ನಾಂದೇಡ್ (ಮಹಾರಾಷ್ಟ್ರ): ಅಕ್ಟೋಬರ್ 1 ರಂದು ನಾಂದೇಡ್‌ನಲ್ಲಿರುವ ಡಾ. ಶಂಕರರಾವ್ ಚವಾಣ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 24 ರೋಗಿಗಳು ಸಾವನ್ನಪ್ಪಿದ್ದರು. ಮತ್ತೆ ಅಕ್ಟೋಬರ್ 2 ರಂದು ಇದೇ ಆಸ್ಪತ್ರೆಯಲ್ಲಿ 7 ರೋಗಿಗಳು ಮೃತಪಟ್ಟಿದ್ದಾರೆ. ಪ್ರಸ್ತುತ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ನಾಂದೇಡ್‌ನ ಡಾ. ಶಂಕರರಾವ್ ಚವಾಣ್ ಸರ್ಕಾರಿ ಆಸ್ಪತ್ರೆಯಲ್ಲಿ ಎರಡು ದಿನದಲ್ಲಿ ರೋಗಿಗಳ ಹೆಚ್ಚಳವಾಗಿದೆ. ಆಸ್ಪತ್ರೆಯಲ್ಲಿ 76 ರೋಗಿಗಳ ಸ್ಥಿತಿ ಗಂಭೀರ: ಸರ್ಕಾರಿ ಅಧಿಕಾರಿಯೊಬ್ಬರ ಪ್ರಕಾರ, ಪ್ರಸ್ತುತ …
Read More »ಟಿಳಕವಾಡಿಯ ವೀರಸೌಧದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮ ನಡೆಯಿತು
ಬೆಳಗಾವಿ : ಜಗತ್ತಿಗೆ ಸತ್ಯ, ಶಾಂತಿ ಮತ್ತು ಅಹಿಂಸೆಯ ಸಂದೇಶಗಳನ್ನು ಬೋಧಿಸಿದ ಮಹಾತ್ಮ ಗಾಂಧೀಜಿಯವರ ಮಾರ್ಗವೇ ಸರಿಯಾದ ಮಾರ್ಗ. ಭಾರತೀಯರಾದ ನಾವು ಪರಸ್ಪರ ಗೌರವಿಸುವ ಮೂಲಕ ಸದಾ ಭಾರತೀಯರಾಗುವ ಜತೆಗೆ ಗಾಂಧೀಜಿ ಹಾಕಿಕೊಟ್ಟ ಮಾರ್ಗದಲ್ಲಿಯೇ ನಡೆಯಬೇಕು ಎಂದು ಶಾಸಕ ಆಸೀಫ್ ಸೇಠ್ ಕರೆ ಕೊಟ್ಟರು. ಇಂದಿನ ಯುವಪೀಳಿಗೆ ಗಾಂಧೀಜಿ ತತ್ವಗಳನ್ನು ಸ್ವೀಕರಿಸಬೇಕು. ಅವರ ಪುಸ್ತಕಗಳನ್ನು ಓದಿ ವಿಚಾರ, ಚಿಂತನೆಗಳನ್ನು ತಿಳಿದುಕೊಳ್ಳಬೇಕು. ಭವಿಷ್ಯದಲ್ಲಿ ಮಾದರಿ ವ್ಯಕ್ತಿಗಳಾಗಲು ಕಠಿಣ ಶ್ರಮವಹಿಸಿ, ನಿರಂತರ ಅಭ್ಯಾಸ ಮಾಡಿದರೆ …
Read More »ವಾಣಿಜ್ಯ ಸಿಲಿಂಡರ್ ಬೆಲೆ 209 ರೂ ಏರಿಕೆ.. ಹೋಟೆಲ್ ಉದ್ಯಮಿಗಳಿಗೆ ಶಾಕ್
ನವದೆಹಲಿ : ವಾಣಿಜ್ಯ ಅಡುಗೆ ಅನಿಲ (ಎಲ್‌ಪಿಜಿ) ದರ 19 ಕೆಜಿ ಸಿಲಿಂಡರ್‌ಗೆ 209 ರೂ. ಗಳಷ್ಟು ಹೆಚ್ಚಿಸಲಾಗಿದೆ. ಇದರಿಂದ ಹೋಟೆಲ್ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳಲಿದೆ. ಸದ್ಯ ಗೃಹಬಳಕೆಯ ಎಲ್‌ಪಿಜಿಯ ಬೆಲೆ ಪ್ರತಿ 14.2 ಕೆಜಿ ಸಿಲಿಂಡರ್‌ಗೆ ರೂ. 903 ರಷ್ಟಿದೆ. ಇದೇ ವೇಳೆ ವಿಮಾನಯಾನ ಇಂಧನದ ಬೆಲೆಯನ್ನು ಹೆಚ್ಚಿಸಲಾಗಿದೆ. ಕೆಲವೇ ದಿನಗಳಲ್ಲಿ ದೇಶದಲ್ಲಿ ದಸರಾ, ದೀಪಾವಳಿ ಸೇರಿದಂತೆ ಹಬ್ಬದ ಸೀಸನ್ …
Read More »ಇನ್ಫೊಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿಯವರಿಗೆ ‘ಗ್ಲೋಬಲ್ ಇಂಡಿಯನ್ ಪ್ರಶಸ್ತಿ’ ಪ್ರದಾನ
ಟೊರೊಂಟೊ : ಖ್ಯಾತ ಲೇಖಕಿ, ಸಮಾಜ ಸೇವಕಿ, ಇನ್ಫೊಸಿಸ್ ಫೌಂಡೇಶನ್ ಮುಖ್ಯಸ್ಥೆ ಮತ್ತು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ಮೂರ್ತಿ ಅವರಿಗೆ ಕೆನಡಾ ಇಂಡಿಯಾ ಫೌಂಡೇಶನ್ ‘ಗ್ಲೋಬಲ್ ಇಂಡಿಯನ್ ಪ್ರಶಸ್ತಿ’ ನೀಡಿ ಗೌರವಿಸಿದೆ. 50,000 ಡಾಲರ್ ಮೌಲ್ಯದ ಗ್ಲೋಬಲ್ ಇಂಡಿಯನ್ ಪ್ರಶಸ್ತಿಯನ್ನು ಪ್ರತಿ ವರ್ಷ ತಾವು ಆಯ್ಕೆ ಮಾಡಿದ ಕ್ಷೇತ್ರದಲ್ಲಿ ಪ್ರಮುಖ ಛಾಪು ಮೂಡಿಸಿದ ಭಾರತೀಯರಿಗೆ ನೀಡಲಾಗುತ್ತದೆ. “ಸುಧಾ ಮೂರ್ತಿ ಅವರಿಗೆ ಗ್ಲೋಬಲ್ ಇಂಡಿಯನ್ ಪ್ರಶಸ್ತಿ …
Read More »ಬಿಎಸ್ವೈ ಜೈಲಿಗೆ ಹೋಗಲು ಎಚ್ ಡಿ ಕುಮಾರಸ್ವಾಮಿ ಕಾರಣ: ಶಾಸಕ ಸವದಿ
ಚಿಕ್ಕೋಡಿ: ಮಾಜಿ ಸಿಎಂ ಕುಮಾರಸ್ವಾಮಿ ವಚನ ಭ್ರಷ್ಟರು ಎಂದು ಆರೋಪ ಮಾಡಿ ದ್ವೇಷ ಸಾಧಿಸಲು ಯಡಿಯೂರಪ್ಪ ಹೋಗಿದ್ದವರು. ಅದೇ ಕುಮಾರಸ್ವಾಮಿ ಅವರು ಬಿಎಸ್ವೈ ಅವರನ್ನು ಭ್ರಷ್ಟಾಚಾರ ಸುಳಿಯಲ್ಲಿ ಸಿಲುಕಿಸಿ ಜೈಲಿಗೆ ಕಳುಹಿಸಿದರು. ಆದರೆ, ಇವತ್ತು ಅಧಿಕಾರಿಗೋಸ್ಕರ ಇಬ್ಬರು ನಾಯಕರು ಸ್ವಾಭಿಮಾನ ಬದಿಗೆ ಒತ್ತಿ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಕಿಡಿಕಾರಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, …
Read More »3ನೇ ತರಗತಿ ವಿದ್ಯಾರ್ಥಿನಿ ಪತ್ರಕ್ಕೆ ಸಿಎಂ ಕಚೇರಿ ಸ್ಪಂದನೆ : ತಂಬಾಕು ಅಂಗಡಿ ಮೇಲೆ ಪೊಲೀಸರ ದಾಳಿ
ಕಡಬ (ದಕ್ಷಿಣಕನ್ನಡ) : ಶಾಲೆ ಬಳಿ ತಂಬಾಕು ಮಾರಾಟ ಮಾಡುತ್ತಿರುವ ಬಗ್ಗೆ ವಿದ್ಯಾರ್ಥಿನಿಯ ಪತ್ರಕ್ಕೆ ಸಿಎಂ ಕಚೇರಿ ಸ್ಪಂದಿಸಿದೆ. ಈ ಸಂಬಂಧ ಕಡಬ ತಾಲೂಕಿನ ಬಿಳಿನೆಲೆ ಕೈಕಂಬ ಶಾಲೆಯ ಬಳಿ ಇರುವ ಅಂಗಡಿ ಮೇಲೆ ಕಡಬ ಪೊಲೀಸರು ದಾಳಿ ನಡೆಸಿದ್ದಾರೆ. ಅಲ್ಲದೇ ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅಂಗಡಿಯಲ್ಲಿ ಮಾರಾಟ ಮಾಡುತ್ತಿದ್ದ ತಂಬಾಕು ಮತ್ತು ಸಿಗರೇಟ್ ಮುಂತಾದವುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನಿ ಪತ್ರಕ್ಕೆ ಸಿಎಂ ಕಚೇರಿ ಸ್ಪಂದನೆ : ಇಲ್ಲಿನ …
Read More »2000 ನೋಟುಗಳ ವಿನಿಮಯದ ಅವಧಿ ವಿಸ್ತರಿಸಿದ ಆರ್ಬಿಐ: ಅಕ್ಟೋಬರ್ 7 ಕೊನೆ ದಿನ
ನವದೆಹಲಿ: ಹಿಂಪಡೆಯಲಾಗಿರುವ 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ ವಿನಿಮಯ, ಠೇವಣಿ ಅವಧಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಇನ್ನಷ್ಟು ಕಾಲ ವಿಸ್ತರಿಸಿದೆ. ಇಂದೇ (ಸೆ.30)ಕೊನೆಯಾಗಿದ್ದ ಗಡುವನ್ನು ಅಕ್ಟೋಬರ್ 7ರ ವರೆಗೆ ಕಾಲಾವಕಾಶ ನೀಡುವ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಆರ್ಬಿಐ, ಬ್ಯಾಂಕ್ ರಜೆಗಳಿಂದಾಗ ಅಡ್ಡಿ ಮತ್ತು ಜನರ ಅನುಕೂಲಕ್ಕಾಗಿ ಎರಡು ಸಾವಿರದ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಇನ್ನೂ 7 ದಿನಗಳ ಕಾಲಾವಕಾಶ ನೀಡಲಾಗಿದೆ. ಗ್ರಾಹಕರು ಬ್ಯಾಂಕ್ಗಳಿಗೆ ತೆರಳಿ …
Read More »ಸಾಹಿತಿಗಳಿಗೆ ಬೆದರಿಕೆ ಪತ್ರ ಪ್ರಕರಣ: ಆರೋಪಿ ಶಿವಾಜಿ ರಾವ್ ಜಾಧವ್ ಮನೆಯಲ್ಲಿ ಸಿಸಿಬಿ ಮಹಜರು
ದಾವಣಗೆರೆ: ಸಾಹಿತಿಗಳಿಗೆ ಎರಡು ವರ್ಷಗಳಿಂದ ಜೀವ ಬೆದರಿಕೆ ಪತ್ರಗಳನ್ನು ಬರೆಯುತ್ತಿದ್ದ ಎಂಬ ಆರೋಪ ಎದುರಿಸುತ್ತಿರುವ ದಾವಣಗೆರೆಯ ಶಿವಾಜಿ ರಾವ್ ಜಾಧವ್ ಬಂಧನವಾಗಿದೆ. ಸಿಸಿಬಿ ಪೊಲೀಸರು ದಾವಣಗೆರೆ ನಗರದ ಈಡ್ಲ್ಯೂಎಸ್ ಕಾಲೋನಿಯ ಆರೋಪಿಯ ನಿವಾಸದಲ್ಲಿಂದು ಮಹಜರು ಮಾಡಿದರು. ಎರಡು ಕಾರುಗಳಲ್ಲಿ ಆಗಮಿಸಿದ ಸಿಸಿಬಿ ಅಧಿಕಾರಿಗಳು ನಾಲ್ಕು ಗಂಟೆಗೂ ಹೆಚ್ಚು ಕಾಲ ಆರೋಪಿ ಶಿವಾಜಿ ರಾವ್ ಜಾಧವ್ ಮನೆಯಲ್ಲಿ ಮಹಜರು ಮಾಡಿ ಮಾಹಿತಿ ಕಲೆ ಹಾಕಿ ಆರೋಪಿಗೆ ಸೇರಿದ ಪೆನ್ನು, ಡೈರಿ ಕೆಲ ಪುಸ್ತಕಗಳನ್ನು …
Read More »‘ಕಾಂತಾರ’ ಸಿನಿಮಾ ವರ್ಷ ಪೂರೈಸಿರುವ ಹಿನ್ನೆಲೆ ಚಿತ್ರತಂಡ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದೆ.
ಕಾಂತಾರ’ ಸಿನಿಮಾ ವರ್ಷ ಪೂರೈಸಿರುವ ಹಿನ್ನೆಲೆ ಚಿತ್ರತಂಡ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದೆ. ಕನ್ನಡ ಚಿತ್ರರಂಗದ ಬ್ಲಾಕ್ ಬಸ್ಟರ್ ಸಿನಿಮಾ ‘ಕಾಂತಾರ’ ವರ್ಷ ಪೂರೈಸಿದೆ. ಕಳೆದ ವರ್ಷ ಇದೇ ದಿನ ಸಿನಿಮಾ ತೆರೆಗಪ್ಪಳಿಸಿತ್ತು. ಅದಾದ ಬಳಿಕ ಆದದ್ದೆಲ್ಲವೂ ಇತಿಹಾಸವೇ. ವರ್ಷ ಪೂರೈಸಿರುವ ಸಂಭ್ರಮದಲ್ಲಿರುವ ಚಿತ್ರತಂಡ, ಅದ್ಭುತ ಯಶಸ್ಸಿಗೆ ಕಾರಣರಾದ ಪ್ರೇಕ್ಷಕರಿಗೆ ತುಂಬು ಹೃದಯದಿಂದ ಧನ್ಯವಾದ ಅರ್ಪಿಸಿದ್ದಾರೆ. ಅದರ ಸಲುವಾಗಿ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದೆ. ‘ಕಾಂತಾರ’ ಹೇಗೆ ಶುರುವಾಯಿತು ಅನ್ನೋದರಿಂದ ಹಿಡಿದು ಇಡೀ …
Read More »ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಡಿಐಜಿ ಆಗಿ ರವಿ ಚನ್ನಣ್ಣನವರ್ ವರ್ಗಾವಣೆ
ಬೆಂಗಳೂರು: ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ಸ್ಥಾನದಿಂದ ಇತ್ತೀಚಿಗಷ್ಟೇ ರಾಜ್ಯ ಆಂತರಿಕ ಭದ್ರತಾ ವಿಭಾಗದ ಡಿಐಜಿ ಆಗಿ ವರ್ಗಾವಣೆಗೊಂಡಿದ್ದ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರನ್ನು ಮತ್ತೊಮ್ಮೆ ವರ್ಗಾವಣೆಗೊಳಿಸಲಾಗಿದೆ. ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಐಜಿ ಆಗಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶನಿವಾರ ಆದೇಶ ಪ್ರಕಟಿಸಿದೆ. ರವಿ ಡಿ ಚನ್ನಣ್ಣನವರ್ ಅವರನ್ನು ಹಿಂದಿನ ಬಿಜೆಪಿ ಸರ್ಕಾರ 2022ರ ನವೆಂಬರ್ …
Read More »