Breaking News

ರಾಷ್ಟ್ರೀಯ

ಆಧಾರರಹಿತ ಆರೋಪ ಮಾಡುವುದು ಬಿಜೆಪಿಯ ಚಾಳಿ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು : ಬಿಜೆಪಿ ಮುಖಂಡರಿಗೆ ಆಧಾರ ರಹಿತ ಆರೋಪ ಮಾಡುವುದು ಒಂದು ಚಾಳಿ ಆಗಿದೆ. ಪಂಚರಾಜ್ಯ ಚುನಾವಣೆಯಲ್ಲಿ ಸೋಲಿನ‌ ಭೀತಿ ಅವರನ್ನು ಕಾಡತೊಡಗಿದೆ. ಕರ್ನಾಟಕದಲ್ಲಿ ಅವರು ಧೂಳಿಪಟ ಆಗಲಿದ್ದಾರೆ ಎಂದು ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಪಂಚರಾಜ್ಯ ಚುನಾವಣೆಗೆ ಕರ್ನಾಟಕ ಕಾಂಗ್ರೆಸ್ ಎಟಿಎಂ ಆಗಿ ಬಳಕೆ ಆಗುತ್ತಿದೆ ಎಂದು ಕಾಂಗ್ರೆಸ್ ವಿರುದ್ದ ಬಿಜೆಪಿ ಗಂಭೀರ ಆರೋಪ ಮಾಡಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಕರ್ನಾಟಕದಲ್ಲಿ ಯಾವ ರೀತಿ‌ ಆಡಳಿತ ಕೊಟ್ಟಿದ್ದಾರೆ ಎಂಬುದು …

Read More »

ಪವಿತ್ರ ಕಾವೇರಿ ತೀರ್ಥೋದ್ಭವ ಕಣ್ತುಂಬಿಕೊಂಡ ಭಕ್ತಗಣ : ಹಲವು ಗಣ್ಯರು ಭಾಗಿ

ಕೊಡಗು : ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವದ ಕ್ಷಣಕ್ಕೆ ಸಾಕ್ಷಿಯಾದರು. ಕೊಡಗಿನ ಕುಲದೇವಿ, ನಾಡಿನ ಜೀವನದಿ ಕಾವೇರಿ ನಿಗದಿಯಂತೆ ಕರ್ಕಾಟಕ ಲಗ್ನದಲ್ಲಿ ರಾತ್ರಿ 1 ಗಂಟೆ 26 ನಿಮಿಷಕ್ಕೆ ತೀರ್ಥರೂಪಿಣಿಯಾಗಿ ನೆರೆದಿದ್ದ ಭಕ್ತರಿಗೆ ದರ್ಶನ ನೀಡಿದಳು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜ್, ಶಾಸಕರಾದ ಎ.ಎಸ್. ಪೊನ್ನಣ್ಣ, ಡಾ.ಮಂಥರ್ ಗೌಡ, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ವೆಂಕಟರಾಜ, ಜಿ. ಪಂ. …

Read More »

ಬಿಜೆಪಿ- ಜೆಡಿಎಸ್ ಹತಾಶೆಗೆ ಮೇಜರ್ ಆಪರೇಶನ್ ಮಾಡಬೇಕು: ಡಿ ಕೆ ಶಿವಕುಮಾರ್

ಬೆಂಗಳೂರು : “ಬಿಜೆಪಿ ಮತ್ತು ಜನತಾದಳದವರು ಹತಾಶೆಯ ಅಂತಿಮ ಸ್ಥಿತಿ ತಲುಪಿದ್ದಾರೆ. ಅವರಿಗೆ ಡಾಕ್ಟರ್‌ಗಳೇ ಮೇಜರ್ ಆಪರೇಶನ್ ಮಾಡಬೇಕು” ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ನಿಮ್ಮ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದೆ ಎಂದು ಹೇಳಿದರು. ಮಾಜಿ ಸಿಎಂ ಜಗದೀಶ್ ಶೆಟ್ಟರ್‌ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಹಾಗೆಲ್ಲ …

Read More »

ಧಾರವಾಡ ಜೈಲಿನಲ್ಲಿ ಕೈದಿ ಮತ್ತು ಸಿಬ್ಬಂದಿ ನಡುವೆ ಮಾರಾಮಾರಿ

ಧಾರವಾಡ: ಕೈದಿ ಮತ್ತು ಜೈಲು ಸಿಬ್ಬಂದಿ ನಡುವೆ ಮಾರಾಮಾರಿ ನಡೆದಿರುವ ಘಟನೆ ಧಾರವಾಡ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಘಟನೆಯಲ್ಲಿ ಜೈಲು ಸಿಬ್ಬಂದಿ ಮತ್ತು ಕೈದಿ ಇಬ್ಬರಿಗೂ ಗಾಯಗಳಾಗಿವೆ. ಮೋಹನ ಸಿದ್ದಪ್ಪ ಬಡಿಗೇರ ಗಾಯಗೊಂಡ ಜೈಲು ಸಿಬ್ಬಂದಿಯಾಗಿದ್ದು, ಪ್ರಶಾಂತ ಅಲಿಯಾಸ್ ಪಾಚು ಹಲ್ಲೆ ಮಾಡಿದ ಕೈದಿಯಾಗಿದ್ದಾನೆ. ಗಾಯಗೊಂಡ ಇಬ್ಬರನ್ನೂ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಅನೇಕ ದಿನಗಳಿಂದ ಧಾರವಾಡ ಕಾರಾಗೃಹದಲ್ಲಿದ್ದ ಪ್ರಶಾಂತ ಎಂಬ ಕೈದಿ ಬಾಚಣಿಕೆಯನ್ನೇ ಚಾಕೂವಿನಂತೆ ಮಾಡಿಕೊಂಡು ಜೈಲಿನ …

Read More »

ಕಿತ್ತೂರು ಉತ್ಸವದ ಸಿದ್ಧತೆ ಪರಿಶೀಲಿಸಿದ ಡಿಸಿ; ಕೋಟೆ ಆವರಣ ಸ್ವಚ್ಛತೆ, ದೀಪಾಲಂಕಾರಕ್ಕೆ ಸೂಚನೆ

ಬೆಳಗಾವಿ : ಕಿತ್ತೂರು ಉತ್ಸವದ ಹಿನ್ನೆಲೆಯಲ್ಲಿ ವೇದಿಕೆ ನಿರ್ಮಾಣ, ಕೆರೆ, ಕುಸ್ತಿ ಕಣ, ಮಾಧ್ಯಮ‌ ಕೇಂದ್ರ, ವಸ್ತು ಪ್ರದರ್ಶನ ಮಳಿಗೆ, ಆಹಾರ ಮಳಿಗೆ, ಕೋಟೆ ಆವರಣ ಸ್ವಚ್ಛತೆ, ಪಾರ್ಕಿಂಗ್, ಬಂದೋಬಸ್ತ್ ಸೇರಿದಂತೆ ವಿವಿಧ ಸಿದ್ಧತೆಗಳನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ್ ಪರಿಶೀಲಿಸಿದ್ದು, ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಿದ್ದಾರೆ.   ಚ.ಕಿತ್ತೂರಿನ ಕೋಟೆ ಆವರಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಈ ಬಾರಿಯೂ …

Read More »

ಹೆತ್ತ ಮಗಳನ್ನೇ ನೀರಿನ ಸಂಪಿಗೆ ತಳ್ಳಿ ಕೊಲೆ ಮಾಡಿದ ಹೆತ್ತವ್ವ

ರಾಯಚೂರು: ಮಾನಸಿಕ ಅಸ್ವಸ್ಥೆಯಾಗಿರುವ ಹೆತ್ತ ತಾಯಿಯೊಬ್ಬಳು ತನ್ನ ಮಗಳನ್ನು ಕೊಲೆ ಮಾಡಿದ ಘಟನೆ ಜಿಲ್ಲೆಯ ಕವಿತಾಳ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.   ಜಿಲ್ಲೆಯ ಸಿರವಾರ ತಾಲೂಕಿನ ದೋತ್ರಬಂಡಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತ ಬಾಲಕಿಯನ್ನು 3ನೇ ತರಗತಿಯ ಓದುತ್ತಿದ್ದ ಶ್ರೀದೇವಿ ಎಂದು ಗುರುತಿಸಲಾಗಿದೆ. ತಾಯಿ ಲಲಿತಾ ಎಂಬ ಆರೋಪಿ ತನ್ನ ಮಗಳನ್ನು ತನ್ನ ಕೈಯಿಂದಲೇ ಕೊಲೆ ಮಾಡಿದ ಆರೋಪಿಯಾಗಿದ್ದಾಳೆ. ಮನೆಯ ಪಕ್ಕದಲ್ಲಿ ಇದ್ದ ನೀರಿನ …

Read More »

ಐಸಿಸಿ ಏಕದಿನ ವಿಶ್ವಕಪ್: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದಿನಿಂದ ಟಿಕೆಟ್ ಮಾರಾಟ

ಬೆಂಗಳೂರು : ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದ ಆತಿಥ್ಯಕ್ಕೆ ಸಜ್ಜಾಗಿರುವ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ 4 ಪಂದ್ಯಗಳ ಟಿಕೆಟ್ ಮಾರಾಟದ ದಿನಾಂಕವನ್ನ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಪ್ರಕಟಿಸಿದೆ. ಆತಿಥೇಯ ಭಾರತ ಹಾಗೂ ನೆದರ್‌ಲ್ಯಾಂಡ್ಸ್ ನಡುವಿನ ಪಂದ್ಯ ಹೊರತುಪಡಿಸಿ ಉಳಿದ ಮೂರು ಪಂದ್ಯಗಳ ಟಿಕೆಟ್ ಮಾರಾಟ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ಈಗಾಗಲೇ ಕ್ರಿಕೆಟ್​ ಅಭಿಮಾನಿಗಳು ಟಿಕೆಟ್​ ಪಡೆಯಲು ಕ್ರೀಂಡಾಂಗಣದ ಮುಂದೆ ಸಾಲುಗಟ್ಟಿ ನಿಂತಿದ್ದಾರೆ. ಈಗಾಗಲೇ …

Read More »

ಕಾಂಗ್ರೆಸ್​ನ ಎಟಿಎಂ ಕಲೆಕ್ಷನ್ ಮಾಡೆಲ್ ಪ್ರದರ್ಶಿಸಿ ಜನರನ್ನು ಎಚ್ಚರಿಸುವ ಕೆಲಸ ಮಾಡುತ್ತೇವೆ: ಅಶ್ವತ್ಥನಾರಾಯಣ

ಬೆಂಗಳೂರು: ”ಅಮಾಯಕ, ಪ್ರಾಮಾಣಿಕ ಗುತ್ತಿಗೆದಾರರ ಹಣ ಲೂಟಿ ಮಾಡಿ, ಐದು ರಾಜ್ಯಗಳ ಚುನಾವಣೆಗೆ ಕೊಡುವ ಕೆಲಸವನ್ನು ರಾಜ್ಯ ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಇದರ ವಿರುದ್ಧ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ಎಟಿಎಂ ಕಲೆಕ್ಷನ್ ಮಾಡೆಲ್ ಪ್ರದರ್ಶನ ಮಾಡಿ ಜನರನ್ನು ಎಚ್ಚರಿಸುವ ಕೆಲಸ ಮಾಡುತ್ತೇವೆ” ಎಂದು ಮಾಜಿ ಡಿಸಿಎಂ ಅಶ್ವತ್ಥನಾರಾಯಣ ಆರೋಪಿಸಿದ್ದಾರೆ. ಮಲ್ಲೇಶ್ವರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ಲೂಟಿಕೋರರು ಸೇರಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಆದರೆ, ಬೆಂಗಳೂರು …

Read More »

ಕರ್ನಾಟಕದಲ್ಲಿ ಮಾರ್ಗದರ್ಶಿ ಚಿಟ್ಸ್​​​​​ನ ಮತ್ತೊಂದು ಶಾಖೆ ಉದ್ಘಾಟನೆ

ಹಾವೇರಿ: ಕರ್ನಾಟಕದಲ್ಲಿ ಮಾರ್ಗದರ್ಶಿ ಚಿಟ್ಸ್​​​​​ನ ಮತ್ತೊಂದು ಶಾಖೆ ಉದ್ಘಾಟನೆಗೊಂಡಿದೆ. ರಾಜ್ಯದಲ್ಲಿ ಇದು 23ನೇ ಶಾಖೆಯಾಗಿದ್ದು, ದೇಶಾದ್ಯಂತ 110ನೇ ಶಾಖೆಯಾಗಿದೆ. ಮಾರ್ಗದರ್ಶಿ ಚಿಟ್ಸ್ (ಕರ್ನಾಟಕ) ಪ್ರೈವೇಟ್​ ಲಿಮಿಟೆಡ್​ ನಿರ್ದೇಶಕ ಪಿ ಲಕ್ಷಣರಾವ್, ಈ ಶಾಖೆಯನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಚಂದಾದಾರರು ಭಾಗವಹಿಸಿದ್ದರು. ಇಲ್ಲಿನ ಪಿಬಿ ರೋಡ್​ನಲ್ಲಿರುವ ಜಿಜಿ ಮಾಗಾವಿ ಚೇಂಬರ್ಸ್​ ಕಾಂಪ್ಲೆಕ್ಸ್​ನ ಎರಡನೇ ಮಹಡಿಯಲ್ಲಿ ಮಾರ್ಗದರ್ಶಿ ಚಿಟ್ಸ್​ನ ಶಾಖೆ ಆರಂಭವಾಗಿದೆ. ನೂತನ ಶಾಖೆಯ ಮೂಲಕ ಹಾವೇರಿ ಜಿಲ್ಲೆಯ ಜನರು …

Read More »

ಐಟಿ ರೇಡ್​ನಲ್ಲಿ ಸಿಕ್ಕ ಹಣ ಎಸ್​ಎಸ್​ಟಿ ಟ್ಯಾಕ್ಸ್​​ಗೆ ಸೇರಿದ್ದು”:H.D.K.

ಮೈಸೂರು: ಬೆಂಗಳೂರಿನ ಐಟಿ ರೇಡ್​ನಲ್ಲಿ ಸಿಕ್ಕ ಹಣ ಎಸ್​ಎಸ್​ಟಿ (ಡಿ ಕೆ.ಶಿವಕುಮಾರ್, ಸುರೇಶ್ ಟ್ಯಾಕ್ಸ್) ಟ್ಯಾಕ್ಸ್​​ಗೆ ಸೇರಿದ್ದಾಗಿದೆ. ಈ ಮೂಲಕ ರಾಜ್ಯದಲ್ಲಿ ಹೊಸ ಕಲೆಕ್ಷನ್ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಇಂದು ಕುಟುಂಬ ಸಮೇತ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದರು. ‘ರಾಜ್ಯದಲ್ಲಿ ಕೃಷಿ …

Read More »