ತಿರುಚ್ಚಿ (ತಮಿಳುನಾಡು): ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮುಂದಿನ ಮಹತ್ವದ ಯೋಜನೆಗಳ ಬಗ್ಗೆ ವಿಜ್ಞಾನಿ ನಿಗರ್ ಶಾಜಿ ಮಾಹಿತಿ ಹಂಚಿಕೊಂಡಿದ್ದಾರೆ. ಶುಕ್ರ ಮತ್ತು ಮಂಗಳದಂತಹ ಗ್ರಹಗಳ ಕುರಿತು ಇಸ್ರೋ ತನ್ನ ಅನ್ವೇಷಣೆ ಮುಂದುವರಿಸಲಿದೆ ಎಂದು ಸೂರ್ಯನ ಅಧ್ಯಯನ ಬಗ್ಗೆ ಭಾರತದ ಮೊದಲ ಬಾಹ್ಯಾಕಾಶ ಯೋಜನೆಯಾದ ಆದಿತ್ಯ-ಎಲ್1ರ ಯೋಜನಾ ನಿರ್ದೇಶಕಿ ಶಾಜಿ ಹೇಳಿದ್ದಾರೆ. ತಮಿಳುನಾಡಿನ ತಿರುಚ್ಚಿ ಜಿಲ್ಲೆಯಲ್ಲಿ ಶನಿವಾರ ‘ತಾಂತ್ರಿಕ ಮಹಿಳೆ ವಿಶೇಷ ಪ್ರಶಸ್ತಿ ಮತ್ತು ಇಂಟರ್ನೆಟ್ ವಾಣಿಜ್ಯೋದ್ಯಮ ಕೌಶಲ್ಯಗಳ ತರಬೇತಿ’ …
Read More »ಬಾರಾಮತಿಯಲ್ಲಿ ಮತ್ತೆ ತರಬೇತಿ ವಿಮಾನ ಪತನ.. ಪೈಲಟ್‌ಗೆ ಗಾಯ
ಬಾರಾಮತಿ (ಮಹಾರಾಷ್ಟ್ರ): ಕಳೆದ ಎರಡು ದಿನಗಳ ಹಿಂದಷ್ಟೇ ಬಾರಾಮತಿಯಲ್ಲಿ ನಡೆದ ವಿಮಾನ ಪತನ ಘಟನೆ ಮಾಸುವ ಮುನ್ನವೇ ಇಂದು ಬೆಳಗ್ಗೆ ಮತ್ತೆ ತರಬೇತಿ ವಿಮಾನವೊಂದು ಪತನವಾಗಿದೆ. ಇಲ್ಲಿನ ಹಳೆ ಸಹ್ಯಾದ್ರಿ ಹಸುವಿನ ತೋಟದ ಬಳಿ ಪತನಗೊಂಡಿದ್ದು, ಪೈಲಟ್ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಬಾರಾಮತಿಯಲ್ಲಿ ವಾಯುಯಾನ ತರಬೇತಿ ಸಂಸ್ಥೆ ಇದೆ. ಕಳೆದ ಕೆಲವು ದಿನಗಳಲ್ಲಿ ವಿಮಾನ ಅಪಘಾತ ಸಂಭವಿಸಿದ ಐದನೇ ಘಟನೆ ಇದಾಗಿದ್ದು, ದುರಂತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ದಿಢೀರ್ ವಿಮಾನ …
Read More »ಸಿಸಿಬಿ ಪೊಲೀಸರ ಸೋಗಿನಲ್ಲಿ ಅಪಹರಣ: ಪೊಲೀಸ್ ಭಾತ್ಮೀದಾರನ ಸಹಿತ ಐವರ ಬಂಧನ
ಬೆಂಗಳೂರು: ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಅಧಿಕಾರಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬನನ್ನು ಅಪಹರಿಸಿ 5 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಪೊಲೀಸ್ ಭಾತ್ಮೀದಾರನ ಸಹಿತ ಐವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಖಾಸಿಂ ಮುಜಾಹಿದ್, ಮುಕ್ತಿಯಾರ್, ವಸಿಂ, ಶಬ್ಬೀರ್ ಹಾಗೂ ಶೋಯೆಬ್ ಬಂಧಿತ ಆರೋಪಿಗಳು. ಪೊಲೀಸ್ ಭಾತ್ಮೀದಾರನಿಂದಲೇ ಅಪಹರಣದ ಸಂಚು: ಸಿಸಿಬಿ ಪೊಲೀಸರ ಭಾತ್ಮೀದಾರನಾಗಿದ್ದ ಮೊಹಮ್ಮದ್ ಖಾಸಿಂ ಮುಜಾಹಿದ್, ಸಿಸಿಬಿ ಕಚೇರಿಯಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ. ಸೆಪ್ಟೆಂಬರ್ 2 ರಂದು ಕಾಲು ಸಿಂಗ್ ಎಂಬಾತ ತನ್ನ ಕಾರಿನಲ್ಲಿ …
Read More »ಬಾಲಿವುಡ್ಗೆ ರಾಕಿಂಗ್ ಸ್ಟಾರ್ ಪದಾರ್ಪಣೆ
ಹೈದರಾಬಾದ್: ಕೆಜಿಎಫ್ ಸಿನಿಮಾದ ಯಶಸ್ಸಿನ ಮೂಲಕ ಅಪಾರ ಜನಪ್ರಿಯತೆ ಗಳಿಸಿರುವ ಕನ್ನಡದ ಸ್ಟಾರ್ ನಟ ಯಶ್ ಈಗ ಬಾಲಿವುಡ್‌ನಲ್ಲಿ ತಮ್ಮ ಛಾಪು ಮೂಡಿಸಲು ಮುಂದಾಗಿದ್ದಾರೆ. ಇದರ ಭಾಗವಾಗಿ ಅವರು ನಿರ್ದೇಶಕ ನಿತೇಶ್ ತಿವಾರಿ ಅವರ ಮಹತ್ವಾಕಾಂಕ್ಷೆಯ ರಾಮಾಯಣ ಸಿನಿಮಾಕ್ಕೆ ಅಧಿಕೃತವಾಗಿ ಸಹಿ ಹಾಕಿದ್ದಾರೆ. ಈ ಸಿನಿಮಾಕ್ಕೆ ಯಶ್ ಬರೋಬ್ಬರಿ 100 ಕೋಟಿ ರೂಪಾಯಿಗೂ ಹೆಚ್ಚು ಸಂಭಾವನೆಗೆ ಬೇಡಿಕೆಯಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಚಿತ್ರದಂಡದ ಪ್ರಕಾರ, ನಿರ್ದೇಶಕ ತಿವಾರಿ ಅವರು ರಾಮನ ಪಾತ್ರಕ್ಕಾಗಿ ರಣಬೀರ್ …
Read More »ಕಲಬುರಗಿಯಲ್ಲಿ ಬ್ಯೂಟಿಷಿಯನ್ ಬರ್ಬರ ಕೊಲೆ.. 2 ನೇ ಪತಿ ಮೇಲೆ ಶಂಕೆ
ಕಲಬುರಗಿ: ಬ್ಯೂಟಿಷಿಯನ್ ಕುತ್ತಿಗೆಗೆ ದುಪ್ಪಟ್ಟದಿಂದ ಬಿಗಿದು, ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದ ಘಟನೆ ಜಿಲ್ಲೆಯ ಶಾಂತಿ ನಗರದಲ್ಲಿ ನಡೆದಿದೆ. ಶಾಹಿನಾ ಬಾನು (35) ಕೊಲೆಯಾದ ಮಹಿಳೆ. ಬ್ಯೂಟಿಷಿಯನ್ ಆಗಿದ್ದ ಶಾಹಿನಾ ಬಾನು ಮೊದಲು ಸೈಯದ್ ಜಿಲಾನಿ ಎಂಬಾತನ ಜೊತೆ ಮದುವೆಯಾಗಿದ್ದು, ಒಂದು ಗಂಡು ಮಗು ಕೂಡ ಇದೆ. ಆದರೆ ದಂಪತಿ ನಡುವೆ ಹೊಂದಾಣಿಕೆ ಇಲ್ಲದ ಕಾರಣ ವಿಚ್ಛೇದನ ಪಡೆದಿದ್ದಾರೆ. ಶಾಹಿನಾ ಬಾನು ಜೊತೆಗೆ ಡೈವರ್ಸ್ ಪಡೆದ ಮೇಲೆ ಆಕೆಯ ಮಾಜಿ ಪತಿ …
Read More »ಜಯಪ್ರದಾಗೆ 6 ತಿಂಗಳ ಜೈಲು ಶಿಕ್ಷೆ ಖಚಿತಪಡಿಸಿದ ಮದ್ರಾಸ್ ಹೈಕೋರ್ಟ್: 15 ದಿನದಲ್ಲಿ ಶರಣಾಗಲು ಆದೇಶ
ಚೆನ್ನೈ (ತಮಿಳುನಾಡು): ಖ್ಯಾತ ನಟಿ ಜಯಪ್ರದಾ ಅವರಿಗೆ ಕೆಳ ಹಂತದ ನ್ಯಾಯಾಲಯ ವಿಧಿಸಿದ್ದ 6 ತಿಂಗಳ ಜೈಲು ಶಿಕ್ಷೆಯನ್ನು ಮದ್ರಾಸ್ ಹೈಕೋರ್ಟ್ ಇಂದು (ಶುಕ್ರವಾರ) ಖಚಿತಪಡಿಸಿತು. 15 ದಿನದಲ್ಲಿ ಎಗ್ಮೋರ್ ಕೋರ್ಟ್‌ಗೆ ಶರಣಾಗುವಂತೆ ಹಾಗೂ 20 ಲಕ್ಷ ರೂ. ಠೇವಣಿ ಇಡುವಂತೆ ಸೂಚಿಸಿದೆ. ಕನ್ನಡ, ತೆಲುಗು ಹಾಗೂ ತಮಿಳು ಸೇರಿದಂತೆ ವಿವಿಧ ಭಾಷೆಗಳ ಸಿನಿಮಾಗಳಲ್ಲಿ ಅಭಿನಯಿಸಿರುವ ಜಯಪ್ರದಾ, ಸಂಸತ್ ಸದಸ್ಯರಾಗಿದ್ದರು. ಚೆನ್ನೈನಲ್ಲಿ ರಾಮಕುಮಾರ್, ರಾಜ್ಬಾಬು ಎಂಬವರೊಂದಿಗೆ ಸೇರಿ ಚಿತ್ರಮಂದಿರವನ್ನು ನಡೆಸುತ್ತಿರುವ ಇವರು, …
Read More »ಸತೀಶ್ ಜಾರಕಿಹೊಳಿ ಶಕ್ತಿ ಪ್ರದರ್ಶನ: ಬೆಳಗಾವಿಯಿಂದ ಡಿಕೆ ಶಿವಕುಮಾರ್ ನಿರ್ಗಮಿಸುತ್ತಿದ್ದಂತೆ ಜಿಲ್ಲೆಗೆ ಆಗಮಿಸಿದ ಕಾಂಗ್ರೆಸ್ ಶಾಸಕರು
ಬೆಳಗಾವಿ, ಅ.20: ಜಿಲ್ಲಾ ರಾಜಕಾರಣದಲ್ಲಿ ಡಿಸಿಎಂಡಿಕೆ ಶಿವಕುಮಾರ್ (DK Shivakumar)ಅವರು ಮೂಗು ತೂರಿಸುತ್ತಿರುವುದು ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಮುನಿಸಿಗೆ ಕಾರಣವಾಗಿದೆ. ಜಿಲ್ಲೆಗೆ ಸ್ವತಃ ಡಿಸಿಎಂ ಬಂದಿದ್ದರೂ ಸತೀಶ್ ಜಾರಕಿಹೊಳಿ ಜಿಲ್ಲೆಯಿಂದ ಆಚೆ ಉಳಿದಿದ್ದಾರೆ. ಇತರೆ ಕೈ ಶಾಸಕರೂ ಸಾಥ್ ನೀಡಿದ್ದು, ಡಿಕೆ ಶಿವಕುಮಾರ್ ಸ್ವಾಗತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಯಾರೊಬ್ಬರೂ ಆಗಮಿಸಿಲ್ಲ. ಆದರೆ ಏಕಾಂಗಿಯಾಗಿ ಜಿಲ್ಲಾ ಪ್ರವಾಸ ಮಾಡಿದ ಶಿವಕುಮಾರ್ ಇಂದು ನಿರ್ಗಮಿಸುತ್ತಿದ್ದಂತೆ ಎಲ್ಲಾ ಶಾಸಕರು ಜಿಲ್ಲೆಯಲ್ಲಿ ಪ್ರತ್ಯಕ್ಷಗೊಂಡಿದ್ದಾರೆ. ಸತೀಶ್ …
Read More »ಕಲೆಕ್ಷನ್ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ.: ಡಿ.ವಿ.ಸದಾನಂದಗೌಡ
ಕಲೆಕ್ಷನ್ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಸಿಎಂ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂಗಿಂತ ಹೆಚ್ಚು ಕಲೆಕ್ಷನ್ಗೆ ಇಳಿದಿದ್ದಾರೆ. ಸಿಎಂ ಕುರ್ಚಿ ಎಳೆದುಕೊಳ್ಳಲು ಹೆಚ್ಚು ಹಣ ಸಂಗ್ರಹಕ್ಕೆ ಮುಂದಾಗಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡ ಆರೋಪಿಸಿದ್ದಾರೆ. ಬೆಂಗಳೂರು: ಕಲೆಕ್ಷನ್ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಸಿಎಂ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂಗಿಂತ ಹೆಚ್ಚು ಕಲೆಕ್ಷನ್ಗೆ ಇಳಿದಿದ್ದಾರೆ. ಸಿಎಂ ಕುರ್ಚಿ ಎಳೆದುಕೊಳ್ಳಲು ಹೆಚ್ಚು ಹಣ ಸಂಗ್ರಹಕ್ಕೆ ಮುಂದಾಗಿದ್ದಾರೆ. …
Read More »ಬಂಗಾರಪೇಟೆ: ಪರವಾನಗಿ ಇಲ್ಲದೆ ನಡೆಸುತ್ತಿದ್ದ ನಕಲಿ ಕ್ಲಿನಿಕ್ ಸೀಜ್ ಮಾಡಿದ ತಹಶೀಲ್ದಾರ್
ಕೋಲಾರ: ನಕಲಿ ಕ್ಲಿನಿಕ್ ಮೇಲೆ ಅಧಿಕಾರಿಗಳು ದಾಳಿ ಮಾಡಿ ಸೀಜ್ ಮಾಡಿರುವ ಘಟನೆ ಕೋಲಾರದ ಬಂಗಾರಪೇಟೆಯಲ್ಲಿ ಗುರುವಾರ ನಡೆದಿದೆ. ಬಂಗಾರಪೇಟೆ ತಹಶೀಲ್ದಾರ್ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು ಬಂಗಾರಪೇಟೆ ಪಟ್ಟಣದ ಕೆಜಿಎಫ್ ಮುಖ್ಯರಸ್ತೆಯ ದೇಶಿಹಳ್ಳಿಯಲ್ಲಿ ನಕಲಿಯಾಗಿ ನಡೆಸಲಾಗುತ್ತಿದ್ದ ಪ್ರಗತಿ ಕ್ಲಿನಿಕ್ ಜಪ್ತಿ ಮಾಡಿದರು. ಯಾವುದೇ ಪರವಾನಗಿ ಇಲ್ಲದೆ ಕ್ಲಿನಿಕ್ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಕಳೆದ ಮೂರು ವಾರಗಳಿಂದ ತನಿಖೆ ಮಾಡಲಾಗಿತ್ತು. ಇದೀಗ ಡಾ.ರಜನಿಕಾಂತ್ ಎಂಬವರಿಗೆ ಸೇರಿದ ಈ …
Read More »ಚಿನ್ನಸ್ವಾಮಿಯಲ್ಲಿ ಇಂದು ಆಸ್ಟ್ರೇಲಿಯಾ – ಪಾಕ್ ಮುಖಾಮುಖಿ: ಉಭಯ ತಂಡಗಳಿಗೆ ಮಹತ್ವದ ಪಂದ್ಯ
ಬೆಂಗಳೂರು: ಪ್ರಸಕ್ತ ಸಾಲಿನ ಐಸಿಸಿ ಏಕದಿನ ವಿಶ್ವಕಪ್‌ನ 18ನೇ ಪಂದ್ಯಕ್ಕೆ ರಾಜಧಾನಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ. ಟೂರ್ನಿಯಲ್ಲಿ ಈಗಾಗಲೇ ಆಡಿರುವ ಮೂರು ಪಂದ್ಯಗಳಲ್ಲಿ ಒಂದರಲ್ಲಿ ಮಾತ್ರ ಜಯ ಸಾಧಿಸಿರುವ ಆಸ್ಟ್ರೇಲಿಯಾ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದ್ದರೆ, ಮೂರು ಪಂದ್ಯಗಳಲ್ಲಿ ಎರಡು ಗೆಲುವು ಸಾಧಿಸಿರುವ ಪಾಕಿಸ್ತಾನ ನಾಲ್ಕನೇ ಸ್ಥಾನದಲ್ಲಿದೆ. ಉಭಯ ತಂಡಗಳು ಇಂದು ಚಿನ್ನಸ್ವಾಮಿಯಲ್ಲಿ ಸೆಣಸಾಡಲಿದ್ದು, ಕ್ರಿಕೆಟ್ ಅಭಿಮಾನಿಗಳ ಕಾತರವನ್ನ ಮತ್ತಷ್ಟು ಹೆಚ್ಚಿಸಿದೆ. ಆಸ್ಟ್ರೇಲಿಯಾ Vs ಪಾಕ್: ಈವರೆಗೂ ಏಕದಿನ ಮಾದರಿಯಲ್ಲಿ 107 …
Read More »