Breaking News

ರಾಷ್ಟ್ರೀಯ

ನಟ ನಾಗಭೂಷಣ್ ಕಾರು ಅಪಘಾತ ಪ್ರಕರಣ: ಪೊಲೀಸರ ಕೈಸೇರಿದ ಆರ್​ಟಿಒ ಅಧಿಕಾರಿಗಳ ವರದಿ

ಬೆಂಗಳೂರು: ಕನ್ನಡ ಚಿತ್ರರಂಗದ ನಟ ನಾಗಭೂಷಣ್ ಅವರ ಕಾರು ಅಪಘಾತದಿಂದ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಅಧಿಕಾರಿಗಳ ವರದಿ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸರ ಕೈ ಸೇರಿದೆ.   ಆರ್​.ಟಿ.ಒ ಅಧಿಕಾರಿಗಳಿಂದ ಪೊಲೀಸರಿಗೆ ವರದಿ ಸಲ್ಲಿಕೆ: ಅಪಘಾತದ ಬಳಿಕ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣಾ ಪೊಲೀಸರು ನಟ ನಾಗಭೂಷಣ್ ಅವರ ಕಾರನ್ನು ವಶಕ್ಕೆ ಪಡೆದಿದ್ದರು. ಗಾಡಿಯನ್ನು ಪರಿಶೀಲನೆ ನಡೆಸಿದ್ದ ಆರ್.ಟಿ.ಒ ಅಧಿಕಾರಿಗಳು, ಕಾರಿನ ಟಯರ್, ಕಾರು ಜಖಂಗೊಂಡ ರೀತಿ, …

Read More »

100 ಕರ್ನಾಟಕ ಸಾರಿಗೆ ಹಾಗೂ 40 ನಾನ್​ ಎಸಿ ಸ್ಲೀಪರ್ ಪಲ್ಲಕ್ಕಿ ಬಸ್​​​​ಗಳಿಗೆ ಸಿಎಂ, ಡಿಸಿಎಂ ಚಾಲನೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ವಿಧಾನಸೌಧದ ಗ್ರ್ಯಾಂಡ್​ ಸ್ಟೆಪ್ಸ್ ಬಳಿ ಇಂದು ಆಯೋಜಿಸಿದ್ದ 100 ನೂತನ ಕರ್ನಾಟಕ ಸಾರಿಗೆ ಹಾಗೂ 40 ಹವಾನಿಯಂತ್ರಣ ರಹಿತ ಸ್ಲೀಪರ್ ಪಲ್ಲಕ್ಕಿ ಬಸ್​​​ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಲೋಕಾರ್ಪಣೆಗೊಳಿಸಿದರು.   ‘ಪಲ್ಲಕ್ಕಿ’ಗೆ ಚಾಲನೆಇದೇ ವೇಳೆ ಪಾಯಿಂಟ್​ ಟು ಪಾಯಿಂಟ್ ಕಾರ್ಯಾಚರಣೆಗೆ ನೂತನ ಮಾದರಿಯ ಮೇಲ್ದರ್ಜೆಗೇರಿಸಿದ ಕರ್ನಾಟಕ ಸಾರಿಗೆ ಬಸ್​​​ಗಳಿಗೂ ಸಿಎಂ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ. …

Read More »

ಡೇಂಜರ್​​​ ಸ್ಟುಡೆಂಟ್ಸ್​…!! ಗಣಿತದಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಶಿಕ್ಷಕಿಯ ವಿದ್ಯಾರ್ಥಿನಿಯರು ಮಾಡಿದ್ದೇನು?

ಉಳ್ಳಾಲ (ಮಂಗಳೂರು): ಶಾಲಾ ಪರೀಕ್ಷೆಯ ಗಣಿತ ವಿಷಯದಲ್ಲಿ ಒಂದು ಅಂಕ ಕಡಿಮೆ ನೀಡಿದರು ಎಂದು ಸಿಟ್ಟಾಗಿದ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತಮ್ಮ ಗಣಿತ ಶಿಕ್ಷಕಿಯ ನೀರಿನ ಬಾಟಲ್​ಗೆ ಅವಧಿ ಮುಗಿದು ಹೋದ ಮಾತ್ರೆಯನ್ನು ಹಾಕಿದ್ದಾರೆ. ಈ ಬಾಟಲ್​​ನಲ್ಲಿರುವ ನೀರು ಕುಡಿದಿದ್ದರಿಂದ ಇಬ್ಬರು ಶಿಕ್ಷಕಿಯರು ಅಸ್ವಸ್ಥಗೊಂಡ ಘಟನೆ ಇಲ್ಲಿನ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ. ಈ ಸಂಬಂಧ ಶಾಲೆಯಲ್ಲಿ ಎಸ್​ಡಿಎಂಸಿಯಿಂದ ತುರ್ತು ಸಭೆ ನಡೆಸಿ, ವಿದ್ಯಾರ್ಥಿನಿಯರಿಬ್ಬರಿಗೆ ಟಿಸಿ ನೀಡಲು ಶಾಲಾ ಆಡಳಿತ ಮಂಡಳಿ ನಿರ್ಧರಿಸಿರುವ …

Read More »

ಗಗನಯಾನ ಮಿಷನ್‌ಗಾಗಿ ಇಸ್ರೋ ಮಾನವರಹಿತ ಹಾರಾಟದ ಪರೀಕ್ಷೆ ಪ್ರಾರಂಭ

ಬೆಂಗಳೂರು: ಗಗನಯಾನ ಮಿಷನ್‌ಗಾಗಿ ಇಸ್ರೋ ಮಾನವರಹಿತ ಹಾರಾಟದ ಪರೀಕ್ಷೆಯನ್ನು ಪ್ರಾರಂಭಿಸಲಿದೆ. ಕ್ರೂ ಎಸ್ಕೇಪ್ ಸಿಸ್ಟಮ್‌ನ ಕಾರ್ಯಕ್ಷಮತೆ ಪ್ರದರ್ಶಿಸುವ ಫ್ಲೈಟ್ ಟೆಸ್ಟ್ ವೆಹಿಕಲ್ ಅಬಾರ್ಟ್ ಮಿಷನ್-1 (ಟಿವಿ-ಡಿ1) ಗಾಗಿ ಸಿದ್ಧತೆಗಳು ನಡೆಯುತ್ತಿವೆ ಎಂದು ಇಸ್ರೋ ತಿಳಿಸಿದೆ. ಈ ಸಂಬಂಧ ಅದು ತನ್ನ ಅಧಿಕೃತ ವೆಬ್​ಸೈಟ್​ನಲ್ಲಿ ಮಾಹಿತಿ ಹಂಚಿಕೊಂಡಿದೆ. ಗಗನಯಾನಕ್ಕೆ ಇಸ್ರೋ ಸಿದ್ಧತೆ… ಮಾನವ ರಹಿತ ನೌಕೆ ಹಾರಾಟ ಪರೀಕ್ಷೆಗೆ ಭರ್ಜರಿ ತಯಾರಿ!ಗಗನಯಾನ ಹೇಗೆಲ್ಲ ಕಾರ್ಯನಿರ್ವಹಿಸುತ್ತದೆ: ಗಗನಯಾನ ಕಾರ್ಯಾಚರಣೆಯ ಸಮಯದಲ್ಲಿ ಗಗನಯಾತ್ರಿಗಳು ಒತ್ತಡಕ್ಕೊಳಗಾದ ಭೂಮಿಯಂತಹ ವಾತಾವರಣದ …

Read More »

ಅಥಣಿಯಲ್ಲಿ ಕಾಣೆಯಾದ ವಿದ್ಯಾರ್ಥಿಗಳು ಮಹಾರಾಷ್ಟ್ರದ ರತ್ನಗಿರಿಯಲ್ಲಿ ಪತ್ತೆ

ಚಿಕ್ಕೋಡಿ(ಬೆಳಗಾವಿ): ಶಾಲೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಮೂರು ಮಕ್ಕಳು ಕಾಣೆಯಾಗಿರುವ ಪ್ರಕರಣದಲ್ಲಿ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಮಕ್ಕಳು ಪತ್ತೆಯಾಗಿದ್ದು, ಪೋಷಕರ ಆತಂಕ ದೂರಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ನಿವಾಸಿಯ ಮೂವರು ವಿದ್ಯಾರ್ಥಿಗಳು ಶುಕ್ರವಾರ ಸಂಜೆ ಅಥಣಿ ಪಟ್ಟಣದಲ್ಲಿ ಕಾಣೆಯಾಗಿದ್ದರು. ಶಾಲೆಗೆ ಹೋಗಿ ಬರುತ್ತೇನೆ ಎಂದು ಮಕ್ಕಳು ಮರಳಿ ಮನೆಗೆ ಬಾರದೆ ಇದ್ದಾಗ ಕುಟುಂಬಸ್ಥರು ಆತಂಕಗೊಂಡು ಅಥಣಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಕುಟುಂಬಸ್ಥರು ಶೋಧ ಕಾರ್ಯ ನಡೆಸಿದರು, ಹುಡುಕಾಟ ಸಮಯದಲ್ಲಿ …

Read More »

5 ಗ್ಯಾರಂಟಿ ಸೇರಿ ಯಾವುದೇ ಅಭಿವೃದ್ಧಿ ಕಾಮಗಾರಿಗೆ ಹಣದ ಕೊರತೆ ಇಲ್ಲ: ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: “ರಾಜ್ಯ ಕಾಂಗ್ರೆಸ್​ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ಸೇರಿದಂತೆ ಯಾವುದೇ ನಿಯಮಿತ ಅಭಿವೃದ್ಧಿ ಕಾಮಗಾರಿ ಹಾಗೂ ಕಾರ್ಯಕ್ರಮಕ್ಕೆ ಹಣದ ಕೊರತೆ ಇಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗ್ಯಾರಂಟಿಗಳಿಗಾಗಿ ರಾಜ್ಯದ ಅಭಿವೃದ್ಧಿಗಳು ಕುಂಠಿತಗೊಂಡಿವೆ ಅನ್ನೋದು ಸುಳ್ಳು. ಬಿಜೆಪಿ ನಾಯಕರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡಿದ್ದೇ ಅವರು.​ ನಾವು ಈ ಹಿಂದೆ ಆಡಳಿತ ನಡೆಸಿದ್ದೆವು. ಯಾವತ್ತೂ ಇಷ್ಟು ಪ್ರಮಾಣದ …

Read More »

ಆರ್​​ಟಿಐ ಅರ್ಜಿದಾರರ ಮಾಹಿತಿ ಒದಗಿಸುವಂತೆ ಕೋರಿದ್ದ ಸುತ್ತೋಲೆ ಹಿಂಪಡೆದ ಸರ್ಕಾರ

ಬೆಂಗಳೂರು: ಮಾಹಿತಿ ಹಕ್ಕಿನ ಅಡಿಯಲ್ಲಿ ಹೆಚ್ಚು ಬಾರಿ ಅರ್ಜಿ ಸಲ್ಲಿಸುತ್ತಿರುವ ಅರ್ಜಿದಾರರ ಪಟ್ಟಿಯನ್ನು ಒದಗಿಸಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಜೂನ್ 6 ರಂದು ಹೊರಡಿಸಿದ್ದ ನಿರ್ದೇಶನವನ್ನು ಇದೀಗ ಹಿಂಪಡೆದುಕೊಂಡಿದೆ.   ಜೂನ್ 6ರಂದು ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಮಾಹಿತಿ ಹಕ್ಕಿನ ಅಡಿ ಹೆಚ್ಚು ಬಾರಿ ಅರ್ಜಿಸಲ ಸಲ್ಲಿಸುತ್ತಿರುವ ಅರ್ಜಿದಾರರ ಪಟ್ಟಿಯನ್ನು ಒದಗಿಸುವಂತೆ ಸೂಚನೆ ನೀಡಿತ್ತು. ಆ ಮೂಲಕ ಮಾಹಿತಿ ಹಕ್ಕು ಅಧಿನಿಯಮದಡಿ ಸಾರ್ವಜನಿಕರ ಅಧಿಕಾರವನ್ನು …

Read More »

ದಸರಾ ‘ಯುವ ಸಂಭ್ರಮ’ಕ್ಕೆ ಸಚಿವ ಹೆಚ್.ಸಿ ಮಹದೇವಪ್ಪ ಚಾಲನೆ: ಸಮಾರಂಭಕ್ಕೆ ಸಿಂಹಪ್ರಿಯಾ ಸಾಕ್ಷಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಹಿನ್ನೆಲೆ ಸಾಂಸ್ಕೃತಿಕ ನಗರಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಿಸುವ ‘ಯುವ ಸಂಭ್ರಮ’ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ ಅವರು ಉದ್ಘಾಟಿಸಿದರು. ಮೈಸೂರು ವಿಶ್ವವಿದ್ಯಾನಿಲಯ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಶುಕ್ರವಾರ ಸಂಜೆ ಗಣ್ಯರು ಹಾಗೂ ಅತಿಥಿಗಳು ನಗಾರಿ, ಕಂಸಾಳೆ, ಡೊಳ್ಳು ಬಾರಿಸುವ ಮೂಲಕ ‘ಯುವ ಸಂಭ್ರಮ’ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅದ್ಧೂರಿಯಾಗಿ ಚಾಲನೆ ನೀಡಿದರು. ಸಮಾರಂಭದ …

Read More »

ವಿಶ್ವಕಪ್ ಆಯೋಜನೆಯಿಂದ ದೇಶದ ಆರ್ಥಿಕತೆಗೆ 18 ರಿಂದ 22 ಸಾವಿರ ಕೋಟಿ ರೂಪಾಯಿ ಹರಿದು ಬರುವ ಸಾಧ್ಯತೆಯಿದೆ.

ನವದೆಹಲಿ: ಭಾರತದಲ್ಲಿ ನಡೆಯುತ್ತಿರುವ ಕ್ರಿಕೆಟ್ ವಿಶ್ವಕಪ್​ ದೇಶದ ಜಿಡಿಪಿಗೆ ಹೆಚ್ಚುವರಿಯಾಗಿ ಸುಮಾರು 18,000-22,000 ಕೋಟಿ ರೂ.ಗಳ ಕೊಡುಗೆ ನೀಡಲಿದೆ ಮತ್ತು ಪಂದ್ಯಾವಳಿಯು ದೇಶದ ಜಿಡಿಪಿಗೆ ಸುಮಾರು 7,000-8,000 ಕೋಟಿ ರೂ. ಗಳಷ್ಟು ಮೌಲ್ಯವರ್ಧನೆ ಮಾಡಲಿದೆ ಎಂದು ಬ್ಯಾಂಕ್ ಆಫ್ ಬರೋಡಾದ ಇಬ್ಬರು ಅರ್ಥಶಾಸ್ತ್ರಜ್ಞರ ವರದಿ ತಿಳಿಸಿದೆ. ವಿಶ್ವಕಪ್​ನಿಂದ ಹಣದುಬ್ಬರದ ಮೇಲಾಗುವ ಪರಿಣಾಮ ತೀರಾ ಅತ್ಯಲ್ಪ ಎಂದು ವರದಿ ತಿಳಿಸಿದೆ. ಜಿಡಿಪಿಯ ಮೇಲಾಗುವ ಪರಿಣಾಮದ ದೃಷ್ಟಿಯಿಂದ ನೋಡಿದರೆ ವಿಶ್ವಕಪ್​ನಿಂದ ಅಂದಾಜು 18,000-22,000 ಕೋಟಿ …

Read More »

ಕನಸು ನನಸಾಯಿತು’: ವಿರಾಟ್ ಕೊಹ್ಲಿ ಭೇಟಿ ಮಾಡಿದ ವಿಶೇಷಚೇತನ ಅಭಿಮಾನಿಯ ಹರ್ಷೋದ್ಘಾರ

ಚೆನ್ನೈ: ಪ್ರಸ್ತುತ ಕ್ರಿಕೆಟ್​ ಕಿಂಗ್​ ಎಂದೇ ಖ್ಯಾತಿಯಾಗಿರುವ ವಿರಾಟ್ ಕೊಹ್ಲಿಗೆ ಅಪರಿಮಿತ ಅಭಿಮಾನಿ ಬಳಗವಿದೆ. ಚೇಸ್​ ಮಾಸ್ಟರ್​ ಅಂದ್ರೆ ಹಿರಿ- ಕಿರಿಯರೆಲ್ಲರಿಗೂ ಇಷ್ಟವೇ. ತಮಿಳುನಾಡಿನ ವಿಶೇಷಚೇತನ ಅಭಿಮಾನಿಯೊಬ್ಬ ಕೊಹ್ಲಿಯ ಕಟ್ಟಾ ಅಭಿಮಾನಿಯಾಗಿದ್ದು, ಇಲ್ಲಿನ ಚೆಪಾಕ್​ ಕ್ರೀಡಾಂಗಣದಲ್ಲಿ ಇಂದು (ಅಕ್ಟೋಬರ್​ 5) ಭೇಟಿಯಾಗಿ, ‘ಕನಸು ನನಸಾಯಿತು’ ಎಂದು ಉದ್ಗರಿಸಿದ್ದಾರೆ. ಚೆನ್ನೈನ ವೆಲಚೇರಿ ಮೂಲದ 19 ವರ್ಷದ ಶ್ರೀನಿವಾಸ್ ವಿಶೇಷಚೇತನರಾಗಿದ್ದಾರೆ. ಕಾಲಿನ ಊನತೆ ಹೊಂದಿರುವ ಶ್ರೀನಿವಾಸ್​ಗೆ ಚಿತ್ರಕಲೆ ಒಲಿದಿದೆ. ಚೆಪಾಕ್​ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ …

Read More »