ಬೆಂಗಳೂರು: ಈಗ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ನಾನು 2028ಕ್ಕೆ ಸಿಎಂ ಸ್ಥಾನಕ್ಕಾಗಿ ಕ್ಲೈಮ್ ಮಾಡುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೇರೆಯವರು ಕೇಳುವುದು, ಬಿಡುವುದು ಅವರವರ ಇಷ್ಟಕ್ಕೆ ಬಿಟ್ಟದ್ದು. ನಾವು 28ಕ್ಕೆ ಕ್ಲೈಂ ಮಾಡ್ತೇವೆ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಅಂತ ಹೇಳಿದ್ದಾರೆ, ಬೇರೆಯವರು ಹೇಳುವ …
Read More »ಒಂದೂವರೆ ವರ್ಷದ ಹಿಂದೆ ಮೃತಪಟ್ಟ ವ್ಯಕ್ತಿಗೆ ವಿಚಾರಣೆಗೆ ಬರಲು ಕೋರ್ಟ್ ನೋಟಿಸ್:
ಬೆಹ್ರೋರ್ (ರಾಜಸ್ಥಾನ): ಇಂತಹ ಘಟನೆಗಳಿಂದ ನಮ್ಮ ನ್ಯಾಯಾಲಯಗಳು ಮತ್ತು ಪೊಲೀಸ್ ವ್ಯವಸ್ಥೆಯ ಮೇಲೆ ಅನುಮಾನ ಮತ್ತು ಬೇಸರ ಉಂಟಾಗುತ್ತದೆ. ಒಂದೂವರೆ ವರ್ಷಗಳ ಹಿಂದೆ ಮೃತಪಟ್ಟಿದ್ದ ವ್ಯಕ್ತಿಗೆ ಚುನಾವಣಾ ಪ್ರಕ್ರಿಯೆಗೆ ಅಡ್ಡಿ ಆರೋಪದ ಮೇಲೆ ಕೋರ್ಟ್ ಈಗ ನೋಟಿಸ್ ನೀಡಿದೆ. ಕಂಡು ಕುಟುಂಬಸ್ಥರು ಅಚ್ಚರಿಗೆ ಒಳಗಾಗಿದ್ದಾರೆ. ಈ ಘಟನೆ ಬೆಳಕಿಗೆ ಬಂದಿದ್ದು ರಾಜಸ್ಥಾನದಲ್ಲಿ. ರಾಜ್ಯದಲ್ಲಿ ನವೆಂಬರ್ 25 ರಂದು ವಿಧಾನಸಭೆ ಚುನಾವಣೆ ನಿಗದಿಯಾಗಿದೆ. ಸೂಕ್ಷ್ಮ ಪ್ರದೇಶಗಳಾದ ಬೆಹ್ರೋರ್, ನೀಮ್ರಾನಾ ಮತ್ತು ಮಂದನ್‌ನಲ್ಲಿ ಕೆಲವರನ್ನು …
Read More »5 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ತಂದೆಗೆ 20 ವರ್ಷ ಕಠಿಣ ಶಿಕ್ಷೆ
ಚಾಮರಾಜನಗರ: ಹೆಂಡತಿ ಹೊರ ಹೋದ ವೇಳೆ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ತಂದೆಗೆ ಚಾಮರಾಜನಗರದ ಮಕ್ಕಳ ಸ್ನೇಹಿ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಮೈಸೂರಿನ ಗೌಸಿಯ ನಗರದ ನಿವಾಸಿ ಸೈಯದ್ ಮುಜಾಮಿಲ್(45) ಶಿಕ್ಷೆಗೊಳಗಾದ ಅಪರಾಧಿ. ಈತ ಮೂರು ಮದುವೆ ಯಾಗಿದ್ದು, ಮೊದಲ ಹೆಂಡತಿ ದೂರವಾಗಿದ್ದರೆ, ಎರಡನೇ ಹೆಂಡತಿ ಮೃತಪಟ್ಟಿದ್ದಳು. ಚಾಮರಾಜನಗರದ ಮೂಲದ ಮಹಿಳೆಯೊಬ್ಬರ ಜೊತೆ ಮೂರನೇ ವಿವಾಹವಾಗಿತ್ತು. 2022ರ ಜನವರಿ 4 ರಂದು ಅಪರಾಧಿ ಪತ್ನಿ …
Read More »ಕಳ್ಳನೊಂದಿಗೆ ಶಾಮೀಲಾಗಿ ರೈಲುಗಳಲ್ಲಿ ಕಳ್ಳತನ ಮಾಡುತ್ತಿದ್ದ ರೈಲ್ವೆ ಹೆಡ್ಕಾನ್ಸ್ಟೇಬಲ್
ಬೆಂಗಳೂರು : ಬೇಲಿಯೇ ಎದ್ದು ಹೊಲ ಮೇಯ್ದಂತೆ ಖದೀಮರನ್ನ ಸದೆ ಬಡಿಯಬೇಕಾದ ರೈಲ್ವೇ ಹೆಡ್ಕಾನ್ಸ್ಟೇಬಲ್ ಬಬ್ಬರನ್ನು ಕಳ್ಳನೊಂದಿಗೆ ಶಾಮೀಲಾಗಿ ರೈಲುಗಳಲ್ಲಿ ಕಳ್ಳತನವೆಸಗುತ್ತಿದ್ದ ಜಾಲವನ್ನ ಬೆಂಗಳೂರು ದಂಡು ರೈಲ್ವೇ ಪೊಲೀಸರು ಪತ್ತೆ ಹಚ್ಚಿದ್ದಾರೆ. ಚಿಕ್ಕಬಳ್ಳಾಪುರ ರೈಲ್ವೆ ಹೊರ ಪೊಲೀಸ್ ಠಾಣೆಯಲ್ಲಿ ಹೆಡ್ಕಾನ್ಸ್ಟೇಬಲ್ ಆಗಿರುವ ಸಿದ್ದರಾಮರೆಡ್ಡಿ ಹಾಗೂ ಖದೀಮ ಸಾಬಣ್ಣ ಎಂಬುವರನ್ನ ಬಂಧಿಸಿ, ಪೊಲೀಸ್ ಕಸ್ಟಡಿ ಪಡೆದು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ. 2011ರ ಬ್ಯಾಚ್ ಸಿಬ್ಬಂದಿಯಾಗಿದ್ದ ಸಿದ್ದರಾಮರೆಡ್ಡಿ, ರೈಲ್ವೇ ಹೆಡ್ಕಾನ್ಸ್ಟೇಬಲ್ ಆಗಿ ರಾಯಚೂರಿನಲ್ಲಿ ಸೇವೆಗೆ …
Read More »ರೈಲ್ವೆ ನಿಲ್ದಾಣದ ಬಳಿ ಸಿಕ್ಕ ಅನುಮಾನಾಸ್ಪದ ಬಾಕ್ಸ್ನಲ್ಲಿ ಉಪ್ಪು ಪತ್ತೆ: ಶಿವಮೊಗ್ಗ ಎಸ್ಪಿ
ಶಿವಮೊಗ್ಗ : ನಗರದ ರೈಲು ನಿಲ್ದಾಣದ ಬಳಿ ಭಾನುವಾರ ಪತ್ತೆಯಾದ ಬಾಕ್ಸ್ನಲ್ಲಿ ಯಾವುದೇ ಸ್ಫೋಟಕ ವಸ್ತುಗಳಿರಲಿಲ್ಲ. ಬಾಕ್ಸ್ನಲ್ಲಿ ಪತ್ತೆಯಾಗಿರುವುದು ಉಪ್ಪು ಎಂದು ಮೇಲ್ನೋಟಕ್ಕೆ ಅನಿಸಿದೆ ಎಂದು ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆ ಶಿವಮೊಗ್ಗದ ರೈಲು ನಿಲ್ದಾಣದ ಪಾರ್ಕಿಂಗ್ ಜಾಗದ ಬಳಿ ಪತ್ತೆಯಾದ ಬಾಕ್ಸ್ನಲ್ಲಿ ಅನುಮಾನಾಸ್ಪದ ವಸ್ತುಗಳಿವೆ ಎಂದು ತಿಳಿದು ಬಂದ ಕಾರಣ ಪರಿಶೀಲನೆ ಮಾಡಿದ್ದೆವು. ನಂತರ ಅದು ಇನ್ನಷ್ಟು ಹೆಚ್ಚಿನ ಪರಿಶೀಲನೆ ಅವಶ್ಯಕತೆ ಇದೆ …
Read More »ಟೈಗರ್ 3′ ಮುಂಗಡ ಬುಕ್ಕಿಂಗ್ನಲ್ಲಿ ದಾಖಲೆ; ಸಿನಿಮಾ ಟಿಕೆಟ್ ಶರವೇಗದಲ್ಲಿ ಮಾರಾಟ
ಮನೀಶ್ ಶರ್ಮಾ ನಿರ್ದೇಶನದ, ಸಲ್ಮಾನ್ ಖಾನ್ ಮತ್ತು ಕತ್ರಿನಾ ಕೈಫ್ ನಟನೆಯ ‘ಟೈಗರ್ 3’ ಸಿನಿಮಾದ ಅಡ್ವಾನ್ಸ್ ಬುಕ್ಕಿಂಗ್ಗೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಭಾರತೀಯ ಚಿತ್ರರಂಗದ ಬಹುನಿರೀಕ್ಷೆಯ ಸಿನಿಮಾ ‘ಟೈಗರ್ 3’. ಸಲ್ಮಾನ್ ಖಾನ್, ಕತ್ರಿನಾ ಕೈಫ್ ಮತ್ತು ಇಮ್ರಾನ್ ಹಶ್ಮಿ ಮುಖ್ಯಭೂಮಿಕೆಯ ಈ ಚಿತ್ರದ ಮೇಲೆ ಭಾರೀ ನಿರೀಕ್ಷೆ ಇದೆ. ಮನೀಶ್ ಶರ್ಮಾ ನಿರ್ದೇಶನದ ಸಿನಿಮಾದ ಅಡ್ವಾನ್ಸ್ ಬುಕ್ಕಿಂಗ್ಗೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಬಿಡುಗಡೆಗೂ ಮುನ್ನ ಟಿಕೆಟ್ಗಳು ಶರವೇಗದಲ್ಲಿ …
Read More »ರಾಜ್ಯ ಸರ್ಕಾರದ ಕಾರ್ಯವೈಖರಿ ವಿರೋಧಿಸಿ ಸಂಸದ ಸಂಗಣ್ಣ ಕರಡಿ ಉಪವಾಸ ಸತ್ಯಾಗ್ರಹ
ಕೊಪ್ಪಳ : ರೈತರ ಕೃಷಿ ಪಂಪ್ಸೆಟ್ಗಳಿಗೆ ಪರಿವರ್ತಕ ಸಹಿತ ಉಚಿತ ಮೂಲಸೌಕರ್ಯ ಒದಗಿಸುವ ಯೋಜನೆ ರದ್ದುಪಡಿಸುವ ಆದೇಶ ಹಿಂಪಡೆಯಬೇಕು. ರೈತರ ಪಂಪ್ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆ ಮುಂದಿಟ್ಟುಕೊಂಡು ಕೊಪ್ಪಳ ಜಿಲ್ಲಾಡಳಿತ ಭವನದ ಮುಂದೆ ಸಂಸದ ಸಂಗಣ್ಣ ಕರಡಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ರೈತರು ಬದುಕೋದೆ ಕಷ್ಟವಾಗಿದೆ. ಅಂತಹದರಲ್ಲಿ ಸೆಪ್ಟೆಂಬರ್ 22ರಿಂದ ಬಂದ ರೈತರ ಅರ್ಜಿಗಳಿಗೆ ಪಂಪ್ಸೆಟ್ ಸಲಕರಣೆ ಉಚಿತ ಕೊಡೋದಿಲ್ಲ ಅಂತ ರಾಜ್ಯ ಸರ್ಕಾರ ಆದೇಶ ಮಾಡಿದೆ. …
Read More »10 ಕೆಜಿ ಅಕ್ಕಿ ವಿತರಣೆ ಮಾಡೋ ಗುರಿ ಇದೆ.. ಕೇಂದ್ರ ಹೆಚ್ಚುವರಿ ಅಕ್ಕಿ ನೀಡುತ್ತಿಲ್ಲ:ಮುನಿಯಪ್ಪ
ಮೈಸೂರು: “ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಅಪ್ರಸ್ತುತವಾಗಿದ್ದು, ಈಗ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ. ಸರ್ಕಾರ ಸುಭದ್ರವಾಗಿದೆ. ಸರ್ಕಾರಕ್ಕೆ ಯಾವುದೇ ಅಪಾಯ ಇಲ್ಲ” ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ ಹೆಚ್ ಮುನಿಯಪ್ಪ ಹೇಳಿದರು. ಮೈಸೂರಿನ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಸಭಾಂಗಣದಲ್ಲಿ ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯ ಕಾರ್ಯಕ್ರಮ ಉದ್ಘಾಟನೆ ಮಾಡಿ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. “ರಾಜ್ಯದ ಅಯಾ ಭಾಗದ ಜನರ ಆಹಾರ ಪದ್ಧತಿಗೆ …
Read More »ಮರಳು ಸಮಸ್ಯೆ ಪರಿಹರಿಸಲು ಸರ್ಕಾರದಿಂದ ಪ್ರಾಮಾಣಿಕ ಪ್ರಯತ್ನ: ಗುಂಡೂರಾವ್
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆಯನ್ನು ಪರಿಹರಿಸಲು ನಮ್ಮ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಮಂಗಳೂರು ನಗರ ದಕ್ಷಿಣ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಮರಳು ಸಮಸ್ಯೆ ಬಗ್ಗೆ ಮಾಡಿರುವ ಆರೋಪಕ್ಕೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸಚಿವರು, ಶಾಸಕರಾದ ವೇದವ್ಯಾಸ್ ಕಾಮತ್ ಅವರೇ, ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆ ಕಾಂಗ್ರೆಸ್ ಸರ್ಕಾರ …
Read More »ರಾಯಚೂರು ಜಿಲ್ಲೆಯಲ್ಲಿ ಮೋಡ ಬಿತ್ತನೆಗೆ ಚಾಲನೆ
ಬಳ್ಳಾರಿ: ಅಗತ್ಯ ಪ್ರಮಾಣದಷ್ಟು ಮಳೆಯಾಗದೆಪರಿಣಾಮಕಲ್ಯಾಣ ಕರ್ನಾಟಕದ ಜಿಲ್ಲೆಗಳು ಬರಗಾಲದಿಂದ ತತ್ತರಿಸಿವೆ. ಹೀಗಾಗಿ ಸಚಿವ ಎನ್ ಎಸ್ ಬೋಸರಾಜ್ ಅವರ ಫೌಂಡೇಷನ್ ಮತ್ತು ಶಾಸಕ ಪ್ರಕಾಶ್ ಕೋಳಿವಾಡ ಅವರ ಪಿಕೆಕೆ ಸಂಸ್ಥೆ ವತಿಯಿಂದ ರಾಯಚೂರಿನಲ್ಲಿ ಮೋಡ ಬಿತ್ತನೆ ಕಾರ್ಯ ಮಾಡಲಾಗುತ್ತಿದೆ. ಇದಕ್ಕಾಗಿ ಬಳ್ಳಾರಿಯ ಜಿಂದಾಲ್ ವಿಮಾನ ನಿಲ್ದಾಣದಿಂದ ಹೊರಟ ವಿಮಾನ ಮೂರು ದಿನಗಳ ಕಾಲ ಮೋಡ ಬಿತ್ತನೆ ಮಾಡಲಿದೆ. ಸಚಿವ ಎನ್ ಎಸ್ ಬೋಸರಾಜ್ ಅವರ ಪುತ್ರ ರವಿ ಬೋಸರಾಜ್ ಮಾತನಾಡಿ, “ಕರ್ನಾಟಕ …
Read More »
Laxmi News 24×7