ಬೆಂಗಳೂರು : ಚುನಾವಣಾ ಅಕ್ರಮಗಳನ್ನು ನಡೆಸಿ ಹೊಳೆನರಸೀಪುರ ಶಾಸಕ ಹೆಚ್ ಡಿ ರೇವಣ್ಣ ಆಯ್ಕೆಯಾಗಿದ್ದು, ಅವರ ಶಾಸಕ ಸ್ಥಾನವನ್ನು ಅನರ್ಹಗೊಳಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ಸಂಬಂಧ ಹೈಕೋರ್ಟ್ ಮತ್ತೊಂದು ಬಾರಿ ಸಮನ್ಸ್ ಜಾರಿ ಮಾಡಿ ಆದೇಶಿಸಿದೆ. ಹೊಳೆನರಸೀಪುರದ ಪರಾಜಿತ ಅಭ್ಯರ್ಥಿ ಹಾಗೂ ವಕೀಲ ದೇವರಾಜೇಗೌಡ ಎಂಬುವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ನ್ಯಾಯಪೀಠ ಸಮನ್ಸ್ ಜಾರಿ ಮಾಡಿದೆ. ಈ ಹಿಂದೆ …
Read More »ಮುಂಬೈನ ಐಕಾನಿಕ್ ಪ್ರೀಮಿಯರ್ ಪದ್ಮಿನಿ ಟ್ಯಾಕ್ಸಿಗಳಿಗೆ ವಿದಾಯ.. ಇಂದಿನಿಂದ ‘ಕಪ್ಪು ಹಳದಿ’ ಟ್ಯಾಕ್ಸಿಗಳು ಬಂದ್..
ಹೈದರಾಬಾದ್: ಮುಂಬೈನ ಬೀದಿಗಳಲ್ಲಿ ಪ್ರಯಾಣಿಸುವಾಗ ‘ಕಪ್ಪು ಮತ್ತು ಹಳದಿ’ ಟ್ಯಾಕ್ಸಿಗಳ ಚಿತ್ರವು ಖಂಡಿತವಾಗಿಯೂ ಕಣ್ಮುಂದೆ ಬರುತ್ತದೆ. ಅನೇಕ ವರ್ಷಗಳಿಂದ, ಈ ಟ್ಯಾಕ್ಸಿ ಸೇವೆಯನ್ನು ‘ಕಾಲಿ-ಪಿಲಿ’ ಎಂದು ಕರೆಯಲಾಗುತ್ತಿತ್ತು. ಇದು ಸಾಮಾನ್ಯರಿಂದ ಶ್ರೀಮಂತರವರೆಗಿನ ಮುಂಬೈನ ಎಲ್ಲಾ ವರ್ಗದ ಜನರಿಗೆ ಸಾರಿಗೆ ಸಾಧನವಾಗಿತ್ತು. ಈಗ ಕನಸಿನ ನಗರಿಯಲ್ಲಿ ಕಪ್ಪು ಹಳದಿಯ ನೆನಪುಗಳು ಮೂಲೆ ಸೇರುವ ದಿನ ಸಮೀಪಿಸುತ್ತದೆ. ಮಹಾನಗರಿ ಮುಂಬೈಗೂ ಇಲ್ಲಿನ ‘ಕಾಲಿ-ಪಿಲಿ’ ಟ್ಯಾಕ್ಸಿಗೂ ಅವಿನಾಭಾವ ಸಂಬಂಧವಿದ್ದು, ಈಗ ಸುಮಾರು ಆರು ದಶಕಗಳ ನಂತರ …
Read More »ಸಿದ್ದರಾಮಯ್ಯ ನೇತೃತ್ವದಲ್ಲಿ 5 ವರ್ಷ ಸರ್ಕಾರ ಸ್ಥಿರ : ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ
ಸಿದ್ದರಾಮಯ್ಯ ನೇತೃತ್ವದಲ್ಲಿ ಐದು 5 ಸರ್ಕಾರ ಸ್ಥಿರ : ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಗೋಕಾಕ : ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ 5 ವರ್ಷ ಸ್ಥಿರವಾಗಿರುತ್ತದೆ, ಯಾವುದೇ ಆಪರೇಷನ್ ಇಲ್ಲ ಎಲ್ಲವೂ ಊಹಾಪೋಹ ಅಷ್ಟೇ ಎಂದು ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರು ತಿಳಿಸಿದ್ದಾರೆ. ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಸರ್ಕಾರ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸ್ಥಿರವಾಗಿರುತ್ತದೆ, ಯಾವುದೇ ಆಪರೇಷನ್ ಕಮಲ …
Read More »ತಾಯಿಯನ್ನೇ ಕೊಲೆ ಮಾಡಿದ ಆರೋಪ: ಪುತ್ರನ ಬಂಧನ
ಮಂಗಳೂರು: ಕಟೀಲು ಸಮೀಪದ ಕೊಂಡೇಲಾ ಗ್ರಾಮದ ದುರ್ಗಾ ನಗರ ಎಂಬಲ್ಲಿ ರತ್ನ ಶೆಟ್ಟಿ (60) ಮನೆಯ ಕೊಠಡಿಯೊಳಗೆ ಅಸಹಜವಾಗಿ ಸಾವನ್ನಪ್ಪಿದ್ದರು. ಕೊಲೆ ಆರೋಪದ ಮೇಲೆ ಆಕೆಯ ಮಗನನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ರವಿರಾಜ್ ಶೆಟ್ಟಿ(33) ಬಂಧಿತ ಆರೋಪಿ. ರತ್ನ ಶೆಟ್ಟಿ ಅವರು ಕಟೀಲು ದುರ್ಗಾ ನಗರದ ಬಾಲಕೃಷ್ಣ ಎಂಬವರ ಮನೆಯ ಬದಿಯ ಕೊಠಡಿಯಲ್ಲಿ ಮಗ ರವಿರಾಜ್ ಜೊತೆ ವಾಸ್ತವ್ಯವಿದ್ದರು. ಆತ ಗಿಡಿಗೆರೆ ಚರ್ಚ್ ಬಳಿಯ ಬಾಲಕೃಷ್ಣ ಎಂಬವರ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ. …
Read More »ನವೆಂಬರ್ 3ರಂದು ‘ಇಂಡಿಯನ್ 2’ ಸಿನಿಮಾದ ಗ್ಲಿಂಪ್ಸ್ ಬಿಡುಗಡೆಯಾಗಲಿದೆ ಎಂದು ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ತಿಳಿಸಿದೆ.
‘ಇಂಡಿಯನ್ 2’ ಎಸ್ ಶಂಕರ್ ನಿರ್ದೇಶನದ ಮುಂಬರುವ ತಮಿಳು ಸಿನಿಮಾ ಸಿನಿ ಪ್ರೇಮಿಗಳಲ್ಲಿ ಸಾಕಷ್ಟು ನಿರೀಕ್ಷೆಯನ್ನು ಮೂಡಿಸಿದೆ. ಕಮಲ್ ಹಾಸನ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಈ ಚಿತ್ರದ ಅಪ್ಡೇಟ್ ಹೊರಬಿದ್ದಿದೆ. ನವೆಂಬರ್ 3ರಂದು ಸಿನಿಮಾದ ಒಂದು ನೋಟವನ್ನು (ಗ್ಲಿಂಪ್ಸ್) ಚಿತ್ರತಂಡ ಹಂಚಿಕೊಳ್ಳಲಿದೆ ಎಂದು ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ತಿಳಿಸಿದೆ. ಈ ವಿಚಾರವನ್ನು ಹಂಚಿಕೊಳ್ಳಲು ‘ಇಂಡಿಯನ್ 2’ನ ಹೊಸ ಲುಕ್ ಪೋಸ್ಟರ್ ಅನ್ನು ಬಿಡುಗಡೆ ಮಾಡಿದೆ. ಲೈಕಾ ಪ್ರೊಡಕ್ಷನ್ಸ್ ಮತ್ತು …
Read More »‘ಶೀ ಈಸ್ ಇನ್ ಲವ್’ ಹಾಡಿಗೆ ಯಶ ಶಿವಕುಮಾರ್ ಜೊತೆ ಪ್ರಜ್ವಲ್ ದೇವರಾಜ್ ರೋಮ್ಯಾನ್ಸ್
ಪ್ರಜ್ವಲ್ ದೇವರಾಜ್ ನಟನೆಯ ‘ಗಣ’ ಸಿನಿಮಾದ ‘ಶೀ ಈಸ್ ಇನ್ ಲವ್’ ಎಂಬ ರೊಮ್ಯಾಂಟಿಕ್ ಹಾಡು ಬಿಡುಗಡೆಯಾಗಿದೆ. ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ನಟ ಪ್ರಜ್ವಲ್ ದೇವರಾಜ್, ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಾ ಬ್ಯುಸಿಯಾಗಿದ್ದಾರೆ. ಅದರಲ್ಲಿ ಬಹುನಿರೀಕ್ಷಿತ ‘ಗಣ’ ಸಿನಿಮಾ ಕೂಡ ಒಂದು. ಇದೀಗ ಈ ಚಿತ್ರದ ರೊಮ್ಯಾಂಟಿಕ್ ಹಾಡೊಂದು ರಿಲೀಸ್ ಆಗಿದೆ. ‘ಶೀ ಈಸ್ ಇನ್ ಲವ್’ ಎಂಬ ಸುಮಧುರ ಹಾಡಿಗೆ ಜನರು …
Read More »ಶಾಸಕರನ್ನು ಖರೀದಿ ಮಾಡುವುದೇ ಬಿಜೆಪಿಯವರ ಡಿಎನ್‌ಎ ಆಗಿದೆ:ಕೃಷ್ಣ ಬೈರೇಗೌಡ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರನ್ನು ಬಿಜೆಪಿಯು ಹಣದ ಆಮಿಷವೊಡ್ಡಿ ಸೆಳೆಯುವ ಪ್ರಯತ್ನ ನಡೆಸುತ್ತಿದೆ ಎಂಬ ಆರೋಪ ಬೆನ್ನಲ್ಲೇ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರತಿಕ್ರಿಯಿಸಿದ್ದಾರೆ. ಪ್ರಜಾಪ್ರಭುತ್ವ ದಮನ ಮಾಡುವುದೇ ಬಿಜೆಪಿ ಸಿದ್ಧಾಂತವಾಗಿದೆ. ವಾಮಮಾರ್ಗದ ಮೂಲಕ ಅಧಿಕಾರ ಚುಕ್ಕಾಣಿ ಹಿಡಿಯುವುದು ಹೊಸದೇನಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಸೆಳೆಯುತ್ತಿದೆ ಎಂಬ ಆರೋಪ ಕುರಿತು ಮಾತನಾಡಿದ ಸಚಿವರು, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಶಾಸಕರನ್ನು ಖರೀದಿ ಮಾಡುತ್ತಿಲ್ಲ. 2008 ಹಾಗೂ 2019 …
Read More »ಛತ್ತೀಸ್ಗಢದಲ್ಲಿ ರೈತರೊಂದಿಗೆ ಭತ್ತ ಕಟಾವು ಮಾಡಿದ ರಾಹುಲ್ ಗಾಂಧಿ!
ರಾಯ್‌ಪುರ (ಛತ್ತೀಸ್‌ಗಢ): ವಿಧಾನಸಭೆ, ಲೋಕಸಭೆ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜನರೊಂದಿಗೆ ಬೆರೆಯುವುದನ್ನು ಮುಂದುವರಿಸಿದ್ದಾರೆ. ಚುನಾವಣಾ ರಾಜ್ಯವಾದ ಛತ್ತೀಸ್ಗಢದಲ್ಲಿ ಪ್ರಚಾರ ನಡೆಸುತ್ತಿರುವ ಸಂಸದ, ಅಲ್ಲಿನ ರೈತರೊಂದಿಗೆ ಬೆಳೆ ಕಟಾವು ಮಾಡುವ ಮೂಲಕ ಗಮನ ಸೆಳೆದರು. ರಾಜಧಾನಿ ರಾಯ್ಪುರದ ಸಮೀಪದಲ್ಲಿರುವ ಕಥಿಯಾ ಗ್ರಾಮಕ್ಕೆ ಭೇಟಿ ನೀಡಿದ ಅವರು, ಭತ್ತದ ಗದ್ದೆಗಳಲ್ಲಿ ಬೆಳೆ ಕೊಯ್ಲು ಮಾಡುತ್ತಿದ್ದ ರೈತರ ಜೊತೆ ಸೇರಿಕೊಂಡ ಬೆಳೆ ಕಟಾವು ಮಾಡಿದರು. ಬಳಿಕ ಅವರ ಜೊತೆ …
Read More »S.B.I. ಬ್ರಾಂಡ್ ಅಂಬಾಸಿಡರ್ ಆದ ಕ್ರಿಕೆಟರ್ ಎಂಎಸ್ ಧೋನಿ
ಮುಂಬೈ : ಭಾರತದ ಅತಿದೊಡ್ಡ ವಾಣಿಜ್ಯ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಕ್ರಿಕೆಟ್ ಲೆಜೆಂಡ್ ಮಹೇಂದ್ರ ಸಿಂಗ್ ಧೋನಿ ಅವರನ್ನು ತನ್ನ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಂಡಿರುವುದಾಗಿ ಘೋಷಿಸಿದೆ. ಈ ಕುರಿತು ಮಾಹಿತಿ ನೀಡಿದ ಎಸ್ಬಿಐ ಅಧ್ಯಕ್ಷ ದಿನೇಶ್ ಖರಾ, “ಎಂಎಸ್ ಧೋನಿ ಅವರನ್ನು ಎಸ್ಬಿಐನ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಂಡಿರುವುದನ್ನು ತಿಳಿಸಲು ನಮಗೆ ಸಂತೋಷವಾಗುತ್ತಿದೆ. ಎಸ್ಬಿಐನ ಸಂತೃಪ್ತ ಗ್ರಾಹಕರಾಗಿ ಬ್ಯಾಂಕ್ನೊಂದಿಗೆ ಧೋನಿ ಒಡನಾಟ ಹೊಂದಿದ್ದು, …
Read More »ನ.9 ರಿಂದ ಮೈಸೂರಿನಲ್ಲಿ ಮುಖ್ಯಮಂತ್ರಿ ನಿವಾಸದ ಮುಂದೆ ರೈತರಿಂದ ಧರಣಿ ಸತ್ಯಾಗ್ರಹ: ಕುರುಬೂರು ಶಾಂತಕುಮಾರ್
ಮೈಸೂರು : ಇನ್ನು ಹತ್ತು ದಿನದಲ್ಲಿ ರೈತರಿಗೆ ಕಬ್ಬಿನ ಹೆಚ್ಚುವರಿ ದರ ಕೊಡಿಸದಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೈಸೂರಿನ ಮನೆಯ ಎದುರು ನ.9 ರಿಂದ ಬೃಹತ್ ಧರಣಿ ಸತ್ಯಾಗ್ರಹ ನಡೆಸಲು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರ ಸಂಘ ತೀರ್ಮಾನಿಸಿದೆ. ನಗರದ ಪಿಡಿಡಬ್ಲ್ಯೂ ಅತಿಥಿ ಗೃಹದಲ್ಲಿ ನಡೆದ ಸಭೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ರಾಜ್ಯ ಸರ್ಕಾರ ಹಿಂದಿನ ಸಾಲಿನಲ್ಲಿ ನಿಗದಿ ಮಾಡಿದ್ದ ಕಬ್ಬಿನ ಹೆಚ್ಚುವರಿ …
Read More »