ಮುಂಬೈ (ಮಹಾರಾಷ್ಟ್ರ): ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲಾತಿ ಬೇಡಿಕೆ ಜೋರಾಗಿದೆ. ಇದರ ನಡುವೆ ಮುಂಬೈನಲ್ಲಿ ಮೀಸಲಾತಿಗೆ ಒತ್ತಾಯಿಸಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ. ಜಲ್ನಾ ಜಿಲ್ಲೆಯ ಚಿಕಂಗಾವ್ ಮೂಲದ ಸುನೀಲ್ ಬಾಬುರಾವ್ ಕಾವ್ಲೆ ಮೃತ ಎಂದು ಗುರುತಿಸಲಾಗಿದೆ. ಮರಾಠಾ ಮೀಸಲಾತಿಗಾಗಿ ಕೆಲ ದಿನಗಳ ಹಿಂದೆ 150 ಎಕರೆ ಜಾಗದಲ್ಲಿ ಲಕ್ಷಾಂತರ ಜನರನ್ನು ಸೇರಿಸಿ ಸಮಾವೇಶಗೊಂಡಿದ್ದ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ಬುಧವಾರದಿಂದ ಮುಂಬೈ ಪ್ರವಾಸದಲ್ಲಿದ್ದಾರೆ. ಇಂದು ನವಿ ಮುಂಬೈ ಸೇರಿದಂತೆ ಹಲವು …
Read More »ನಾಲ್ಕು ತಿಂಗಳಲ್ಲಿ ಸಾಕಷ್ಟು ಬಾರಿ ಹಸ್ತಕ್ಷೇಪ ಆಗಿದೆ.: ಸತೀಶ್ ಜಾರಕಿಹೊಳಿ
ಬೆಂಗಳೂರು : ನಾಲ್ಕು ತಿಂಗಳಲ್ಲಿ ಸಾಕಷ್ಟು ಬಾರಿ ಹಸ್ತಕ್ಷೇಪ ಆಗಿದೆ. ನನ್ನ ಮೌನ ದೌರ್ಬಲ್ಯವಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಬೆಳಗಾವಿ ಜಿಲ್ಲೆ ಹಸ್ತಕ್ಷೇಪ ವಿಚಾರವಾಗಿ ಪ್ರತಿಕ್ರಿಯಿಸಿ, ವರ್ಗಾವಣೆ ವಿಚಾರವಾಗಿ ಹಸ್ತಕ್ಷೇಪವಾಗಿದೆ. ಈ ಹಿಂದೆ ಸಾಕಷ್ಟು ಬಾರಿ ಆಗಿದೆ. ನಾನು ಕೂಡ ಕಾಂಪ್ರಮೈಸ್ ಮಾಡಿಕೊಂಡಿದ್ದೇನೆ. ನಾನು ಅನುಸರಿಸಿಕೊಂಡು ಬರುತ್ತಿದ್ದೇನೆ ಎಂದು ಹೇಳಿದರು. ಪಕ್ಷದ ಹಿತದೃಷ್ಟಿಯಿಂದ …
Read More »ಆನ್ಲೈನ್ ಗೇಮ್ಸ್ನಲ್ಲಿ 1.5 ಕೋಟಿ ರೂ. ಗೆದ್ದಿದ್ದ ಪಿಎಸ್ಐ ಅಮಾನತು
ಪುಣೆ (ಮಹಾರಾಷ್ಟ್ರ): ಆನ್ಲೈನ್ ಗೇಮಿಂಗ್ ಆಯಪ್ನಲ್ಲಿ ಒಂದೂವರೆ ಕೋಟಿ ರೂ. ಬಹುಮಾನ ಗೆದ್ದು ಸುದ್ದಿಯಾಗಿದ್ದ ಮಹಾರಾಷ್ಟ್ರದ ಪೊಲೀಸ್ ಅಧಿಕಾರಿ ಸೋಮನಾಥ್ ಝೆಂಡೆ ತಲೆದಂಡವಾಗಿದೆ. ಅಶಿಸ್ತಿನ ವರ್ತನೆ ಹಾಗೂ ಪೊಲೀಸ್ ಇಲಾಖೆಯ ಪ್ರತಿಷ್ಠೆಗೆ ಕಳಂಕ ತಂದ ಆರೋಪದಡಿ ಸಬ್ ಇನ್ಸ್ಪೆಕ್ಟರ್ ಆಗಿದ್ದ ಸೋಮನಾಥ್ ಅವರನ್ನು ಅಮಾನತುಗೊಳಿಸಲಾಗಿದೆ. ಪುಣೆಯ ಪಿಂಪ್ರಿ ಚಿಂಚ್ವಾಡ ನಗರದ ಪೊಲೀಸ್ ಮುಖ್ಯ ಕಚೇರಿಯಲ್ಲಿ ಪಿಎಸ್ಐ ಸೋಮನಾಥ್ ಝೆಂಡೆ ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಆನ್ಲೈನ್ ಕ್ರಿಕೆಟ್ ಗೇಮ್ನಲ್ಲಿ 1.5 ಕೋಟಿ ರೂ. …
Read More »ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಶೇ.4ರಷ್ಟು ತುಟ್ಟಿ ಭತ್ಯೆ ಏರಿಕೆ
ನವದೆಹಲಿ: ಕೇಂದ್ರದ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಸರ್ಕಾರ ಬುಧವಾರ ಶೇ.4ರಷ್ಟು ಏರಿಕೆ ಮಾಡಿದೆ. ಇದು ಜುಲೈ 1ರಿಂದಲೇ ಪೂರ್ವಾನ್ವಯವಾಗಲಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಇದು ಲಕ್ಷಾಂತರ ಹಾಲಿ ನೌಕರರು ಹಾಗೂ ಪಿಂಚಿಣಿದಾರರಿಗೆ ಅನುಕೂಲವಾಗಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ನಡೆಯಿತು. ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ಈಗ ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಳವಾಗಿದೆ, …
Read More »ಬೆಳಗಾವಿಯಿಂದಲೇ ಬಂಡಾಯ ಆರಂಭ ಆಗುತ್ತೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ತಿರುಗೇಟು ಕೊಟ್ಟಿರುವ ಡಿಸಿಎಂ
ಬೆಳಗಾವಿ: ಬೆಳಗಾವಿಯಿಂದಲೇ ಬಂಡಾಯ ಆರಂಭ ಆಗುತ್ತೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ತಿರುಗೇಟು ಕೊಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ, ಯಾರ ಬಗ್ಗೆಯೂ ಏನೂ ಇಲ್ಲ. 136 ಶಾಸಕರೆಲ್ಲರೂ ನಮ್ಮವರೆ.. ಬಿಜೆಪಿಯವರಿಗೆ ಒಂದು ನ್ಯೂಸ್ ಬೇಕು. ಅದಕ್ಕೆ ಈ ರೀತಿ ಏನೆನೋ ಸೃಷ್ಟಿಸುತ್ತಿದ್ದಾರೆ ಎಂದಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ಜೆ ಎಚ್ ಪಟೇಲರ ಭಾಷಣ ಕೇಳಿದ್ದೀರಾ.. ಅವಿಶ್ವಾಸ ನಿರ್ಣಯ ಮಂಡನೆ ವೇಳೆ …
Read More »ಆಧಾರರಹಿತ ಆರೋಪ ಮಾಡುವುದು ಬಿಜೆಪಿಯ ಚಾಳಿ: ಸಚಿವ ದಿನೇಶ್ ಗುಂಡೂರಾವ್
ಮಂಗಳೂರು : ಬಿಜೆಪಿ ಮುಖಂಡರಿಗೆ ಆಧಾರ ರಹಿತ ಆರೋಪ ಮಾಡುವುದು ಒಂದು ಚಾಳಿ ಆಗಿದೆ. ಪಂಚರಾಜ್ಯ ಚುನಾವಣೆಯಲ್ಲಿ ಸೋಲಿನ ಭೀತಿ ಅವರನ್ನು ಕಾಡತೊಡಗಿದೆ. ಕರ್ನಾಟಕದಲ್ಲಿ ಅವರು ಧೂಳಿಪಟ ಆಗಲಿದ್ದಾರೆ ಎಂದು ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಪಂಚರಾಜ್ಯ ಚುನಾವಣೆಗೆ ಕರ್ನಾಟಕ ಕಾಂಗ್ರೆಸ್ ಎಟಿಎಂ ಆಗಿ ಬಳಕೆ ಆಗುತ್ತಿದೆ ಎಂದು ಕಾಂಗ್ರೆಸ್ ವಿರುದ್ದ ಬಿಜೆಪಿ ಗಂಭೀರ ಆರೋಪ ಮಾಡಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಕರ್ನಾಟಕದಲ್ಲಿ ಯಾವ ರೀತಿ ಆಡಳಿತ ಕೊಟ್ಟಿದ್ದಾರೆ ಎಂಬುದು …
Read More »ಪವಿತ್ರ ಕಾವೇರಿ ತೀರ್ಥೋದ್ಭವ ಕಣ್ತುಂಬಿಕೊಂಡ ಭಕ್ತಗಣ : ಹಲವು ಗಣ್ಯರು ಭಾಗಿ
ಕೊಡಗು : ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವದ ಕ್ಷಣಕ್ಕೆ ಸಾಕ್ಷಿಯಾದರು. ಕೊಡಗಿನ ಕುಲದೇವಿ, ನಾಡಿನ ಜೀವನದಿ ಕಾವೇರಿ ನಿಗದಿಯಂತೆ ಕರ್ಕಾಟಕ ಲಗ್ನದಲ್ಲಿ ರಾತ್ರಿ 1 ಗಂಟೆ 26 ನಿಮಿಷಕ್ಕೆ ತೀರ್ಥರೂಪಿಣಿಯಾಗಿ ನೆರೆದಿದ್ದ ಭಕ್ತರಿಗೆ ದರ್ಶನ ನೀಡಿದಳು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜ್, ಶಾಸಕರಾದ ಎ.ಎಸ್. ಪೊನ್ನಣ್ಣ, ಡಾ.ಮಂಥರ್ ಗೌಡ, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ವೆಂಕಟರಾಜ, ಜಿ. ಪಂ. …
Read More »ಬಿಜೆಪಿ- ಜೆಡಿಎಸ್ ಹತಾಶೆಗೆ ಮೇಜರ್ ಆಪರೇಶನ್ ಮಾಡಬೇಕು: ಡಿ ಕೆ ಶಿವಕುಮಾರ್
ಬೆಂಗಳೂರು : “ಬಿಜೆಪಿ ಮತ್ತು ಜನತಾದಳದವರು ಹತಾಶೆಯ ಅಂತಿಮ ಸ್ಥಿತಿ ತಲುಪಿದ್ದಾರೆ. ಅವರಿಗೆ ಡಾಕ್ಟರ್‌ಗಳೇ ಮೇಜರ್ ಆಪರೇಶನ್ ಮಾಡಬೇಕು” ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ನಿಮ್ಮ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದೆ ಎಂದು ಹೇಳಿದರು. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಹಾಗೆಲ್ಲ …
Read More »ಧಾರವಾಡ ಜೈಲಿನಲ್ಲಿ ಕೈದಿ ಮತ್ತು ಸಿಬ್ಬಂದಿ ನಡುವೆ ಮಾರಾಮಾರಿ
ಧಾರವಾಡ: ಕೈದಿ ಮತ್ತು ಜೈಲು ಸಿಬ್ಬಂದಿ ನಡುವೆ ಮಾರಾಮಾರಿ ನಡೆದಿರುವ ಘಟನೆ ಧಾರವಾಡ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಘಟನೆಯಲ್ಲಿ ಜೈಲು ಸಿಬ್ಬಂದಿ ಮತ್ತು ಕೈದಿ ಇಬ್ಬರಿಗೂ ಗಾಯಗಳಾಗಿವೆ. ಮೋಹನ ಸಿದ್ದಪ್ಪ ಬಡಿಗೇರ ಗಾಯಗೊಂಡ ಜೈಲು ಸಿಬ್ಬಂದಿಯಾಗಿದ್ದು, ಪ್ರಶಾಂತ ಅಲಿಯಾಸ್ ಪಾಚು ಹಲ್ಲೆ ಮಾಡಿದ ಕೈದಿಯಾಗಿದ್ದಾನೆ. ಗಾಯಗೊಂಡ ಇಬ್ಬರನ್ನೂ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಅನೇಕ ದಿನಗಳಿಂದ ಧಾರವಾಡ ಕಾರಾಗೃಹದಲ್ಲಿದ್ದ ಪ್ರಶಾಂತ ಎಂಬ ಕೈದಿ ಬಾಚಣಿಕೆಯನ್ನೇ ಚಾಕೂವಿನಂತೆ ಮಾಡಿಕೊಂಡು ಜೈಲಿನ …
Read More »ಕಿತ್ತೂರು ಉತ್ಸವದ ಸಿದ್ಧತೆ ಪರಿಶೀಲಿಸಿದ ಡಿಸಿ; ಕೋಟೆ ಆವರಣ ಸ್ವಚ್ಛತೆ, ದೀಪಾಲಂಕಾರಕ್ಕೆ ಸೂಚನೆ
ಬೆಳಗಾವಿ : ಕಿತ್ತೂರು ಉತ್ಸವದ ಹಿನ್ನೆಲೆಯಲ್ಲಿ ವೇದಿಕೆ ನಿರ್ಮಾಣ, ಕೆರೆ, ಕುಸ್ತಿ ಕಣ, ಮಾಧ್ಯಮ ಕೇಂದ್ರ, ವಸ್ತು ಪ್ರದರ್ಶನ ಮಳಿಗೆ, ಆಹಾರ ಮಳಿಗೆ, ಕೋಟೆ ಆವರಣ ಸ್ವಚ್ಛತೆ, ಪಾರ್ಕಿಂಗ್, ಬಂದೋಬಸ್ತ್ ಸೇರಿದಂತೆ ವಿವಿಧ ಸಿದ್ಧತೆಗಳನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ್ ಪರಿಶೀಲಿಸಿದ್ದು, ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಿದ್ದಾರೆ. ಚ.ಕಿತ್ತೂರಿನ ಕೋಟೆ ಆವರಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಈ ಬಾರಿಯೂ …
Read More »
Laxmi News 24×7