮದೇ ಪಕ್ಷದ ಸರ್ಕಾರಕ್ಕೆ ಸೇರಿದ …

Read More »

ಸಕ್ಕರೆನಾಡು ಮಂಡ್ಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ

ಮಂಡ್ಯ: ಸಕ್ಕರೆನಾಡು ಮಂಡ್ಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸುವರು. ಸಿಎಂಗೆ ಅದ್ಧೂರಿ ಸ್ವಾಗತ ಕೋರಲು ಕಾಂಗ್ರೆಸ್ ನಾಯಕರು ಸಜ್ಜಾಗಿದ್ದರೆ, ಕಾವೇರಿ ಪ್ರತಿಭಟನೆಯ ಬಿಸಿ ತಟ್ಟುವ ಸಾಧ್ಯತೆಯೂ ಇದ್ದು ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಸಿಎಂ ಆದ ಬಳಿಕ ಸಿದ್ದರಾಮಯ್ಯ 2ನೇ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. …

Read More »

ಬಿಗ್​ಬಾಸ್​ ಮನೆಯಿಂದ ಅನಿರೀಕ್ಷಿತವಾಗಿ ಎಕ್ಸಿಟ್​ ಆಗಿದ್ದ ಸೀಸನ್​ 10ರ ಸ್ಪರ್ಧಿ ​ವರ್ತೂರು ಸಂತೋಷ್ ಮತ್ತೆ ರೀ ಎಂಟ್ರಿ

ಬೆಂಗಳೂರು: ಹುಲಿ ಉಗುರಿನ ಡಾಲರ್​ ಧರಿಸಿದ ಆರೋಪದ ಮೇಲೆ ಬಂಧಿತರಾಗಿದ್ದ ಕನ್ನಡ ರಿಯಾಲಿಟಿ ಶೋ ಬಿಗ್​ ಬಾಸ್​ ಸೀಸನ್​ 10ರ ಸ್ಪರ್ಧಿ ಹಳ್ಳಿಕಾರ್​ ಖ್ಯಾತಿಯ ವರ್ತೂರು​ ಸಂತೋಷ್​ ಮತ್ತೆ ಬಿಗ್​ ಬಾಸ್​ ಮನೆಗೆ ರೀ ಎಂಟ್ರಿ ಕೊಟ್ಟು ಸ್ಪರ್ಧಾರ್ತಿಗಳಿಗೆ ಸರ್​ಪ್ರೈಸ್​ ಕೊಟ್ಟಿದ್ದಾರೆ. ಹುಲಿ ಉಗುರಿನ ಡಾಲರ್​ ಧಾರಣೆ ಪ್ರಕರಣದಲ್ಲಿ ಅ.22ರಂದು ಬಿಗ್​ ಬಾಸ್​ ಮನೆಯಿಂದಲೇ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಇದರಿಂದ ಅನಿರೀಕ್ಷಿತವಾಗಿ ಮನೆಯಿಂದ ಎಕ್ಸಿಟ್​​ ಆಗಿದ್ದ ಅವರು ಮತ್ತೆ ಬಿಗ್​ ಬಾಸ್​ …

Read More »

”ಆಪರೇಷನ್ ಕಮಲದ ಬಗ್ಗೆ ಯಾರಾದರೂ ದೂರು ಕೊಟ್ಟರೆ ತನಿಖೆ ಮಾಡುತ್ತೇವೆ.: ಡಾ. ಜಿ. ಪರಮೇಶ್ವರ್

ಬೆಂಗಳೂರು: ”ಆಪರೇಷನ್ ಕಮಲದ ಬಗ್ಗೆ ಯಾರಾದರೂ ದೂರು ಕೊಟ್ಟರೆ ತನಿಖೆ ಮಾಡುತ್ತೇವೆ. ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ” ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. ಸದಾಶಿವ ನಗರ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ನಾನಿದರ ಬಗ್ಗೆ ಮಾತನಾಡಿಲ್ಲ. ಯಾರಾದರೂ ದೂರು ಕೊಟ್ಟರೆ ತನಿಖೆ ಮಾಡ್ತೇವೆ. ದೂರು ಪೆಸಿಫಿಕ್ ಆಗಿರಬೇಕು” ಎಂದರು. ಅಸಮಾಧಾನ‌ ಇಲ್ಲ: ಪಕ್ಷದಲ್ಲಿ ಕಾರ್ಯಕರ್ತರ ಬೇಸರ ವಿಚಾರವಾಗಿ ಪ್ರತಿಕ್ರಿಯಿಸಿ, ”ಅಸಮಾಧಾನ ಆ ರೀತಿ ಯಾವುದೂ ಇಲ್ಲ. …

Read More »

ಷೇರು ಮಾರುಕಟ್ಟೆ ಇಂದು: 330 ಪಾಯಿಂಟ್​ ಏರಿಕೆಯಾದ ಸೆನ್ಸೆಕ್ಸ್​; 19,100 ದಾಟಿದ ನಿಫ್ಟಿ

ಬೆಂಗಳೂರು: ಜಾಗತಿಕ ಮಾರುಕಟ್ಟೆಗಳಲ್ಲಿನ ಮಂದಗತಿಯ ವಹಿವಾಟಿನ ಕಾರಣದಿಂದ ಸೋಮವಾರ ಇಳಿಕೆಯೊಂದಿಗೆ ವಹಿವಾಟು ಆರಂಭಿಸಿದ ಭಾರತೀಯ ಷೇರು ಸೂಚ್ಯಂಕಗಳು ನಂತರ ರಿಲಯನ್ಸ್ ಇಂಡಸ್ಟ್ರೀಸ್, ಭಾರ್ತಿ ಏರ್ಟೆಲ್, ಐಸಿಐಸಿಐ ಬ್ಯಾಂಕ್, ಎಚ್​ಡಿಎಫ್​ಸಿ ಬ್ಯಾಂಕ್, ಎಲ್ &ಟಿ ಮತ್ತು ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಷೇರುಗಳ ಕಾರಣದಿಂದ ಎತ್ತರಕ್ಕೇರಿದವು.   ಸೋಮವಾರ ವಹಿವಾಟಿನ ಅಂತ್ಯಕ್ಕೆ ಎಸ್ &ಪಿ ಬಿಎಸ್‌ಇ ಸೆನ್ಸೆಕ್ಸ್ 330 ಪಾಯಿಂಟ್ಸ್ ಅಥವಾ ಶೇಕಡಾ 0.52ರಷ್ಟು ಏರಿಕೆ ಕಂಡು 64,113ಕ್ಕೆ ತಲುಪಿದೆ. ಮತ್ತೊಂದೆಡೆ, ನಿಫ್ಟಿ50 …

Read More »

ಹಳೆ ವೈಷಮ್ಯದ ಹಿನ್ನಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ವ್ಯಕ್ತಿ ಕೊಲೆ

ರಾಯಚೂರು : ಹಳೇ ವೈಷಮ್ಯದ ಹಿನ್ನೆಲೆ ಮಾರಕಾಸ್ತ್ರಗಳಿಂದ ಹಲ್ಲೆಮಾಡಿ ವ್ಯಕ್ತಿಯೊಬ್ಬರನ್ನು ಬರ್ಬರ‌ವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಮದ್ಲಾಪುರ ಗ್ರಾಮದ ಬಳಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ರಬಣಕಲ್‌ ಗ್ರಾಮದ ಪ್ರಸಾದ್ (38) ಎಂದು ಗುರುತಿಸಲಾಗಿದೆ. ಬೆಳಗ್ಗೆ ಭತ್ತದ ಗದ್ದೆಗೆ ನೀರು ಕಟ್ಟಲು ತೆರಳಿದಾಗ ಏಕಾಏಕಿ ಮಾರಾಕಾಸ್ತ್ರಗಳಿಂದ ದಾಳಿ ನಡೆಸಿದ ಮೂವರು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ ಪ್ರಸಾದ್​ ಅವರು ಜಮೀನಿಗೆ ನೀರು …

Read More »

ಬಾವಲಿಗಳನ್ನು ಮಾಂಸಕ್ಕಾಗಿ ಬೇಟೆಯಾಡುತ್ತಿದ್ದ ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.

ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಕಾಡರಾಮನಹಳ್ಳಿಯಲ್ಲಿ ಮಾಂಸಕ್ಕಾಗಿ ಎಂಟು ಬಾವಲಿಗಳನ್ನು ಕೊಂದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ರಾಜ್ಯ ಅರಣ್ಯ ಇಲಾಖೆ ಸಿಬ್ಬಂದಿ ಸೋಮವಾರ ಅರೆಸ್ಟ್ ಮಾಡಿದ್ದಾರೆ. ಮಾಗಡಿ ತಾಲ್ಲೂಕಿನ ಹೊಂಬಾಳಮ್ಮಪೇಟೆಯ ನಿವಾಸಿಗಳಾದ ರಂಗನಾಥ, ರಾಮಕೃಷ್ಣ, ಶಿವಶಂಕರ ಹಾಗೂ ರಂಗನಾಥ ಎಂದು ಆರೋಪಿಗಳನ್ನು ಗುರುತಿಸಲಾಗಿದೆ. ಆರೋಪಿಗಳು ಕಾಡರಾಮನಹಳ್ಳಿಯ ಜಮೀನೊಂದರಲ್ಲಿ 8 ಬಾವಲಿಗಳನ್ನು ಮಾಂಸಕ್ಕಾಗಿ ಬೇಟೆಯಾಡಿದ್ದರು. ಈ ಕುರಿತು ಖಚಿತ ಮಾಹಿತಿ ಪಡೆದ ಹುಲಿಯೂರುದುರ್ಗ ವಲಯ ಅರಣ್ಯಾಧಿಕಾರಿ ಜಗದೀಶ್ ಮತ್ತು ಸಿಬ್ಬಂದಿ …

Read More »

ಬೆಂಗಳೂರು ಹೊರವಲಯದ ರಸ್ತೆ, ಅಪಾರ್ಟ್​ಮೆಂಟ್​ಗಳಲ್ಲಿ ಚಿರತೆ ಓಡಾಟ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬೆಂಗಳೂರು: ನಗರದ ಹೊರವಲಯದಲ್ಲಿರುವ ಬೊಮ್ಮನಹಳ್ಳಿಯ ಸಿಂಗಸಂದ್ರ ಎಇಸಿಎಸ್ ಲೇಔಟ್‌ನಲ್ಲಿ ಚಿರತೆ ಸಂಚಾರದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದಾರೆ. ಮೈಕ್ ಮೂಲಕ ಚಿರತೆ ಇದೆ‌, ಜನ ಎಚ್ಚರಿಕೆಯಿಂದ ಓಡಾಟ ಮಾಡಬೇಕು ಎಂದು ಇಲಾಖೆ ಸಿಬ್ಬಂದಿ ಮನವಿ ಮಾಡಿದ್ದಾರೆ. ಸಿಂಗಸಂದ್ರ, ಹೊಸಪಾಳ್ಯ, ಕೂಡ್ಲುಭಾಗದಲ್ಲಿ ಚಿರತೆ ಓಡಾಟ ಹೆಚ್ಚಾಗಿದೆ. ಪ್ರತಿಷ್ಠಿತ ಅಪಾರ್ಟ್​ಮೆಂಟ್​ಗಳ ಆವರಣ ಹಾಗೂ ಲೇಔಟ್​ಗಳಲ್ಲಿ ಸಂಚಾರ ಮಾಡಿದೆ. ಕತ್ತಲಾಗುತ್ತಿದ್ದಂತೆ ಅಪಾರ್ಟ್​ಮೆಂಟ್​ನ ಮೆಟ್ಟಿಲು, …

Read More »

ಮೆಟ್ರೋಗೆ ಬಸವಣ್ಣ ಅವರ ಹೆಸರಿಡಬೇಕು.:ಸಚಿವ ಎಂ ಬಿ ಪಾಟೀಲ್

ಬೆಂಗಳೂರು: ನಿಶ್ವಿತವಾಗಿ ಮೆಟ್ರೋಗೆ ಜಗಜ್ಯೋತಿ ಬಸವಣ್ಣ ಅವರ ಹೆಸರಿಡಬೇಕು. ಇದು ಜನರ ಒತ್ತಾಯ, ಹಾಗೆ ನನ್ನ ಒತ್ತಾಯವೂ ಇದೆ ಎಂದು ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ.   ಮೆಟ್ರೋಗೆ ಬಸವೇಶ್ವರರ ಹೆಸರಿಡುವ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಕೆಂಪೇಗೌಡರು ಬೆಂಗಳೂರನ್ನು ನಿರ್ಮಾಣ ಮಾಡಿದರು. ಅವರ ಹೆಸರನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಟ್ಟಿದ್ದೇವೆ. ಬಹಳ ಒಳ್ಳೆಯ ಕೆಲಸ ಮಾಡಿದ್ದೇವೆ. ಇನ್ನೋರ್ವ ಮಹಾತ್ಮರು ಬಸವೇಶ್ವರ. 12ನೇ ಶತಮಾನದಲ್ಲಿ ಸಮಾನತೆ ತಂದವರು. ಅನುಭವ ಮಂಟಪದ ಪರಿಕಲ್ಪನೆ ತಂದವರು. …

Read More »