ಮುಂಬೈ: ರಿಲಯನ್ಸ್ ಜಿಯೋ ಜಿಯೋಭಾರತ್ ಬಿ 1 ಎಂಬ ಹೊಸ 4 ಜಿ ಫೋನ್ ಅನ್ನು ದೇಶದಲ್ಲಿ ಬಿಡುಗಡೆ ಮಾಡಿದೆ. ಕೈಗೆಟುಕುವ ಬೆಲೆಯ ಜಿಯೋಭಾರತ್ ಸರಣಿಯ ಮುಂದಿನ ಫೋನ್ ಇದು. ಈ ಫೋನ್ 2.4 ಇಂಚಿನ ಡಿಸ್ಪ್ಲೇ, ಅಲ್ಫಾ ನ್ಯೂಮೆರಿಕ್ ಕೀ ಪ್ಯಾಡ್, ಬಹುಭಾಷಾ ಬೆಂಬಲ ಮತ್ತು 2000 ಎಂಎಎಚ್ ಬ್ಯಾಟರಿಯನ್ನು ಹೊಂದಿದೆ. ಬೆಲೆ 1,299 ರೂ. ಆಗಿದ್ದು, ಕಪ್ಪು ಬಣ್ಣದಲ್ಲಿ ಲಭ್ಯವಿದೆ. ಯುಪಿಐ ಪಾವತಿಗಳಿಗಾಗಿ ಜಿಯೋಪೇ ಬೆಂಬಲ, ಎಫ್‌ಎಂ ರೇಡಿಯೋ, …
Read More »ಮಹಿಷಾ ದಸರಾ, ಚಲೋ ಜಾಥಾಗೆ ನಿರಾಕರಣೆ: ಚಾಮುಂಡಿ ಬೆಟ್ಟ ಹಾಗೂ ಮೈಸೂರು ನಗರದಲ್ಲಿ ನಿಷೇದಾಜ್ಞೆ, ಬಿಗಿ ಬಂದೋಬಸ್ತ್
ಮೈಸೂರು: ಮಹಿಷಾ ದಸರಾ ಆಚರಣೆ ಹಾಗೂ ಚಾಮುಂಡಿ ಬೆಟ್ಟ ಚಲೋ ಜಾಥಾಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಚಾಮುಂಡಿ ಬೆಟ್ಟ ಹಾಗೂ ಮೈಸೂರು ನಗರದಲ್ಲಿ ಮಧ್ಯರಾತ್ರಿಯಿಂದ ನಾಳೆ ಬೆಳಗ್ಗೆ6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದ ಮಹಿಷಾ ಪ್ರತಿಮೆ ಸುತ್ತ ಹಾಗೂ ನಾಲ್ಕು ಕಡೆ ಚಾಮುಂಡಿ ಬೆಟ್ಟದ ದ್ವಾರಗಳಲ್ಲಿ ಬಿಗಿಯಾದ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಈ ನಿಷೇಧಾಜ್ಞೆ ಕೇವಲ ಮಹಿಷಾ ದಸರಾ ಹಾಗೂ ಚಾಮುಂಡಿ ಚಲೋ …
Read More »ಹುಬ್ಬಳ್ಳಿ ದಲಿತರ ಕೇರಿಯಲ್ಲಿ ಪೇಜಾವರ ಶ್ರೀ ಪಾದಯಾತ್ರೆ
ಹುಬ್ಬಳ್ಳಿ: ಇಲ್ಲಿನ ಭುವನೇಶ್ವರಿ ನಗರದ ದಲಿತರ ಕಾಲೋನಿಯಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಪಾದಯಾತ್ರೆ ನಡೆಸಿದರು. ವಿಶ್ವ ಹಿಂದೂ ಪರಿಷತ್, ಹುಬ್ಬಳ್ಳಿ ಮಹಾನಗರದ ಧರ್ಮಚಾರಿ ಸಂಪರ್ಕ ಪ್ರಮುಖ ಯಲ್ಲಪ್ಪ ಬಾಗಲೋಟಿ ಅವರ ಮನೆಗೆ ಶ್ರೀಗಳು ಭೇಟಿ ನೀಡಿದರು. ವಿಶ್ವ ಹಿಂದೂ ಪರಿಷತ್ ಉತ್ತರ ಪ್ರಾಂತ ಪ್ರಚಾರಕ ಬಸವರಾಜ್ ಅವರು ಕುಟುಂಬ ಸದಸ್ಯರನ್ನು ಶ್ರೀಗಳಿಗೆ ಪರಿಚಯಿಸಿದರು. ಕಾಲೋನಿಯ ಭುವನೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಶ್ರೀಗಳು ಪೂಜೆ ಸಲ್ಲಿಸಿ, ಆರತಿ ಬೆಳಗಿದರು. ದೇವಸ್ಥಾನದಲ್ಲಿ …
Read More »ಲೋಡ್ ಶೆಡ್ಡಿಂಗ್ ಟೀಕಿಸುವ ಬಿಜೆಪಿ ಎಷ್ಟು ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಿಸಿತ್ತು?: ಡಿ.ಕೆ.ಶಿವಕುಮಾರ್
ಬೆಂಗಳೂರು : ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದಾಗಿ ವಿದ್ಯುತ್ ಕೊರತೆಯಾಗಿದೆ. ಈ ವಿಚಾರವಾಗಿ ಟೀಕೆ ಮಾಡುವ ಬಿಜೆಪಿ ನಾಯಕರು ತಮ್ಮ ಅಧಿಕಾರಾವಧಿಯಲ್ಲಿ ಎಷ್ಟು ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದರು ಎಂಬುದನ್ನು ಹೇಳಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಳೆ ಬಿದ್ದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ. ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ನಮ್ಮ ಸರ್ಕಾರ ಇದ್ದಾಗ ಇದೇ ಪರಿಸ್ಥಿತಿ …
Read More »ಬೆಳಗಾವಿ: ಎಣ್ಣೆ ಪಾರ್ಟಿ ಮಾಡಿದ್ದ 7 ಸಿಬ್ಬಂದಿ ಅಮಾನತು ಮಾಡಿ DHO ಆದೇಶ
ಬೆಳಗಾವಿ : ನಗರದ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಆರೋಪಕ್ಕೆ ಸಂಬಂಧಪಟ್ಟಂತೆ ಏಳು ಸಿಬ್ಬಂದಿಯನ್ನು ಅಮಾನತು ಮಾಡಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಹೇಶ ಕೋಣಿ ಬುಧವಾರ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ ಕಾರು ಚಾಲಕ ಮಂಜುನಾಥ ಪಾಟೀಲ್, ಸಿಬ್ಬಂದಿ ಮಹೇಶ ಹಿರೇಮಠ, ರಮೇಶ ನಾಯಿಕ, ಸತ್ಯಪ್ಪ ತಮ್ಮನ್ನವರ, ಅನಿಲ ತಿಪ್ಪನ್ನವರ, ದೀಪಕ ಗಾವಡೆ, ಯಲ್ಲಪ್ಪ ಮುನ್ನವಳ್ಳಿ ಎಂಬವರನ್ನು ಅಮಾನತು ಮಾಡಲಾಗಿದೆ. ನಗರದ ಟಿಳಕವಾಡಿಯಲ್ಲಿರುವ ಡಿಹೆಚ್ಒ ಕಚೇರಿ ಹಿಂಭಾಗದಲ್ಲಿರುವ …
Read More »ಬೆಳಗಾವಿಯ ಸುವರ್ಣಸೌಧಕ್ಕೆ 12 ವರ್ಷ ತುಂಬಿದರೂ ಕೂಡ ಇನ್ನೂ ಸೌಧಕ್ಕೆ ಸುವರ್ಣ ಕಾಲವೇ ಕೂಡಿ ಬಂದಿಲ್ಲ.
ಬೆಳಗಾವಿ : ಉತ್ತರ ಕರ್ನಾಟದ ಜ್ವಲಂತ ಸಮಸ್ಯೆಗಳಿಗೆ ಮುಕ್ತಿ ನೀಡಬೇಕು. ಈ ಭಾಗದ ಜನರಿಗೆ ಶಕ್ತಿ ತುಂಬಬೇಕು ಎಂಬ ಸದುದ್ದೇಶದಿಂದ ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿರುವ ಹಲಗಾ-ಬಸ್ತವಾಡ ಗ್ರಾಮಗಳ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಸುವರ್ಣ ವಿಧಾನಸೌಧವನ್ನು ಸರ್ಕಾರ ನಿರ್ಮಾಣ ಮಾಡಿತ್ತು. ಈ ಸುವರ್ಣಸೌಧಕ್ಕೆ ಇಂದು 12 ವರ್ಷಗಳ ಸಂಭ್ರಮಾಚರಣೆ. 2012ರ ಅಕ್ಟೋಬರ್ 11 ರಂದು 438 ಕೋಟಿ ರೂ. ವೆಚ್ಚದಲ್ಲಿ ಸರ್ಕಾರ ಯಾವೆಲ್ಲಾ ಉದ್ದೇಶಗಳನ್ನಿಟ್ಟುಕೊಂಡು ಸುವರ್ಣಸೌಧವನ್ನು ನಿರ್ಮಾಣ ಮಾಡಿತ್ತೋ, ಆ ಉದ್ದೇಶಗಳನ್ನು …
Read More »ಕಾಮಗಾರಿಯ ಬಿಲ್ ವಿಳಂಬ ಆರೋಪ: ಬೆಳಗಾವಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ
ಬೆಳಗಾವಿ: ಕಾಮಗಾರಿಯ ಬಿಲ್ ವಿಳಂಬವಾಗಿದೆ ಎಂದು ಆರೋಪಿಸಿದ ಗುತ್ತಿಗೆದಾರನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದಲ್ಲಿ ಇಂದು (ಮಂಗಳವಾರ) ನಡೆದಿದೆ. ಬೈಲಹೊಂಗಲ ತಾಲೂಕಿನ ಗಣಿಕೊಪ್ಪ ಗ್ರಾಮದ ನಾಗಪ್ಪ ಬಂಗಿ ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ. ಬಿಲ್ ವಿಳಂಬವಾಗಿದೆ ಎಂದು ಆರೋಪಿಸಿದ ನಾಗಪ್ಪ ಲೋಕೋಪಯೋಗಿ ಇಲಾಖೆ ಕಚೇರಿಯ ಮುಂದೆ ಕುಟುಂಬಸಹಿತ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.
Read More »ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡಿನ 8 ಜಿಲ್ಲೆಗಳಲ್ಲಿ ಬಂದ್ಗೆ ಕರೆ
ನಾಗಪಟ್ಟಣಂ (ತಮಿಳುನಾಡು) : ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆ ಬಗೆಹರಿಯುವಂತೆ ಕಾಣುತ್ತಿಲ್ಲ. ಇಂದು ತಮಿಳುನಾಡಿನ 8 ಜಿಲ್ಲೆಗಳಲ್ಲಿ ಬಂದ್ಗೆ ಕರೆ ನೀಡಲಾಗಿದೆ. ನಾಗಪಟ್ಟಣಂ ಜಿಲ್ಲೆಯಲ್ಲಿ ಸುಮಾರು 12,000 ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳನ್ನು ಬಂದ್ ಮಾಡಿರುವ ವ್ಯಾಪಾರಿಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಕುರುವಾಯಿ ಭತ್ತದ ಕೃಷಿ ಉಳಿಸಲು ಮತ್ತು ಸಾಂಬಾ ಕೃಷಿ ಪ್ರಾರಂಭಿಸಲು ಕರ್ನಾಟಕ ಸರ್ಕಾರವು ಕಾವೇರಿ ನೀರನ್ನು ಸಮರ್ಪಕವಾಗಿ ಬಿಡುವಂತೆ …
Read More »‘ಯುವ ಪೀಳಿಗೆಯನ್ನು ಪ್ರೋತ್ಸಾಹಿಸಲು ಬಿಗ್ ಬಾಸ್ಗೆ ಹೋಗಿದ್ದೆ’: ಶಾಸಕ ಪ್ರದೀಪ್ ಈಶ್ವರ್
ಕನ್ನಡ ಬಿಗ್ ಬಾಸ್ ಸೀಸನ್ 10ಕ್ಕೆ ಎಂಟ್ರಿ ಕೊಟ್ಟು ಬಂದಿರುವ ಶಾಸಕ ಪ್ರದೀಪ್ ಈಶ್ವರ್, ದೊಡ್ಮನೆಗೆ ಹೋದ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಬಹುನಿರೀಕ್ಷಿತ ಕನ್ನಡ ಬಿಗ್ ಬಾಸ್ ಸೀಸನ್ 10 ಪಾರಂಭಗೊಂಡಿದೆ. ಜನಪ್ರಿಯ ರಿಯಾಲಿಟಿ ಶೋ ಆರಂಭದಲ್ಲೇ ಸದ್ದು ಮಾಡುತ್ತಿದೆ. ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ ಬಿಗ್ ಬಾಸ್ ಮನೆಗೆ ಹೋಗಿ ಬಂದಿದ್ದಾರೆ. ಅಷ್ಟಕ್ಕೂ ಒಂದು ದಿನದ ಮಟ್ಟಿಗೆ ಬಿಗ್ ಬಾಸ್ ಮನೆಗೆ ಹೋಗಿದ್ದ ಕಾರಣವೇನು? ಎಂಬುದರ ಬಗ್ಗೆ ಸ್ವತಃ …
Read More »ಸಿಎಂಗೆ ದಸರಾ ಆಹ್ವಾನ ಪತ್ರಿಕೆ ನೀಡಿದ ಸಚಿವ ಹೆಚ್.ಸಿ.ಮಹದೇವಪ್ಪ
ಬೆಂಗಳೂರು: ಅಪ್ಪನ ಹೆಗಲ ಮೇಲೆ ಕುಳಿತು ದಸರಾ ನೋಡುತ್ತಿದ್ದ ನನಗೆ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿದ್ದು ಸೌಭಾಗ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದಿನ ನೆನಪುಗಳನ್ನು ಸ್ಮರಿಸಿದರು. ದಸರಾದಲ್ಲಿ ಭಾಗವಹಿಸಲು ನೀಡಿದ ಆಹ್ವಾನ ಪತ್ರಿಕೆಯನ್ನು ಅವರು ಸಂತೋಷದಿಂದ ಸ್ವೀಕರಿಸಿದರು. ಸಿಎಂ ಸಿದ್ದರಾಮಯ್ಯನವರಿಗೆ ಇಂದು ಮೈಸೂರು ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ನೇತೃತ್ವದ ಜಿಲ್ಲಾಡಳಿತದ ನಿಯೋಗ ದಸರಾ ಆಹ್ವಾನಪತ್ರಿಕೆ ನೀಡಿತು. ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ ನಿಯೋಗದಲ್ಲಿ ಮೇಯರ್ ಶಿವಕುಮಾರ್, ಶಾಸಕ ರವಿಶಂಕರ್, …
Read More »