* ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಹಾರುಗೋಪ್ಪ ಗ್ರಾಮದಲ್ಲಿ ಶ್ರೀ ಚೆನ್ನಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …
Read More »ಅದ್ಧೂರಿ ಕಿಚಡಿ ಜಾತ್ರೆಗೆ ಹರಿದು ಬಂದ ಭಕ್ತ ಸಾಗರ
ಬಾಗಲಕೋಟೆ: ಕಿಚಡಿ ಜಾತ್ರೆ ಎಂದೇ ಉತ್ತರ ಕರ್ನಾಟಕದಲ್ಲಿ ಪ್ರಸಿದ್ಧಿ ಪಡೆದುಕೊಂಡಿರುವ ಚಿಮ್ಮಡ ಗ್ರಾಮದ ಪ್ರಭುಲಿಂಗೇಶ್ವರ ಜಾತ್ರೆಯು ವಿಶೇಷವಾಗಿ ಗಮನ ಸೆಳೆಯುತ್ತಿದೆ. ಐತಿಹಾಸಿಕ ಹಿನ್ನೆಲೆ ಹಾಗೂ ಆಧ್ಯಾತ್ಮಿಕವಾಗಿ ಬೆಳೆದು ಬಂದಿರುವ ಈ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಆಗಮಿಸಿ ಪ್ರಸಾದ ಸೇವನೆ ಮಾಡುತ್ತಾರೆ. ಈ ಮೂಲಕ ಕಿಚಡಿ ಜಾತ್ರೆ ಜಾತ್ಯಾತೀತವಾಗಿ ಹಾಗೂ ಧಾರ್ಮಿಕವಾಗಿ ಬೆಳೆದು ಬಂದಿದೆ. ಗುರುವಾರ ನಡೆದ ಈ ಜಾತ್ರೆಗೆ ಭಕ್ತ ಸಾಗರ ಸಾಕ್ಷಿಯಾಯಿತು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಚಿಮ್ಮಡಿ …
Read More »ಶಕ್ತಿಸೌಧಕ್ಕೆ ತಟ್ಟಿದ ಕರ್ನಾಟಕ ಬಂದ್ ಬಿಸಿ: ಪ್ರತಿಭಟನೆಗೆ ಬೆಂಬಲ ಸೂಚಿಸಿದ 89ರ ವೃದ್ಧ
ಬೆಂಗಳೂರು : ಕರ್ನಾಟಕ ಬಂದ್ ಹಿನ್ನೆಲೆ ವಿಧಾನಸೌಧದಲ್ಲಿ ಸರ್ಕಾರಿ ನೌಕರರ ಸಂಖ್ಯೆ ವಿರಳವಾಗಿದೆ. ಹೀಗಾಗಿ, ಬಂದ್ ಬಿಸಿ ಶಕ್ತಿಸೌಧಕ್ಕೂ ತಟ್ಟಿದ್ದು, ಸಚಿವಾಲಯದ ಹಲವು ಸಿಬ್ಬಂದಿ ಇಂದು ಕೆಲಸಕ್ಕೆ ಗೈರಾಗಿದ್ದಾರೆ. ವಾರದಲ್ಲಿ ಎರಡನೇ ಬಂದ್ ಇದಾಗಿದ್ದು, ವಿಧಾನಸೌಧದ ಕಾರಿಡಾರ್ಗಳು ಖಾಲಿ ಖಾಲಿ ಇವೆ. ಕರ್ನಾಟಕ ಬಂದ್ ಹಿನ್ನೆಲೆ ಹಲವು ಸಿಬ್ಬಂದಿ ಕೆಲಸಕ್ಕೆ ಆಗಮಿಸಿಲ್ಲ. ನಿನ್ನೆ ಈದ್ ಮಿಲಾದ್ ಇದ್ದ ಕಾರಣ ಸರ್ಕಾರಿ ರಜೆ ಇದ್ದು, ಇಂದು ಬಂದ್ ಇರುವುದರಿಂದ ಸಚಿವಾಲಯದ ಸಿಬ್ಬಂದಿ ಕೆಲಸಕ್ಕೆ …
Read More »ಐತಿಹಾಸಿಕ ತಾಣ ಹಂಪಿಗೆ ಒಲಿದ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ರಾಷ್ಟ್ರೀಯ ಪ್ರಶಸ್ತಿ
ವಿಜಯನಗರ: ರಾಜ್ಯದ ಹೆಮ್ಮೆಯ ಐತಿಹಾಸಿಕ ತಾಣ ಹಂಪಿಯ ಪ್ರವಾಸೋದ್ಯಮಕ್ಕೆ ಮತ್ತೊಂದು ಗೌರವ ಸಂದಿದೆ. ಕೇಂದ್ರ ಸರ್ಕಾರದ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ರಾಷ್ಟ್ರೀಯ ಪ್ರಶಸ್ತಿಗೆ ಹಂಪಿ ಆಯ್ಕೆಯಾಗಿದೆ. ಹಂಪಿ ಗ್ರಾಮ ಪಂಚಾಯಿತಿಗೆ ರಾಷ್ಟ್ರೀಯ ಮಾನ್ಯತೆಯ ಗೌರವ ಒಲಿದಿದೆ. ನವದೆಹಲಿಯ ಭಾರತ್ ಮಂಟಪದಲ್ಲಿ ಪ್ರವಾಸೋದ್ಯಮ ರಾಜ್ಯ ಖಾತೆ ಸಚಿವ ಅಜಯ್ ಭಟ್ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಹಂಪಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಜನಿ ಷಣ್ಮುಖ ಗೌಡ ಪ್ರಶಸ್ತಿ ಸ್ವೀಕಾರ ಮಾಡಿದರು. ಪ್ರಶಸ್ತಿಗೆ 15 …
Read More »ಹಿಂದಿನ ಸರ್ಕಾರಗಳೂ ತಮಿಳುನಾಡಿಗೆ ನೀರು ಬಿಟ್ಟಿವೆ. ಈಗ ಮಾತಾಡುವವವರೂ ಆಗ ನೀರು ಬಿಟ್ಟಿದ್ದರು.: ಸತೀಶ್ ಜಾರಕಿಹೊಳಿ
ಬೆಳಗಾವಿ: ಹಿಂದಿನ ಸರ್ಕಾರಗಳೂ ತಮಿಳುನಾಡಿಗೆ ನೀರು ಬಿಟ್ಟಿವೆ. ಈಗ ಮಾತಾಡುವವವರೂ ಆಗ ನೀರು ಬಿಟ್ಟಿದ್ದರು. ಹಾಗಾಗಿ, ಆದೇಶ ಯಾರು ಮಾಡಿದ್ದಾರೋ ಅವರ ವಿರುದ್ಧ ಪ್ರತಿಭಟನೆ ಮಾಡಬೇಕು. ಆದರೆ, ಇದಕ್ಕೆ ತದ್ವಿರುದ್ಧವಾಗಿ ನಮ್ಮ ವಿರುದ್ಧ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ಮಾಡಿದೆ. 25 …
Read More »ನಾಳೆ ಕರ್ನಾಟಕ ಬಂದ್ ಹಿನ್ನೆಲೆ ಬೆಂಗಳೂರಲ್ಲಿ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್ ಜಾರಿ
ನಾಳೆ ಕರ್ನಾಟಕ ಬಂದ್ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್ ಜಾರಿಯಲ್ಲಿರಲಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮಾಹಿತಿ ನೀಡಿದ್ದಾರೆ. ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನ ಖಂಡಿಸಿ ವಿವಿಧ ಸಂಘಟನೆಗಳು ಮಂಗಳವಾರ ಬೆಂಗಳೂರು ಬಂದ್ಗೆ ಕರೆ ನೀಡಿದ್ದವು. ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರ ಪೊಲೀಸರು ಬಿಗಿ ಪೊಲೀಸ್ ಭದ್ರತೆ ಕೈಗೊಂಡಿದ್ದರು. ತಮಿಳು ಭಾಷಿಕರು ವಾಸವಿರುವ ಪ್ರದೇಶ, ಚಿತ್ರಮಂದಿರ ಸೇರಿದಂತೆ ಸೂಕ್ಷ್ಮ ಹಾಗೂ …
Read More »ನಿನ್ನೆ ಕೊಲೆ ಮಾಡಿ ಇಂದು ನೇಣಿಗೆ ಶರಣಾದ ವಾಚಮನ್
ಯುವಕನೊಬ್ಬನ ಭೀಕರ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ನಿನ್ನೆ ಹುಬ್ಬಳ್ಳಿಯ ಸಿಲ್ವರ್ ಟೌನ್‌ನಲ್ಲಿ ಮೌಲಾಲಿ ಎನ್ನುವ ಯುವಕನ ಕೊಲೆ ಮಾಡಲಾಗಿತ್ತು. ಈ ಕೊಲೆ ಪ್ರಕರಣದ ಆರೋಪಿ ಪರಸಪ್ಪ, ಅಪೂರ್ವ ನಗರದ ಪ್ರಮುಖ ರಸ್ತೆಯಲ್ಲಿರುವ ಗಿಡದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರಸಪ್ಪ (50) ನೇಣಿಗೆ ಶರಣಾದ ಆರೋಪಿಯಾಗಿದ್ದು, ನಿನ್ನೆ ಹುಬ್ಬಳ್ಳಿಯ ಸಿಲ್ವರ್ ಟೌನ್‌ನಲ್ಲಿ ಮೌಲಾಲಿ ಎನ್ನುವ ಯುವಕನ ಕೊಲೆ ಮಾಡಿದ ಆರೋಪ ಈತನ ಮೇಲಿತ್ತು. ಪೊಲೀಸರು ಈತನನ್ನು ವಶಕ್ಕೆ …
Read More »ಬಾಂಬ್ನಂತೆ ಸಿಡಿದ ಜಾರ್ಜಿಂಗ್ ಇಟ್ಟ ಮೊಬೈಲ್ ಫೋನ್: ಮನೆಗೆ ಭಾರಿ ಹಾನಿ, ಮೂವರಿಗೆ ತೀವ್ರ ಗಾಯ
(ಮಹಾರಾಷ್ಟ್ರ) : ಮೊಬೈಲ್ಗಳು ಸ್ಫೋಟಗೊಳ್ಳುತ್ತಿರುವ ವರದಿಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಮಹಾರಾಷ್ಟ್ರದ ನಾಸಿಕ್ನಲ್ಲೂ ಇಂಥದ್ದೊಂದು ಸುದ್ದಿಯಾಗಿದೆ. ಜಾರ್ಜ್ ಮಾಡುವ ವೇಳೆ ಮೊಬೈಲ್ ಬಾಂಬ್ನಂತೆ ಸಿಡಿದು ಇಡೀ ಮನೆಯನ್ನು ಧ್ವಂಸ ಮಾಡಿದೆ. ಮನೆಯಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಿಟಕಿ, ವಸ್ತುಗಳು ಸುಟ್ಟು ಭಸ್ಮವಾಗಿವೆ. ಅಲ್ಲದೇ, ಸುತ್ತಮುತ್ತ ಮನೆಗಳಿಗೂ ಹಾನಿಯಾಗಿದೆ. ಮೊಬೈಲ್ ಫೋನ್ ಸ್ಫೋಟದಿಂದಾಗಿ ಇಷ್ಟು ದೊಡ್ಡ ಪ್ರಮಾಣದ ಹಾನಿ ಸಂಭವಿಸಿರುವುದನ್ನು ಕಂಡು ಸ್ಥಳೀಯರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಮೂವರ ಪೈಕಿ ಒಬ್ಬರ ಸ್ಥಿತಿ …
Read More »ಅಭ್ಯಾಸ ಪಂದ್ಯಕ್ಕೆ ಎರಡು ದಿನ ಮುಂಚಿತವಾಗಿ ಇಂಡಿಯಾಕ್ಕೆ ಬಂದ ಬಾಬರ್ ಪಡೆ..
ಹೈದರಾಬಾದ್: ಏಕದಿನ ವಿಶ್ವಕಪ್ಗೆ ಭಾರತ ಪ್ರವಾಸಕ್ಕೆ ವೀಸಾ ಸಿಕ್ಕಿಲ್ಲ ಎಂದು ಆರೋಪಿಸಿದ್ದ ಪಾಕಿಸ್ತಾನಕ್ಕೆ ಅಭ್ಯಾಸ ಪಂದ್ಯಕ್ಕೆ ಎರಡು ದಿನ ಮುಂಚಿತವಾಗಿ ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಭಾರತ ಸರ್ಕಾರ ಪಾಕಿಸ್ತಾನ ತಂಡಕ್ಕೆ ಸೂಕ್ತ ಸಮಯಕ್ಕೆ ವೀಸಾ ವ್ಯವಸ್ಥೆಯನ್ನು ಮಾಡಿಕೊಟ್ಟಿದೆ. ಆದರೆ ಪಾಕಿಸ್ತಾನ ಕ್ರಿಕೆಟ್ ತಂಡದ ನಿರ್ವಹಣಾ ಕಮಿಟಿ ಮಾತ್ರ ಎರಡು ದಿನಗಳ ಹಿಂದೆ ವೀಸಾ ಸಮಸ್ಯೆ ಆಗಿದೆ ಎಂದು ಆರೋಪಿಸಿದ್ದರು. ಅಲ್ಲದೇ ಐಸಿಸಿಗೂ ಪತ್ರ ಬರೆದಿದ್ದರು. ಆದರೆ …
Read More »ಬೆಳಗಾವಿಯಲ್ಲಿ ಇಂದು ಸಾರ್ವಜನಿಕ ಅದ್ಧೂರಿಯಾಗಿ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ
ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಇಂದು ಸಾರ್ವಜನಿಕ ಅದ್ಧೂರಿಯಾಗಿ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಇದಕ್ಕೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಈ ನಿಟ್ಟಿನಲ್ಲಿಂದು ನಗರದಲ್ಲಿ ಪೊಲೀಸರು ಬುಧವಾರ ಪಥ ಸಂಚಲನ ನಡೆಸಿದರು. ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ ಅವರ ನೇತೃತ್ವದಲ್ಲಿ ನಗರದ ಚನ್ನಮ್ಮ ವೃತ್ತದಿಂದ ಆರಂಭವಾದ ಪಥ ಸಂಚಲನ ಶನಿವಾರ ಕೂಟ, ಗಣಪತಿ ಗಲ್ಲಿ, ಕಂಬಳಿಕೂಟ, ಮಾರುತಿ ಗಲ್ಲಿ, …
Read More »