ನವದೆಹಲಿ : “ಒಂದು ದೇಶ, ಒಂದು ಚುನಾವಣೆ” ಸಾಧ್ಯತೆ ಬಗ್ಗೆ ಪರಿಶೀಲಿಸಲು ನೇಮಿಸಿರುವ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಗೆ ಕಾನೂನು ಆಯೋಗವು ತನ್ನ ವಿಸ್ತೃತ ವರದಿಯನ್ನು ಪ್ರಸ್ತುತಪಡಿಸಲು ಸಜ್ಜಾಗಿದೆ. ಕೋವಿಂದ್ ನೇತೃತ್ವದ ಸಮಿತಿಯು ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಲು ಸಿದ್ಧತೆ ನಡೆಸುತ್ತಿರುವ ಮಧ್ಯೆ ಕಾನೂನು ಆಯೋಗವು ವರದಿಯನ್ನು ನೀಡಲು ಮುಂದಾಗಿದೆ. ಈ ಸಂಬಂಧ ಚುನಾವಣಾ ಸುಧಾರಣೆ ಕುರಿತು ಚರ್ಚೆ ನಡೆಸಲು ಕಾನೂನು ಆಯೋಗ ಮತ್ತು ಸಮಿತಿ ಬುಧವಾರ ಸಭೆ …
Read More »ರಾಮನಗರ ಬೆಂಗಳೂರಿಗೆ ಸೇರಿಸುವ ವಿಚಾರ ನನಗೆ ಗೊತ್ತಿಲ್ಲ : ಸಿಎಂ ಸಿದ್ದರಾಮಯ್ಯ
ಮೈಸೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರಿಗೆ ಸೇರಿಸುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಜೊತೆ ಡಿಕೆಶಿ ಅವರು ಚರ್ಚೆ ಮಾಡಿಲ್ಲ. ಅವರ ಮೈಂಡ್ನಲ್ಲಿ ಏನಿದೆ ಎಂಬುದು ಗೊತ್ತಿಲ್ಲ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಇಂದು ತಮ್ಮ ಟಿ ಕೆ ಲೇಔಟ್ ನ ಮನೆಯ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾಡಹಬ್ಬ ದಸರಾ ಮಹೋತ್ಸವ ಯಶಸ್ವಿಯಾಗಿ ನಡೆದಿದೆ. ಎಲ್ಲ ಪಕ್ಷದ ಶಾಸಕರು, ಜನಪ್ರತಿನಿಧಿಗಳು ಬೆಂಬಲ ನೀಡಿದ್ದಾರೆ. ಎಲ್ಲ …
Read More »ಸಹೋದರನಿಗೆ 100 ಕೋಟಿ ರೂ. ವಂಚನೆ ಆರೋಪ.. ಮೈಸೂರಿನಲ್ಲಿ ಮುಂಬೈ ಮೂಲದ ಮಹಿಳೆ ಬಂಧನ
ಮುಂಬೈ (ಮಹಾರಾಷ್ಟ್ರ): ಅಂದಾಜು 100 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮಾರಾಟ ಮಾಡಿ ಸ್ವಂತ ಸಹೋದರನಿಗೆ ಮೋಸ ಮಾಡಿದ ಆರೋಪದ ಮೇಲೆ ಮುಂಬೈ ಮೂಲದ ಮಹಿಳಾ ಆರೋಪಿಯನ್ನು ಕರ್ನಾಟಕದ ಮೈಸೂರಿನಲ್ಲಿ ಬಂಧಿಸಲಾಗಿದೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ. ಸೆಂಟ್ರಲ್ ಮುಂಬೈನ ನಿವಾಸಿ ಅಬಿದಾ ಇಸ್ಮಾಯಿಲ್ ಎಂಬ ಮಹಿಳೆಯೇ ಬಂಧಿತ ಆರೋಪಿ. ಈಕೆ ತನ್ನ ಸಂಬಂಧಿಕರು ಹಾಗೂ ಸಹೋದರನಿಗೆ ಸೇರಿದ ಆಸ್ತಿಯನ್ನು ಬೇರೊಬ್ಬರಿಗೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಇದರ ಅಂದಾಜು …
Read More »ಕೆಂಪು ಬಣ್ಣದ ಲ್ಯಾಂಬೋರ್ಗಿನಿ ಕಾರು ಖರೀದಿಸಿದ ನಟಿ ಶ್ರದ್ಧಾ ಕಪೂರ್.. ಬೆಲೆ ಎಷ್ಟು ಗೊತ್ತಾ ?
ಮುಂಬೈ : ನಟಿ ಶ್ರದ್ಧಾ ಕಪೂರ್ ಬಾಲಿವುಡ್ನ ಬಹುಬೇಡಿಕೆಯ ನಟಿ. ತನ್ನ ಅಮೋಘ ನಟನೆ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿದ್ದಾರೆ. ಈ ನವರಾತ್ರಿ ಶುಭ ಸಂದರ್ಭದಲ್ಲಿ ಶ್ರದ್ಧಾ ಕಪೂರ್ ತಮ್ಮ ಸಂತಸ ಇಮ್ಮಡಿಗೊಳಿಸಿದ್ದಾರೆ. ಬಾಲಿವುಡ್ ನಟರಲ್ಲಿ ಹಲವರು ದುಬಾರಿ ಬೆಲೆಯ ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. ಬಾಲಿವುಡ್ ಬಾದ್ ಶಾ ಶಾರುಖ್ ಖಾನ್, ಸಲ್ಮಾನ್ ಖಾನ್, ಅಕ್ಷಯ ಕುಮಾರ್ ಸೇರಿದಂತೆ ಹಲವು ನಟರಲ್ಲಿ ಐಷಾರಾಮಿ ಕಾರುಗಳಿವೆ. ಜೊತೆಗೆ ಕೆಲವೇ ಕೆಲವು ಬಾಲಿವುಡ್ ನಟಿಯರು …
Read More »ನಾನು ಮದುವೆ ಸಮಯದಲ್ಲಿ ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ನೈಜವಾದುದ್ದಲ್ಲ: ನಿಖಿಲ್ ಕುಮಾರಸ್ವಾಮಿ
ಬೆಂಗಳೂರು : ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ ಎಂದು ನಟ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಸ್ಪಷ್ಟನೆ ನೀಡಿರುವ ಅವರು, ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ ಎಂದು ಹೇಳಿದ್ದಾರೆ. ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ …
Read More »ಒಂದು ಕೆಜಿ ಅಧಿಕ ತೂಕದ 80 ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ
ದೇವನಹಳ್ಳಿ (ಬೆಂಗಳೂರು) : ವಿಮಾನದ ವಾಶ್ ರೂಮ್ನಲ್ಲಿ ಅಡಗಿಸಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಒಂದು ಕೆಜಿ ಅಧಿಕ ತೂಕದ 80 ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಅಕ್ಟೋಬರ್ 24ರಂದು ಅಬುಧಾಬಿಯಿಂದ ಬಂದ ಇವೈ 238 ವಿಮಾನವನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ವೇಳೆ ವಿಮಾನದ ವಾಶ್ ರೂಮ್ನಲ್ಲಿ ಕಪ್ಪು ಬಣ್ಣದ ಚೀಲದಲ್ಲಿ ಚಿನ್ನವನ್ನು ಅಡಗಿಸಿ ಇಟ್ಟಿರುವುದು ಪತ್ತೆಯಾಗಿದೆ. ಒಟ್ಟು 1331.66 …
Read More »ಚೆನ್ನೈನ ಅವಡಿ ಬಳಿ ಹಳಿ ತಪ್ಪಿದ ವಿದ್ಯುತ್ ಚಾಲಿತ ರೈಲು: ತಪ್ಪಿದ ಭಾರಿ ದುರಂತ
ಚೆನ್ನೈ (ತಮಿಳುನಾಡು): ಇಂದು ಬೆಳಗ್ಗೆ ತಮಿಳುನಾಡು ರಾಜ್ಯದ ಚೆನ್ನೈನ ಅವಡಿ ರೈಲು ನಿಲ್ದಾಣದ ಬಳಿ ವಿದ್ಯುತ್ ಚಾಲಿತ ರೈಲು (electric train) ಹಳಿ ತಪ್ಪಿದೆ. ಅದೃಷ್ಟವಶಾತ್ ಪ್ರಯಾಣಿಕರಿಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ರೈಲ್ವೆ ಹಳಿ ಬಿರುಕು ಬಿಟ್ಟಿದ್ದರಿಂದ ಈ ಅವಘಡ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ. ತಿರುವಳ್ಳೂರಿನಿಂದ ಪುರಟ್ಚಿ ತಲೈವರ್ ಡಾ. ಎಂಜಿಆರ್ ಸೆಂಟ್ರಲ್ ರೈಲು ನಿಲ್ದಾಣದವರೆಗೆ ರೈಲ್ವೆ ಹಳಿಯ (ಟ್ರ್ಯಾಕ್) ನಿರ್ವಹಣಾ ಕಾರ್ಯ ನಡೆಯುತ್ತಿದೆ. ಈ ವೇಳೆ, ಇಂದು (ಅ.24) …
Read More »“ಬರ ವಿಚಾರವನ್ನು ಕುಮಾರಸ್ವಾಮಿ ಸರಿಯಾಗಿ ತಿಳಿದುಕೊಂಡಿಲ್ಲ. ಸುಮ್ಮನೆ ಆರೋಪ ಮಾಡುತ್ತಿದ್ದಾರೆ” ಎಂದ ಮುಖ್ಯಮಂತ್ರಿ
ಮೈಸೂರು: “ಬರ ವಿಚಾರವನ್ನು ಕುಮಾರಸ್ವಾಮಿ ಸರಿಯಾಗಿ ತಿಳಿದುಕೊಂಡಿಲ್ಲ. ಸುಮ್ಮನೆ ಆರೋಪ ಮಾಡುತ್ತಿದ್ದಾರೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸೋಮವಾರ ದಸರಾ ಏರ್ ಶೋ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, “ರಾಜ್ಯದಲ್ಲಿ ಈಗಾಗಲೇ ಬರಗಾಲ ಕಾಮಗಾರಿಗಳು ಆರಂಭವಾಗಿವೆ. ಕುಡಿಯುವ ನೀರು, ಮೇವು ಕೊಡುವ ಕೆಲಸ ಮಾಡುತ್ತಿದ್ದೇವೆ. ಕುಡಿಯುವ ನೀರಿಗೆ ಎಷ್ಟೇ ಹಣ ಖರ್ಚಾದರೂ ತೊಂದರೆ ಆಗಬಾರದು ಎಂದು ಸೂಚಿಸಿದ್ದೇನೆ. ಸದ್ಯಕ್ಕೆ ಮೇವಿಗೆ ಕೊರತೆ ಇಲ್ಲ. ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ …
Read More »ಬಸವರಾಜ ಬೊಮ್ಮಾಯಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮನೆಗೆ ಮರಳಿದ್ದಾರೆ.
ಬೆಂಗಳೂರು: ಹೃದಯದ ಪರಿಧಮನಿಯ ಬೈಪಾಸ್ ಗ್ರಾಫ್ಟಿಂಗ್ (ಸಿಎಬಿಜಿ) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚೇತರಿಸಿಕೊಂಡಿದ್ದು ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರು. ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದು, ಇನ್ನಷ್ಟು ಸಮಯದ ನಂತರವೇ ರಾಜಕೀಯ ಚಟುವಟಿಕೆಗೆ ಮರಳಲಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಪರಿಧಮನಿಯ ಬೈಪಾಸ್ ಗ್ರಾಫ್ಟಿಂಗ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬೊಮ್ಮಾಯಿ ಗುಣಮುಖರಾಗಿದ್ದಾರೆ. ಅಕ್ಟೋಬರ್ 15 ರಂದು ಆಸ್ಪತ್ರೆಗೆ ದಾಖಲಾಗಿದ್ದು, ಒಂದು ವಾರದ ನಂತರ ಗುಣಮುಖರಾಗಿ …
Read More »ಅಂಬಾರಿಯಲ್ಲಿ ಮೈಸೂರು ದಸರಾ ದೀಪಾಲಂಕಾರ ವೀಕ್ಷಿಸಿದ ಸಿಎಂ
ಮೈಸೂರು ದಸರಾ ದೀಪಾಲಂಕಾರ ಕಣ್ತುಂಬಿಕೊಂಡರು. ಮೈಸೂರು: ನಾಡಹಬ್ಬ ದಸರಾದಲ್ಲಿ ಭಾಗವಹಿಸಲು 3 ದಿನಗಳ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಏರ್ ಶೋ ವೀಕ್ಷಣೆ ಮಾಡಿದ ಬಳಿಕ, ಅಂಬಾರಿ ಬಸ್ನಲ್ಲಿ ಜನರಿಗೆ ಕೈ ಬೀಸುತ್ತಾ ದಸರಾ ದೀಪಾಲಂಕಾರ ವೀಕ್ಷಿಸಿದರು. ಅಂಬಾರಿಯಲ್ಲಿ ಮೈಸೂರು ದಸರಾ ದೀಪಾಲಂಕಾರ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯಸೋಮವಾರ ಬನ್ನಿ ಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ದಸರಾ ಏರ್ ಶೋ ವೀಕ್ಷಣೆ ಮಾಡಿದ ಬಳಿಕ ಸಂಜೆ ಅರಮನೆಯ ಮುಂಭಾಗದ …
Read More »