ಹಾವೇರಿ : ರಾಜ್ಯ ಸರ್ಕಾರ ಜಿಲ್ಲೆಯ ಎಂಟು ತಾಲೂಕುಗಳಲ್ಲಿ ಐದು ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದೆ. ಉಳಿದಂತೆ ಮೂರು ತಾಲೂಕುಗಳನ್ನು ಸರ್ಕಾರ ಬರಗಾಲಪೀಡಿತ ಎಂದು ಘೋಷಿಸಿಲ್ಲ. ರಾಣೆಬೆನ್ನೂರು, ಹಿರೇಕೆರೂರು, ಹಾವೇರಿ, ಸವಣೂರು ರಟ್ಟಿಹಳ್ಳಿ ತಾಲೂಕುಗಳು ಬರಗಾಲ ಪೀಡಿತವಾಗಿವೆ. ಉಳಿದಂತೆ ಬ್ಯಾಡಗಿ, ಹಾನಗಲ್ ಮತ್ತು ಶಿಗ್ಗಾಂವಿ ತಾಲೂಕುಗಳನ್ನು ಬರಗಾಲಪೀಡಿತ ಎಂದು ಘೋಷಣೆ ಮಾಡಿಲ್ಲ.ಇದರಿಂದ ಆಕ್ರೋಶಗೊಂಡು ಬ್ಯಾಡಗಿ, ಹಾನಗಲ್ ಮತ್ತು ಶಿಗ್ಗಾಂವಿ ತಾಲೂಕಿನ ರೈತರು ಇದೀಗ ರಾಜ್ಯ ರೈತಸಂಘ ಮತ್ತು ಹಸಿರುಸೇನೆಯ ನೇತೃತ್ವದಲ್ಲಿ ಪ್ರತಿಭಟನೆಯ …
Read More »ಸಿಎಂ ಭೇಟಿಯಾದ ಅಶ್ವಿನಿ ಪುನೀತ್ ರಾಜಕುಮಾರ್;
ಬೆಂಗಳೂರು : ಖಾಸಗಿ ಕಾರ್ಯಕ್ರಮಕ್ಕೆ ಆಹ್ವಾನಿಸಲು ಅಶ್ವಿನಿ ಪುನೀತ್ ರಾಜ್ಕುಮಾರ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು. ಈ ವೇಳೆ ಖಾಸಗಿ ಕಾರ್ಯಕ್ರಮವೊಂದಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು. ಈ ವೇಳೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮಾಜಿ ಸಚಿವ ಹೆಚ್.ಎಂ ರೇವಣ್ಣ ಜೊತೆಗಿದ್ದರು. ಪವರ್ ಸ್ಟಾರ್ ದಿ. ಪುನೀತ್ ರಾಜಕುಮಾರ್ ಅವರ ಶಿಲ್ಪದ ಸಂಗ್ರಹದ ಅನಾವರಣ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ ಸಿಎಂಗೆ …
Read More »ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ಸಿಐಡಿಗೆ ಹಸ್ತಾಂತರ: ಸಿಎಂ ಸಿದ್ದರಾಮಯ್ಯ
ಆನೇಕಲ್ (ಬೆಂಗಳೂರು) : ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಶನಿವಾರ ನಡೆದ ಅಗ್ನಿ ಅವಘಡ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಪಟಾಕಿ ದುರಂತ ಪ್ರಕರಣವನ್ನು ಸಿಐಡಿಗೆ ವಹಿಸುವುದಾಗಿ ಎಂದು ಹೇಳಿದರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ನಡೆದ ಅಗ್ನಿ ಅವಘಡ ಪ್ರಕರಣದಲ್ಲಿ ಒಟ್ಟು 14 ಮಂದಿ ಸಾವನ್ನಪ್ಪಿದ್ದು, 7 …
Read More »ಜಾತಿಗಣತಿ ವರದಿ ವಿಚಾರ ಇಟ್ಟುಕೊಂಡು ಸರ್ಕಾರ ರಾಜಕೀಯ ಮಾಡುತ್ತಿದೆ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ : ಕಾಂಗ್ರೆಸ್ನವರು ಒಂದು ಕಡೆ ಜಾತ್ಯತೀತ ಎನ್ನುತ್ತಾರೆ. ಇನ್ನೊಂದು ಕಡೆ ಜಾತಿಗಣತಿ ವರದಿ ಇಟ್ಟುಕೊಂಡು ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಡದಿಯ ತಮ್ಮ ತೋಟದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ವರದಿ ವಿಚಾರ ಇಟ್ಟುಕೊಂಡು ಸರ್ಕಾರವು ರಾಜಕೀಯ ಮಾಡುತ್ತಿದೆ. ಕಾಂತರಾಜು ಎಂಬುವರಿಂದ ವರದಿ ಕೊಡಿಸಿದ್ದೀವಿ. ಕುಮಾರಸ್ವಾಮಿ ಅವರು ಒಪ್ಪಲಿಲ್ಲ …
Read More »ಏಷ್ಯನ್ ಗೇಮ್ಸ್: ಭಾರತೀಯ ಅಥ್ಲೀಟ್‌ಗಳು 107 ಪದಕ ಗೆದ್ದಿರುವುದು ಐತಿಹಾಸಿಕ ಸಾಧನೆ- ಪ್ರಧಾನಿ ಮೋದಿ ಮೆಚ್ಚುಗೆ
ನವದೆಹಲಿ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ 19ನೇ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ವಿವಿಧ ಸ್ಪರ್ಧೆಗಳಲ್ಲಿ ಚಿನ್ನ, ಬೆಳ್ಳಿ, ಕಂಚಿನ ಪದಕಗಳನ್ನು ಜಯಿಸಿ ಅಥ್ಲೀಟ್‌ಗಳು ಸಂಭ್ರಮಿಸಿದ್ದಾರೆ. ಈ ಸ್ಮರಣೀಯ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದು, ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಅಥ್ಲೀಟ್‌ಗಳು ಒಟ್ಟು 107 ಪದಕಗಳನ್ನು ಗೆದ್ದಿರುವುದನ್ನು ಐತಿಹಾಸಿಕ ಸಾಧನೆ ಎಂದು ಬಣ್ಣಿಸಿದ್ದಾರೆ. ‘ನಮ್ಮ ಅಥ್ಲೀಟ್‌ಗಳ ಸಾಧನೆಯನ್ನು ರಾಷ್ಟ್ರವೇ ಸಂಭ್ರಮಿಸುತ್ತಿದ್ದು, ಆಟಗಾರರ ಅಚಲ ಸಂಕಲ್ಪ ಮತ್ತು ಕಠಿಣ ಪರಿಶ್ರಮ …
Read More »ಬುದ್ಧಿಮಾಂದ್ಯನಂತೆ ನಟಿಸಿ ₹50 ಲಕ್ಷ ಮೌಲ್ಯದ 150 ಮೊಬೈಲ್ ಕಳವು; ಐನಾತಿ ಕಳ್ಳ ಕೊನೆಗೂ ಸೆರೆ
ಹೊಸಕೋಟೆ (ಬೆ. ಗ್ರಾಮಾಂತರ): ಬಸ್ ನಿಲ್ದಾಣದಲ್ಲಿ ಪ್ರಯಾಣಿಕನಂತೆ ನಿಲ್ಲುತ್ತಿದ್ದ ಆತ ಬುದ್ಧಿಮಾಂದ್ಯನಂತೆ ನಟಿಸಿ ಜನರಿಂದ ಪರ್ಸ್, ಮೊಬೈಲ್ಗಳನ್ನು ಕದಿಯುತ್ತಿದ್ದ. ಈ ಐನಾತಿ ಕಳ್ಳನನ್ನು ಪೊಲೀಸರು ಬಂಧಿಸಿದ್ದು 50 ಲಕ್ಷ ರೂ ಮೌಲ್ಯದ 150 ಮೊಬೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ. ಕದ್ದ ಮೊಬೈಲ್ಗಳನ್ನು ಮಾರಾಟ ಮಾಡಿ ಮೋಜಿನ ಜೀವನ ಮಾಡುತ್ತಿದ್ದ ಕಳ್ಳ ಕೊನೆಗೂ ಪೊಲೀಸರ ಬಲೆಯಲ್ಲಿ ಸೆರೆಯಾಗಿದ್ದಾನೆ. ಆರೋಪಿಯನ್ನು ವಿನಯ್ ಎಂದು ಗುರುತಿಸಲಾಗಿದೆ. ಸಂಜೆ ಮತ್ತು ಬೆಳಗಿನ ಹೊತ್ತಲ್ಲಿ ಬಸ್ ನಿಲ್ದಾಣಕ್ಕೆ ಪ್ರಯಾಣಿಕನಂತೆ ಬರುತ್ತಿದ್ದ …
Read More »ಅಕ್ಟೋಬರ್ 14 ರ ವರೆಗೆ ಇಸ್ರೇಲ್ಗೆ ಏರ್ ಇಂಡಿಯಾ ವಿಮಾನ ಹಾರಾಟ ರದ್ದು
ನವದೆಹಲಿ: ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವೆ ನಡೆಯುತ್ತಿರುವ ‘ರಾಕೆಟ್ ಕಾಳಗ’ದಲ್ಲಿ ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಬಿಕ್ಕಟ್ಟು ಇನ್ನೂ ಮುಂದುವರೆದಿರುವ ಕಾರಣ ಭಾರತದ ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ ಇಸ್ರೇಲ್ಗೆ ತನ್ನೆಲ್ಲಾ ವಿಮಾನಗಳ ಹಾರಾಟವನ್ನು ಅಕ್ಟೋಬರ್ 14ರ ವರೆಗೆ ನಿಲ್ಲಿಸಿದೆ. ಇಸ್ರೇಲ್ನ ಪ್ರಮುಖ ನಗರ ಟೆಲ್ ಅವೀವ್‌ಗೆ ಹೊರಡುವ ಮತ್ತು ಅಲ್ಲಿಂದ ಬರುವ ತನ್ನೆಲ್ಲಾ ವಿಮಾನಗಳನ್ನು ಮುಂದಿನ 6 ದಿನಗಳ ಕಾಲ ರದ್ದುಗೊಳಿಸಿರುವುದಾಗಿ ಏರ್ ಇಂಡಿಯಾ ಭಾನುವಾರ ತಿಳಿಸಿದೆ. ‘ನಮ್ಮ …
Read More »ಬಳ್ಳಾರಿಯಲ್ಲಿ ಸ್ವಾಧೀನಪಡಿಸಿಕೊಂಡಿದ್ದ 2,643 ಎಕರೆ ಭೂಮಿ ಹಿಂದಿರುಗಿಸಲು ಅರ್ಸೆಲರ್ ಮಿತ್ತಲ್ ನಿರ್ಧಾರ
ನವದೆಹಲಿ: ಕರ್ನಾಟಕದ ಬಳ್ಳಾರಿಯಲ್ಲಿ ಉಕ್ಕಿನ ಸ್ಥಾವರ ಸ್ಥಾಪಿಸಲು ಸ್ವಾಧೀನಪಡಿಸಿಕೊಂಡಿದ್ದ 2,643 ಎಕರೆ ಭೂಮಿಯನ್ನು ಹಿಂದಿರುಗಿಸಲು ನಿರ್ಧರಿಸಿರುವುದಾಗಿ ವಿಶ್ವದ ಅತಿದೊಡ್ಡ ಉಕ್ಕು ಉತ್ಪಾದಕ ಅರ್ಸೆಲರ್ ಮಿತ್ತಲ್ ಕಂಪನಿಯು ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಈಗಾಗಲೇ ಪಾವತಿಸಿರುವ 267 ಕೋಟಿ ರೂಪಾಯಿ ಮೊತ್ತವನ್ನೂ ಕೂಡ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಮುಟ್ಟುಗೋಲು ಹಾಕಿಕೊಳ್ಳಬಹುದು ಎಂದು ತಿಳಿಸಿದೆ. ಈ ಪ್ರಕರಣವು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರ ಪೀಠದ ಮುಂದೆ ಶುಕ್ರವಾರ …
Read More »ಬೆಳಗಾವಿ ಕರ್ನಾಟಕ ರಾಜ್ಯೋತ್ಸವಕ್ಕೆ ರಾಜ್ಯ ಸರ್ಕಾರ ಎರಡು ಕೋಟಿ ಅನುದಾನ ಕೊಡಬೇಕು
ಬೆಳಗಾವಿ ಕರ್ನಾಟಕ ರಾಜ್ಯೋತ್ಸವಕ್ಕೆ ರಾಜ್ಯ ಸರ್ಕಾರ ಎರಡು ಕೋಟಿ ಅನುದಾನ ಕೊಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮ ಸಡಗರ ದಿಂದ ಆಚರಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯಿಂದ ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ಪಾದಯಾತ್ರೆ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು ಬೆಳಗಾವಿ ಕರವೇ ಅಧ್ಯಕ್ಷ ದೀಪಕ ಗುಡಗನಟ್ಟಿ ಮಾತುನಾಡಿ ಇಡೀ ರಾಜ್ಯದಲ್ಲಿ …
Read More »ನಟ ನಾಗಭೂಷಣ್ ಕಾರು ಅಪಘಾತ ಪ್ರಕರಣ: ಪೊಲೀಸರ ಕೈಸೇರಿದ ಆರ್ಟಿಒ ಅಧಿಕಾರಿಗಳ ವರದಿ
ಬೆಂಗಳೂರು: ಕನ್ನಡ ಚಿತ್ರರಂಗದ ನಟ ನಾಗಭೂಷಣ್ ಅವರ ಕಾರು ಅಪಘಾತದಿಂದ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಅಧಿಕಾರಿಗಳ ವರದಿ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸರ ಕೈ ಸೇರಿದೆ. ಆರ್.ಟಿ.ಒ ಅಧಿಕಾರಿಗಳಿಂದ ಪೊಲೀಸರಿಗೆ ವರದಿ ಸಲ್ಲಿಕೆ: ಅಪಘಾತದ ಬಳಿಕ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣಾ ಪೊಲೀಸರು ನಟ ನಾಗಭೂಷಣ್ ಅವರ ಕಾರನ್ನು ವಶಕ್ಕೆ ಪಡೆದಿದ್ದರು. ಗಾಡಿಯನ್ನು ಪರಿಶೀಲನೆ ನಡೆಸಿದ್ದ ಆರ್.ಟಿ.ಒ ಅಧಿಕಾರಿಗಳು, ಕಾರಿನ ಟಯರ್, ಕಾರು ಜಖಂಗೊಂಡ ರೀತಿ, …
Read More »